Kadaba News

ದಾವಣಗೆರೆ ಆನೆ ದಾಳಿಗೆ ಯುವತಿ ಬಲಿ

(ನ್ಯೂಸ್ ಕಡಬ) newskadaba.com. ಕಡಬ,ಏ.08. ಆನೆಯೊಂದು  ದಾಳಿ ನಡೆಸಿದ ಪರಿಣಾಮ ಯುವತಿಯೋರ್ವಳು ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸೋಮ್ಲಾಪುರ ಗ್ರಾಮದಲ್ಲಿ ನಡೆದಿದೆ.  ಮೃತ ಯುವತಿಯನ್ನು ಸೋಮ್ಲಾಪುರದ ಕವನ (17) ಎಂದು ಗುರುತಿಸಲಾಗಿದೆ. ಚನ್ನಗಿರಿ ತಾಲೂಕಿನ ಸೋಮ್ಲಾಪುರ ಹಾಗೂ ಕಾಶಿಪುರ ಸುತ್ತಮುತ್ತ ಆನೆ ಹಾವಳಿ ಜೋರಾಗಿದೆ. ಆನೆ ಓಡಾಟದ ಬಗ್ಗೆ ಅರಿವಿಗೆ ಬಾರದ ತಾಯಿ ಮಂಜುಳಾ (42) ಮತ್ತು ಮಗಳು ಕವನಾ (17) ಬೆಳಗ್ಗೆ ಜಮೀನಿನಲ್ಲಿ ಹೋಗಿ ಅವರೆಕಾಯಿ ಬಿಡಿಸುವಾಗ ಏಕಾಏಕಿ ಹಿಂದಿನಿಂದ ದಾಳಿ ಮಾಡಿದೆ. […]

ದಾವಣಗೆರೆ ಆನೆ ದಾಳಿಗೆ ಯುವತಿ ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೀರಿಗಾಗಿ ಪರದಾಡುತ್ತಿದ್ದ ಸ್ನೇಹಿತೆಗಾಗಿ ಬಾವಿಯನ್ನೇ ತೋಡಿದ 7 ಮಹಿಳೆಯರು..!

(ನ್ಯೂಸ್ ಕಡಬ)Newskadaba.com  ಕೇರಳ: ಮಾ.29 ಕೇರಳದ  ಪತ್ತನಂತಿಟ್ಟದ ಜೆಸ್ಸಿ ಸಾಬು ಎಂಬುವರು ಬೇಸಿಗೆ ಬಂದರೆ ಸಾಕು ನೀರಿಗಾಗಿ ಪರದಾಡುತ್ತಿದ್ದರು.ಮಳೆಗಾಲದಲ್ಲಾದರೂ, ಮಳೆ ನೀರನ್ನು ಸಂಗ್ರಹಿಸಿ ಕುಡಿಯುತ್ತಿದ್ದರು. ಆದರೆ ಬೇಸಿಗೆ ಕಾಲದಲ್ಲಿ ಕುಡಿಯೋಕೆ ಒಂದು ಹನಿ  ನೀರಿಲ್ಲದೆ ಕಳೆದ ಮೂರು ದಶಕಗಳಿಂದ ಸಂಕಷ್ಟ ಪಡುತ್ತಿದ್ರು. ಇಷ್ಟೆಲ್ಲಾ ಸಂಕಷ್ಟಗಳ ಮಧ್ಯೆಯೂ ಬದುಕಿ ಸಾಧಿಸಿ ತೋರಿಸುವ ಛಲ ಹೊಂದಿದ್ದ ಜೆಸ್ಸಿ ಸಾಬು ಅವರು ಬೇಸಿಗೆ ಕಾಲದಲ್ಲಿ ನೀರಿಗಾಗಿ ಪರದಾಡುವ ಸಮಸ್ಯೆಗೆ ಏನಾದ್ರೂ ಪರಿಹಾರ ಕಂಡ್ಕೊಳ್ಳಲೇಬೇಕು ಅಂತಾ ಕನಸು ಕಂಡಿದ್ರು.ಜೆಸ್ಸಿ ಸಾಬುಗೆ ಅವರ  ಸ್ನೇಹಿತೆಯರು ಅವರ

ನೀರಿಗಾಗಿ ಪರದಾಡುತ್ತಿದ್ದ ಸ್ನೇಹಿತೆಗಾಗಿ ಬಾವಿಯನ್ನೇ ತೋಡಿದ 7 ಮಹಿಳೆಯರು..! Read More »

ರಾಷ್ಟ್ರೀಯ ನ್ಯೂಸ್

 ಕಾಲುಜಾರಿ ಬಿದ್ದು ಎನ್‍ಸಿಸಿ ಅಧಿಕಾರಿ ಮೃತ್ಯು..!

(ನ್ಯೂಸ್ ಕಡಬ)Newskadaba.com ಮಡಿಕೇರಿ: ಮಾ,27  ಕಾಲುಜಾರಿ ಬಿದ್ದು ಎನ್‍ಸಿಸಿ ಅಧಿಕಾರಿ ಮೃತ್ಯು. ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ವಿರಾಜಪೇಟೆ ತಾಲ್ಲೂಕಿನ ಕಡಂಗದ ಮರೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಎನ್‍ಸಿಸಿ ಅಧಿಕಾರಿಯಾಗಿದ್ದ ಡಾ.ಬಲ್ಯಂಡ ಬೀನಾ (52) ಎಂದು ಗುರುತಿಸಲಾಗಿದೆ. ಬಿದ್ದ ಪರಿಣಾಮ ತಲೆಯ ಭಾಗಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿತ್ತು. ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ  ಸಾವನ್ನಪ್ಪಿದ್ದಾರೆ.

 ಕಾಲುಜಾರಿ ಬಿದ್ದು ಎನ್‍ಸಿಸಿ ಅಧಿಕಾರಿ ಮೃತ್ಯು..! Read More »

ಕರಾವಳಿ

ಎಕ್ಸ್‌ಪ್ರೆಸ್ ವೇಯಲ್ಲಿ ಅಪಘಾತ ಕೊಡಗಿನ ತಾಯಿ- ಮಗ ಸಾವು

(ನ್ಯೂಸ್ ಕಡಬ) Newskadaba.com ಬೆಂಗಳೂರು; ಮಾ,25  ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ಗೂಡ್ಸ್ ಟೆಂಪೊ ಹಠಾತ್‌ ಬ್ರೇಕ್‌ ಹಾಕಿದ ಕಾರಣ ಹಿಂದೆ ಬರುತ್ತಿದ್ದ ಕಾರು ಡಿಕ್ಕಿಯಾಗಿ  ಭೀಕರ ಅಪಘಾತ ಸಂಭವಿಸಿದೆ. ಕೊಡಗು ಜಿಲ್ಲೆ, ನಾಪೋಕ್ಲು ಬಲಮುರಿ ನಿವಾಸಿಗಳಾದ ಕವಿತಾ (47), ಅವರ ಪುತ್ರ ಆರ್ಯ ಅಯ್ಯಪ್ಪನ್ (14) ಮೃತಪಟ್ಟಿದ್ದಾರೆ.ಕಾರು ಚಾಲನೆ ಮಾಡುತ್ತಿದ್ದ ಆರ್ಯ ತಂದೆ ಮುತ್ತಪ್ಪ (54) ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ವಾಸಿಸುತ್ತಿದ್ದ ಕುಟುಂಬ ಯುಗಾದಿ ಹಬ್ಬಕ್ಕಾಗಿ ಸ್ವಗ್ರಾಮಕ್ಕೆ ಬಂದಿತ್ತು. ಹಬ್ಬ

ಎಕ್ಸ್‌ಪ್ರೆಸ್ ವೇಯಲ್ಲಿ ಅಪಘಾತ ಕೊಡಗಿನ ತಾಯಿ- ಮಗ ಸಾವು Read More »

ರಾಷ್ಟ್ರೀಯ ನ್ಯೂಸ್

ಕಡಬ: ಆಸ್ಪತ್ರೆಯ ಮುಂಭಾಗವೇ ಗಂಡು ಮಗುವಿಗೆ ಜನ್ಮವಿತ್ತ ತಾಯಿ

(ನ್ಯೂಸ್ ಕಡಬ)newskadaba.com  ಕಡಬ, ಮಾ.25. ತುಂಬು ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಆಟೋ ರಿಕ್ಷಾದಲ್ಲೇ ಗಂಡು ಮಗುವಿಗೆ ತಾಯಿ ಜನ್ಮವಿತ್ತ  ಅಪರೂಪದ ಘಟನೆ ಕಡಬದಲ್ಲಿ ವರದಿಯಾಗಿದೆ. ಆಲಂಕಾರು ಸಮೀಪದ ಮಣಿಕ್ಕಲದ  ಗರ್ಭಿಣಿ ಮಹಿಳೆ ತನ್ನ ಪತಿ ಜೊತೆ  ಬಲ್ಯದ  ತನ್ನ ಕುಟುಂಬಸ್ಥರ ಮನೆಗೆ ಬಂದಿದ್ದರು. ಸಾಯಂಕಾಲದ ವೇಳೆ ಅವರಿಗೆ ಆರೋಗ್ಯದಲ್ಲಿ ಬದಲಾವಣೆ ಕಂಡು ಬಂದಿತ್ತು. ತಕ್ಷಣ ಆರೋ ರಿಕ್ಷಾದಲ್ಲಿ ಕಡಬದ ಸಮುದಾಯ ಆಸ್ಪತ್ರೆಗೆ  ಕರೆದುಕೊಂಡು ಬಂದಿದ್ದು, ಆಸ್ಪತ್ರೆ ಮುಂಭಾಗಕ್ಕೆ ತಲುಪುತ್ತಿದ್ದಂತೆ ತಾಯಿ ಮಗುವಿಗೆ ಜನ್ಮನೀಡಿದ್ದಾರೆ. ಕೂಡಲೇ ಆಸ್ಪತ್ರೆ ಸಿಬ್ಬಂದಿಗಳು

ಕಡಬ: ಆಸ್ಪತ್ರೆಯ ಮುಂಭಾಗವೇ ಗಂಡು ಮಗುವಿಗೆ ಜನ್ಮವಿತ್ತ ತಾಯಿ Read More »

ಕರಾವಳಿ

ಆಟವಾಡುತ್ತಾ ಉಂಗುರ ನುಂಗಿದ 8 ತಿಂಗಳ ಮಗು ಮೃತ್ಯು..!

(ನ್ಯೂಸ್ ಕಡಬ)newskadaba.com ಮ‌ಡಿಕೇರಿ, ಮಾ.23. ಉಂಗುರ ನುಂಗಿ 8 ತಿಂಗಳ ಮಗು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಡಿಗೋಡು ಗ್ರಾಮದಲ್ಲಿ ನಡೆದಿದೆ. ಮುನೀರ್ ಎಂಬವರ ಮಗು ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಂಗುರ ನುಂಗಿದ್ದು, ತಕ್ಷಣ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಗುವನ್ನು ದಾಖಲಿಸಿದರೂ ಉಸಿರಾಟದ ಸಮಸ್ಯೆಯಿಂದಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಉಂಗುರವನ್ನು ಹೊರತೆಗೆಯಲಾಗಿದೆ. ಆದರೆ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

ಆಟವಾಡುತ್ತಾ ಉಂಗುರ ನುಂಗಿದ 8 ತಿಂಗಳ ಮಗು ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಾ.16 ರಿಂದ ಬೆಂಗಳೂರಲ್ಲಿ ಆಟೋ ಸೇವೆ ಬಂದ್ ➤ಹಲವು ಸಂಘಟನೆಗಳ ಬೆಂಬಲ

(ನ್ಯೂಸ್ ಕಡಬ) newskadaba.com.ಬೆಂಗಳೂರು.ಮಾ. 15.  ರಾಜ್ಯ ಸರ್ಕಾರಕ್ಕೆ ಬೈಕ್ ಆಟೋ ಟ್ಯಾಕ್ಸಿ ನಿಷೇಧಿಸುವಂತೆ ಆಟೋ ಸಂಘಟನೆಗಳು ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು  ಮಾ.16 ರಿಂದ ಪ್ರತಿಭಟನೆ ನಡೆಸಲಿದ್ದಾರೆ.   ಮಾ. 20 ರಂದು ಬೆಂಗಳೂರು ನಗರದಲ್ಲಿ ಆಟೋ ಸೇವೆ ಲಭ್ಯವಿರುವುದಿಲ್ಲ. ಆಟೋ ಮುಷ್ಕರಕ್ಕೆ ಒಟ್ಟು 21 ಆಟೋ ಸಂಘಟನೆಗಳು ಬೆಂಬಲ ನೀಡಿವೆ ಎಂದು ತಿಳಿದು ಬಂದಿದೆ.

ಮಾ.16 ರಿಂದ ಬೆಂಗಳೂರಲ್ಲಿ ಆಟೋ ಸೇವೆ ಬಂದ್ ➤ಹಲವು ಸಂಘಟನೆಗಳ ಬೆಂಬಲ Read More »

ಕರ್ನಾಟಕ

ನಾಳೆ ಸಿಎಂ ಬೊಮ್ಮಾಯಿ ಮಂಗಳೂರಿಗೆ

(ನ್ಯೂಸ್ ಕಡಬ) newskadaba.comಮಂಗಳೂರು, ಮಾ. 15. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನಾಳೆ ಮಂಗಳೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಗ್ಗೆ 10:30ಕ್ಕೆ ಮೇರಿ ಹಿಲ್ ಹೆಲಿಪ್ಯಾಡ್ ನಲ್ಲಿ ಬಂದು ಇಳಿಯಲಿದ್ದಾರೆ. ಬಳಿಕ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಳ್ಳಲಾಗುವ ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಉದ್ಘಾಟಿಸಲಿದ್ದಾರೆ. ನಂತರ ತುಮಕೂರು ಜಿಲ್ಲೆಗೆ ತೆರಳಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ನಾಳೆ ಸಿಎಂ ಬೊಮ್ಮಾಯಿ ಮಂಗಳೂರಿಗೆ Read More »

ಕರ್ನಾಟಕ

ಸರ್ಕಾರಿ ವಸತಿ ಶಾಲೆಯಲ್ಲಿ ಅವ್ಯವಹಾರ ➤ ಲೈಂಗಿಕ ಕಿರುಕುಳ ನೀಡಿದ ಪ್ರಾಂಶುಪಾಲರು ಸೇರಿದಂತೆ 4 ಮಂದಿ ಬಂಧನ!

(ನ್ಯೂಸ್ ಕಡಬ) newskadaba.com. ಹಾಸನ, ಮಾ.10.  ವಸತಿ ಶಾಲೆಯೊಂದರಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದಾರೆ.  ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳೇಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಕಿಯರ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಸಮಾಜ ಕಲ್ಯಾಣ ಇಲಾಖೆಯಿಂದ ಈ ವಸತಿ ನಿಲಯವನ್ನು ನೋಡಿಕೊಳ್ಳಲಾಗುತ್ತಿದೆ. ವಸತಿ ಶಾಲೆಯಲ್ಲಿ ಓದುತ್ತಿರುವ ಎಂಟು ಅಪ್ರಾಪ್ತ ಬಾಲಕಿಯರಿಗೆ ಆರೋಪಿಗಳು ಲೈಂಗಿಕ ಕಿರುಕುಳ ನೀಡಿದ್ದಾರೆ. ಜಿಲ್ಲಾ ಮಕ್ಕಳ ಕಲ್ಯಾಣ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ

ಸರ್ಕಾರಿ ವಸತಿ ಶಾಲೆಯಲ್ಲಿ ಅವ್ಯವಹಾರ ➤ ಲೈಂಗಿಕ ಕಿರುಕುಳ ನೀಡಿದ ಪ್ರಾಂಶುಪಾಲರು ಸೇರಿದಂತೆ 4 ಮಂದಿ ಬಂಧನ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೋಲಾರ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ➤ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ನ್ಯೂಸ್ ಕಡಬ) newskadaba.com. ಕೋಲಾರ. ಫೆ.18.  ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಕೋಲಾರದ ಪೋಕ್ಸೋ ವಿಶೇಷ ಕೋರ್ಟ್ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದು, ಸಂತ್ರಸ್ತೆ ಹಾಗೂ ಆಕೆಯ ಕುಟುಂಬಸ್ಥರಿಗೆ ನ್ಯಾಯ ಸಿಕ್ಕಂತಾಗಿದೆ. ಆನಂದ್, ಕಾಂತರಾಜು, ಪ್ರವೀಣ್, ವೇಣು ಜೀವಾವಧಿ ಶಿಕ್ಷೆಗೆ ಒಳಗಾದ ಆರೋಪಿಗಳು.   ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಾಮಸಮುದ್ರದಲ್ಲಿ 2022ರ ಫೆಬ್ರವರಿ ತಿಂಗಳಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಲಾಗಿತ್ತು.

ಕೋಲಾರ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ➤ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top