injury

ಕಡಬ: ಕಾಡಾನೆ ದಾಳಿ- ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಸೆ. 28. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಪಾದಚಾರಿ ಗಂಭೀರ ಗಾಯಗೊಂಡ ಘಟನೆ ಕಡಬ ತಾಲೂಕಿನ ಮರ್ಧಾಳ ಸಮೀಪದ ಸುಳ್ಯ ಎಂಬಲ್ಲಿ ಗುರುವಾರದಂದು ರಾತ್ರಿ ಸಂಭವಿಸಿದೆ. ಕಾಡಾನೆ ತುಳಿತಕ್ಕೊಳಗಾದವರನ್ನು ನೇಲ್ಯಡ್ಕ ನಿವಾಸಿ ಚೋಮ(52) ಎಂದು ಗುರುತಿಸಲಾಗಿದೆ. ಇವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸುಳ್ಯ ಸಮೀಪ ಏಕಾಏಕಿ ಪ್ರತ್ಯಕ್ಷಗೊಂಡ ಕಾಡಾನೆ ದಾಳಿ ನಡೆಸಿದೆ. ಪರಿಣಾಮ ಗಂಭೀರ ಗಾಯಗೊಂಡ ಚೋಮರವರನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ […]

ಕಡಬ: ಕಾಡಾನೆ ದಾಳಿ- ವ್ಯಕ್ತಿ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಸಿಮೆಂಟ್ ಮಿಕ್ಸರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ➤ ತಾಯಿ, ಮಗನಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 13.  ಸಿಮೆಂಟ್ ಮಿಕ್ಸರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ತಾಯಿ ಮತ್ತು ಮಗ ಇಬ್ಬರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಚೆಂಡ್ತಿಮಾರ್ ಎಂಬಲ್ಲಿ ವರದಿಯಾಗಿದೆ. ಗಾಯಗೊಂಡವರನ್ನು ಸರಪಾಡಿ ಗ್ರಾಮದ ವಚ್ಚಾರ್ ನಿವಾಸಿಯಾಗಿರುವ ರಾಜೀವ ಹಾಗೂ ಅವರ ಮಗ ಸಂತೋಷ್ ಅಂಚರ್ ಎಂದು ತಿಳಿದುಬಂದಿದೆ. ಗಾಯಗೊಂಡವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಬಂಟ್ವಾಳ: ಸಿಮೆಂಟ್ ಮಿಕ್ಸರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ➤ ತಾಯಿ, ಮಗನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಂಬ್ ಸ್ಫೋಟ ➤ ಓರ್ವನಿಗೆ ಗಾಯ

(ನ್ಯೂಸ್ ಕಡಬ) newskadaba.com ಕೇರಳ, ಜ. 13.   ಮನೆಯೊಂದರಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಶುಕ್ರವಾರದಂದು  ವರದಿಯಾಗಿದೆ. ಗಾಯಗೊಂಡ ವ್ಯಕ್ತಿಯನ್ನು ಜಿತಿನ್ ನಾಡಮ್ಮಾಲ್ ಎಂದು ಗುರುತಿಸಲಾಗಿದೆ. ಇವರಿಗೆ ಸ್ಥಳೀಯ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಇದೀಗ ಅವರನ್ನು ಕಣ್ಣೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ. ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಬಾಂಬ್‌ಗಳು ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು,

ಬಾಂಬ್ ಸ್ಫೋಟ ➤ ಓರ್ವನಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕ್‌ಗೆ, ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಬಸ್ ಢಿಕ್ಕಿ ➤ ಇಬ್ಬರು ಮೃತ್ಯು..!!

(ನ್ಯೂಸ್ ಕಡಬ) newskadaba.com ಚೆನ್ನೈ, ಜ.09. ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಕರ್ನಾಟಕ ಗಡಿಭಾಗದ ಕೃಷ್ಣಗಿರಿಯಲ್ಲಿ ಈ ಘಟನೆ ವರದಿಯಾಗಿದೆ. ದ್ವಿಚಕ್ರ ವಾಹನಕ್ಕೆ ಗುದ್ದಿದ ಕರ್ನಾಟಕ ಸಾರಿಗೆ ಬಸ್‌ಗೆ ಬೆಂಕಿ ತಗುಲಿದ್ದು, ಬಸ್‌ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ. ಆದರೆ, ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಿರುವಿನಲ್ಲಿ ಬೈಕ್ ಚಲಿಸುತ್ತಿದ್ದಾಗ ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್‌ಗೆ ಢಿಕ್ಕಿ ಹೊಡೆದಿದೆ ಎಂದು ಮೂಲಗಳು ಐಎಎನ್‌ಎಸ್‌ಗೆ

ಬೈಕ್‌ಗೆ, ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಬಸ್ ಢಿಕ್ಕಿ ➤ ಇಬ್ಬರು ಮೃತ್ಯು..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಿಫ್ಟ್ ಕುಸಿದು ಬಿದ್ದು ➤ ಮೂವರು ಮೃತ್ಯು, ಓರ್ವನಿಗೆ ಗಾಯ..!!!

(ನ್ಯೂಸ್ ಕಡಬ) newskadaba.com ದೆಹಲಿ , ಜ.09.  ಗುಟ್ಕಾ ಕಾರ್ಖಾನೆಯಲ್ಲಿ ಲಿಫ್ಟ್ ಕುಸಿದ ಪರಿಣಾಮ ಮೂವರು ಮೃತಪಟ್ಟ ಹಾಗೂ ಓರ್ವ ಗಾಯಗೊಂಡ ಘಟನೆ ಪಶ್ವಿಮ ದೆಹಲಿಯ ನಾರಾಯಣ ಇಂಡಸ್ಟ್ರಿಯ ಪ್ರದೇಶದಲ್ಲಿ ವರದಿಯಾಗಿದೆ. ಮೃತರನ್ನು ಕಾರ್ಖಾನೆಯ ಹೌಸ್ ಕೀಪಿಂಗ್ ಕೆಲಸ ಮಾಡುವ ಕುಲ್ವಾಂತ್ ಸಿಂಗ್ (30), ದೀಪಕ್ ಕುಮಾರ್ (26), ಸನ್ನಿ (33) ಎಂದು ಗುರುತಿಸಲಾಗಿದೆ. ಸುರಾಜ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ ಅವರನ್ನು ದೀನ್ ದಯಾಳ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಫ್ಯಾಕ್ಟರಿಯಲ್ಲಿನ ಲಿಫ್ಟ್ ಈ ಹಿಂದೆ

ಲಿಫ್ಟ್ ಕುಸಿದು ಬಿದ್ದು ➤ ಮೂವರು ಮೃತ್ಯು, ಓರ್ವನಿಗೆ ಗಾಯ..!!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮದ್ಯ ಸರಬರಾಜು ಮಾಡುತ್ತಿದ್ದ ವಾಹನ ಪಲ್ಟಿ..!!!

(ನ್ಯೂಸ್ ಕಡಬ) newskadaba.com ಕಲಬುರಗಿ, ಜ.09.  ಟೈರ್ ಬ್ಲಾಸ್ಟ್ ಆಗಿ ಮದ್ಯ ಸರಬರಾಜು ಮಾಡುತ್ತಿದ್ದ ವಾಹನವೊಂದು ಪಲ್ಟಿಯಾದ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಹಸನಾಪುರ ಗ್ರಾಮದ ಬಳಿ ವರದಿಯಾಗಿದೆ. ಟೈರ್ ಬ್ಲಾಸ್ಟ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ ಎನ್ನಲಾಗಿದೆ. ಘಟನೆಯಿಂದ ಅಪಾರ ಪ್ರಮಾಣದ ಮದ್ಯ ರಸ್ತೆ ಪಾಲಾಗಿದೆ. ಕಲಬುರಗಿ ನಗರ ಸಂಚಾರಿ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಟಲಿಗಳು ನಾಶವಾಗಿವೆ. ಚಾಲಕ, ಕ್ಲೀನರ್‌ಗೆ ಸಣ್ಣಪುಟ್ಟ

ಮದ್ಯ ಸರಬರಾಜು ಮಾಡುತ್ತಿದ್ದ ವಾಹನ ಪಲ್ಟಿ..!!! Read More »

ಕರ್ನಾಟಕ, ಕ್ರೀಡಾ ನ್ಯೂಸ್

ಭೀಕರ ರಸ್ತೆ ಅಪಘಾತ ➤ 40 ಮಂದಿ ಮೃತ್ಯು, 85 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ದಕ್ಷಿಣ ಅಫ್ರಿಕಾ, ಜ.09.   ಸಾರ್ವಜನಿಕ ಬಸ್‌ವೊಂದರ ಟೈರ್ ಪಂಕ್ಚರ್ ಆಗಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಬಸ್‌ಗೆ ಢಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ 40 ಮಂದಿ ಮೃತಪಟ್ಟ ಹಾಗೂ 85 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ದಕ್ಷಿಣ ಅಫ್ರಿಕಾದ ಸೆನೆಗಲ್‌ ದೇಶದ ರಾಜಧಾನಿ ಡಾಕಾರ್‌ನಲ್ಲಿ ವರದಿಯಾಗಿದೆ.   85 ಮಂದಿ ಗಾಯಾಳುಗಳ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು ಮೃತ್ಯುವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ಕಾಫ್ರಿನ್

ಭೀಕರ ರಸ್ತೆ ಅಪಘಾತ ➤ 40 ಮಂದಿ ಮೃತ್ಯು, 85 ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಬ್ರಹ್ಮಣ್ಯ: ಯುವಕನಿಗೆ ಹಲ್ಲೆ ಪ್ರಕರಣ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ. 09. ಇಲ್ಲಿನ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಭೇಟಿಯಾಗಲು ಬಂದ ಕಲ್ಲುಗುಂಡಿಯ ಯುವಕನ ಮೇಲೆ ತಂಡವೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಬಂಧಿತರನ್ನು ರಾಧಾಕೃಷ್ಣ(45) ಹಾಗೂ ವಿಶ್ವಾಸ್. ಎನ್ (19) ಎಂದು ಗುರುತಿಸಲಾಗಿದೆ. ಜ. 05ರಂದು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯನ್ನು ಭೇಟಿಯಾಗಲು ಸುಬ್ರಹ್ಮಣ್ಯಕ್ಕೆ ಬಂದಿದ್ದ ಯುವಕನನ್ನು ಕುಮಾರಧಾರ ಬಳಿಯ ಹಳೆ ಕಟ್ಟಡದ ಕೋಣೆಯೊಳಗೆ ಕೂಡಿ ಹಾಕಿದ ಬಳಿಕ ತಂಡವು ಅತನಿಗೆ ಹಲ್ಲೆ

ಸುಬ್ರಹ್ಮಣ್ಯ: ಯುವಕನಿಗೆ ಹಲ್ಲೆ ಪ್ರಕರಣ ➤ ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಎತ್ತಿನಗಾಡಿ ಓಟದ ಸ್ಪರ್ಧೆ ವೇಳೆ ದುರಂತ ➤ ಚಕ್ರ ಹರಿದು ರೈತ ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ಜ. 09.  ಎತ್ತಿನಗಾಡಿ ಓಟದ ಸ್ಪರ್ಧೆ ವೇಳೆ ಪ್ರೇಕ್ಷಕನ ಮೇಲೆ ಗಾಡಿಯ ಚಕ್ರ ಹರಿದ ಪರಿಣಾಮ ಓರ್ವ ರೈತ ಮೃತಪಟ್ಟು, ಮತ್ತೋರ್ವ ಬಾಲಕ ತೀವ್ರವಾಗಿ ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆಯ ಚಿಕ್ಕಮಂಡ್ಯ ಗ್ರಾಮದ ಬಳಿ ನಡೆದಿದೆ. ಮೃತಪಟ್ಟ ರೈತನನ್ನು ಕೀಲಾರ ಗ್ರಾಮದ ನಾಗರಾಜು (42) ಮತ್ತು ಗಾಯಗೊಂಡ ಬಾಲಕನನ್ನು ಹುಲಿವಾನ ಗ್ರಾಮದ ಋತ್ವಿಕ್ (10) ಎಂದು ಗುರುತಿಸಲಾಗಿದೆ. ಹಳ್ವಿಕೇಶ್ವರ ಬೋರೇಶ್ವರ ಹಾಗೂ ರೈತ ಮಿತ್ರ ಬಳಗದ ವತಿಯಿಂದ ಚಿಕ್ಕಮಂಡ್ಯ ಗ್ರಾಮದ ಬಳಿ

ಎತ್ತಿನಗಾಡಿ ಓಟದ ಸ್ಪರ್ಧೆ ವೇಳೆ ದುರಂತ ➤ ಚಕ್ರ ಹರಿದು ರೈತ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿಂತಿದ್ದ ಲಾರಿಗೆ ಕಾರು ಢಿಕ್ಕಿ ➤ ಯುವಕ ಸ್ಥಳದಲ್ಲೇ ಮೃತ್ಯು ಹಾಗೂ ಮೂವರಿಗೆ ಗಾಯ

ನ್ಯೂಸ್ ಕಡಬ) newskadaba.com ಕಾಸಗೋಡು, ಜ.08. ರಸ್ತೆ ಬದಿ ನಿಂತಿದ್ದ ಲಾರಿಯ ಹಿಂಬದಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟು, ,ಮೂವರು ಗಾಯಗೊಂಡ ಘಟನೆ ಕಾಸರಗೋಡು ನಗರದಲ್ಲಿ ವರದಿಯಾಗಿದೆ. ಮೃತ ಯುವಕನನ್ನು ಚೆಂಗಳ ನಿವಾಸಿ ಸಂಶುದ್ದೀನ್ ಎಂಬುವರ ಪುತ್ರ ಮೊಹಮ್ಮದ್ ಸಾಹಿಲ್ (21) ಎಂದು ಗುರುತಿಸಲಾಗಿದೆ. ಸಾಹಿಲ್ ಅಣಂಗೂರು ಕಡೆಯಿಂದ ಮೂವರು ಸ್ನೇಹಿತರ ಜೊತೆ ಕಾರಿನಲ್ಲಿ ಬರುತ್ತಿದ್ದಾಗ ನಿಂತಿದ್ದ ಲಾರಿಯ ಹಿಂಬದಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಸಾಹಿಲ್ ಸ್ಥಳದಲ್ಲೇ ಮೃತಪಟ್ಟಿರೆ ಗಂಭೀರವಾಗಿ

ನಿಂತಿದ್ದ ಲಾರಿಗೆ ಕಾರು ಢಿಕ್ಕಿ ➤ ಯುವಕ ಸ್ಥಳದಲ್ಲೇ ಮೃತ್ಯು ಹಾಗೂ ಮೂವರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top