forest department

ಚಾಮರಾಜನಗರ: ಹುಲಿ ಹಿಡಿಯಲು ವಿಫಲರಾದ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಬೋನಿಗೆ ಕೂಡಿ ಹಾಕಿದ ಗ್ರಾಮಸ್ಥರು

(ನ್ಯೂಸ್‌ ಕಡಬ) newskadaba.com,  ಸೆ.09: ಹುಲಿ ಸೆರೆಹಿಡಿಯಲು ವಿಫಲರಾದ ಹಿನ್ನೆಲೆ ಅರಣ್ಯ ಇಲಾಖೆಯ ಸಿಬ್ಬಂದಿಯನ್ನೇ ಬೋನಿನಲ್ಲಿ ಕೂಡಿ ಹಾಕಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿದೆ. ಬೊಮ್ಮಲಾಪುರ ಗ್ರಾಮದ ಗಂಗಪ್ಪ ಎಂಬವರ ಜಮೀನಿನಲ್ಲಿ ಇರಿಸಿದ್ದ ತುಮಕೂರು ಕೇಜ್ ಗೆ ಅರಣ್ಯ ಇಲಾಖೆ ಗಾರ್ಡ್, ವಾಚರ್ ಸೇರಿ 7 ಮಂದಿ ಸಿಬ್ಬಂದಿಯನ್ನು ಗ್ರಾಮಸ್ಥರು ಬೋನಿನಲ್ಲಿ ಕೂಡಿ ಹಾಕಿದ್ದಾರೆ. ಮೇಲಾಧಿಕಾರಿಗಳು ಬರುವವರೆಗೂ ನಾವು ಈ ಬೋನಿನ ಬಾಗಿಲು ತೆಗೆಯುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. […]

ಚಾಮರಾಜನಗರ: ಹುಲಿ ಹಿಡಿಯಲು ವಿಫಲರಾದ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಬೋನಿಗೆ ಕೂಡಿ ಹಾಕಿದ ಗ್ರಾಮಸ್ಥರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದ ಕಾಡಾನೆ ➤ 22 ದಿನಗಳಿಂದ ಕಾಲು ಮುರಿದು ನರಕ ಯಾತನೆ ಅನುಭವಿಸುತ್ತಿದ್ದ ಆನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮೇ.29. ಸುಬ್ರಹ್ಮಣ್ಯ ಮೀಸಲು ಅರಣ್ಯದಲ್ಲಿ ಕಾಲು ಮುರಿದು ಕಳೆದ ಮೂರು ವಾರಗಳಿಂದ ನರಕಯಾತನೆ ಅನುಭವಿಸುತ್ತಿದ್ದ ಕಾಡಾನೆಯು ಬುಧವಾರದಂದು ಕೊನೆಯುಸಿರೆಳೆದಿದೆ. ಸುಬ್ರಹ್ಮಣ್ಯ ಮೀಸಲು ಅರಣ್ಯದ ಬಾಳುಗೋಡು ಗ್ರಾಮದ ಪದಕ ಎಂಬಲ್ಲಿ ಕಾಡಾನೆಯೊಂದು ಕಳೆದ ಸುಮಾರು 22 ದಿನಗಳಿಂದ ಮುಂಭಾಗದ ಎಡ ಕಾಲು ಮುರಿದು ನರಕಯಾತನೆ ಅನುಭವಿಸುತ್ತಿತ್ತು. ಸಾರ್ವಜನಿಕರ ಮಾಹಿತಿಯಂತೆ ಸ್ಥಳಕ್ಕೆ ಭೇಟಿ ನೀಡಿದ್ದ ಅರಣ್ಯಾಧಿಕಾರಿಗಳು, ತಜ್ಞ ವೈದ್ಯರನ್ನು ಕರೆಸಿ ಚಿಕಿತ್ಸೆ ನೀಡಿದ್ದರು‌. ಚಿಕಿತ್ಸೆ ನೀಡಿಯೂ ಕಾಡಾನೆ ಚೇತರಿಸದೆ ಇದ್ದುದರಿಂದ ಅರಣ್ಯಾಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ

ಸುಬ್ರಹ್ಮಣ್ಯ: ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದ ಕಾಡಾನೆ ➤ 22 ದಿನಗಳಿಂದ ಕಾಲು ಮುರಿದು ನರಕ ಯಾತನೆ ಅನುಭವಿಸುತ್ತಿದ್ದ ಆನೆ Read More »

ಕರ್ನಾಟಕ

ಜಿಂಕೆ ಚರ್ಮ ಮಾರಾಟ ಪ್ರಕರಣ ► ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.14. ಜಿಂಕೆ ಚರ್ಮವನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆಯ ವಿಶೇಷ ಸಿಬ್ಬಂದಿ ಹಿಡಿದು ಪೊಲೀಸರ ವಶಕ್ಕೆ ನೀಡಿರುವ ಘಟನೆ ಬನ್ನೇರುಘಟ್ಟದಲ್ಲಿ ಗುರುವಾರದಂದು ನಡೆದಿದೆ. ಬಂಧಿತ ಆರೋಪಿಗಳನ್ನು ನಾರಾಯಣಸ್ವಾಮಿ (42) ಮತ್ತು ನಾಗಮಾದ(27) ಎಂದು ಗುರುತಿಸಲಾಗದ. ಇವರಿಬ್ಬರು ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದು, ಬನ್ನೇರುಘಟ್ಟ ಸಮೀಪದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ಜಿಂಕೆ ಚರ್ಮ ಮಾರಾಟ ಮಾಡುತ್ತಿದ್ದಾಗ ಅರಣ್ಯ ಇಲಾಖೆಯ ವಿಶೇಷ ದಳದ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಬಂಧಿತರ ಬಳಿಯಿದ್ದ ಜಿಂಕೆ ಚರ್ಮವನ್ನು ಪೊಲೀಸರು ವಶಪಡಿಸಿಕೊಂಡಿದ್ದು,

ಜಿಂಕೆ ಚರ್ಮ ಮಾರಾಟ ಪ್ರಕರಣ ► ಇಬ್ಬರ ಬಂಧನ Read More »

ಕರ್ನಾಟಕ
Scroll to Top