‘2035ರ ವೇಳೆಗೆ ಭಾರತ ಸ್ವಂತ ಬಾಹ್ಯಾಕಾಶ ನಿಲ್ದಾಣ ಸ್ಥಾಪಿಸಲು ಯೋಜಿಸಿದೆ’- ಇಸ್ರೋ ಅಧ್ಯಕ್ಷ ವಿ. ನಾರಾಯಣನ್ ಮಾಹಿತಿ
(ನ್ಯೂಸ್ ಕಡಬ) newskadaba.com,ಆ.23 ನವದೆಹಲಿ : ಇಸ್ರೋ 2035ರ ವೇಳೆಗೆ ಭಾರತ ಸ್ವಂತ ಬಾಹ್ಯಾಕಾಶ ನಿಲ್ದಾಣ ಸ್ಥಾಪಿಸಲು ಯೋಜಿಸಿದೆ. 2040ರ ವೇಳೆಗೆ ಈ ನಿಲ್ದಾಣವನ್ನು ಸಂಪೂರ್ಣವಾಗಿ ಕಾರ್ಯಾಚರಣೆಗೆ ತರಲು ಉದ್ದೇಶಿಸಲಾಗಿದೆ ಎಂದು ಇಸ್ರೋ ಅಧ್ಯಕ್ಷ ವಿ. ನಾರಾಯಣನ್ ತಿಳಿಸಿದ್ದಾರೆ. ರಾಷ್ಟ್ರೀಯ ಬಾಹ್ಯಾಕಾಶ ದಿನದ ಪ್ರಯುಕ್ತ ದೆಹಲಿಯಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, “ಪ್ರಧಾನಿ ಮೋದಿ ಅವರು ಮುಂದಿನ ಪೀಳಿಗೆಯ ಉಡಾವಣಾ ವಾಹನಕ್ಕೆ ಅನುಮೋದನೆ ನೀಡಿದ್ದಾರೆ. ಭಾರತವು 2040ರ ವೇಳೆಗೆ ಚಂದ್ರನ ಮೇಲೆ ಇಳಿಯಲಿದೆ. 2040ರ ವೇಳೆಗೆ […]

