ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಬಡವರ ಬಿಪಿಎಲ್ ಕಾರ್ಡ್ ಗಳನ್ನು ಕಸಿಯುವುದಿಲ್ಲ: ಸಿ,ಎಂ ಸಿದ್ದರಾಮಯ್ಯ
(ನ್ಯೂಸ್ ಕಡಬ) newskadaba.com ಹಾವೇರಿ, ಡಿ. 09. ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ಸವಣೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಸಮಾವೇಶವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿದರು. ಯಾವುದೇ ಕಾರಣಕ್ಕೂ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಯಾರಿಂದಲೂ ಬಿಪಿಎಲ್ ಕಾರ್ಡ್ ಗಳನ್ನು ಕಸಿಯುವುದಿಲ್ಲ. ಉಪಚುನಾವಣೆ ವೇಳೆ ಕೋಮು ಸೌಹಾರ್ದತೆ ಮೆರೆದ ಶಿಗ್ಘಾಂವಿ ಜನತೆಗೆ ಧನ್ಯವಾದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು. ದೇಶದಲ್ಲಿ ಬಿಜೆಪಿ ಆಡಳಿತ ಇರುವ ಯಾವುದೇ […]


