india

ಮಿಸ್ ವರ್ಲ್ಡ್ 2024- ಭಾರತವನ್ನು ಪ್ರತಿನಿಧಿಸಲು ಉಡುಪಿ ಮೂಲದ ಸಿನಿ ಶೆಟ್ಟಿ ಆಯ್ಕೆ..!

(ನ್ಯೂಸ್ ಕಡಬ) neskadaba.com ಉಡುಪಿ, ಫೆ. 26. ಮಾರ್ಚ್ 9 ರಂದು ನಡೆಯಲಿರುವ ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿರುವ 71ನೇ ಆವೃತ್ತಿಯ ಮಿಸ್ ವರ್ಲ್ಡ್ 2024 ರಲ್ಲಿ ಭಾರತವನ್ನು ಪ್ರತಿನಿಧಿಸಲು ಉಡುಪಿ ಮೂಲದ 21 ವರ್ಷದ ಸಿನಿ ಶೆಟ್ಟಿ ಆಯ್ಕೆಯಾಗಿದ್ದಾರೆ. ಮುಂಬೈನಲ್ಲಿ ನಡೆದ ‘ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್-2022’ ಕಾರ್ಯಕ್ರಮದಲ್ಲಿ ಸಿನಿ ಶೆಟ್ಟಿ ‘ಮಿಸ್ ಇಂಡಿಯಾ’ ಕಿರೀಟವನ್ನು ಅಲಂಕರಿಸಿದ ನಂತರ ಈ ಘೋಷಣೆ ಹೊರ ಬಿದ್ದಿದೆ. ಅಕೌಂಟಿಂಗ್ ಮತ್ತು ಫೈನಾನ್ಸ್ ನಲ್ಲಿ ಸ್ನಾತಕೋತ್ತರ ಪದವಿ […]

ಮಿಸ್ ವರ್ಲ್ಡ್ 2024- ಭಾರತವನ್ನು ಪ್ರತಿನಿಧಿಸಲು ಉಡುಪಿ ಮೂಲದ ಸಿನಿ ಶೆಟ್ಟಿ ಆಯ್ಕೆ..! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಟಿ 20 ಸರಣಿ- ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತ

(ನ್ಯೂಸ್ ಕಡಬ) newskadaba.com ವಿಶಾಖಪಟ್ಟಣ, ನ. 23. ಇಲ್ಲಿನ ಡಾ.ವೈ.ಎಸ್ ರಾಜಶೇಖರ ರೆಡ್ಡಿ ಎಸಿಎ – ವಿಡಿಸಿಎ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿರುವ ಆಸ್ಟ್ರೇಲಿಯ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದೆ. ವಿಶ್ವಕಪ್ ಟೂರ್ನಿಯ ಬಳಿಕ ಆಸೀಸ್ ವಿರುದ್ಧ ನಡೆಯುತ್ತಿರುವ ಈ ಪಂದ್ಯದ ಬಗ್ಗೆ ಕ್ರಿಕೆಟ್ ಪ್ರೇಮಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಸೂರ್ಯ ಕುಮಾರ್ ಯಾದವ್ ಮುಂದಾಳತ್ವದಲ್ಲಿ ಭಾರತ ತಂಡ ಆಸ್ಟ್ರೇಲಿಯವನ್ನು ಎದರಿಸುತ್ತಿದೆ.

ಟಿ 20 ಸರಣಿ- ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭೂಮಿಯ ಕಕ್ಷೆ ತೊರೆದು ಚಂದ್ರನತ್ತ ಸಾಗಿದ ಚಂದ್ರಯಾನ- 3

(ನ್ಯೂಸ್ ಕಡಬ) newskadaba.com ಇಸ್ರೋ, ಆ. 01. ಇಸ್ರೋದ ಮಹತ್ವಾಕಾಂಕ್ಷಿ ಚಂದ್ರಯಾನ-3ರ ಬಾಹ್ಯಾಕಾಶ ನೌಕೆ ಭೂಮಿಯ ಕಕ್ಷೆಯಿಂದ ಚಂದ್ರನ ಕಕ್ಷೆಯತ್ತ ಪಯಣ ಮುಂದುವರಿಸಿದೆ. ಈಗಾಗಲೇ ಚಂದ್ರಯಾನ-3 ಬಾಹ್ಯಾಕಾಶ ನೌಕೆಯನ್ನು ಟ್ರಾನ್ಸ್‌ ಲೂನಾರ್ ಕಕ್ಷೆಗೆ ಸೇರಿಸಿದ್ದು, ಇನ್ನೇನು ನೌಕೆ ಚಂದ್ರನ ಕಡೆಗೆ ಸಾಗುತ್ತಿದೆ ಎಂದು ಇಸ್ರೋ ತಿಳಿಸಿದೆ. ಇಸ್ರೋ ಟೆಲಿಮಿಟ್ರಿ, ಟ್ರ್ಯಾಕಿಂಗ್ ಹಾಗೂ ಕಮಾಂಡ್ ನೆಟ್‌ ವರ್ಕ್‌ನಲ್ಲಿ ಯಶಸ್ವಿ ಪೆರಿಜಿ-ಫೈರಿಂಗ್ ಪೂರೈಸಿದೆ. ಇನ್ನು ನೌಕೆಯ ಸ್ಟಾಪ್ ಚಂದ್ರನ ಅಂಗಳವಾಗಿದೆ. ಚಂದ್ರನ ಬಳಿಗೆ ತಲುಪಿದ ನಾಲ್ಕು ದಿನದಲ್ಲಿ ಲೂನಾರ್-ಆರ್ಬಿಟ್ ಅಳವಡಿಕೆ

ಭೂಮಿಯ ಕಕ್ಷೆ ತೊರೆದು ಚಂದ್ರನತ್ತ ಸಾಗಿದ ಚಂದ್ರಯಾನ- 3 Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮತ್ತೊಂದು ಮೈಲಿಗಲ್ಲಿನತ್ತ ಇಸ್ರೋ – ಜುಲೈ 30 ರಂದು PSLV-C56 ಉಪಗ್ರಹ ಉಡಾವಣೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜು. 26. ಜುಲೈ 14 ರಂದು ಚಂದ್ರಯಾನ-3 ಮಿಷನ್‌ನ ಯಶಸ್ವಿ ಉಡಾವಣೆ ಮಾಡಿದ ನಂತರ, ಇಸ್ರೋ ಸಂಸ್ಥೆಯು ಪಿಎಸ್‌ಎಲ್‌ವಿ-ಸಿ 56 ಉಡಾವಣೆಯ ದಿನಾಂಕಗಳನ್ನು ಪ್ರಕಟಿಸಿದೆ. DS-SAR ಉಪಗ್ರಹವನ್ನು ಜುಲೈ 30 ರಂದು ಬೆಳಿಗ್ಗೆ 6:30 ಕ್ಕೆ ಆರು ಸಹ-ಪ್ರಯಾಣಿಕ ಉಪಗ್ರಹಗಳೊಂದಿಗೆ ಇಸ್ರೋದ ಶ್ರೀಹರಿಕೋಟಾ ಬಾಹ್ಯಾಕಾಶ ನಿಲ್ದಾಣದಿಂದ ಉಡಾವಣೆ ಮಾಡಲಾಗುವುದು ಎಂದು ತಿಳಿಸಿದೆ. ಈ ಮೊದಲು, ಉಡಾವಣೆಯನ್ನು ಜುಲೈ 26ಕ್ಕೆ ನಿಗದಿಪಡಿಸಲಾಗಿತ್ತು, ಆದರೆ ಹಲವು ಕಾರಣಗಳಿಂದಾಗಿ ಅದನ್ನು ಜುಲೈ 30ಕ್ಕೆ ಮರು ನಿಗದಿಪಡಿಸಲಾಗಿದೆ.

ಮತ್ತೊಂದು ಮೈಲಿಗಲ್ಲಿನತ್ತ ಇಸ್ರೋ – ಜುಲೈ 30 ರಂದು PSLV-C56 ಉಪಗ್ರಹ ಉಡಾವಣೆ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಸೇನಾಶಾಲೆಗೆ ತಲೆನೋವಾಗಿ ಪರಿಣಮಿಸಿದ ಪಾಕ್ ಗುಪ್ತಚರ ಸಂಸ್ಥೆ

(ನ್ಯೂಸ್ ಕಡಬ) newskadaba.com  ಜಮ್ಮು- ಕಾಶ್ಮೀರ, ಜು. 26. ಪಾಕಿಸ್ತಾನಿ ಗುಪ್ತಚರ ಸಂಸ್ಥೆಯ ಕಾರ್ಯಕರ್ತರು ಸೇನಾ ಶಾಲೆಯ ವಿದ್ಯಾರ್ಥಿಗಳನ್ನು ಸಂಪರ್ಕಿಸಿ ಅವರ ವೈಯಕ್ತಿಕ ವಿವರಗಳನ್ನು ಹುಡುಕುತ್ತಿದ್ದು, ಜಮ್ಮು- ಕಾಶ್ಮೀರ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಹೊಸ ತಲೆನೋವಾಗಿ ಪರಿಣಮಿಸಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಸೇನಾ ಶಾಲೆಗಳನ್ನು ನಿರ್ವಹಿಸುವ ಅಧಿಕಾರಿಗಳು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಮತ್ತು ಅಸ್ತಿತ್ವದಲ್ಲಿರುವ ಶಾಲಾ ಗುಂಪುಗಳನ್ನು ವಾಟ್ಸಾಪ್‌ನಲ್ಲಿ ರಾಜಿ ಮಾಡಿಕೊಂಡಿದ್ದಲ್ಲಿ ಅದನ್ನು ಅಳಿಸಲು ಬೋಧಕ ಸಿಬ್ಬಂದಿಗೆ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಆರ್ಮಿ

ಸೇನಾಶಾಲೆಗೆ ತಲೆನೋವಾಗಿ ಪರಿಣಮಿಸಿದ ಪಾಕ್ ಗುಪ್ತಚರ ಸಂಸ್ಥೆ Read More »

ರಾಷ್ಟ್ರೀಯ ನ್ಯೂಸ್

ಬ್ಯಾಂಕ್ ಗ್ರಾಹಕರೇ ಇತ್ತ ಗಮನಿಸಿ- ಆಗಸ್ಟ್ ತಿಂಗಳಲ್ಲಿ 14 ದಿನಗಳು ಬ್ಯಾಂಕ್ ಬಂದ್

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 24. ಭಾರತೀಯ ರಿಸರ್ವ್ ಬ್ಯಾಂಕ್ ನ ರಜಾದಿನದ ಕ್ಯಾಲೆಂಡರ್ ಪ್ರಕಾರ, 2023ರ ಆಗಸ್ಟ್ ತಿಂಗಳಿನಲ್ಲಿ ವಾರಾಂತ್ಯ ಸೇರಿ ಒಟ್ಟು 14 ದಿನಗಳು ಬ್ಯಾಂಕ್‌ ರಜಾ ಇರಲಿದೆ. ಆಗಸ್ಟ್ ತಿಂಗಳಿನಲ್ಲಿ ಒಟ್ಟ್ಉ 14 ದಿನಗಳ ಕಾಲ ಬ್ಯಾಂಕ್ ರಜಾ ಇರಲಿದ್ದು, ಸಾರ್ವಜನಿಕರು ಬ್ಯಾಂಕ್‌ ಕೆಲಸಗಳಿಗೆ ಭೇಟಿ ಕೊಡುವ ಮುನ್ನ ರಜಾ ದಿನಗಳ ಬಗ್ಗೆ ನೋಡಿಕೊಳ್ಳುವಂತೆ ಸಲಹೆ ನೀಡಲಾಗಿದೆ. ಈಗಾಗಲೇ ಆರ್‌ಬಿಐ 2000 ರೂ.ಗಳ ನೋಟುಗಳನ್ನು ಸೆಪ್ಟೆಂಬರ್ 30ರೊಳಗೆ ವಿನಿಮಯ ಮಾಡಿಕೊಳ್ಳಲು ಹೇಳಿದೆ.

ಬ್ಯಾಂಕ್ ಗ್ರಾಹಕರೇ ಇತ್ತ ಗಮನಿಸಿ- ಆಗಸ್ಟ್ ತಿಂಗಳಲ್ಲಿ 14 ದಿನಗಳು ಬ್ಯಾಂಕ್ ಬಂದ್ Read More »

ರಾಷ್ಟ್ರೀಯ ನ್ಯೂಸ್

ನಭಕ್ಕೆ‌ ಚಿಮ್ಮಿದ ಗಗನನೌಕೆ ಚಂದ್ರಯಾನ-3 ಉಡಾವಣೆ ಯಶಸ್ವಿ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 14. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ದಿಂದ ಇಂದುಚಂದ್ರಯಾನ -3 ಉಡಾವಣೆಯು ಯಶಸ್ವಿಯಾಗಿ ನೆರವೇರಿತು. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ -3 ಯಶಸ್ವಿಯಾಗಿ ಉಡಾವಣೆಗೊಂಡಿದೆ. ಇದು ಆಗಸ್ಟ್ ತಿಂಗಳಲ್ಲಿ ಚಂದ್ರನ ಅಂಗಳಕ್ಕೆ ತಲುಪಲಿದ್ದು, ಚಂದ್ರಯಾನ -3 ಚಂದ್ರನ ಮೇಲ್ಮೈಯನ್ನು ಅಧ್ಯಯನ ಮಾಡುವ ಮತ್ತು ‘ನಮ್ಮ ಜ್ಞಾನವನ್ನು ಹೆಚ್ಚಿಸುವ’ ಹಲವಾರು ವೈಜ್ಞಾನಿಕ ಉಪಕರಣಗಳನ್ನು ಸಹ ಹೊಂದಿದೆ. ಚಂದ್ರಯಾನ-3 ಮಿಷನ್‌ ಲ್ಯಾಂಡರ್‌ಗೆ “ವಿಕ್ರಮ್” ಎಂದು ಹೆಸರಿಡಲಾಗಿದೆ. ಚಂದ್ರಯಾನ-3 ಮಿಷನ್

ನಭಕ್ಕೆ‌ ಚಿಮ್ಮಿದ ಗಗನನೌಕೆ ಚಂದ್ರಯಾನ-3 ಉಡಾವಣೆ ಯಶಸ್ವಿ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಏಷ್ಯನ್ ಎಮರ್ಜಿಂಗ್ ಕ್ರಿಕೆಟ್ ಟೂರ್ನಿ ➤ ಫೈನಲ್ ಪ್ರವೇಶಿಸಿದ ಭಾರತದ ಮಹಿಳಾ ತಂಡ

(ನ್ಯೂಸ್ ಕಡಬ) newskadaba.com ಹಾಂಕಾಂಗ್‌, ಜೂ. 20. ಹಾಂಕಾಂಗ್‌ನಲ್ಲಿ ನಡೆಯುತ್ತಿರುವ ಏಷ್ಯನ್‌ ಎಮರ್ಜಿಂಗ್‌ ಕ್ರಿಕೆಟ್‌ ಟೂರ್ನಿಯಲ್ಲಿ ಭಾರತದ ಮಹಿಳಾ ತಂಡವು ಫೈನಲ್‌ ಪ್ರವೇಶಿಸಿದೆ. ಭಾರತವು ಸೆಮಿಫೈನಲ್‌ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಎದುರಿಸಬೇಕಾಗಿತ್ತು. ಆದರೆ, ಮಳೆಯ ಕಾರಣದಿಂದ ಈ ಪಂದ್ಯ ರದ್ದಾಗಿದೆ. ಎ ಬಣದಲ್ಲಿ ಸ್ಥಾನ ಪಡೆದಿದ್ದ ಭಾರತ ಅಲ್ಲಿ ಗ್ರೂಪ್‌ ನಲ್ಲಿ ಅಗ್ರಸ್ಥಾನ ಪಡೆದಿತ್ತು. ಶ್ರೀಲಂಕಾ ಬಿ ಬಣದಲ್ಲಿ 2ನೇ ಸ್ಥಾನಿಯಾಗಿತ್ತು. ಗ್ರೂಪ್‌ ಹಂತದ ಅಗ್ರಸ್ಥಾನವನ್ನು ಭಾರತ ಪಡೆದಿದ್ದರಿಂದ ಭಾರತ ಫೈನಲ್‌ಗೆ ಪ್ರವೇಶ ಪಡೆದಿದೆ.

ಏಷ್ಯನ್ ಎಮರ್ಜಿಂಗ್ ಕ್ರಿಕೆಟ್ ಟೂರ್ನಿ ➤ ಫೈನಲ್ ಪ್ರವೇಶಿಸಿದ ಭಾರತದ ಮಹಿಳಾ ತಂಡ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತದಲ್ಲಿ ಫೇಸ್ ಬುಕ್ ಬಂದ್ ಮಾಡಿಸಬೇಕಾಗುತ್ತದೆ ➤ ಕರ್ನಾಟಕ ಹೈಕೋರ್ಟ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 15. ಸಿಎಎ ಮತ್ತು ಎನ್ಆರ್.ಸಿಯನ್ನು ಬೆಂಬಲಿಸಿದ ಕಾರಣಕ್ಕೆ ಯಾರೋ ಅಪರಿಚಿತರು ಮಂಗಳೂರು ಮೂಲದ ಶೈಲೇಶ್ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು, ಸೌದಿ ಅರೇಬಿಯಾದ ದೊರೆಯ ಬಗ್ಗೆ ಅವಹೇಳನಕಾರಿ ಪೋಸ್ಟ್ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ಸೂಕ್ತ ಸಹಕಾರ ನೀಡದೇ ಇದ್ದಲ್ಲಿ ಭಾರತದಲ್ಲಿ ಫೇಸ್ ಬುಕ್ ಕಾರ್ಯಾಚರಣೆ ಬಂದ್ ಮಾಡುವಂತೆ ಆದೇಶ ಹೊರಡಿಸಬೇಕಾಗುತ್ತದೆ ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ. ಯಾರೋ ಅಪರಿಚಿತರು ನಕಲಿ ಎಫ್.ಬಿ ಅಕೌಂಟ್ ತೆರೆದು

ಭಾರತದಲ್ಲಿ ಫೇಸ್ ಬುಕ್ ಬಂದ್ ಮಾಡಿಸಬೇಕಾಗುತ್ತದೆ ➤ ಕರ್ನಾಟಕ ಹೈಕೋರ್ಟ್ ಎಚ್ಚರಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಒಡಿಶಾದ ಮತ್ತೊಂದು ಜಿಲ್ಲೆಯಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು- ತಪ್ಪಿದ ಅನಾಹುತ ➤ ಬಾಲಸೋರ್ ಭೀಕರ ದುರಂತದ ಬೆನ್ನಲ್ಲೇ ಘಟನೆ

(ನ್ಯೂಸ್ ಕಡಬ) newskadaba.com ಒಡಿಶಾ, ಜೂ. 05. ಕಳೆದ ವಾರ ನಡೆದ ಭೀಕರ ರೈಲು ದುರಂತದ ದುಃಖ ಮಾಸುವ ಮುನ್ನವೇ ಬಾರ್ಗಢ ಜಿಲ್ಲೆಯ ಮೆಂಧಪಾಲಿ ಬಳಿ ಗೂಡ್ಸ್ ರೈಲಿನ ಐದು ಬೋಗಿಗಳು ಹಳಿತಪ್ಪಿದ ಘಟನೆ ವರದಿಯಾಗಿದೆ. ವರದಿಯ ಪ್ರಕಾರ, ಸುಣ್ಣದಕಲ್ಲು ಸಾಗಿಸುತ್ತಿದ್ದ ಗೂಡ್ಸ್ ರೈಲಿನ ಹಲವಾರು ವ್ಯಾಗನ್‌ಗಳು ಬರ್ಗರ್‌ನಲ್ಲಿ ಹಳಿತಪ್ಪಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಘಟನಾ ಸ್ಥಳಕ್ಕೆ ಈಗಾಗಲೇ ಪೊಲೀಸರು ಧಾವಿಸಿದ್ದು, ತನಿಖೆ ಆರಂಭಿಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಒಡಿಶಾದ ಮತ್ತೊಂದು ಜಿಲ್ಲೆಯಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು- ತಪ್ಪಿದ ಅನಾಹುತ ➤ ಬಾಲಸೋರ್ ಭೀಕರ ದುರಂತದ ಬೆನ್ನಲ್ಲೇ ಘಟನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top