ಪಾರ್ಕ್ ಗಳಲ್ಲಿ ನಾಯಿಗಳ ಮಲ ವಿಸರ್ಜನೆಗೆ ಕಾರಣವಾಗುವವರಿಗೆ ಹೆಚ್ಚಿನ ದಂಡ ವಿಧಿಸಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 27. ನಗರದಲ್ಲಿನ ಉದ್ಯಾನವನಗಳ ಸ್ವತ್ಛತೆ ಕಾಯ್ದುಕೊಳ್ಳುವುದು ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಉದ್ಯಾನವನಗಳಲ್ಲಿ ನಾಯಿಗಳ ಮಲ ವಿಸರ್ಜನೆಗೆ ಕಾರಣವಾಗುವವರಿಗೆ ಹೆಚ್ಚಿನ ದಂಡ ವಿಧಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಉದ್ಯಾನವನ ಪ್ರದೇಶ ಮತ್ತು ಅದರ ಆವರಣದಲ್ಲಿ ಉಗುಳುವುದು, ಕಸವನ್ನು ಎಸೆಯಿವುದು, ಸಾಕು ಪ್ರಾಣಿಗಳ ಮಲ ವಿಸರ್ಜನೆಗೆ ಅವಕಾಶ ಮಾಡುವವರನ್ನು ನಿಯಂತ್ರಿಸಿ ಸ್ವಚ್ಛತೆಯನ್ನು ಕಾಯ್ದುಕೊಳ್ಳುವುದು ಮತ್ತು ಅದನ್ನು ಉಲ್ಲಂಸುವವರ ವಿರುದ್ಧ ದಂಡವನ್ನು ವಿಧಿಸುವ ಕಾರ್ಯವನ್ನು ತೋಟಗಾರಿಕೆ ಇಲಾಖೆ ಮತ್ತು […]

