ಕಡಬ: ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹ- ಗ್ರಾಮ ಆಡಳಿತಾಧಿಕಾರಿಗಳಿಂದ ತಾಲೂಕು ಕಛೇರಿ ಎದುರು ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಕಡಬ, ಸೆ. 26. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯು ಕಡಬ ತಾಲೂಕು ಕಚೇರಿಯ ಮುಂಭಾಗದಲ್ಲಿ ಗುರುವಾರದಂದು ನಡೆಯಿತು. ಕಚೇರಿಗಳಲ್ಲಿ ಕಾರ್ಯನಿರ್ವಹಿಸಲು ಹಲವಾರು ಮೂಲಭೂತ ಸಮಸ್ಯೆಗಳಿದ್ದು, ಮುಖ್ಯವಾಗಿ ಮೊಬೈಲ್ ಆಪ್ ಮತ್ತು ವೆಬ್ ಅಪ್ಲಿಕೇಶನ್‌ಗಳ ಮೂಲಕ ಆಗುತ್ತಿರುವ ಸಮಸ್ಯೆ, ಇಲಾಖೆಯಿಂದ ಅಭಿವೃದ್ದಿಪಡಿಸಲಾಗಿರುವ ಸುಮಾರು 17ಕ್ಕೂ ಹೆಚ್ಚು ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು, ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯವಾಗಿರುವ ಮೊಬೈಲ್ ಸಾಧನ, ಹಾಗು ಲ್ಯಾಪ್‌ಟಾಪ್ […]

