ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಹೃದಯಾಘಾತ- ವ್ಯಕ್ತಿ ಮೃತ್ಯು
(ನ್ಯೂಸ್ ಕಡಬ) newskadaba.com ಇಂದೋರ್, ಜ. 06. ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದೋರ್ ಎಂಬಲ್ಲಿ ವರದಿಯಾಗಿದೆ. ಈ ಕುರಿತು ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜಿಮ್‌ನಲ್ಲಿ ವೃಂದಾವನದ ಮಾಲೀಕ ಪ್ರದೀಪ್ ರಘುವಂಶಿ ಕಸರತ್ತು ನಡೆಸುತ್ತಿದ್ದಾಗ ಹೃದಯಾಘಾತಗೊಂಡು ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆಂದು ಮೂಲಗಳು ತಿಳಿಸಿವೆ.
ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಹೃದಯಾಘಾತ- ವ್ಯಕ್ತಿ ಮೃತ್ಯು Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
