fir

ಮಂಗಳೂರು: ಶಾಲಾ- ಕಾಲೇಜುಗಳ ವ್ಯಾಪ್ತಿಯಲ್ಲಿ ಅಮಲು ಪದಾರ್ಥ ಮಾರಾಟ ➤ ದಿಢೀರ್ ದಾಳಿ ನಡೆಸಿ ದಂಡ ವಿಧಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ನಗರದ ಕಮೀಷನರೇಟ್ ವ್ಯಾಪ್ತಿಯ ಶಾಲಾ ಕಾಲೇಜುಗಳ ಬಳಿ ಗುಟ್ಕಾ, ತಂಬಾಕು ಸಹಿತ ಅಮಲು ಪದಾರ್ಥ ಮಾರಾಟ ಮಾಡುತ್ತಿದ್ದ 153 ಅಂಗಡಿಗಳ ಮೇಲೆ ಮಂಗಳೂರು ನಗರ ಪೊಲೀಸರು ದಿಢೀರ್ ದಾಳಿ ನಡೆಸಿ ಪ್ರಕರಣ ದಾಖಲಿಸಿ ದಂಡ ವಿಧಿಸಿದ ಘಟನೆ ವರದಿಯಾಗಿದೆ. ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿದ್ದ ಒಟ್ಟು 348 ಅಂಗಡಿಗಳಿಗೆ ಪೊಲೀಸರು ಧಿಡೀರ್‌ ದಾಳಿ ನಡೆಸಿದ್ದು, ಈ ವೇಳೆ 153 ಅಂಗಡಿಗಳಲ್ಲಿ ಅಮಲು ಪದಾರ್ಥಗಳು ಸಿಕ್ಕಿವೆ. ಈ ಹಿನ್ನೆಲೆ ಅಂಗಡಿಗಳ ವಿರುದ್ಧ […]

ಮಂಗಳೂರು: ಶಾಲಾ- ಕಾಲೇಜುಗಳ ವ್ಯಾಪ್ತಿಯಲ್ಲಿ ಅಮಲು ಪದಾರ್ಥ ಮಾರಾಟ ➤ ದಿಢೀರ್ ದಾಳಿ ನಡೆಸಿ ದಂಡ ವಿಧಿಸಿದ ಪೊಲೀಸರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಡಿಕೆಶಿ ವಿರುದ್ದ ದಾಖಲಾಗಿದ್ದ 5 ಪ್ರಕರಣಗಳನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 16. ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಈಗಾಗಲೇ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ, ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ರಿಲೀಫ್ ನೀಡಿತ್ತು. ಇದೀಗ ಅವರ ವಿರುದ್ಧ ದಾಖಲಾಗಿದ್ದ ಐದೂ ಪ್ರಕರಣಗಳನ್ನು ರದ್ದುಗೊಳಿಸುವ ಮೂಲಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಕೋವಿಡ್-19 ಸಂದರ್ಭ, ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಉಲ್ಲಂಘನೆ ಮಾಡಿ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆಯನ್ನು ನಡೆಸಲಾಗಿತ್ತು. ಈ

ಡಿಕೆಶಿ ವಿರುದ್ದ ದಾಖಲಾಗಿದ್ದ 5 ಪ್ರಕರಣಗಳನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಟಿ ಸಂಜನಾ ಗಲ್ರಾನಿಗೆ ಕೊಲೆ ಬೆದರಿಕೆ ಆರೋಪ ➤ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ಕನ್ನಡ ಚಲನಚಿತ್ರ ನಟಿ ಸಂಜನಾ ಗಲ್ರಾನಿಗೆ ಕೊಲೆ ಬೆದರಿಕೆ ಹಾಕಿರುವ ಕುರಿತು ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಇಂದಿರಾನಗರದ ಧೂಪನಹಳ್ಳಿಯಲ್ಲಿ ವಾಸವಾಗಿರುವ ಸಂಜನಾ ಗಲ್ರಾನಿಯವರ ಪಕ್ಕದಲ್ಲಿ ಯಶೋಧಮ್ಮ ಹಾಗೂ ರಾಜಣ್ಣ ಎಂಬವರ ಮನೆಯೂ ಇದ್ದು ಅವರು, ರಸ್ತೆಗೆ ಅಡ್ಡಲಾಗಿ ಕಾರುಗಳನ್ನು ನಿಲ್ಲಿಸುತ್ತಾರೆ. ಇದನ್ನು ಪ್ರಶ್ನಿಸಿದರೆ ಕೊಲೆ ಮಾಡ್ತೀನಿ ಎಂದು ಕೊಲೆ ಬೆದರಿಕೆ ಹಾಕಿದ್ದಲ್ಲದೇ, ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಸಂಜನಾ ಗಲ್ರಾನಿ ದೂರು ನೀಡಿದ್ದಲ್ಲದೇ, ಅವರ ವಿರುದ್ದ

ನಟಿ ಸಂಜನಾ ಗಲ್ರಾನಿಗೆ ಕೊಲೆ ಬೆದರಿಕೆ ಆರೋಪ ➤ ಎಫ್ಐಆರ್ ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾಜಿ ಕ್ರಿಕೆಟರ್‌ ವಿನೋದ್‌ ಕಾಂಬ್ಳಿ ವಿರುದ್ಧ ಎಫ್‌ಐಆರ್‌ !

(ನ್ಯೂಸ್ ಕಡಬ)newskadaba.com ಮುಂಬೈ,ಫೆ.06.ಕುಡಿದ ಮತ್ತಿನಲ್ಲಿ ತನ್ನ ಪತ್ನಿಯ ಮೇಲೆ ದೌರ್ಜನ್ಯವೆಸಗಿದ ಆರೋಪದ ಮೇಲೆ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ವಿನೋದ್‌ ಕಾಂಬ್ಳಿ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಇಬ್ಬರು ಪೊಲೀಸ್‌ ಸಿಬ್ಬಂದಿ ಕ್ರಿಕೆಟಿಗನ ಫ್ಲ್ಯಾಟ್‌ಗೆ ತೆರಳಿ ನೋಟೀಸ್‌ ನೀಡಿದ್ದಾರೆ. ಆ ಮೂಲಕ ಈ ಪ್ರಕರಣ ಸಂಬಂಧ ಬಾಂದ್ರಾ ಪೊಲೀಸ್‌ ಠಾಣೆಗೆ ಬಂದು ಹೇಳಿಕೆ ನೀಡುವಂತೆ ಸೂಚಿಸಿದ್ದಾರೆ. ಆದರೆ, ಈ ಪ್ರಕರಣ ಸಂಬಂಧ ವಿನೋದ್ ಕಾಂಬ್ಳಿ ಅವರನ್ನು ಬಂಧಿಸಿಲ್ಲ ಎಂದು ತಿಳಿದುಬಂದಿದೆ.  

ಮಾಜಿ ಕ್ರಿಕೆಟರ್‌ ವಿನೋದ್‌ ಕಾಂಬ್ಳಿ ವಿರುದ್ಧ ಎಫ್‌ಐಆರ್‌ ! Read More »

ರಾಷ್ಟ್ರೀಯ ನ್ಯೂಸ್

ಕುಡಿದು ಬಂದು ಪತ್ನಿಗೆ ಹಲ್ಲೆ,ನಿಂದನೆ ➤ ಮಾಜಿ ಕ್ರಿಕೆಟಿಗನ ವಿರುದ್ಧ FIR

(ನ್ಯೂಸ್ ಕಡಬ)newskadaba.com ಮುಂಬಯಿ, ಫೆ.05. ಪತ್ನಿ ಮೇಲೆ ಹಲ್ಲೆ ನಡೆಸಿ ನಿಂದಿಸಿದ ಆರೋಪದ ಮೇಲೆ ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ವಿರುದ್ಧ ಬಾಂದ್ರಾ ಪೊಲೀಸ್‌ ಠಾಣೆಯಲ್ಲಿ ಎಫ್‌.ಐ.ಆರ್‌ ದಾಖಲಾಗಿದೆ. ಪತ್ನಿ ಆಂಡ್ರಿಯಾ ನೀಡಿದ ದೂರಿನ ಮೇರೆಗೆ ಐಪಿಸಿ ಸೆಕ್ಷನ್‌ 324,504 ಅಡಿಯಲ್ಲಿ ಪೊಲೀಸರು ದೂರು ದಾಖಲಿಸಿದ್ದಾರೆ. ಕುಡಿದು ಮನೆಗೆ ಬಂದ ವಿನೋದ್ ಕಾಂಬ್ಳಿ ಪತ್ನಿಯನ್ನು ಕೆಟ್ಟದಾಗಿ ನಿಂದಿಸಿದ್ದಾರೆ. ಇದಾದ ಬಳಿಕ ಸಿಟ್ಟಿನಲ್ಲಿ ಅಡುಗೆಯ ಕಾವಲಿಯನ್ನು ಪತ್ನಿಯ ಮೇಲೆ ಎಸೆದಿದ್ದಾನೆ. ಇದರಿಂದ ಪತ್ನಿ ಆಂಡ್ರಿಯಾ ತಲೆಗೆ ಗಾಯವಾಗಿದೆ.

ಕುಡಿದು ಬಂದು ಪತ್ನಿಗೆ ಹಲ್ಲೆ,ನಿಂದನೆ ➤ ಮಾಜಿ ಕ್ರಿಕೆಟಿಗನ ವಿರುದ್ಧ FIR Read More »

ರಾಷ್ಟ್ರೀಯ ನ್ಯೂಸ್

ಕೆಆರ್‌ಎಸ್‌ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌

(ನ್ಯೂಸ್ ಕಡಬ)newskadaba.com  ಕೊಪ್ಪಳ, ಜ.21. ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್‌.ಎಸ್‌) ಪಕ್ಷದ ಹತ್ತು ಜನ ಕಾರ್ಯಕರ್ತರು ಇಲ್ಲಿನ ಜಿಲ್ಲಾಸ್ಪತ್ರೆಯ ಸಿಬ್ಬಂದಿ ಹಾಗೂ ವೈದ್ಯರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಬಳಿಕ ಅವರಿಗೆ ಮಧ್ಯಂತರ ಜಾಮೀನು ಲಭಿಸಿದೆ. ಕೆಆರ್‌ಎಸ್‌ ಪದಾಧಿಕಾರಿಯೊಬ್ಬರ ಸಂಬಂಧಿಕರ ಹೆರಿಗೆ ಜಿಲ್ಲಾಸ್ಪತ್ರೆಯಲ್ಲಿ ಆಗಿದ್ದು, ಮಾತ್ರೆ ತೆಗೆದುಕೊಳ್ಳುವ ವಿಷಯಕ್ಕೆ ಸಂಬಂಧಿಸಿ ಕಾರ್ಯಕರ್ತ ಹಾಗೂ ಆಸ್ಪತ್ರೆ ಸಿಬ್ಬಂದಿ ನಡುವೆ ಜಟಾಪಟಿಯಾಗಿದೆ ಎಂದು ತಿಳಿದುಬಂದಿದೆ. ಬಳಿಕ ಕೆಲ ಕಾರ್ಯಕರ್ತರು ಜಿಲ್ಲಾಸ್ಪತ್ರೆಯಲ್ಲಿನ ಅವ್ಯವಸ್ಥೆ ಬಗ್ಗೆ

ಕೆಆರ್‌ಎಸ್‌ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌ Read More »

ಕರ್ನಾಟಕ

ಪುತ್ತೂರು: ವಿದ್ಯಾರ್ಥಿನಿ ಅಪ್ರಾಪ್ತೆಯಾಗಿದ್ದ ಸಂದರ್ಭ ಲೈಂಗಿಕ ಕಿರುಕುಳ ಆರೋಪ ➤ ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 06. ವಿದ್ಯಾರ್ಥಿನಿಯೋರ್ವಳು ಅಪ್ರಾಪ್ತೆಯಾಗಿದ್ದ ಸಂದರ್ಭ ಆಕೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕೋಡಿಯಡ್ಕ ನಿವಾಸಿ ಯುವಕನ ವಿರುದ್ಧ ಸಂಪ್ಯ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ ಘಟನೆ ವರದಿಯಾಗಿದೆ. ಆರೋಪಿ ಕೋಳಿ ಅಂಗಡಿ ಹೊಂದಿರುವ ಕೋಡಿಯಡ್ಕ ನಿವಾಸಿ ರಾಹುಲ್ ಎಂದು ಗುರುತಿಸಲಾಗಿದೆ. ಆರೋಪಿ ರಾಹುಲ್, ವಿದ್ಯಾರ್ಥಿನಿ ಅಪ್ರಾಪ್ತೆಯಾಗಿದ್ದ ಸಂದರ್ಭ ಆಕೆಗೆ ಕೋಳಿ ಫಾರಂನಲ್ಲಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಮತ್ತು ಆಕೆಗೆ ಬೆದರಿಕೆಯೊಡ್ಡಿರುವುದಾಗಿ ಪುತ್ತೂರು ನಿವಾಸಿ ಸದ್ಯ ಮಂಗಳೂರಿನ ಕಾಲೇಜೊಂದರ ವಿದ್ಯಾರ್ಥಿನಿ ನೀಡಿದ

ಪುತ್ತೂರು: ವಿದ್ಯಾರ್ಥಿನಿ ಅಪ್ರಾಪ್ತೆಯಾಗಿದ್ದ ಸಂದರ್ಭ ಲೈಂಗಿಕ ಕಿರುಕುಳ ಆರೋಪ ➤ ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top