death

ನೇಪಾಳದಲ್ಲಿ ನಡೆದ ವಿಮಾನ ದುರಂತ..! ➤ ಮೃತರ ಸಂಖ್ಯೆ 70ಕ್ಕೆ ಏರಿಕೆ

(ನ್ಯೂಸ್ ಕಡಬ)newskadaba.com ನೇಪಾಳ, ಜ.17. ನೇಪಾಳದ ಪೋಖರಾ ಪ್ರದೇಶದಲ್ಲಿ ಸಂಭವಿಸಿದ ಯೇತಿ ಏರ್‌ಲೈನ್ಸ್ ವಿಮಾನ ದುರಂತ ಸ್ಥಳದಲ್ಲಿ ಮತ್ತೆ ಇಬ್ಬರ ಶವ ಪತ್ತೆಯಾಗಿದೆ. ಇದರೊಂದಿಗೆ ಸಾವಿನ ಸಂಖ್ಯೆ 70ಕ್ಕೆ ಏರಿಕೆಯಾಗಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ನಾಪತ್ತೆಯಾಗಿದ್ದ ಮತ್ತೊಬ್ಬ ಪ್ರಯಾಣಿಕನ ಶವ ತಡವಾಗಿ ಪತ್ತೆಯಾಗಿದೆ. ಇನ್ನೂ ಇಬ್ಬರು ಪ್ರಯಾಣಿಕರು ನಾಪತ್ತೆಯಾಗಿದ್ದಾರೆ. ಸ್ಥಳದಿಂದ ಇದುವರೆಗೆ ಒಟ್ಟು 70 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನೇಪಾಳ ಪೊಲೀಸರು ತಿಳಿಸಿದ್ದಾರೆ. ಐವರು ಭಾರತೀಯರು ಸೇರಿದಂತೆ 72 ಜನರಿದ್ದ ಯೇತಿ ಏರ್‌ಲೈನ್ಸ್ ಪ್ರಯಾಣಿಕ ವಿಮಾನವು […]

ನೇಪಾಳದಲ್ಲಿ ನಡೆದ ವಿಮಾನ ದುರಂತ..! ➤ ಮೃತರ ಸಂಖ್ಯೆ 70ಕ್ಕೆ ಏರಿಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೋರಿ ಬೆದರಿಸುವ ಸ್ಪರ್ಧೆ ➤  ಹೋರಿ ತಿವಿದು ಇಬ್ಬರು ಮೃತ್ಯು..!

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಜ.16. ಹೋರಿ ಬೆದರಿಸುವ ಹಬ್ಬದಲ್ಲಿ ಇಬ್ಬರು ಬಲಿಯಾಗಿರುವ ಪ್ರತ್ಯೇಕ ದುರ್ಘಟನೆಗಳು ಶಿವಮೊಗ್ಗ ತಾಲೂಕಿನ ಕೊನೆಗವಳ್ಳಿ ಗ್ರಾಮ ಹಾಗೂ ಸೊರಬ ತಾಲೂಕಿನ ಮಳ್ಳೂರು ಗ್ರಾಮದಲ್ಲಿ ನಡೆದಿವೆ. ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ಶಿವಮೊಗ್ಗ ತಾಲೂಕಿನ ಕೊನೆಗವಳ್ಳಿ ಗ್ರಾಮ ಹಾಗೂ ಸೊರಬ ತಾಲೂಕಿನ ಮಳ್ಳೂರು ಗ್ರಾಮದಲ್ಲಿ ಹೋರಿ ಬೆದರಿಸುವ ಹಬ್ಬವನ್ನು ಆಯೋಜನೆ ಮಾಡಲಾಗಿತ್ತು. ಕೊನಗವಳ್ಳಿಯಲ್ಲಿ ನಡೆದಿದ್ದ ಹೋರಿಬೆದರಿಸುವ ಸ್ಪರ್ಧೆಯನ್ನು ನೋಡಲು ಹೋಗಿದ್ದ ಸಂದರ್ಭದಲ್ಲಿ ಶಿವಮೊಗ್ಗದ ಆಲ್ಕೊಳ ನಿವಾಸಿ ಲೋಕೇಶ್ (32) ಎದೆಗೆ ಹೋರಿ ತಿವಿದು ಮೃತಪಟ್ಟಿದ್ದಾರೆ.

ಹೋರಿ ಬೆದರಿಸುವ ಸ್ಪರ್ಧೆ ➤  ಹೋರಿ ತಿವಿದು ಇಬ್ಬರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಂಗ್ ಸೈಡ್‌ನಲ್ಲಿ ಬಂದ ಪೊಲೀಸರ ವಾಹನ ➤ ಓರ್ವ ಬಾಲಕಿ ಮೃತ್ಯು..!

(ನ್ಯೂಸ್ ಕಡಬ)newskadaba.com  ಹರಿಯಾಣ, ಜ.16. ರಾಂಗ್ ಸೈಡ್‌ನಲ್ಲಿ ಬಂದ ಪೊಲೀಸರ ತುರ್ತು ಪ್ರತಿಕ್ರಿಯೆ ವಾಹನವೊಂದು ಬಾಲಕಿಗೆ ಢಿಕ್ಕಿ ಹೊಡೆದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ಗುರುಗ್ರಾಮ್-ಫರಿದಾಬಾದ್ ರಸ್ತೆಯಲ್ಲಿ ಸಂಭವಿಸಿದೆ. ಆರು ವರ್ಷದ ಬಾಲಕಿ ಘಟನೆಯಲ್ಲಿ ಮೃತಪಟ್ಟಿದ್ದು, ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಹಾಗೂ ಕಾರು ಚಾಲಕ ಗಾಯಗೊಂಡಿದ್ದಾರೆ. ಗ್ವಾಲ್ ಪಹಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವ್ಯಾನ್‌ನಲ್ಲಿದ್ದ ಪೊಲೀಸರು ಸ್ಥಳದಿಂದ ಪರಾರಿಯಾಗಿದ್ದಾರೆ. ಇನ್ನು ವ್ಯಾನ್ ಚಾಲಕ ಸೇರಿದಂತೆ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಎಸಿಪಿ ತಿಳಿಸಿರುವುದಾಗಿ

ರಾಂಗ್ ಸೈಡ್‌ನಲ್ಲಿ ಬಂದ ಪೊಲೀಸರ ವಾಹನ ➤ ಓರ್ವ ಬಾಲಕಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಪಾದಯಾತ್ರೆಯ ಪ್ರಚಾರಕ್ಕೆ ಆಗಮಿಸಿದ್ದ ವಾಹನಕ್ಕೆ ಬೈಕ್ ಢಿಕ್ಕಿ ➤ ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 16. ತೆಲಂಗಾಣದಿಂದ ಬಂಟ್ವಾಳ ಬಿಜೆಪಿ ಪಾದಯಾತ್ರೆಯ ಪ್ರಚಾರಕ್ಕೆ ಆಗಮಿಸಿದ್ದ ವಾಹನಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಮೃತ ಯುವಕನನ್ನು ಬೆಳ್ತಂಗಡಿ ಮೂಲದ ವಿಜಿತ್ ಎಂದು ಗುರುತಿಸಲಾಗಿದೆ. ಬಂಟ್ವಾಳದಲ್ಲಿ ನಡೆಯುವ ಪಾದಯಾತ್ರೆಯ ಪ್ರಚಾರಕ್ಕೆ ಆಗಮಿಸಿದ್ದ ತೆಲಂಗಾಣ ದಾಖಲೆಯ ವಾಹನಕ್ಕೆ ನರಹರಿ ತಿರುವಿನಲ್ಲಿ ಬೈಕ್ ಸ್ಕಿಡ್ ಆಗಿ ಢಿಕ್ಕಿಯಾಗಿದ್ದು, ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಯುವಕ ಮೃತಪಟ್ಟಿದ್ದಾನೆ

ಬಂಟ್ವಾಳ: ಪಾದಯಾತ್ರೆಯ ಪ್ರಚಾರಕ್ಕೆ ಆಗಮಿಸಿದ್ದ ವಾಹನಕ್ಕೆ ಬೈಕ್ ಢಿಕ್ಕಿ ➤ ಸವಾರ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊಡಗು: ಯುವತಿಯ ಬರ್ಬರ ಹತ್ಯೆ- ಕಾರಣ ನಿಗೂಢ

(ನ್ಯೂಸ್ ಕಡಬ) newskadaba.com ಕೊಡಗು, ಜ. 16. ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವೀರಾಜಪೇಟೆ ಸಮೀಪದ ನಾಂಗಾಲ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ನಾಂಗಲ ಗ್ರಾಮದ ಬುಟ್ಟಿಯಂಡಪ್ಪ ಮಾದಪ್ಪ, ಸುನಂದ ಅವರ ಪುತ್ರಿ ಆರತಿ (24) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ತಮ್ಮಯ್ಯ ಎನ್ನಲಾಗಿದ್ದು, ಈತನೂ ಆತ್ಮಹತ್ಯೆ ಮಾಡಿರುವ ಶಂಕೆ‌ ಇದೆ. ಘಟನಾ ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಕೊಡಗು: ಯುವತಿಯ ಬರ್ಬರ ಹತ್ಯೆ- ಕಾರಣ ನಿಗೂಢ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಯೂಟ್ಯೂಬ್ ವಿಡಿಯೋ ಪ್ರಯೋಗ ಮಾಡಲು ಹೋಗಿ ಬಾಲಕಿ ಆತ್ಮಹತ್ಯೆ..??

(ನ್ಯೂಸ್ ಕಡಬ) newskadaba.com ಉಡುಪಿ, ಜ. 16. ವಿದ್ಯಾರ್ಥಿನಿಯೋರ್ವಳು ಯೂಟ್ಯೂಬ್ ನೋಡಿ ಪ್ರಯೋಗ ಮಾಡುತ್ತಿದ್ದ ವೇಳೆ ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಉಡುಪಿಯ ಬ್ರಹ್ಮಗಿರಿಯ ಪ್ರವೀಣ್ ಶೆಟ್ಟಿ ಎಂಬವರ ಪುತ್ರಿ ಮಂಗಳಾದೇವಿ(11) ಎಂದು ಗುರುತಿಸಲಾಗಿದೆ. 6ನೇ ತರಗತಿಯಲ್ಲಿ ಓದುತ್ತಿದ್ದ ಈಕೆ ಯೂಟ್ಯೂಬ್ ನಲ್ಲಿ ಬರುವ ವಿಡಿಯೋಗಳನ್ನು ನೋಡಿ ಅದನ್ನು ಪ್ರಯೋಗ ಮಾಡುವ ಅಭ್ಯಾಸ ಬೆಳೆಸಿಕೊಂಡಿದ್ದಳು. ಅದರಂತೆ ಬಾತ್ರೂಮ್ ನಲ್ಲಿ ಬಟ್ಟೆ ಕಟ್ಟಿ ಯಾವುದೋ ಪ್ರಯೋಗ ಮಾಡುವ ವೇಳೆ ಕುತ್ತಿಗೆಗೆ ಬಟ್ಟೆ ಬಿಗಿದುಕೊಂಡು ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಯೂಟ್ಯೂಬ್ ವಿಡಿಯೋ ಪ್ರಯೋಗ ಮಾಡಲು ಹೋಗಿ ಬಾಲಕಿ ಆತ್ಮಹತ್ಯೆ..?? Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಅಡಿಕೆ ಕೀಳುವ ಸಮಯದಲ್ಲಿ ಮುರಿದು ಬಿದ್ದ ಮರ…!! ➤ ವ್ಯಕ್ತಿಯೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com  ಉಡುಪಿ, ಜ..16. ಅಡಿಕೆ ಕೀಳುತ್ತಿದ್ದ ವ್ಯಕ್ತಿಯೊಬ್ಬರು ಮರ ಮುರಿದು ನೆಲಕ್ಕೆ ಬಿದ್ದು ಮೃತಪಟ್ಟ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ನಗರದ ಬಸ್ ನಿಲ್ದಾಣದ ಸಮೀಪದ ಮತ್ತದಬೆಟ್ಟು ನಿವಾಸಿ ಶ್ಯಾಮ್ ಅಂಚನ್ (59) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಶ್ಯಾಮ್ ಅವರು ಮರದಿಂದ ಅಡಿಕೆ ಕೀಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬಳಿಕ ಮೃತಪಟ್ಟರು. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಇವರು ಪರ್ಕಳದಲ್ಲಿ ಪಾಲುದಾರಿಕೆಯಲ್ಲಿ ಬೇಕರಿ ನಡೆಸುತ್ತಿದ್ದರು

ಉಡುಪಿ: ಅಡಿಕೆ ಕೀಳುವ ಸಮಯದಲ್ಲಿ ಮುರಿದು ಬಿದ್ದ ಮರ…!! ➤ ವ್ಯಕ್ತಿಯೋರ್ವ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕುಂದಾಪುರ:  ಬೈಕ್ ಢಿಕ್ಕಿ…!! ➤  ಓರ್ವ ಪಾದಚಾರಿ ಮೃತ್ಯು

(ನ್ಯೂಸ್ ಕಡಬ)newskadaba.com ಕುಂದಾಪುರ, ಜ.16. ಬೈಕ್ ಢಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಕೋಣಿ ಗ್ರಾಮದ ಕಟ್ಕೇರಿಯಲ್ಲಿ ವರದಿಯಾಗಿದೆ. ಚಂದ್ರಕುಮಾರ್ (68) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಪ್ರದೀಪ್ ಎಂಬವರು ಕೋಟೇಶ್ವರ ಕಡೆಯಿಂದ ಹಾಲಾಡಿ ಕಡೆಗೆ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಉಳ್ಳೂರಿನ ಕಾರೆಬೈಲು ನಿವಾಸಿ ಚಂದ್ರಕುಮಾರ್ ಅವರಿಗೆ ಢಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಚಂದ್ರಕುಮಾರ್ ಅವರನ್ನು ಕೂಡಲೇ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆ ವೇಳೆ

ಕುಂದಾಪುರ:  ಬೈಕ್ ಢಿಕ್ಕಿ…!! ➤  ಓರ್ವ ಪಾದಚಾರಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರ್ಯಕರ್ತನೋರ್ವನ ಕಿರುಕುಳಕ್ಕೆ ಅಪ್ರಾಪ್ತ ಬಾಲಕಿ ಬಲಿ..!!

(ನ್ಯೂಸ್ ಕಡಬ)newskadaba.com  ಚಿಕ್ಕಮಗಳೂರು, ಜ.15. ಕಾರ್ಯಕರ್ತನೊಬ್ಬನ ಕಿರುಕುಳಕ್ಕೆ ಅಪ್ರಾಪ್ತ ಬಾಲಕಿ ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ನಡೆದಿದೆ. ಕಳಸ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ದೀಪ್ತಿ(17) ಮೃತ ಬಾಲಕಿ. ಕಾರ್ಯಕರ್ತ ಹಿತೇಶ್ (25) ಅಪ್ರಾಪ್ತ ಬಾಲಕಿ ದೀಪ್ತಿಯನ್ನ ಪ್ರೀತಿಸಿ ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ. ಇದರಿಂದ ನೊಂದ ದೀಪ್ತಿ ಮನೆಯಲ್ಲಿದ್ದ ಕಳೆ ನಾಶಕ ಸೇವಿಸಿ ಆಹ್ಮಹತ್ಯೆಗೆ ಯತ್ನಿಸಿದ್ದಳು. ತಕ್ಷಣ ಅವಳನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮಂಗಳೂರಿನ ಏ.ಜೆ.ಆಸ್ಪತ್ರೆಯಲ್ಲಿ ದೀಪ್ತಿ ಮೃತಪಟ್ಟಿದ್ದಾಳೆ.

ಕಾರ್ಯಕರ್ತನೋರ್ವನ ಕಿರುಕುಳಕ್ಕೆ ಅಪ್ರಾಪ್ತ ಬಾಲಕಿ ಬಲಿ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಮಾನದಲ್ಲಿ ರಕ್ತಸ್ರಾವ..!! ➤ ತುರ್ತು ಲ್ಯಾಂಡಿಂಗ್ ಬಳಿಕ ಪ್ರಯಾಣಿಕ ಮೃತ್ಯು

(ನ್ಯೂಸ್ ಕಡಬ)newskadaba.com ನವದೆಹಲಿ, ಜ.15. ಮಧುರೈನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 60 ವರ್ಷದ ಪ್ರಯಾಣಿಕನ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ವಿಮಾನವನ್ನು ಇಂದೋರ್ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಇಳಿಸಲಾಗಿದೆ. ವಿಮಾನವು ದೇವಿ ಅಹಲ್ಯಾಬಾಯಿ ಹೋಳ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದ ನಂತರ, ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಯಾಣಿಕನನ್ನು ವಿಮಾನ ಸಮೀಪವಿರುವ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅಲ್ಲಿ ವೈದ್ಯರು ಆತ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ‘ಪ್ರಾಥಮಿಕ ಮಾಹಿತಿಯ ಪ್ರಕಾರ, ಇಂಡಿಗೋ ಏರ್‌ಲೈನ್ಸ್ 6E-2088 ವಿಮಾನದಲ್ಲಿದ್ದ ಅತುಲ್ ಗುಪ್ತಾ (60) ಪ್ರಯಾಣಿಸುತ್ತಿದ್ದಾಗ

ವಿಮಾನದಲ್ಲಿ ರಕ್ತಸ್ರಾವ..!! ➤ ತುರ್ತು ಲ್ಯಾಂಡಿಂಗ್ ಬಳಿಕ ಪ್ರಯಾಣಿಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top