ವಿಮಾನದಲ್ಲಿ ತುರ್ತು ಬಾಗಿಲು ತೆರೆಯಲು ಯತ್ನ – ಪ್ರಯಾಣಿಕ ವಶಕ್ಕೆ
(ನ್ಯೂಸ್ ಕಡಬ) newskadaba.com ಚೆನ್ನೈ, ಸೆ. 21. ದಿಲ್ಲಿಯಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದ ಇಂಡಿಗೋ ಏರ್ ಲೈನ್ಸ್ ವಿಮಾನದ ಪ್ರಯಾಣಿಕನೋರ್ವ ತುರ್ತು ನಿರ್ಗಮನ ದ್ವಾರವನ್ನು ತೆರೆಯಲು ಯತ್ನಿಸಿದ್ದು, ಆತನನ್ನು ವಶಕ್ಕೆ ತೆಗೆದುಕೊಂಡ ಸಿಐಎಸ್‌ಎಫ್ ಅಧಿಕಾರಿಗಳು ಬಳಿಕ ಪೊಲೀಸರಿಗೆ ಹಸ್ತಾಂತರಿಸಿದ ಘಟನೆ ನಡೆದಿದೆ. ಬಂಧಿತನನ್ನು ಮಣಿಕಂಡನ್ ಎಂದು ಗುರುತಿಸಲಾಗಿದೆ. ಮಣಿಕಂಡನ್ ವಿರುದ್ಧ ಇಂಡಿಗೋ ಅಧಿಕೃತ ದೂರನ್ನೂ ಪೊಲೀಸ್ ಠಾಣೆಗೆ ಸಲ್ಲಿಸಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ.
ವಿಮಾನದಲ್ಲಿ ತುರ್ತು ಬಾಗಿಲು ತೆರೆಯಲು ಯತ್ನ – ಪ್ರಯಾಣಿಕ ವಶಕ್ಕೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್