Draupadi murmu

ಮೈಸೂರು ಅರಮನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

(ನ್ಯೂಸ್‌ ಕಡಬ) newskadaba.com,  ಸೆ.02: ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮೈಸೂರು ಅರಮನೆಗೆ ಭೇಟಿ ನೀಡಿದ್ದರು. ಈ ಬಗ್ಗೆ ರಾಜವಂಶಸ್ಥೆ ಪ್ರಮೋದಾದೇವಿ ಸಂತೋಷ ವ್ಯಕ್ತಪಡಿಸಿದ್ದಾರೆ. ಗಣ್ಯರನ್ನು ಸ್ವಾಗತಿಸಲು ನನಗೆ ಅಪಾರ ಸಂತೋಷ ಮತ್ತು ಹೆಮ್ಮೆ ಆಗಿದೆ. ನನ್ನ ಆಹ್ವಾನವನ್ನು ಸ್ವೀಕರಿಸಿ ಗೌರವಿಸಿದ್ದಕ್ಕಾಗಿ ಹೃತ್ಪೂರ್ವಕ ಧನ್ಯವಾದಗಳು ಎಂದು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.  

ಮೈಸೂರು ಅರಮನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೆ.1ರಂದು ಮೈಸೂರಿಗೆ ದ್ರೌಪದಿ ಮುರ್ಮು ಭೇಟಿ

(ನ್ಯೂಸ್‌ ಕಡಬ) newskadaba.com, ಆ.18: ಸೆ.1ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಮಾನಸ ಗಂಗೋತ್ರಿಯ ಅಖಿಲ ಭಾರತ ವಾಕ್‌ ಹಾಗೂ ಶ್ರವಣ ಸಂಸ್ಥೆ ವಜ್ರ ಮಹೋತ್ಸವ ಸಮಾರಂಭದಲ್ಲಿ ಅವರು ಭಾಗವಹಿಸಲಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿರುವ ರಾಷ್ಟ್ರಪತಿಗಳು ಅಲ್ಲಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ದ್ರೌಪದಿ ಮುರ್ಮು ಅವರು ಮೈಸೂರಿಗೆ ಆಗಮಿಸುತ್ತಿರುವುದು ಇದು 2ನೇ ಬಾರಿ. 2022ರಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲು ದ್ರೌಪದಿ ಮುರ್ಮು ಅವರು ಮೈಸೂರಿಗೆ ಆಗಮಿಸಿದ್ದರು.

ಸೆ.1ರಂದು ಮೈಸೂರಿಗೆ ದ್ರೌಪದಿ ಮುರ್ಮು ಭೇಟಿ Read More »

ಕರ್ನಾಟಕ

ಸೆ. 05ರಂದು ರಾಷ್ಟ್ರಪತಿಗಳಿಂದ ‘ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ’ ಪ್ರದಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 29. ಸೆಪ್ಟೆಂಬರ್ 5ರಂದು ರಾಷ್ಟ್ರೀಯ ಶಿಕ್ಷಕರ ದಿನಾಚರಣೆಯ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 50 ಶಿಕ್ಷಕರಿಗೆ 2024ರ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಯನ್ನು ದೆಹಲಿಯ ವಿಜ್ಞಾನ ಭವನದಲ್ಲಿ ನೀಡಿ ಗೌರವಿಸಲಿದ್ದಾರೆ. ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ 2024 ತಮ್ಮ ವಿದ್ಯಾರ್ಥಿಗಳ ಜೀವನ ಮತ್ತು ಭಾರತದ ವಿಶಾಲ ಶೈಕ್ಷಣಿಕ ಭೂದೃಶ್ಯದ ಮೇಲೆ ಪರಿಣಾಮ ಬೀರಿದ ಶಿಕ್ಷಕರ ಕೊಡುಗೆಗಳನ್ನು ಗುರುತಿಸುವ ಮತ್ತು ಆಚರಿಸುವ ಗುರಿಯನ್ನು ಹೊಂದಿದೆ. ಈ ಪ್ರಶಸ್ತಿ ಪುರಸ್ಕೃತರಿಗೆ 50,000 ರೂ. ಗಳ

ಸೆ. 05ರಂದು ರಾಷ್ಟ್ರಪತಿಗಳಿಂದ ‘ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ’ ಪ್ರದಾನ Read More »

ಕರಾವಳಿ
Scroll to Top