ರೈಲ್ವೆ ಹಳಿಯಲ್ಲಿ ಐಇಡಿ ಸ್ಫೋಟ; ತಪ್ಪಿದ ಭಾರಿ ದುರಂತ
(ನ್ಯೂಸ್ ಕಡಬ) newskadaba.com, ಅ.23: ಅಸ್ಸಾಂನ ಕೊಕ್ರಜಾರ್ ಜಿಲ್ಲೆಯಲ್ಲಿ ಗುರುವಾರ (ಅಕ್ಟೋಬರ್ 23) ಬೆಳಗಿನ ಜಾವ ರೈಲ್ವೆ ಹಳಿಯಲ್ಲಿ ಐಇಡಿ ಸ್ಫೋಟ ಸಂಭವಿಸಿದೆ. ಇದರಿಂದ ಮೂರು ಅಡಿ ಉದ್ದದ ಹಳಿಗೆ ಹಾನಿಯಾಗಿದ್ದು, ರೈಲು ಸೇವೆಗಳು ಕೆಲಕಾಲ ಸ್ಥಗಿತಗೊಂಡವು. ಸದ್ಯ ಹಳಿಯನ್ನು ದುರಸ್ತಿಗೊಳಿಸಲಾಗಿದ್ದು, ರೈಲು ಸಂಚಾರ ಸಾಮಾನ್ಯ ಸ್ಥಿತಿಗೆ ಬಂದಿದೆ. ಕೊಕ್ರಜಾರ್ ರೈಲು ನಿಲ್ದಾಣದಿಂದ ಸುಮಾರು ಐದು ಕಿ.ಮೀ. ದೂರದಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಯಾವುದೇ ಸಾವು-ನೋವು ಸಂಭವಿಸಿಲ್ಲ ಮತ್ತು ರೈಲು ಹಳಿತಪ್ಪಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. […]
ರೈಲ್ವೆ ಹಳಿಯಲ್ಲಿ ಐಇಡಿ ಸ್ಫೋಟ; ತಪ್ಪಿದ ಭಾರಿ ದುರಂತ Read More »
ಬ್ರೇಕಿಂಗ್ ನ್ಯೂಸ್
