ಲೋಕ ಅದಾಲತ್ ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಲು ಇಲಾಖೆಗಳಿಗೆ ಸೂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಸೆಪ್ಟೆಂಬರ್ 14ರಂದು ರಾಷ್ಟ್ರೀಯ ಲೋಕ ಅದಾಲತನ್ನು ಆಯೋಜಿಸಲಾಗಿದೆ. ಈ ಲೋಕ ಅದಾಲತ್ ನಲ್ಲಿ ಎಲ್ಲಾ ರೀತಿಯ ರಾಜಿ ಆಗಬಲ್ಲ MACT ಪ್ರಕರಣಗಳು, ಕಾರ್ಮಿಕ ವಿವಾದ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು ಮುಂತಾದ ಪ್ರಕರಣಗಳನ್ನು ಅದಾಲತ್ ಮುಂದಿಟ್ಟು ಶೀಘ್ರವಾಗಿ ಇತ್ಯರ್ಥ ಪಡಿಸಲು ಕ್ರಮ ವಹಿಸಬಹುದಾಗಿದೆ. ಆದ್ದರಿಂದ ಜಿಲ್ಲೆಯಲ್ಲಿ ಎಲ್ಲಾ ಇಲಾಖೆಗಳು ತಮ್ಮ ಕಚೇರಿಗೆ ಸಂಬಂಧಿಸಿದ ಪ್ರಕರಣಗಳ ಬಗ್ಗೆ ಪರಿಶೀಲಿಸಿ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಪಡಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಲೋಕ ಅದಾಲತ್ ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಲು ಇಲಾಖೆಗಳಿಗೆ ಸೂಚನೆ Read More »
ಕರಾವಳಿ, ಕರ್ನಾಟಕ