Elephant ride

ಕಾಡಾನೆ ದಾಳಿ- 150ಕ್ಕೂ ಹೆಚ್ಚು ಅಡಿಕೆ ಗಿಡ ನಾಶ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ. 21. ಕಾಡಾನೆ ದಾಳಿ ನಡೆಸಿದ ಪರಿಣಾಮ 150ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ನಾಶಗೊಂಡಿರುವ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದಲ್ಲಿ ನಡೆದಿದೆ. ಶಿರಾಡಿ ಗ್ರಾಮದ ತೆಕ್ಕನಾಟ್ ನಿವಾಸಿ ಟಿ.ಎ.ಥಾಮಸ್ ಎಂಬವರಿಗೆ ಸೇರಿದ ಕೃಷಿ ತೋಟಕ್ಕೆ ಕಾಡಾನೆ ನುಗ್ಗಿ 150ಕ್ಕೂ ಅಧಿಕ ಅಡಿಕೆ ಗಿಡಗಳನ್ನು ನಾಶಗೊಳಿಸಿದೆ ಎನ್ನಲಾಗಿದೆ. ಈ ಭಾಗದಲ್ಲಿ ಕಾಡಾನೆಗಳು ಪದೇ ಪದೇ ಕೃಷಿ ತೋಟಕ್ಕೆ ದಾಳಿ ನಡೆಸಿ ಹಾನಿಗೊಳಿಸುತ್ತಿರುವುದು ಕೃಷಿಕರು ಆತಂಕಗೊಳ್ಳುವಂತೆ ಮಾಡಿದೆ. ಶೀಘ್ರವೇ ಆನೆಗಳನ್ನು ಅರಣ್ಯದೊಳಗೆ ಸ್ಥಳಾಂತರಿಸುವ […]

ಕಾಡಾನೆ ದಾಳಿ- 150ಕ್ಕೂ ಹೆಚ್ಚು ಅಡಿಕೆ ಗಿಡ ನಾಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಾಡಾನೆ ದಾಳಿ- ರೈತ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಡಿ. 25. ಕಾಡಾನೆ ದಾಳಿಗೆ ರೈತರೊಬ್ಬರು ಬಲಿಯಾದ ದಾರುಣ ಘಟನೆ ತರೀಕೆರೆ ತಾಲೂಕಿನ ಹಾದಿಕೆರೆ ಸಮೀಪದ ರಾಗಿ ಬಸವನಹಳ್ಳಿಯಲ್ಲಿ ನಡೆದಿದೆ. ಮೃತ ರೈತನನ್ನು ಈರಪ್ಪ ಎಂದು ಗುರುತಿಸಲಾಗಿದೆ. ಇವರು ತನ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡ ಅವರು ಮೃತಪಟ್ಟಿದ್ದಾರೆ. ಕಾಡಾನೆ ದಾಳಿಗೆ ರೈತ ಮೃತಪಟ್ಟ ಹಿನ್ನೆಲೆ ಅರಣ್ಯ ಇಲಾಖೆಯ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಡಾನೆ ದಾಳಿ- ರೈತ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top