death

ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್​. ವರ್ಮಾ ನಿಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.06. ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್​. ವರ್ಮಾ ಅವರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಕಳೆದ ಮೂರು ತಿಂಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಬ್ಬಾಳದ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವರ್ಮಾ ಅವರಿಗೆ 76 ವರ್ಷ ವಯಸ್ಸಾಗಿದ್ದು, ಪರಿಸರ, ಸಾಮಾಜಿಕ ಸಮಸ್ಯೆಗಳ ಬಗ್ಗೆ ಚಿತ್ರ ಬರೆಯುವ ಮೂಲಕ ಎಲ್ಲರ ಗಮನಸೆಳೆದಿದ್ದರು ಎಂದು ವರದಿ ಪ್ರಕಟಣೆ ತಿಳಿಸಿದೆ. ಬಿಕೆಎಸ್ ವರ್ಮಾ ಅವರಿಗೆ ಬೆಂಗಳೂರು ವಿವಿಯಿಂದ 2011ರಲ್ಲಿ ಗೌರವ ಡಾಕ್ಟರೇಟ್ ನೀಡಲಾಗಿತ್ತು.  

ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್​. ವರ್ಮಾ ನಿಧನ Read More »

ಕರ್ನಾಟಕ

ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ➤ ಸ್ಥಳದಲ್ಲೇ ಟೆಕ್ಕಿ ಮೃತ್ಯು..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.06. ವೇಗವಾಗಿ ದ್ವಿಚಕ್ರ ವಾಹನ ಚಾಲನೆ ಮಾಡುವಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಾಫ್ಟ್ ವೇರ್ ಇಂಜಿನಿಯರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೆಣ್ಣೂರು ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಗೇನಹಳ್ಳಿ ನಿವಾಸಿ ರಮೇಶ್ (28) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ವೃತ್ತಿಯಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಆಗಿರುವ ರಮೇಶ್ ಕೆಲಸ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ಬರುವಾಗ ಮಾರ್ಗ ಮಧ್ಯೆ ನಾಗೇನಹಳ್ಳಿ ಕ್ರಾಸ್ ಬಳಿ ಈ

ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ➤ ಸ್ಥಳದಲ್ಲೇ ಟೆಕ್ಕಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಪು: ಚೂರಿಯಿಂದ ಇರಿದು ವ್ಯಕ್ತಿಯೋರ್ವನ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com ಕಾಪು, ಫೆ.06. ಚೂರಿಯಿಂದ ಇರಿದು ವ್ಯಕ್ತಿಯನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಪಾಂಗಾಳದಲ್ಲಿ ನಡೆದಿದೆ. ಪಾಂಗಾಳ ಮಂಡೇಡಿ ನಿವಾಸಿ ಶರತ್ ಶೆಟ್ಟಿ(39) ಹತ್ಯೆಗೀಡಾದ ವ್ಯಕ್ತಿ ಎನ್ನಲಾಗಿದೆ. ಪಾಂಗಾಳ ಶ್ರೀ ಜನಾರ್ದನ ದೇವಸ್ಥಾನದ ಬಳಿ ಅವರ ಮೇಲೆ ಚೂರಿಯಿಂದ ಇರಿಯಲಾಗಿದೆ . ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇನ್ನು ಕಾಪು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾಪು: ಚೂರಿಯಿಂದ ಇರಿದು ವ್ಯಕ್ತಿಯೋರ್ವನ ಬರ್ಬರ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ರಿಯಾದ್ ನಲ್ಲಿ ಭಾರತೀಯ ವಿದ್ಯಾರ್ಥಿನಿ ಮೃತ್ಯು..!

(ನ್ಯೂಸ್ ಕಡಬ)newskadaba.com ಸೌದಿ ಅರೇಬಿಯಾ, ಫೆ.06. ಅನಾರೋಗ್ಯದಿಂದ ಬಳಲುತ್ತಿದ್ದ ಅನಿವಾಸಿ ಭಾರತೀಯ ವಿದ್ಯಾರ್ಥಿನಿ ರಿಯಾದ್ ನಲ್ಲಿ ಮೃತಪಟ್ಟಿದ್ದಾರೆ. ಕೇರಳದ ತ್ರಿಶೂರ್ ಮೂಲದ ಅನಸ್ ಮತ್ತು ಶೈನಿ ಅವರ ಮಗಳು ಆಮೀನಾ ಮೃತರು ಎಂದು ತಿಳಿದುಬಂದಿದೆ. ಇವರು ರಿಯಾದ್ ನ ನೂರ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದರು. ಕಳೆದ ಕೆಲ ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇದೀಗ ಆಮೀನಾ ಮೃತದೇಹವನ್ನು ರಿಯಾದ್ ನಲ್ಲೇ ದಹನ ಕಾರ್ಯ ನಡೆದಿದೆ ಎಂದು ವರದಿ ತಿಳಿಸಿದೆ.

ರಿಯಾದ್ ನಲ್ಲಿ ಭಾರತೀಯ ವಿದ್ಯಾರ್ಥಿನಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಝೀರೋ ಟ್ರಾಫಿಕ್ ನಲ್ಲಿ ಹೋದ್ರು ಬೆಂಗಳೂರು ಟ್ರಾಫಿಕ್‌ಗೆ ಬಲಿಯಾದ ಕಂದಮ್ಮ!

(ನ್ಯೂಸ್ ಕಡಬ)newskadaba.com ಹಾಸನ, ಫೆ.04. ಬೆಂಗಳೂರಿನ ಟ್ರಾಫಿಕ್‌ನಿಂದಾಗಿ ಚಿಕಿತ್ಸೆ ಸಿಗದೆ ಒಂದೂವರೆ ವರ್ಷದ ಮಗು ಆಂಬ್ಯುಲೆನ್ಸ್‌ನಲ್ಲೇ ಮೃತಪಟ್ಟ ಘಟನೆ ನೆಲಮಂಗಲದಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಬುಲೇರೊ ಹಾಗು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ತಂದೆ ಅಹಮದ್, ತಾಯಿ ರುಕ್ಸಾನಾಗೆ ಗಂಭೀರ ಗಾಯಗಳಾಗಿತ್ತು. ಮಗುವಿಗೂ ಪೆಟ್ಟಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಹಾಸನದ ಹಿಮ್ಸ್‌ಗೆ ತಿಪಟೂರು ವೈದ್ಯರು ಕಳಿಸಿದ್ದರು. ಹಾಸನದಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಬೆಂಗಳೂರಿಗೆ ಸ್ಥಳಾಂತರಿಸಲು ಯತ್ನಿಸಲಾಗಿತ್ತು. ಆದರೆ ನೆಲಮಂಗಲದಿಂದ ಟ್ರಾಫಿಕ್ ನಡುವೆ ಆಂಬ್ಯುಲೆನ್ಸ್ ಸಿಲುಕಿಕೊಂಡು,

ಝೀರೋ ಟ್ರಾಫಿಕ್ ನಲ್ಲಿ ಹೋದ್ರು ಬೆಂಗಳೂರು ಟ್ರಾಫಿಕ್‌ಗೆ ಬಲಿಯಾದ ಕಂದಮ್ಮ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ರಾಯಚೂರು, ಫೆ.04. ಕಾಲೇಜು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಕುಟುಂಬ ಅನುಮಾನ ವ್ಯಕ್ತಪಡಿಸಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ಖಾಸಗಿ ಕಾಲೇಜಿನ ಹಾಸ್ಟೆಲ್ ನಲ್ಲಿ 17 ವರ್ಷದ ವಿದ್ಯಾರ್ಥಿನಿ ಐಶ್ವರ್ಯ ಶವ ಪತ್ತೆಯಾಗಿದ್ದು, ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿತ್ತು ಎನ್ನಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಲಿಂಗಸೂಗೂರು ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿ ಕಾಲೇಜು ಆಡಳಿತ ‌ಮಂಡಳಿ ಜೊತೆಗೆ ಚರ್ಚೆ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಲಿಂಗಸೂಗೂರು ‌ಪೊಲೀಸ್

ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ಬಂಟ್ವಾಳ: ರೈಲ್ವೆ ಬ್ರಿಡ್ಜ್ ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.03. ಬಿ.ಸಿ ರೋಡಿನ ಮುಖ್ಯ ವೃತ್ತದ ಬಳಿ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ ಎನ್ನಲಾಗಿದೆ. ಸುಮಾರು 55 ಪ್ರಾಯದ ಅಪರಿಚಿತ ವ್ಯಕ್ತಿ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅಪರಿಚಿತ ವ್ಯಕ್ತಿ ಅಮಲು ಪದಾರ್ಥ ಸೇವಿಸಿ ಮಲಗಿದ್ದ ಎಂದು ಹೇಳಲಾಗಿದೆ. ಸಾರ್ವಜನಿಕರು ಮೃತದೇಹವನ್ನು ನೋಡಿ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂಟ್ವಾಳ ‌ನಗರ ಠಾಣಾ ಎಸ್. ಐ.ರಾಮಕೃಷ್ಣ ಹಾಗೂ ಸಿಬ್ಬಂದಿ ಗಳು ಭೇಟಿ ನೀಡಿ ಶವವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ

ಬಂಟ್ವಾಳ: ರೈಲ್ವೆ ಬ್ರಿಡ್ಜ್ ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಮತ್ತು ಬಸ್ ನಡುವೆ ಅಪಘಾತ ➤ ಯುವಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಫೆ.03. ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟು, ಯುವತಿ ಗಾಯಗೊಂಡ ಘಟನೆ ಪೆರಿಯದಲ್ಲಿ ನಡೆದಿದೆ. ಪೆರಿಯ ನಡುವೆಟ್ಟ ಪಾರೆಯ ವೈಶಾಕ್(30) ಮೃತರು. ಘಟನೆಯಲ್ಲಿ ಕಾರಿನಲ್ಲಿದ್ದ ಆರತಿ (26) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕಣ್ಣೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಬಸ್ ನಲ್ಲಿದ್ದ ಹಲವರಿಗೆ ಕೂಡ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ವೈಶಾಖ್ ಪೆರಿಯದ ಇಂಟರ್ ಲಾಕ್ ಸಂಸ್ಥೆ ನಡೆಸುತ್ತಿದ್ದರು. ಆರತಿ ಕಾಸರಗೋಡು ಕಾಲೇಜಿನ ಮೂರನೇ ಬಿಎಸ್ಸಿ ವಿದ್ಯಾರ್ಥಿನಿಯಾಗಿದ್ದರು

ಕಾರು ಮತ್ತು ಬಸ್ ನಡುವೆ ಅಪಘಾತ ➤ ಯುವಕನೋರ್ವ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಗರ್ಭಿಣಿ ಸೇರಿ ಇಬ್ಬರು ಸಜೀವ ದಹನ   

(ನ್ಯೂಸ್ ಕಡಬ)newskadaba.com ಕಣ್ಣೂರ್, ಫೆ.02. ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಇಡೀ ಕಾರನ್ನು ವ್ಯಾಪಿಸಿದ ಪರಿಣಾಮ ಗರ್ಭಿಣಿ ಸೇರಿದಂತೆ ಇಬ್ಬರೂ ಸಜೀವ ದಹನಗೊಂಡ ಘಟನೆ ದೇವರನಾಡು ಕೇರಳದ ಕಣ್ಣೂರಿನಲ್ಲಿ ನಡೆದಿದೆ.   ಕಣ್ಣೂರು ಜಿಲ್ಲಾಸ್ಪತ್ರೆಯ ಮುಂಭಾಗವೇ ಈ ದುರಂತ ನಡೆದಿದೆ.  ಹೀಗೆ ಕಾರಿನಲ್ಲಿ ಸಿಲುಕಿ ಸಜೀವ ದಹನಗೊಂಡವರನ್ನು ಪ್ರಜೀತ್ ಹಾಗೂ ಆತನ ಪತ್ನಿ ರೀಷಾ ಎಂದು ಗುರುತಿಸಲಾಗಿದೆ. ಘಟನೆ ಸಂಭವಿಸುವ ವೇಳೆ  ಕಾರಿನಲ್ಲಿ  ಒಟ್ಟು ಆರು ಜನ ಪ್ರಯಾಣಿಸುತ್ತಿದ್ದರು. ಕಾರಿನ ಮುಂಭಾಗದ ಸೀಟಿನಲ್ಲಿ ಗರ್ಭಿಣಿ  ರೀಷಾ ಹಾಗೂ

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಗರ್ಭಿಣಿ ಸೇರಿ ಇಬ್ಬರು ಸಜೀವ ದಹನ    Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಶೆಡ್ ನಲ್ಲಿ ಮಹಿಳೆಯ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಕಾಸರಗೋಡು, ಫೆ.02. ಪೆರ್ಲ ಸಮೀಪದ ಏಳ್ಕಾನ ಶೇಣಿ ಎಂಬಲ್ಲಿ ರಬ್ಬರ್ ಎಸ್ಟೇಟ್ ನ ಶೆಡ್ ನೊಳಗೆ ಮಹಿಳೆಯೋರ್ವರ ಮೃತದೇಹ ಪತ್ತೆಯಾಗಿದೆ. ಕೊಲ್ಲಂ ಮೂಲದ ನೀತು ಕೃಷ್ಣ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮಹಿಳೆಯ ಪತಿ ವಯನಾಡ್ ಮೂಲದ ಆಂಟೋ ಸೆಬಾಸ್ಟಿಯನ್ ಎಂಬಾತ ನಾಪತ್ತೆಯಾಗಿದ್ದು ಸಂಶಯಕ್ಕೆ ಕಾರಣವಾಗಿದೆ. ಒಂದೂವರೆ ತಿಂಗಳ ಹಿಂದೆ ಈ ದಂಪತಿ ರಬ್ಬರ್ ಟ್ಯಾಪಿಂಗ್ ವೃತ್ತಿಗಾಗಿ ಆಗಮಿಸಿದ್ದರು. ಇವರು ವಾಸಿಸುತ್ತಿದ್ದ ಮನೆ ಸಮೀಪದ ಶೆಡ್ ನಲ್ಲಿ ಇತರ ಕಾರ್ಮಿಕರಾದ ವೆಳ್ಳರಿಕುಂಡುವಿನ ರಿಜೋ ಹಾಗೂ ಪಶ್ಚಿಮ

ಕಾಸರಗೋಡು: ಶೆಡ್ ನಲ್ಲಿ ಮಹಿಳೆಯ ಮೃತದೇಹ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top