ಗಂಡನಿಗೆ ಆರೆಸ್ಟ್ ವಾರಂಟ್ ಹಿಡಿದು ಬಂದ ಪೊಲೀಸರು, ಹೆದರಿ ಮಗುವಿನ ಜೊತೆಗೆ ಪತ್ನಿ ನೇಣು ಬಿಗಿದು ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com, ಸೆ.02 ಬ್ರಹ್ಮಾವರ: ಉಡುಪಿ ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಆರೂರು ಗ್ರಾಮದ ಅಡ್ಜಿಲ್ ಎಂಬಲ್ಲಿ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರನ್ನು ಪೊಲೀಸರು ಬಂಧಿಸಲು ವಾರಂಟ್ ಹಿಡಿದು ಬಂದಿರುವುದನ್ನು ಕಂಡು ಹೆದರಿದ ಅವರ ಪತ್ನಿ ಸುಶ್ಮಿತಾ (35) ಎಂಬವರು ತನ್ನ ಒಂದೂವರೆ ವರ್ಷದ ಮಗು ಶ್ರೇಷ್ಠ ಎಂಬಾಕೆಯನ್ನು ನೇಣು ಬಿಗಿದು ಕೊಲೆ ಮಾಡಿ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ(ಸೆ.01) ನಡೆದಿದೆ. ಸುಶ್ಮಿತಾ ಅವರ ಪತಿ ಸುಭಾಶ್ […]

