injury

ಕಾರು ಅಪಘಾತ ➤ ಮಗು ಮೃತ್ಯು, ಆರು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com  ಹನೂರು , ಡಿ 23 :  ಕಾರೊಂದು ಭೀಕರವಾಗಿ ಅಪಘಾತಕೊಂಡ ಪರಿಣಾಮ ಮಗುವೊಂದು ಮೃತಪಟ್ಟಿದೆ ಮತ್ತು ಅದೇ ಕುಟುಂಬದ ಆರು ಮಂದಿ ಗಾಯಗೊಂಡ ಕರುಣಾಜನಕ ಘಟನೆ ಹನೂರು ತಾಲೂಕಿನ ಮಂಗಲ ಸಮೀಪದ ಹುಲುಸುಗುಡ್ಡೆ ಬಳಿ ಸಂಭವಿಸಿದೆ. ಮೃತಪಟ್ಟ ಮಗುವನ್ನು ಮೈಸೂರು ತಾಲೂಕಿನ ಮಾರ್ಬಳ್ಳಿ ಗ್ರಾಮದ ತನ್ಮಯ್ (3) ಹಾಗೂ ಗಾಯಗೊಂಡವರನ್ನು ಮಂಜುಳ, ಸಾಕಮ್ಮ , ಕಿರಣ್, ಚಂದನ್, ಸಣ್ಣ ತಾಯಮ್ಮ ಎಂದು ಗುರುತಿಸಲಾಗಿದೆ.ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲೆ ಮಹದೇಶ್ಚರ ಬೆಟ್ಟಕ್ಕೆ ತೆರಳಿ […]

ಕಾರು ಅಪಘಾತ ➤ ಮಗು ಮೃತ್ಯು, ಆರು ಮಂದಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಡುಕ ತಂದೆಯ ಹುಚ್ಚಾಟಕ್ಕೆ ಆಸ್ಪತ್ರೆ ಸೇರಿದ ಮಗ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಕುಡುಕ ತಂದೆಯ ಹುಚ್ಚಾಟಕ್ಕೆ ಮಗನೋರ್ವ ಆಸ್ಪತ್ರೆ ಸೇರಿದ ಘಟನೆ ನಗರದ ಮಹದೇವಪುರದ ರಂಗನಾಥ ಲೇಔಟ್ ನಲ್ಲಿ ಸಂಭವಿಸಿದೆ. ಆರೋಪಿಯನ್ನು ವೆಂಕಟರಾಮ ರೆಡ್ಡಿ ಎಂದು ಗುರುತಿಸಲಾಗಿದೆ. ಆರೋಪಿಯು ಹಣಕ್ಕಾಗಿ ಪದೇ ಪದೇ ಮಗನನ್ನು ಪೀಡಿಸುತ್ತಿದ್ದು, ಮಗ ಹಣ ಕೊಡಲು ನಿರಾಕರಿದ್ದಾನೆ  ಇದರಿಂದ ಕೋಪಗೊಂಡ ತಂದೆ ಮಗನ ತಲೆಗೆ ಮಚ್ಚಿನಿಂದ ಹೊಡೆದು ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಡುಕ ತಂದೆಯ ಹುಚ್ಚಾಟಕ್ಕೆ ಆಸ್ಪತ್ರೆ ಸೇರಿದ ಮಗ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಣಿಪುರದ ನೋನಿ ಜಿಲ್ಲೆಯಲ್ಲಿ ಭೀಕರ ಬಸ್ ಅಪಘಾತ ➤ 15 ವಿದ್ಯಾರ್ಥಿಗಳು ಮೃತ್ಯು..!

(ನ್ಯೂಸ್ ಕಡಬ) newskadaba.com  ಮಣಿಪುರ , ಡಿ 21 :  ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಎರಡು ಬಸ್ ಗಳು ನಿಯಂತ್ರಣ ಕಳೆದುಕೊಂಡು ಅಪಘಾತವಾದ ಭೀಕರ ಘಟನೆ ಮಣಿಪುರದ ನೋನಿ ಜಿಲ್ಲೆಯ ಲಾಂಗ್ಸಾಯ್ ತುಬುಂಗ್ ಗ್ರಾಮದ ಬಳಿ ಸಂಭವಿಸಿದೆ. ಅಪಘಾತದಲ್ಲಿ ಕನಿಷ್ಠ 15 ಮಂದಿ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ  ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ವಿದ್ಯಾರ್ಥಿಗಳನ್ನು ಕರೆದು ಕೊಂಡು ಹೋಗುತ್ತಿದ್ದ  ಎರಡು ಬಸ್ ಗಳು ಯಾರಿಪೋಕ್ ನ ತಂಬಲ್ನು ಹೈಯರ್ ಸೆಕೆಂಡರಿ ಶಾಲೆಗೆ ಸೇರಿದ್ದು. ಈ ಬಸ್ಸುಗಳು ಅಧ್ಯಯನ ಪ್ರವಾಸಕ್ಕಾಗಿ

ಮಣಿಪುರದ ನೋನಿ ಜಿಲ್ಲೆಯಲ್ಲಿ ಭೀಕರ ಬಸ್ ಅಪಘಾತ ➤ 15 ವಿದ್ಯಾರ್ಥಿಗಳು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೊಲೆರೋ ವಾಹನ ಅಪಘಾತ ➤ 16 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ರಾಯಚೂರು, ಡಿ. 21. ಹತ್ತಿ ಬಿಡಿಸುವ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬುಲೆರೋ ವಾಹನ ಪಲ್ಟಿಯಾಗಿ 16 ಮಂದಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನಲ್ಲಿ ಸಂಭವಿಸಿದೆ. ಇದರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಘಟನಾ ಸ್ಥಳಕ್ಕೆ ಸಿರವಾರ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

ಬೊಲೆರೋ ವಾಹನ ಅಪಘಾತ ➤ 16 ಮಂದಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ : ಓಮ್ನಿ-ದ್ವಿಚಕ್ರ ವಾಹನ ಢಿಕ್ಕಿ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 21. ಓಮ್ನಿ ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ವ್ಯಕ್ತಿಯೋರ್ವ ಗಾಯಗೊಂಡ ಘಟನೆ ಉಪ್ಪಿನಂಗಡಿ ಬಳಿ ನಡೆದಿದೆ. ಗಾಯಾಳುವನ್ನು ಕೊಯಿಲ ನಿವಾಸಿ ನಝೀರ್ ಎಂಬವರ ಪುತ್ರ ಉಬ್ಬಿ ಎಂದು ಗುರುತಿಸಲಾಗಿದೆ. ಈತ ಉಪ್ಪಿನಂಗಡಿಯಿಂದ ಕೆಮ್ಮಾರದ ಕಡೆ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಉಪ್ಪಿನಂಗಡಿ : ಓಮ್ನಿ-ದ್ವಿಚಕ್ರ ವಾಹನ ಢಿಕ್ಕಿ ➤ ಸವಾರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ : ರಸ್ತೆ ಅಪಘಾತ ➤ ಬೈಕ್ ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ , ಡಿ 21 : ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ ಪರಿಣಾಮ ಓರ್ವ ಮೃತಪಟ್ಟು, ಮತ್ತೋರ್ವ ಗಾಯಗೊಂಡ ಘಟನೆ ಲಾಯಿಲ ಗ್ರಾಮದ ಕೊಯ್ಯರು ಕ್ರಾಸ್ ಬಳಿ ನಡೆದಿದೆ. ಮೃತ ಯುವಕನನ್ನು ವಿಜಯ್ (25)  ಹಾಗೂ ಗಾಯಾಳುವನ್ನು ಶೈಲೇಶ್ ಎಂದು ಗುರುತಿಸಲಾಗಿದೆ. ಮೃತ ಯುವಕ ಉಜಿರೆ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಸಂಜೆ ಕೆಲಸ ಮುಗಿಸಿ ಬೈಕ್ ನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಬೆಳ್ತಂಗಡಿ : ರಸ್ತೆ ಅಪಘಾತ ➤ ಬೈಕ್ ಸವಾರ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉತ್ತರದಲ್ಲಿ ಭಾರತದಲ್ಲಿ ದಟ್ಟ ಮಂಜು: ದುರಂತಗಳಲ್ಲಿ 11 ಮಂದಿ ಮೃತ್ಯು…!

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ  , ಡಿ 20 :  ರಾಷ್ಟ್ರ ರಾಜಧಾನಿ ಮತ್ತು ಉತ್ತರ ಭಾರತದಲ್ಲಿ ಈ ಋತುವಿನನಲ್ಲಿ ಮೊದಲ ಬಾರಿಗೆ   ಮುಂಜಾನೆ ದಟ್ಟ ಮಂಜು ಆವರಿಸಿದ್ದು, ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿತು.  ಕೇವಲ 150 ಮೀಟರ್ ಗಿಂತ ದೂರದ ವಸ್ತುಗಳು ಕೂಡಾ ಕಾಣಿಸದಷ್ಟು ದಟ್ಟವಾಗಿ ಮಂಜು ಕವಿದಿತ್ತು. ಉತ್ತರ ರಾಜ್ಯ ಗಳಲ್ಲಿ ದಟ್ಟ ಮಂಜಿನಿಂದಾಗಿ ಸಂಭವಿಸಿದ ಅಪಘಾತಗಳು ಮತ್ತು ವಾಹನಗಳ ದಟ್ಟಣೆಯಿಂದಾಗಿ ಕನಿಷ್ಕ 11 ಮಂದಿ ಮೃತಪಟ್ಟಿದ್ದಾರೆ. ಹಾಗೂ ಉತ್ತರ ಪ್ರದೇಶದ ನಾಲ್ಕು ಜಿಲ್ಲೆಗಳಲ್ಲಿ

ಉತ್ತರದಲ್ಲಿ ಭಾರತದಲ್ಲಿ ದಟ್ಟ ಮಂಜು: ದುರಂತಗಳಲ್ಲಿ 11 ಮಂದಿ ಮೃತ್ಯು…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾರುಕಟ್ಟೆಯಲ್ಲಿ ಸ್ಫೋಟ ; 13 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಇಸ್ಲಾಮಾಬಾದ್ , ಡಿ 20 :  ಮಾರುಕಟ್ಟೆಯೊಂದರಲ್ಲಿ ಸ್ಫೋಟ ಸಂಭವಿಸಿ ಸುಮಾರು 13 ಮಂದಿ ಗಾಯಗೊಂಡಿರುವ ಘಟನೆ  ಬಲೂಚಿಸ್ತಾನ್ ಪ್ರಾಂತ್ಯದ ಖುಸ್ದಾರ್ ಜಿಲ್ಲೆಯಲ್ಲಿ ವರದಿಯಾಗಿದೆ. ಮಾರುಕಟ್ಟೆಯಲ್ಲಿ ನಿಲ್ಲಿಸಲಾಗಿದ್ದ ಮೋಟಾರ್ ಸೈಕಲ್ ಗೆ ಸ್ಪೋಟಕಗಳನ್ನು ಅಳವಡಿಸಲಾಗಿದ್ದು, ರಿಮೋಟ್  ಕಂಟ್ರೋಲ್ ಮೂಲಕ ಸ್ಫೋಟಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ರಾತ್ರಿ ಸಮಯವಾಗಿದ್ದರಿಂದ ಅ ಪ್ರದೇಶದ ಸುತ್ತ ಮುತ್ತ ಕಡಿಮೆ ಜನರಿದ್ದರಿಂದ ಹಾಗೂ ಅಂಗಡಿಗಳು ಮುಚ್ಚಲ್ಪಟ್ಟಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಹಾಗೂ

ಮಾರುಕಟ್ಟೆಯಲ್ಲಿ ಸ್ಫೋಟ ; 13 ಮಂದಿಗೆ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಆಸ್ಪತ್ರೆ ಕಟ್ಟಡದಲ್ಲಿ ಅಗ್ನಿ ಅಪಘಡ ➤ ಓರ್ವ ಮೃತ್ಯು ಹಾಗೂ 11 ಜನರಿಗೆ ಗಾಯ

(ನ್ಯೂಸ್ ಕಡಬ) newskadaba.com ಮುಂಬೈ , ಡಿ 19 :  ಮುಂಬೈ ನಗರದ ಘಾಟಕೋಪರ್ ಪ್ರದೇಶದ ವಿಶ್ವಾಸ್ ಕಟ್ಟಡದಲ್ಲಿ ಬೆಂಕಿ ಅಪಘಡದಲ್ಲಿ ಸಂಭವಿಸಿದೆ. ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದು,  ನಾಲ್ವರು ಪೊಲೀಸರು ಸೇರಿದಂತೆ 11 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮೃತಪಟ್ಟವರನ್ನು ಕುರ್ಷಿ ದೇಧಿಯಾ ಎಂದು ಗುರುತಿಸಲಾಗಿದೆ. ಕಟ್ಟಡದಲ್ಲಿಯ ಪಿಝ್ಝಾ ಸೆಂಟರ್ನಲ್ಲಿ ಈ ಬೆಂಕಿ ಹೊತ್ತಿಗೊಂಡಿದೆ. ತೆರವು ಕಾರ್ಯಾಚರಣೆಯಲ್ಲಿ ನೆರವಾಗಿದ್ದ ಪೊಲೀಸ್ ಸಿಬ್ಬಂದಿಗಳನ್ನು ಹಾಗೂ ಹೊಗೆಯಿಂದ ಅಸ್ವಸ್ಥಗೊಂಡವರನ್ನು ಸಮೀಪದ ರಾಜಾವಾಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಮ್ಲಜನಕವನ್ನು ನೀಡಲಾಗಿದೆ. ಹಾಗೂ

ಆಸ್ಪತ್ರೆ ಕಟ್ಟಡದಲ್ಲಿ ಅಗ್ನಿ ಅಪಘಡ ➤ ಓರ್ವ ಮೃತ್ಯು ಹಾಗೂ 11 ಜನರಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೊಸದಿಲ್ಲಿ : ನಿಯಂತ್ರಣ ತಪ್ಪಿದ ಕಾರು ; ಮೂವರು ಮಕ್ಕಳಿಗೆ ಢಿಕ್ಕಿ

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ , ಡಿ 19 :  ನಿಯಂತ್ರಣ  ತಪ್ಪಿದ  ಮಾರುತಿ ಬ್ರೆಝಾ ಕಾರೊಂದು ಫುಟ್ ಪಾತಿನಲ್ಲಿದ್ದ  ಮೂರು ಮಕ್ಕಳಿಗೆ ಢಿಕ್ಕಿ ಹೊಡೆದ ಘಟನೆ ಉತ್ತರ ದಿಲ್ಲಿಯ ಗುಲಾಬಿ ಬಾಗ್ ನ ಲೀಲಾವತಿ ಶಾಲೆಯ ಬಳಿ ವರದಿಯಾಗಿದೆ. ಈ ದ್ಯಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಕ್ಕಳಿಗೆ ಢಿಕ್ಕಿ ಹೊಡೆದ ಬಳಿಕ ಕಾರು ಕೆಲ ದೂರ ಚಲಿಸಿ ನಿಲ್ಲುವುದು ಕ್ಯಾಮರದಲ್ಲಿ ಸೆರೆಯಾಗಿದೆ. ಕಾರಿನ ಟೈರ್ ಏಕಾಏಕಿ  ಒಡೆದಿದ್ದರಿಂದ ತನ್ನ ನಿಯಂತ್ರಣ ತಪ್ಪಿದೆ ಎಂದು ಚಾಲಕ ಹೇಳಿದ್ದಾನೆ. ಈ

ಹೊಸದಿಲ್ಲಿ : ನಿಯಂತ್ರಣ ತಪ್ಪಿದ ಕಾರು ; ಮೂವರು ಮಕ್ಕಳಿಗೆ ಢಿಕ್ಕಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top