ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ ಮೂಲ ಸೌಕರ್ಯಗಳ ಸಮಸ್ಯೆ;ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 50 ಕೋಟಿ ಅನುದಾನ ನೀಡುವಂತೆ ಬಿಜೆಪಿ ಆಗ್ರಹ
(ನ್ಯೂಸ್ ಕಡಬ) newskadaba.com ಡಿ. 19 ಬೆಂಗಳೂರು: ಬೆಂಗಳೂರಿನಲ್ಲಿ ಮೂಲ ಸೌಕರ್ಯಗಳ ಸಮಸ್ಯೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 50 ಕೋಟಿ ರೂ.ಗಳ ವಿಶೇಷ ಅನುದಾನ ಬಿಡುಗಡೆ ಮಾಡಿ ಅಭಿವೃದ್ಧಿ ಕಾರ್ಯಗಳ ಕೈಗೊಳ್ಳುವಂತೆ ಸರ್ಕಾರಕ್ಕೆ ಬಿಜೆಪಿ ಆಗ್ರಹಿಸಿದೆ. ಈ ಕುರಿತು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದು, ಪತ್ರಕ್ಕೆ ನಗರದ ಎಲ್ಲಾ ಬಿಜೆಪಿ ಶಾಸಕರು ಸಹಿಹಾಕಿ, ಮನವಿ ಮಾಡಿದ್ದಾರೆಂದು ತಿಳಿದುಬಂದಿದೆ. […]
