ಡಿಕೆಶಿ ನೇತೃತ್ವದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣ ಪ್ರಿಯಾಂಕ್ ಖರ್ಗೆಗೆ ಗೃಹ, ಯು.ಟಿ.ಖಾದರ್ ಗೆ ಆರೋಗ್ಯ ಇಲಾಖೆ
(ನ್ಯೂಸ್ ಕಡಬ) newskadaba.com ಜೂ. 05. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟಕ್ಕೆ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಸಚಿವರಿಗೆ ವಿವಿಧ ಇಲಾಖೆಗಳ ಜವಾಬ್ದಾರಿಗಳನ್ನು ವಹಿಸಿ ರಾಜ್ಯ ಸರಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಸಚಿವ ಸಂಪುಟ ರಚನೆಯ ನಂತರ ಖಾತೆ ಹಂಚಿಕೆ ಕುರಿತಾಗಿ ತೀವ್ರ ಕುತೂಹಲ ಮೂಡಿದ್ದರೆ, ಇದೀಗ ಅದಕ್ಕೆ ತೆರೆ ಬಿದ್ದಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್-ಹಣಕಾಸು, ಸಂಪುಟ ವ್ಯವಹಾರಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಗುಪ್ತಚರ ಹಾಗೂ ಹಂಚಿಕೆಯಾಗದ ಎಲ್ಲ ಇಲಾಖೆಗಳ ಜವಾಬ್ದಾರಿಯನ್ನು ತಮ್ಮಲ್ಲೇ ಉಳಿಸಿಕೊಂಡಿದ್ದಾರೆ. […]
