Kadaba News

ಕೋಡಿಂಬಾಳ: ವರದಿಗಾರ ಪ್ರಕಾಶ್ ಅವರಿಗೆ ಪಿತೃವಿಯೋಗ

(ನ್ಯೂಸ್ ಕಡಬ) newskadaba.com ಕಡಬ, ನ. 05: ಕೋಡಿಂಬಾಳ ಗ್ರಾಮದ ಗುಂಡಿಮಜಲು ನಿವಾಸಿ ಬೇಬಿ(63 ವ.) ಅವರು ಕಳೆದ ದಿನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.     ಹಲವಾರು ಸಮಯಗಳಿಂದ ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗಿದ್ದ ಅವರನ್ನು ಕಳೆದ ದಿನ ಅಸ್ವಸ್ಥಗೊಂಡ ಹಿನ್ನಲೆಯಲ್ಲಿ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರ ಮೃತಪಟ್ಟಿದ್ದಾರೆ. ಮೃತರು ಪತ್ನಿ ರೋಸಮ್ಮ, ಪುತ್ರರಾದ ಈಟಿವಿ ಭಾರತ್ ವೆಬ್ಸೈಟ್ನ ಕಡಬ, ಸುಳ್ಯ ವರದಿಗಾರ ಪ್ರಕಾಶ್ ಕೋಡಿಂಬಾಳ, ಪ್ರಸಾದ್, ಸೊಸೆಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರವು ಇಂದು […]

ಕೋಡಿಂಬಾಳ: ವರದಿಗಾರ ಪ್ರಕಾಶ್ ಅವರಿಗೆ ಪಿತೃವಿಯೋಗ Read More »

ಕರಾವಳಿ

ಉಡುಪಿಯಲ್ಲಿ ನಕಲಿ ದಂತ ವೈದ್ಯೆ ➤ ಆರೋಗ್ಯ ಇಲಾಖೆಯಿಂದ ಕ್ಲಿನಿಕ್ ಗೆ ಸೀಲ್

(ನ್ಯೂಸ್ ಕಡಬ) newskadaba.com ಉಡುಪಿ ನ. 05: ಕ್ಲಿನಿಕ್ ನಡೆಸುವ ಬದಲು ನಕಲಿ ದಂತ ವೈದ್ಯರೊಬ್ಬರು ನಗರದಲ್ಲಿ ನಡೆಸುತ್ತಿದ್ದ ಡೆಂಟಲ್ ಕ್ಲಿನಿಕ್ ಲ್ಯಾಬ್ ಅನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಸೀಲ್ ಮಾಡಿದ ಪ್ರಕರಣ ನಗರದ ಠಾಣೆಯಲ್ಲಿ ದಾಖಲಾಗಿದೆ.     ಉಡುಪಿ ಸಿಟಿ ನಿಲ್ದಾಣದಲ್ಲಿ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿ ನಿಯಮ ಅಡಿಯಲ್ಲಿ ಶ್ವೇತಾ ಎಂಬುವವರಿಗೆ ಶಾಶ್ವತ್ ಡೆಂಟಲ್ ಕ್ಲಿನಿಕ್ ಲ್ಯಾಬ್ ಹೆಸರಿನ ವೈದ್ಯಕೀಯ ಸಂಸ್ಥೆಯನ್ನು ನಡೆಸಲು ಅನುಮತಿ ನೀಡಲಾಗಿತ್ತು. ಆದರೇ, ಇವರು ಕ್ಲಿನಿಕ್ ನಡೆಸುವ

ಉಡುಪಿಯಲ್ಲಿ ನಕಲಿ ದಂತ ವೈದ್ಯೆ ➤ ಆರೋಗ್ಯ ಇಲಾಖೆಯಿಂದ ಕ್ಲಿನಿಕ್ ಗೆ ಸೀಲ್ Read More »

ಕರಾವಳಿ

ಮಂಗಳೂರು: ಮಹತ್ವದ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 05: ಎರಡು ದಶಕಗಳ ನಂತರ ಬಿಜೆಪಿ ರಾಜ್ಯಕಾರಣಿ ಮಂಗಳೂರು ನಗರದ ರಮಣ ಪೈ ಸಭಾಂಗಣದಲ್ಲಿ ಇಂದು ಮೂಂಜಾನೆ ಸಿ.ಎಂ. ಯಡಿಯೂರಪ್ಪ ಸಹಿತ ರಾಜ್ಯ ಬಿಜೆಪಿ ನಾಯಕರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಪ್ರಾರಂಭಗೊಂಡಿತ್ತು.     ಕಾರ್ಯಕಾರಣಿಕೆಯ ಉದ್ಘಾಟನೆಯನ್ನು ಸಿ.ಎಂ.ಯಡಿಯೂರಪ್ಪನವರು ನೆರವೇರಿಸಿದರು. ಈ ಸಭೆಯು ಬೆಳಗ್ಗೆಯಿಂದ ಸಂಜೆ ವರೆಗೆ ನಡೆಯುತ್ತದೆ. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಡಿ.ವಿ ಸದಾನಂದ ಗೌಡ, ಉಪಮುಖ್ಯಮಂತ್ರಿ

ಮಂಗಳೂರು: ಮಹತ್ವದ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ Read More »

ಕರಾವಳಿ

ಮಾಜಿ ಸಚಿವ, ಕಾಂಗ್ರೇಸ್ ಮುಖಂಡ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

(ನ್ಯೂಸ್ ಕಡಬ) newskadaba.com ಧಾರವಾಡ,  ನ. 05: 2016 ಜೂನ್ 15 ರಂದು ನಡೆದಿದ್ದ ಧಾರವಾಡ ಜಿ.ಪಂ. ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಕಾಂಗ್ರೇಸ್ ಮುಖಂಡ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.       ವಿನಯ್ ಕುಲಕರ್ಣಿ ಅವರನ್ನು ಧಾರವಾಡ ಉಪನಗರ ಠಾಣೆಗೆ ಕರೆದೊಯ್ದು ಅಲ್ಲಿ ವಿಚಾರಣೆ ನಡೆಸಿದ್ದಾರೆ. ಇದಕ್ಕೂ ಮುನ್ನ ಸೆಪ್ಟೆಂಬರ್ ಮಧ್ಯಭಾಗದಲ್ಲಿ ವಿನಯ್ ಕುಲಕರ್ಣಿ ಅವರ ಸಹೋದರ ವಿಜಯ್ ಕುಲಕರ್ಣಿ ಅವರನ್ನೂ ಸಿಬಿಐ

ಮಾಜಿ ಸಚಿವ, ಕಾಂಗ್ರೇಸ್ ಮುಖಂಡ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿಎಂ BSY ಗೆ ಕಟೀಲು ದೇವಿಯ ಫಲಕ ನೀಡಲಿರುವ ನಳೀನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ಮಂಗಳೂರು ನ. 05: ಇಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಆಗಮಿಸಿರುವ ಸಿಎಂ ಬಿ. ಎಸ್ ಯಡಿಯೂರಪ್ಪ ರವರಿಗೆ , ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಶ್ರೀ ದುರ್ಗಾಪರಮೇಶ್ವರಿಯ ಮೂರ್ತಿ ಇರುವ ಫಲಕವನ್ನು ನೀಡುವ ಮೂಲಕ ಗೌರವಿಸಲಿದ್ದಾರೆ. ಎರಡು ದಶಕಗಳ ನಂತರ ಬಿಜೆಪಿ ರಾಜ್ಯಕಾರಣಿ ಮಂಗಳೂರು ನಗರದ ರಮಣ ಪೈ ಸಭಾಂಗಣದಲ್ಲಿ ಇಂದು ಮೂಂಜಾನೆ ಸಿ.ಎಂ. ಯಡಿಯೂರಪ್ಪ ಸಹಿತ ರಾಜ್ಯ ಬಿಜೆಪಿ ನಾಯಕರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಪ್ರಾರಂಭಗೊಂಡಿತ್ತು. ಕಾರ್ಯಕಾರಣಿಕೆಯ ಉದ್ಘಾಟನೆಯನ್ನು

ಸಿಎಂ BSY ಗೆ ಕಟೀಲು ದೇವಿಯ ಫಲಕ ನೀಡಲಿರುವ ನಳೀನ್ ಕುಮಾರ್ ಕಟೀಲ್ Read More »

ಕರಾವಳಿ

ಹಿಂದೂ-ಕ್ರೈಸ್ತ ಸಂಪ್ರದಾಯದಂತೆ ವಿವಾಹವಾದ ನಟ ರಾಜ್​ ದೀಪಕ್​ ಶೆಟ್ಟಿ

(ನ್ಯೂಸ್ ಕಡಬ) newskadaba.com ಮಂಗಳೂರು ನ. 05: ಸ್ಯಾಂಡಲ್​ವುಡ್​ ನಟ ರಾಜ್​ ದೀಪಕ್​ ಶೆಟ್ಟಿ, ವೃತ್ತಿಯಲ್ಲಿ ಇವೆಂಟ್ ಆರ್ಗನೈಸರ್ ಆಗಿರುವ ಬಹುಕಾಲದ ಗೆಳತಿ ಸೋನಿಯಾ ರಾಡ್ರಿಗಸ್​ ಅವರನ್ನು ವರಿಸಿದ್ದಾರೆ. ದೇವಾಯಲದಲ್ಲಿ ಹಿಂದೂ ಸಂಪ್ರದಾಯದಂತೆ ಹಾಗೂ ಚರ್ಚ್​ನಲ್ಲಿ ಕ್ರೈಸ್ತ್ರ ಸಂಪ್ರದಾಯದಂತೆ ಎರಡು ರೀತಿಯಲ್ಲೂ ಮದುವೆಯಾಗಿದ್ದಾರೆ. ಕನ್ನಡದ ಸಾಕಷ್ಟು ಸಿನಿಮಾಗಳಲ್ಲಿ ಖಳನಟನಾಗಿ ಮಿಂಚಿರುವ ರಾಜ್​ ದೀಪಕ್​ ನಟಿಸಿರುವ ರಣಂ, ಕೋಟಿಗೊಬ್ಬ 3, ಗಡಿಯಾರ ಸೇರಿದಂತೆ ಹಲವಾರು ಸಿನಿಮಾಗಳು ರಿಲೀಸ್​ಗೆ ರೆಡಿಯಾಗಿವೆ.ರಾಜ್ ದೀಪಕ್ ಶೆಟ್ಟಿ ಹಾಗೂ ಸೋನಿಯಾ ಬಹಳ ಸಮಯದಿಂದ ಪ್ರೀತಿಸುತ್ತಿದ್ದು, ಕಳೆದ

ಹಿಂದೂ-ಕ್ರೈಸ್ತ ಸಂಪ್ರದಾಯದಂತೆ ವಿವಾಹವಾದ ನಟ ರಾಜ್​ ದೀಪಕ್​ ಶೆಟ್ಟಿ Read More »

ಕರಾವಳಿ

ಅಕ್ರಮ ಜಾನು​ವಾರು ಸಾಗಾ​ಟ ➤ ಮೂವರು ಖದೀಮರ ಅರೇಸ್ಟ್

(ನ್ಯೂಸ್ ಕಡಬ) newskadaba.com  ಕಾರವಾರ ನ. 05: ಕಾರವಾರದ ಯಲ್ಲಾಪುರ ಪಟ್ಟಣದಜೋಡುಕೆರೆ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಆರು ಜಾನುವಾರುಗಳನ್ನು ರಕ್ಷಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂದಿತ ಆರೋಪಿಗಳನ್ನು ಹರಿಯಾಣ ಮೂಲದ ಮನಪೂಲ್‍ಸಿಂಗ್ ಜಗನ್ನಾಥ, ಈಶ್ವರ್ ಸಿಂಗ್, ವಿಜಯ್ ಸಿಂಗ್ ಹಾಗೂ ಕೇರಳದ ರಿಜಿ ಫಿಲೀಫ್ ಎಂದು ಗುರುತಿಸಲಾಗಿದೆ. ಇವರು ಹರಿಯಾಣದಿಂದ ಕೇರಳದ ಕಡೆಗೆ ಮಿನಿ ಲಾರಿಯಲ್ಲಿ 5 ಎಮ್ಮೆಗಳನ್ನು ಹಾಗೂ ಒಂದು ಹಸುವನ್ನು ಹಿಂಸಾತ್ಮಕವಾಗಿ ತುಂಬಿಕೊಂಡು ಸಾಗಿಸುತ್ತಿದ್ದರು ಎನ್ನಲಾಗಿದೆ. ಜೋಡುಕೆರೆ ಬಳಿ ಪೊಲೀಸರು ಲಾರಿಯನ್ನು ತಡೆದು ತಪಾಸಣೆ ನಡೆಸಿದಾಗ

ಅಕ್ರಮ ಜಾನು​ವಾರು ಸಾಗಾ​ಟ ➤ ಮೂವರು ಖದೀಮರ ಅರೇಸ್ಟ್ Read More »

ಕರಾವಳಿ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಘೋಷಣೆ.!

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 05: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಘೋಷಿಸಲಾಗಿದೆ. 78 ಪ್ರಯಾಣಿಕರಿದ್ದ ವಿಮಾನದಲ್ಲಿ ಟೇಕಾಫ್ ವೇಳೆ ತಾಂತ್ರಿಕ ದೋಷ ಕಂಡುಬಂದುದರಿಂದ, ಎಮರ್ಜೆನ್ಸಿ ಘೋಷಿಸಲಾಗಿದೆ.   ಲುಫ್ತಾನ್ಸಾ ಏರ್ ಲೈನ್ಸ್ ವಿಮಾನ ಟೇಕಾಫ್ ವೇಳೆ ತಾಂತ್ರಿಕ ದೋಷ ಕಂಡು ಬಂದಿದ್ದು, ವಿಷಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಬಳಿಕ, ವಿಮಾನವನ್ನು ಸುರಕ್ಷಿತವಾಗಿ ಭೂಸ್ಪರ್ಷ ಮಾಡಿಸಲಾಗಿದೆ ಎಂದು ತಿಳಿದು ಬಂದಿದೆ. ಎಮರ್ಜೆನ್ಸಿ ಘೋಷಿಸಿದ ಕಾರಣ ವಿಮಾನ ನಿಲ್ದಾಣದಲ್ಲಿ ಕೆಲವು ಕ್ಷಣ ಆತಂಕ ಸೃಷ್ಟಿಯಾಯಿತು ಎಂದು ವರದಿಗಳು ತಿಳಿಸಿವೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಘೋಷಣೆ.! Read More »

ಕರಾವಳಿ

ಬಾವಿಗೆ ಬಿದ್ದ ಗೊಬ್ಬರ ತುಂಬಿದ್ದ ಲಾರಿ ➤ 1.36 ಲಕ್ಷ ಮೊತ್ತದ ಗೊಬ್ಬರ ಬಾವಿ ಪಾಲು

(ನ್ಯೂಸ್ ಕಡಬ) newskadaba.com ಕಾರ್ಕಳ ನ. 05: ರಸಗೊಬ್ಬರ ಸಾಗಾಟದ ಲಾರಿಯೊಂದು ಬಾವಿಗೆ ಬಿದ್ದ ಘಟನೆ ಕಾರ್ಕಳ ತಾಲೂಕಿನಲ್ಲಿ ಮಂಗಳವಾರ ನಡೆದಿದೆ.‌ಉಡುಪಿ ಜಿಲ್ಲೆಯ ಕಾರ್ಕಳದ ಟಿಎಪಿಎಂಸಿ ಬಳಿ ಚಾಲಕ ಹಾಗೂ ಕ್ಲೀನರ್​ ಇಬ್ಬರ ಅಜಾಗರೂಕತೆಯಿಂದಾಗಿ ಅಪಘಾತ ಸಂಭವಿಸಿದೆ. ಗೊಬ್ಬರ ತುಂಬಿದ್ದ ಲಾರಿಯನ್ನು ಚಾಲಕ ರಿವರ್ಸ್ ತೆಗೆಯುತ್ತಿದ್ದಾಗ ಅಲ್ಲೇ ಪಕ್ಕದಲ್ಲಿದ್ದ ದೊಡ್ಡ ಬಾವಿಗೆ ಹಿಂಭಾಗ ಜಾರಿದೆ. ಬಳಿಕ ಇಡೀ ಲಾರಿ ಮುಂಭಾಗ ಮೇಲ್ಮುಖವಾಗಿ ಬಾವಿಗೆ ಜಾರಿದ್ದು, 30 ಅಡಿ ಆಳದ ಬಾವಿಯೊಳಗೆ ಲಾರಿ ಸಿಲುಕಿಕೊಂಡಿದೆ. ಲಾರಿಯಲ್ಲಿದ್ದ ಒಟ್ಟು 1.36

ಬಾವಿಗೆ ಬಿದ್ದ ಗೊಬ್ಬರ ತುಂಬಿದ್ದ ಲಾರಿ ➤ 1.36 ಲಕ್ಷ ಮೊತ್ತದ ಗೊಬ್ಬರ ಬಾವಿ ಪಾಲು Read More »

ಕರಾವಳಿ, ಕರ್ನಾಟಕ

OLX ನಲ್ಲಿ ಆರ್ಮಿ ಅಧಿಕಾರಿಗಳ ಹೆಸರಲ್ಲಿ ವಂಚನೆ ➤ ನಾಲ್ವರು ಆರೋಪಿಗಳು ಸಿಸಿಬಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 05: ಆರ್ಮಿ ಆಧಿಕಾರಿಗಳ ಹೆಸರಿನಲ್ಲಿ ಆನ್ ಲೈನ್ ಮೂಲಕ ವಂಚಿಸುತ್ತಿದ್ದ ವಂಚಕರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಾಜೀಬ್ ಖಾನ್, ಸಾಹೀಲ್, ಉಮೇರ್ ಖಾನ್ ಮತ್ತು ಸಾಹೀದ್ ಸೈಬರ್ ಬಂಧಿತ ಆರೋಪಿಗಳು. ಆರೋಪಿಗಳು OLX  ನಲ್ಲಿ ಆರ್ಮಿ ಆಧಿಕಾರಿಗಳ ಹೆಸರಲ್ಲಿ ನಕಲಿ ಜಾಹೀರಾತು ನೀಡುತ್ತಿದ್ದರು. ಜಾಹೀರಾತಿನಲ್ಲಿ ನಾನು ಆರ್ಮಿ ಆಧಿಕಾರಿಯಾಗಿದ್ದು ನನಗೆ ಬೇರೆಡೆಗೆ ವರ್ಗಾವಣೆಯಾಗಿದೆ. ಅದ್ದರಿಂದ ನನ್ನ ಕಾರನ್ನು ಮಾರಾಟ ಮಾಡಬೇಕಿದೆ ಎಂದು OLX  ನಲ್ಲಿ ಜಾಹೀರಾತು ಹಾಕುತ್ತಿದ್ದ.   ಆರ್ಮಿ ಆಧಿಕಾರಿಗಳ

OLX ನಲ್ಲಿ ಆರ್ಮಿ ಅಧಿಕಾರಿಗಳ ಹೆಸರಲ್ಲಿ ವಂಚನೆ ➤ ನಾಲ್ವರು ಆರೋಪಿಗಳು ಸಿಸಿಬಿ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top