ಪರಮೇಶ್ ಮೇಸ್ತ ಪ್ರಕರಣದ ವದಂತಿಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ► ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ: ಐಜಿಪಿ ನಿಂಬಾಲ್ಕರ್
(ನ್ಯೂಸ್ ಕಡಬ) newskadaba.com ಹೊನ್ನಾವರ, ಡಿ.11. ಪರೇಶ್ ಮೇಸ್ತ ಸಾವು ಪ್ರಕರಣದ ಬಗ್ಗೆ ಪಕ್ಷವೊಂದು ನೀಡಿದ್ದ ಪತ್ರಿಕಾ ಪ್ರಕಟಣೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವದಂತಿಗಳು ವೈಯಕ್ತಿಕ ಹಿತಾಸಕ್ತಿಗಾಗಿ ಅಮಾಯಕ ಮನಸ್ಸುಗಳನ್ನು ಧರ್ಮದ ಆಧಾರದಲ್ಲಿ ವಿಭಜಿಸುವ ತಂತ್ರವಾಗಿದೆ ಎಂದು ಪಶ್ಚಿಮ ವಲಯ ಐಜಿಪಿ ಹೇಮಂತ್ ನಿಂಬಾಳ್ಕರ್ ಹೇಳಿದ್ದಾರೆ. ವೈಯಕ್ತಿಕ ಹಿತಾಸಕ್ತಿಗಳಿಗಾಗಿ ಧರ್ಮದ ಆಧಾರಲ್ಲಿ ಸಮಾಜವನ್ನು ಒಡೆಯುವ ಹಾಗೂ ಕೋಮುಭಾವನೆಯನ್ನು ಕೆರಳಿಸಲು ನಡೆಸಿದ ಷಡ್ಯಂತ್ರವು ಈ ವದಂತಿಗಳ ಹಿಂದೆ ಅಡಗಿದೆ. ಪರಮೇಶ ಮೇಸ್ತ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ […]

