Dharmasthala

ಧರ್ಮಸ್ಥಳದ ಪ್ರಕರಣ ಮಧ್ಯಂತರ-ಅಂತಿಮ ವರದಿ ಎಸ್‌ಐಟಿ ಬಿಟ್ಟಿದ್ದು, ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ-ಗೃಹಸಚಿವ

(ನ್ಯೂಸ್ ಕಡಬ) newskadaba.com ಆ. 18 ಬೆಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದಲ್ಲಿ ಸಾಕ್ಷಿ-ದೂರುದಾರ ವ್ಯಕ್ತಿ ಹೇಳಿದ ಹಾಗೆ ಅಗೆಯುತ್ತಲೇ ಇರಲು ಸಾಧ್ಯವಿಲ್ಲ, ವಿಶೇಷ ತನಿಖಾ ದಳದ ಅಧಿಕಾರಿಗಳು ಎಲ್ಲವನ್ನೂ ತೀರ್ಮಾನ ಮಾಡಲಿದ್ದಾರೆಂದು ರಾಜ್ಯ ಸರ್ಕಾರ ಭಾನುವಾರ ಹೇಳಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಅಸ್ಥಿಪಂಜರದ ಅವಶೇಷಗಳಿಗಾಗಿ ಎಷ್ಟು ಸಮಯದವರೆಗೆ ಅಗೆಯಬೇಕು ಎಂಬುದನ್ನು ನಿರ್ಧರಿಸುತ್ತದೆ, ದೂರುಗಳ ಆಧಾರದ ಮೇಲೆ ಅಗೆಯುತ್ತಲೇ […]

ಧರ್ಮಸ್ಥಳದ ಪ್ರಕರಣ ಮಧ್ಯಂತರ-ಅಂತಿಮ ವರದಿ ಎಸ್‌ಐಟಿ ಬಿಟ್ಟಿದ್ದು, ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ-ಗೃಹಸಚಿವ Read More »

ಕರಾವಳಿ, ಕರ್ನಾಟಕ

ಧರ್ಮಸ್ಥಳವನ್ನು ಕಬಳಿಸಲು ಸರ್ಕಾರ ಸಾಕ್ಷಿ ಹುಡುಕುತ್ತಿದೆ: ಪ್ರತಾಪ್‌ ಸಿಂಹ

(ನ್ಯೂಸ್‌ ಕಡಬ) newskadaba.com, ಆ.08: ಧರ್ಮಸ್ಥಳದ ಧರ್ಮಾಧಿಕಾರಿ ಅವರನ್ನು ಆರೋಪಿ ಎಂದು ತೀರ್ಮಾನ ಮಾಡಿ ರಾಜ್ಯ ಸರ್ಕಾರ ಈಗ ಬೇಕಾದ ಸಾಕ್ಷಿ ಹುಡುಕುತ್ತಿದೆ ಎಂದು ಪ್ರತಾಪ್‌ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ದೇಗುಲಕ್ಕೆ ಮೀನು ತಿಂದು ಹೋಗಿ ಜನರ ಭಾವನೆಗೆ ಧಕ್ಕೆ ಉಂಟು ಮಾಡಿದವರು ಈಗ ಅಲ್ಲಿನ ನಂಬಿಕೆ ಹಾಳು ಮಾಡಲು ತನಿಖೆ ಮಾಡಿಸುತ್ತಿದ್ದಾರೆ. ಈಗ ನಡೆಯುತ್ತಿರುವ ಅಸ್ಥಿ ಹುಡುಕಾಟಕ್ಕೂ, ಸೌಜನ್ಯ ಪ್ರಕರಣಕ್ಕೂ ಯಾವುದೇ ರೀತಿಯಾದ ಸಂಬಂಧವಿಲ್ಲ. ಧರ್ಮಸ್ಥಳವನ್ನು ಕಬಳಿಸಲು ಸರ್ಕಾರ ಈ

ಧರ್ಮಸ್ಥಳವನ್ನು ಕಬಳಿಸಲು ಸರ್ಕಾರ ಸಾಕ್ಷಿ ಹುಡುಕುತ್ತಿದೆ: ಪ್ರತಾಪ್‌ ಸಿಂಹ Read More »

ಕರ್ನಾಟಕ

ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣ: ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹ

(ನ್ಯೂಸ್‌ ಕಡಬ) newskadaba.com ಜು. 22: ಮಂಗಳೂರು: ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್ಐಟಿ)ದ ಅಧಿಕಾರಿಗಳು ದೂರುಗಳ ಆಲಿಸಲು ಸಹಾಯವಾಣಿ ಆರಂಭಿಸುವಂತೆ ನಾಪತ್ತೆಯಾಗಿರುವ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಅವರ ಪರ ವಕೀಲರು ಮನವಿ ಮಾಡಿದ್ದಾರೆ. ಪ್ರಕರಣದ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ದಳ ಸ್ಥಾಪಿಸಿದೆ. ನಾಪತ್ತೆಯಾಗಿರುವ ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣ ಹಾಗೂ ಭವಿಷ್ಯದಲ್ಲಿ ಬೆಳಕಿಗೆ ಬರುವ ಪ್ರಕರಣಗಳನ್ನೂ ತನಿಖೆ ನಡೆಸುವಂತೆ ಸೂಚಿಸಿದೆ. ಎಸ್ಐಟಿ ರಚನೆ

ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣ: ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಸರಣಿ ಅಂತ್ಯಕ್ರಿಯೆ ಪ್ರಕರಣ: ಎಸ್ಐಟಿ ತನಿಖೆಯಲ್ಲಿ ಸೌಜನ್ಯ ಪ್ರಕರಣ ಸೇರ್ಪಡೆಯಿಲ್ಲ-ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com, ಜು. 21. ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ತನಿಖೆಗಾಗಿ ರಾಜ್ಯ ಸರ್ಕಾರ ಹೊಸದಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್‌ಐಟಿ)ದಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸೇರಿಸಲಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಗೃಹ ಸಚಿವ ಜಿ. ಪರಮೇಶ್ವರ ಅವರು, ಎಸ್‌ಐಟಿಯ ಕಾರ್ಯಸೂಚಿಯಲ್ಲಿ ಸೌಜನ್ಯ ಪ್ರಕರಣ ಸೇರಿಲ್ಲ ಎಂದು ಸ್ಪಷ್ಟಪಡಿಸಿದರು. ಧರ್ಮಸ್ಥಳ ಪ್ರಕರಣದಲ್ಲಿ ದೂರಿನ ಆಧಾರದ ಮೇಲೆ ಪ್ರಾಥಮಿಕ ತನಿಖೆ ನಡೆಸಬೇಕೆಂದು ಬಯಸಿದ್ದೆವು. ಅಗತ್ಯವಿದ್ದರೆ, ತನಿಖೆಯನ್ನು ಉನ್ನತ

ಧರ್ಮಸ್ಥಳ ಸರಣಿ ಅಂತ್ಯಕ್ರಿಯೆ ಪ್ರಕರಣ: ಎಸ್ಐಟಿ ತನಿಖೆಯಲ್ಲಿ ಸೌಜನ್ಯ ಪ್ರಕರಣ ಸೇರ್ಪಡೆಯಿಲ್ಲ-ಜಿ.ಪರಮೇಶ್ವರ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಗಡಿಯಾರ ಶಾಲೆಗೆ ಬೆಂಚ್ ಮತ್ತು ಡೆಸ್ಕ್ ವಿತರಣೆ

(ನ್ಯೂಸ್ ಕಡಬ) newskadaba.com ಡಿ. 24. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪೆರ್ನೆ ವಲಯದ ಕೆದಿಲ ಕಾರ್ಯಕ್ಷೇತ್ರದ ಸಹಕಾರದೊಂದಿಗೆ ಕೆದಿಲದ ಉನ್ನತ ಹಿರಿಯ ಪ್ರಾಥಮಿಕ ಶಾಲೆಗೆ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಿಂದ ಶಾಲಾ ಮಕ್ಕಳಿಗೆ 7 ಡೆಸ್ಕ್ ಮತ್ತು 7 ಬೆಂಚನ್ನು ಶಾಲಾ ಮುಖ್ಯೋಪಾಧ್ಯಾಯರಾದ ಪುಟ್ಟ ರಂಗನಾಥ ಮತ್ತು ಅಧ್ಯಾಪಕ ವೃಂದ ಹಾಗೂ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಇಬ್ರಾಹಿಂ ಇವರಿಗೆ ಪೆರ್ನೆ ವಲಯ ಮೇಲ್ವಿಚಾರಕರಾದ ಶಾರದಾರವರು ವಿತರಿಸಿದರು. ಈ ಸಂದರ್ಭದಲ್ಲಿ ಕೆದಿಲ “ಬಿ” ಒಕ್ಕೂಟದ ಅಧ್ಯಕ್ಷರಾದ ಮೀನಾಕ್ಷಿ,

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಗಡಿಯಾರ ಶಾಲೆಗೆ ಬೆಂಚ್ ಮತ್ತು ಡೆಸ್ಕ್ ವಿತರಣೆ Read More »

ಕರಾವಳಿ

ಸೆ. 11ರಿಂದ 13ರ ವರೆಗೆ ಜಿಲ್ಲಾಧಿಕಾರಿ ಕಛೇರಿ ಎದುರು ಧರಣಿ – ಸೌಜನ್ಯ ಹತ್ಯೆ ಪ್ರಕರಣದ ಮರುತನಿಖೆಯ ಹಿನ್ನೆಲೆ

(ನ್ಯೂಸ್ ಕಡಬ) newskadaba.com. ಮಂಗಳೂರು, ಆ. 30. ಧರ್ಮಸ್ಥಳದ ಸೌಜನ್ಯಾ ಹತ್ಯೆ ಪ್ರಕರಣವನ್ನು ಮರುತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿ ಸೆ. 11ರಿಂದ 13ರ ವರೆಗೆ ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ‘ಸೌಜನ್ಯಾ ಪ್ರಕರಣ ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿ’ಯ ಪ್ರಧಾನ ಸಂಚಾಲಕ ಬಾಲಕೃಷ್ಣ ಡಿ.ಬಿ. ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಧರಣಿ ಸತ್ಯಾಗ್ರಹ ಸೆ. 11ರಂದು ಬೆಳಗ್ಗೆ 10ಕ್ಕೆ ಆರಂಭಗೊಂಡು ಮೂರು ದಿನಗಳ ಕಾಲ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಬಳಿಕ ಪ್ರಕರಣದ ಮರುತನಿಖೆ ನಡೆಸುವಂತೆ ಜಿಲ್ಲಾಧಿಕಾರಿ

ಸೆ. 11ರಿಂದ 13ರ ವರೆಗೆ ಜಿಲ್ಲಾಧಿಕಾರಿ ಕಛೇರಿ ಎದುರು ಧರಣಿ – ಸೌಜನ್ಯ ಹತ್ಯೆ ಪ್ರಕರಣದ ಮರುತನಿಖೆಯ ಹಿನ್ನೆಲೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವೀರೇಂದ್ರ ಹೆಗ್ಗಡೆ ಅವರಿಂದ ‘ಮಂದಾರ’ ಪ್ರಾಯೋಗಿಕ ಪತ್ರಿಕೆ ಅನಾವರಣ !

(ನ್ಯೂಸ್ ಕಡಬ)newskadaba.com ಧರ್ಮಸ್ಥಳ, ಫೆ.03. ಉಜಿರೆಯ ಎಸ್‌ಡಿಎಂ ಕಾಲೇಜಿನ ಬಿಬಿಎ ಮತ್ತು ಬಿಎ ವಿದ್ಯಾರ್ಥಿಗಳು ಆರಂಭಿಸಿರುವ ‘ಮಂದಾರ’ ಪ್ರಾಯೋಗಿಕ ಮಾಸಪತ್ರಿಕೆಯನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಶ್ರೀಕ್ಷೇತ್ರದಲ್ಲಿ ಅನಾವರಣಗೊಳಿಸಿದರು. ಬಳಿಕ ಪತ್ರಿಕೆಯ ಉದ್ದೇಶ, ರೂಪುರೇಷಗಳ ಬಗ್ಗೆ ಮಾಹಿತಿ ಪಡೆದು, ಶುಭಹಾರೈಸಿದರು. ಈ ಸಂದರ್ಭದಲ್ಲಿ ಉಜಿರೆಯ ಎಸ್‌ಡಿಎಂ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಭಾಸ್ಕರ ಹೆಗಡೆ, ಎ.ಆರ್.ರಕ್ಷಿತ್ ರೈ, ಸಂಪಾದಕ ಚಂದನ್ ಭಟ್, ವ್ಯವಸ್ಥಾಪಕ ಸಂಪಾದಕ ಎಂ.ಎಸ್.ಶೋಭಿತ್ ಉಪಸ್ಥಿತರಿದ್ದರು. ‘ಮಂದಾರ’

ವೀರೇಂದ್ರ ಹೆಗ್ಗಡೆ ಅವರಿಂದ ‘ಮಂದಾರ’ ಪ್ರಾಯೋಗಿಕ ಪತ್ರಿಕೆ ಅನಾವರಣ ! Read More »

ಕರಾವಳಿ

ಧರ್ಮಸ್ಥಳ: ಅನ್ಯಕೋಮಿನ‌ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಸಂಘಪರಿವಾರದ ಕಾರ್ಯಕರ್ತರು

(ನ್ಯೂಸ್ ಕಡಬ)newskadaba.com ಧರ್ಮಸ್ಥಳ, ಜ.25. ಅನ್ಯಕೋಮಿನ ಜೋಡಿಯನ್ನು ತಂಡವೊಂದು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಧರ್ಮಸ್ಥಳ ಹೊರವಲಯದ ಕನ್ಯಾಡಿಯಲ್ಲಿ ಈ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ದಾದಾಪೀರ್‌ ಎಂಬಾತ ವಿವಾಹಿತ ಹಿಂದೂ ಮಹಿಳೆಯ ಜತೆಯಾಗಿ ಧರ್ಮಸ್ಥಳಕ್ಕೆ ಬಂದಿದ್ದರು. ಅವರು ಲಾಡ್ಜ್ ನಲ್ಲಿ ರೂಂ ಪಡೆಯಲೆಂದು ಕನ್ಯಾಡಿಗೆ ಬಂದಿದ್ದರು. ಈ ವೇಳೆ ರೂಂ‌ ಕೊಟ್ಟಿಲ್ಲ. ಬಳಿಕ ಸ್ಥಳೀಯ ಸಂಘಪರಿವಾರದ ಕಾರ್ಯಕರ್ತರು ಅವರನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಇಬ್ಬರ ಪೋಷಕರಿಗೂ ಮಾಹಿತಿ ನೀಡಿ ಕರೆಸಿಕೊಂಡಿದ್ದಾರೆ ಎನ್ನಲಾಗಿದೆ.  

ಧರ್ಮಸ್ಥಳ: ಅನ್ಯಕೋಮಿನ‌ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಸಂಘಪರಿವಾರದ ಕಾರ್ಯಕರ್ತರು Read More »

ಕರಾವಳಿ

ಧರ್ಮಸ್ಥಳ ಸಂಸ್ಥೆಯ ಕಾರ್ಯ ಶ್ಲ್ಯಾಘನೀಯ

(ನ್ಯೂಸ್ ಕಡಬ)newskadaba.com  ಧರ್ಮಸ್ಥಳ, ಜ.10. ಆಂತರಿಕ ಮತ್ತು ಬಾಹ್ಯ ಸ್ವಚ್ಛತೆ ಇದ್ದಾಗ ಪರಮಾತ್ಮಾನನ್ನು ಓಲಿಸಿಕೊಳ್ಳುವುದು ಸುಲಭ ಸಾಧ್ಯ. ಆರೋಗ್ಯ ದೃಷ್ಠಿಯಿಂದಲೂ ಒಳಿತು ಇಂತಹ ಸಾಮಾಜಿಕ ಜಾಗೃತಿ ಕಾರ್ಯದಿಂದ ಸಮಾಜದಲ್ಲಿ ಸಂಸ್ಥೆ ಪ್ರಸಂಶನೀಯವಾಗಿದೆ ಎಂದು ಜಿಲ್ಲಾ ನಿರ್ದೇಶಕ ಯೋಗೀಶ.ಎ ಅಭಿಪ್ರಾಯಪಟ್ಟರು. ಅವರು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಶಿರಹಟ್ಟಿ ಪಟ್ಟಣದಖಾನಾಪುರ ಗ್ರಾಮದಲ್ಲಿ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಮನುಷ್ಯ ಬಾಹ್ಯವಾಗಿ ಸ್ವಚ್ಛತೆ ಇರಬೇಕಾದರೆ ಮನೆ, ಶ್ರದ್ಧಾಕೇಂದ್ರ, ವಠಾರ, ಕಾಲುವೆ ಮತ್ತು ಸಾರ್ವಜನಿಕ

ಧರ್ಮಸ್ಥಳ ಸಂಸ್ಥೆಯ ಕಾರ್ಯ ಶ್ಲ್ಯಾಘನೀಯ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ಕಾರು ಹಾಗೂ ಬೈಕ್ ನಡುವೆ ಅಪಘಾತ ➤ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 30. ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳದ ಕನ್ಯಾಡಿ ಎಂಬಲ್ಲಿ ನಡೆದಿದೆ. ಗಂಭೀರ ಗಾಯಗೊಂಡವರನ್ನು ಧರ್ಮಸ್ಥಳ ನಿವಾಸಿ ನಿತೇಶ್ ಎಂದು ಗುರುತಿಸಲಾಗಿದೆ. ಧರ್ಮಸ್ಥಳದಿಂದ ಉಜಿರೆ ಕಡೆ ಬರುತ್ತಿದ್ದ ಬೈಕ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಕಾರಿನ ಏರ್ ಬ್ಯಾಗ್ ಓಪನ್ ಅಗಿರುವ ಕಾರಣ ಕಾರಿನಲ್ಲಿದ್ದವರಿಗೆ ಯಾವುದೇ ಗಾಯವಾಗಿಲ್ಲ ಎನ್ನಲಾಗಿದೆ. ಢಿಕ್ಕಿಯ ರಭಸಕ್ಕೆ ಬೈಕ್

ಬೆಳ್ತಂಗಡಿ: ಕಾರು ಹಾಗೂ ಬೈಕ್ ನಡುವೆ ಅಪಘಾತ ➤ ಸವಾರ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top