ಮಾರ್ಚ್ 31 ರೊಳಗೆ ಆಧಾರ್ ಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯ ➤ ಆದಾಯ ತೆರಿಗೆ ಇಲಾಖೆ ಎಚ್ಚರಿಕೆ..!
(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 06. ಪ್ಯಾನ್ ಕಾರ್ಡ್ ಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಎಚ್ಚರಿಕೆ ನೀಡಿದ್ದು, ಇದರ ಪ್ರಕಾರ, ಮಾರ್ಚ್ 31 2023 ರೊಳಗೆ ಆಧಾರ್‌ನೊಂದಿಗೆ ಪ್ಯಾನ್ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್ ಜೊತೆ ಲಿಂಕ್ ಮಾಡದಿದ್ದರೆ, ಪ್ಯಾನ್ ಕಾರ್ಡ್ ಅಮಾನ್ಯವಾಗುತ್ತದೆ. ಅಲ್ಲದೇ ಪ್ಯಾನ್ ಕಾರ್ಡ್ ಬಳಕೆಯನ್ನು ನಿಷೇಧಿಸಲಾಗುವುದು. ಆದರೆ, ಈಗಾಗಲೇ ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಿದ್ದರೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಆದಾಯ ತೆರಿಗೆ […]

