fatal

➤➤ Big Breaking News ಶಿರಾಡಿ: ಬೆಳ್ಳಂಬೆಳಗ್ಗೆ ಕೆಎಸ್ಸಾರ್ಟಿಸಿ ಬಸ್ – ಸ್ವಿಫ್ಟ್ ಡಿಸೈರ್ ಕಾರು ಮಧ್ಯೆ ಮುಖಾಮುಖಿ ಢಿಕ್ಕಿ ➤ ಮಗು ಸಹಿತ ನಾಲ್ವರು ದುರ್ಮರಣ, ಇಬ್ಬರ ಸ್ಥಿತಿ ಚಿಂತಾಜನಕ

(ನ್ಯೂಸ್ ಕಡಬ) newskadaba.com ಸಕಲೇಶಪುರ, ಮಾ.10. ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ‌ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ದಾರುಣ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ಭಾನುವಾರದಂದು ಸಂಭವಿಸಿದೆ. ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಮಧ್ಯೆ ಸಕಲೇಶಪುರ ಠಾಣಾ ವ್ಯಾಪ್ತಿಯ ಶಿರಾಡಿ ಘಾಟ್ ಪ್ರದೇಶದಲ್ಲಿ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಪರಿಣಾಮ ಆರು ವರ್ಷದ ಮಗು ಸೇರಿದಂತೆ […]

➤➤ Big Breaking News ಶಿರಾಡಿ: ಬೆಳ್ಳಂಬೆಳಗ್ಗೆ ಕೆಎಸ್ಸಾರ್ಟಿಸಿ ಬಸ್ – ಸ್ವಿಫ್ಟ್ ಡಿಸೈರ್ ಕಾರು ಮಧ್ಯೆ ಮುಖಾಮುಖಿ ಢಿಕ್ಕಿ ➤ ಮಗು ಸಹಿತ ನಾಲ್ವರು ದುರ್ಮರಣ, ಇಬ್ಬರ ಸ್ಥಿತಿ ಚಿಂತಾಜನಕ Read More »

ಕರ್ನಾಟಕ

ಲಾರಿಗೆ ಢಿಕ್ಕಿಯಾದ ಕಾರು: ಕಿರುತೆರೆ ನಟಿ, ಸಹ ನಟ ಮೃತ್ಯು ► ಕುಕ್ಕೇ ಸುಬ್ರಹ್ಮಣ್ಯ ದೇವರ ದರ್ಶನಕ್ಕೆ ಆಗಮಿಸುತ್ತಿದ್ದ ನಟರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.24. ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಿರುತುರೆ ನಟಿ ಹಾಗೂ ಸಹನಟ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟು, ನಾಲ್ವರು ಸಹನಟರು ಗಾಯಗೊಂಡ ಘಟನೆ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಲ್ಯಾಂಕೋ ಟೋಲ್‌ ರಸ್ತೆಯ ಸೋಲೂರು ಬಳಿ ಬುಧವಾರ ತಡರಾತ್ರಿ ನಡೆದಿದೆ. ಮಹಾನದಿ ಧಾರಾವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಮತ್ತು ರು. ಮಧುಬಾಲ, ತ್ರಿವೇಣಿ ಸಂಗಮ ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ಕಿರುತೆರೆ ನಟಿ ರಚನಾ(23) ಹಾಗೂ ಸಹ ನಟ ಜೀವನ್‌ ಮೃತಪಟ್ಟವರು.

ಲಾರಿಗೆ ಢಿಕ್ಕಿಯಾದ ಕಾರು: ಕಿರುತೆರೆ ನಟಿ, ಸಹ ನಟ ಮೃತ್ಯು ► ಕುಕ್ಕೇ ಸುಬ್ರಹ್ಮಣ್ಯ ದೇವರ ದರ್ಶನಕ್ಕೆ ಆಗಮಿಸುತ್ತಿದ್ದ ನಟರು Read More »

ಕರ್ನಾಟಕ

ಲಾರಿ ಮರಕ್ಕೆ ಢಿಕ್ಕಿ: ಮೂವರು ಮೃತ್ಯು ► ಆರು ಮಂದಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಕೋಲಾರ, ಆ.12. ಲಾರಿಯೊಂದು‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿನ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಓರ್ವ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಹೃದಯ ವಿದ್ರಾವಕ‌ ಘಟನೆ ಶನಿವಾರದಂದು ನಡೆದಿದೆ. ಮಾಲೂರಿನಿಂದ ಕೋಲಾರದ ಕಡೆಗೆ ತೆರಳುತ್ತಿದ್ದ ಲಾರಿಯಲ್ಲಿ ಒಟ್ಟು 9 ಮಂದಿಯಿದ್ದರು. ಘಟನೆಯಲ್ಲಿ ರಮೇಶ್(35) ಹಾಗೂ ನಾಗರಾಜ್ (34) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ‌. ಲಾರಿಯ ಚಾಲಕ ಹಾಗೂ ನಿರ್ವಾಹಕ ಸೇರಿದಂತೆ ಇನ್ನುಳಿದ 6 ಮಂದಿಗೆ ಗಂಭೀರ ಗಾಯಗಳಾಗಿವೆ.

ಲಾರಿ ಮರಕ್ಕೆ ಢಿಕ್ಕಿ: ಮೂವರು ಮೃತ್ಯು ► ಆರು ಮಂದಿಗೆ ಗಂಭೀರ ಗಾಯ Read More »

ಕರ್ನಾಟಕ
Scroll to Top