Death, deadbody, Waterfall

ಪಾದಚಾರಿಗೆ ಜೀಪ್ ಢಿಕ್ಕಿ ➤ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 09. ಜೀಪೊಂದು ಢಿಕ್ಕಿ ಹೊಡೆದು ಪಾದಚಾರಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸಂತೆಕಟ್ಟೆ ಸಮೀಪದ ಎಲ್‌ವಿಟಿ ಆಟೋ ನಿಲ್ದಾಣದ ಬಳಿ ನಡೆದಿದೆ. ಮೃತರನ್ನ ರಾಮಚಂದ್ರ ಎಂದು ಗುರುತಿಸಲಾಗಿದೆ. ಇವರು ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಜೀಪೊಂದು ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡಿದ್ದ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆದರೆ ಜೀಪು ಚಾಲಕನು ವಾಹನ ನಿಲ್ಲಿಸದೇ ಪರಾರಿಯಾಗಿದ್ದಾನೆ. ಈ ಕುರಿತು ಉಡುಪಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾದಚಾರಿಗೆ ಜೀಪ್ ಢಿಕ್ಕಿ ➤ ವ್ಯಕ್ತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್