Kadaba News

ಕಾಸರಗೋಡು: 6 ಲಕ್ಷ ರೂ.ಗಳ ಅಕ್ರಮ ವಿದ್ಯುತ್‌‌ ಕಳವು ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ನ. 02. ಜಿಲ್ಲೆಯ ಎರಡು ಕಡೆಗಳಲ್ಲಿ ಭಾರೀ ಪ್ರಮಾಣದ ವಿದ್ಯುತ್ ಕಳವು ಪತ್ತೆ ಹಚ್ಚಲಾಗಿದೆ. ಸೀತಾಂಗೋಳಿ ವಿದ್ಯುತ್ ಕಚೇರಿಯ ಊಜಂಪದವಿನ ಅಬ್ದುಲ್ ರಹಮಾನ್ ಅವರ ಮನೆಗೆ ದಾಳಿ ನಡೆಸಿ ಅಕ್ರಮ ಪತ್ತೆ ಹಚ್ಚಲಾಗಿದೆ.     ಚೆರ್ಕಳ ವಿದ್ಯುತ್ ಕಚೇರಿ ವ್ಯಾಪ್ತಿಯಲ್ಲಿ ಅಕ್ಟೋಬರ್ 30 ರಂದು ಮುಂಜಾನೆ ನಾಲ್ಕು ಗಂಟೆಗೆ ನಡೆಸಿದ ತಪಾಸಣೆಯಿಂದ ತೈವಳಪ್ಪಿನ ಎಂ.ಎ ಮುಹಮ್ಮದ್ ಅವರ ಮನೆಯಲ್ಲಿ ಕಳವು ಪತ್ತೆಹಚ್ಚಲಾಗಿದ್ದು, ವಿದ್ಯುತ್ ಮಂಡಳಿಯ ವಿಶೇಷ ದಳಕ್ಕೆ ಲಭಿಸಿದ ಖಚಿತ ಮಾಹಿತಿಯಂತೆ […]

ಕಾಸರಗೋಡು: 6 ಲಕ್ಷ ರೂ.ಗಳ ಅಕ್ರಮ ವಿದ್ಯುತ್‌‌ ಕಳವು ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ➤ ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು, ನ. 02. ರಿಂಗ್ ರಸ್ತೆಯ ಸಾತಗಳ್ಳಿ ಬಡಾವಣೆ ಸಮೀಪ ಮಹದೇವಪುರ ಚೆಕ್ ಪೋಸ್ಟ್ ಕಡೆಯಿಂದ ವಿಟಿಯು ಕಾಲೇಜು ಕಡೆಗೆ ಹೋಗುತ್ತಿದ್ದಾಗ ಅತಿ ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ಬದಿಯಿಂದ  ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ  ನಡೆದಿದೆ. ಮೃತರನ್ನು ಅಫ್ತಾಬ್ ಬೇಗ್, ಫರ್ದನ್ ಎಂದು ಗುರುತಿಸಲಾಗಿದೆ.     ಕಾರಿನಲ್ಲಿ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದರು. ಇವರೆಲ್ಲರೂ ಶಾಂತಿ ನಗರ ನಿವಾಸಿಗಳಾಗಿದ್ದು, ಸ್ನೇಹಿತರಾಗಿದ್ದರು. ಕಾರಿನಲ್ಲಿದ್ದ

ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ➤ ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ಕಡೇಶಿವಾಲಯ: ವಿವಿಧ ಕಾಮಗಾರಿಗಳ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 02: ಬಂಟ್ವಾಳ ತಾಲೂಕಿನ ಕಡೇಶಿವಾಲಯದಲ್ಲಿ ವಿವಿಧ ಕಾಮಗಾರಿಗಳನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉದ್ಘಾಟಿಸಿದರು.   ಈ ಸಂದರ್ಭದಲ್ಲಿ ಮಾತನಾಡಿದ ಅವರು 2 ಕೋಟಿ 60 ಲಕ್ಷ ವೆಚ್ಚದಲ್ಲಿ ವಿವಿಧ ಕಾಮಗಾರಿಗಳು ಗ್ರಾಮದಲ್ಲಿ ನಡೆದಿದೆ. ಈ ದಿನ ಸುಮಾರು 1. ಕೋಟಿ 70 ಲಕ್ಷ ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಮಾಡಲಾಗಿದೆ ಎಂದರು. ಈ ಸಂದರ್ಭದಲ್ಲಿ ಆನೇಕ ಗಣ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.  

ಕಡೇಶಿವಾಲಯ: ವಿವಿಧ ಕಾಮಗಾರಿಗಳ ಉದ್ಘಾಟನೆ Read More »

ಕರಾವಳಿ

ಪುತ್ತೂರು, ಕಡಬ ತಾಲೂಕಿನಲ್ಲಿ ಇಂದು 18 ಮಂದಿಯಲ್ಲಿ ಕೊವೀಡ್ ದೃಢ

(ನ್ಯೂಸ್ ಕಡಬ) newskadaba.com ಕಡಬ, ನ. 02. ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 18 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.     ಕಡಬ ತಾಲೂಕಿನ ಚಾರ್ವಕ ನಿವಾಸಿ 71 ವರ್ಷದ ವ್ಯಕ್ತಿ, ಶಿರಾಡಿ ನಿವಾಸಿ 42 ವರ್ಷದ ಮಹಿಳೆ, 24 ವರ್ಷದ ಯುವಕ, 48 ವರ್ಷದ ವ್ಯಕ್ತಿ, 55 ವರ್ಷದ ವ್ಯಕ್ತಿ, ಸವಣೂರು ನಿವಾಸಿ 18 ವರ್ಷದ ಯುವಕ, 17 ವರ್ಷದ ಯುವತಿ, 38 ವರ್ಷದ ವ್ಯಕ್ತಿ, 35 ವರ್ಷದ

ಪುತ್ತೂರು, ಕಡಬ ತಾಲೂಕಿನಲ್ಲಿ ಇಂದು 18 ಮಂದಿಯಲ್ಲಿ ಕೊವೀಡ್ ದೃಢ Read More »

ಕರಾವಳಿ

ನಟಿ ಉಮಾಶ್ರೀ ಮನೆಯಲ್ಲಿ ಕಳ್ಳತನ.!

(ನ್ಯೂಸ್ ಕಡಬ) newskadaba.com ಬಾಗಲಕೋಟೆ ನ. 02: ಸಿನಿಮಾರಂಗದ ಜನಪ್ರಿಯ ನಟಿ, ಮಾಜಿ ಸಚಿವೆ ಉಮಾಶ್ರಿ ಮನೆಯಲ್ಲಿ ಕಳ್ಳವಾಗಿರುವ ಘಟನೆ ಬೆಳಕಿಗೆ ಬಂದಿದೆ.     ಬಾಗಲಕೋಟೆಯ ವಿದ್ಯಾನಗರದಲ್ಲಿರುವ ಮನೆಯ ಬಾಗಿಲು ಮುರಿದು ಒಳಹೊಕ್ಕ ಕಳ್ಳರು ಅಪಾರ ಪ್ರಮಾಣದ ವಸ್ತು, ನಗದು ಸೇರಿದಂತೆ ಕಳವುಗೈದಿದ್ದಾರೆ. ಘಟನಾ ಸ್ಥಳಕ್ಕೆ ಸಿಪಿಐ, ಪಿಎಸೈ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕಳ್ಳರ ಪತ್ತೆಗಾಗಿ ಕ್ರಮಕೈಗೊಂಡಿದ್ದಾರೆ.      

ನಟಿ ಉಮಾಶ್ರೀ ಮನೆಯಲ್ಲಿ ಕಳ್ಳತನ.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸವಣೂರು :ಅಭಿಷೇಕ್ ಎನ್ ಶೆಟ್ಟಿಗೆ ಏಕಲವ್ಯ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಸವಣೂರು ನ. 02: ಕ್ರೀಡಾ ಕ್ಷೇತ್ರದ ಸಾಧನೆಗಾಗಿ 2019 ನೇ ಸಾಲಿನ ಏಕಲವ್ಯ ಪ್ರಶಸ್ತಿಗೆ ಕಡಬದ , ಸವಣೂರಿನ ನಡುಬೈಲು ನಿವಾಸಿ ಅಭಿಷೇಕ್ ಎನ್ ಶೆಟ್ಟಿ ಭಾಜನರಾಗಿದ್ದಾರೆ. ಮೂಲತಃ ಇವರು ಕಡಬ ತಾಲೂಕಿನ ಸವಣೂರು ನಡುಬೈಲಿನ ಜಗನ್ನಾಥ ಶೆಟ್ಟಿ ಹಾಗೂ ತುಳಸಿನಿ ಅವರ ಪುತ್ರರಾಗಿದ್ದಾರೆ. ಇವರು ಮೂಡಬಿದಿರೆ ಆಳ್ವಾಸ್ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ ರೈಲ್ವೇ ಇಲಾಖೆ ಉದ್ಯೋಗಿಯಾಗಿದ್ದಾರೆ. ಡೆಕತ್ಲಾಣ್ ಸ್ಪರ್ಧೆಯಲ್ಲಿ ರಾಷ್ಟ್ರೀಯ ದಾಕಲೆ ಹಾಗೂ ಅಂತಾರಾಷ್ಟ್ರೀಯ ಕ್ರೀಡಾ ಕೂಟಗಳಲ್ಲಿ ಭಾರತವನ್ನು ಪ್ರತಿನಿಧಿಸುವ ಮೂಲಕ

ಸವಣೂರು :ಅಭಿಷೇಕ್ ಎನ್ ಶೆಟ್ಟಿಗೆ ಏಕಲವ್ಯ ಪ್ರಶಸ್ತಿ Read More »

ಕರಾವಳಿ

ಉಡುಪಿ: ಗಾಂಜಾ ಪ್ರಕರಣ ➤ ಇಬ್ಬರು ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಉಡುಪಿ, ನ. 02. ಗಾಂಜಾ ಸಹಿತ ಮಾದಕ ವಸ್ತುಗಳನ್ನು ಹೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೇರಿಕಾ ಮೂಲದ ಅನಿವಾಸಿ ವಿದ್ಯಾರ್ಥಿ ಹಾಗೂ ಮಣಿಪಾಲದ ಮೆಡಿಕಲ್ ವಿದ್ಯಾರ್ಥಿ ಸೇರಿ ಇಬ್ಬರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂದಿತರನ್ನು ಮೆಡಿಕಲ್ ಕಾಲೇಜಿನ ವೈದ್ಯ ವಿದ್ಯಾರ್ಥಿ ಆದಿತ್ಯ ಪ್ರಭು ಹಾಗೂ ಅಮೇರಿಕಾದ ಅನಿವಾಸಿ ವಿದ್ಯಾರ್ಥಿ ಅನಿಶ್ ಎಂದು ಗುರುತಿಸಲಾಗಿದೆ.     ಮಣಿಪಾಲದ ಅಪಾರ್ಟ್ ಮೆಂಟ್ ವೊಂದರಲ್ಲಿ ಅಕ್ರಮವಾಗಿ ವಿದೇಶಿ ಹೈಡ್ರೊವಿಡ್ ಗಾಂಜಾ, ಬ್ರೌನ್ ಶುಗರ್, ಎಂಡಿಎಂಎ ಮಾತ್ರೆಗಳನ್ನು ಹೊಂದಿದ್ದ

ಉಡುಪಿ: ಗಾಂಜಾ ಪ್ರಕರಣ ➤ ಇಬ್ಬರು ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

LPG ಸಿಲಿಂಡರ್ ಬಳಕೆದಾರರಿಗೆ ಬಿಗ್ ಶಾಕ್ ➤ ಮತ್ತೆ ಸಿಲಿಂಡರ್ ಬೆಲೆ ಏರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 02. ಒಂದು ಕಡೆ ಕೊರೊನಾದಿಂದ ಕೆಲಸ ಕಳೆದುಕೊಂಡಿದ್ದರೆ, ಮತ್ತೊಂದು ಕಡೆ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಏರಿಕೆ ಕಂಡಿದ್ದು ಇದು ಬಳಕೆದಾರರಿಗೆ ಬಿಗ್ ಶಾಕ್ ನೀಡಿದೆ. ಕಳೆದ ತಿಂಗಳಷ್ಟೇ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಹೆಚ್ಚಿಸಲಾಗಿತ್ತು.     ಬಳಿಕ ಮತ್ತೆ ಇದೀಗ 19 ಕೆಜಿ ಕಮರ್ಷಿಯಲ್ ಎಲ್ ಪಿ ಜಿ ಸಿಲಿಂಡರ್ ಗಳ ಬಲೆಯನ್ನು ಬರೋಬ್ಬರಿ 75 ರೂಪಾಯಿ ಏರಿಕೆ ಮಾಡಿ, ಬಿಗ್ ಶಾಕ್ ನೀಡಿದೆ. ಇದರಿಂದಾಗಿ ದೆಹಲಿಯಲ್ಲಿ

LPG ಸಿಲಿಂಡರ್ ಬಳಕೆದಾರರಿಗೆ ಬಿಗ್ ಶಾಕ್ ➤ ಮತ್ತೆ ಸಿಲಿಂಡರ್ ಬೆಲೆ ಏರಿಕೆ Read More »

ರಾಷ್ಟ್ರೀಯ ನ್ಯೂಸ್

ಪೊಲೀಸರಿಂದ ಕೊಲೆ ಆರೋಪಿಗಳ ಮೇಲೆ ಫೈರಿಂಗ್➤ ನಾಲ್ವರು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 02. ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಪೊಲೀಸರು ಕೊಲೆ ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ನಾಲ್ವರು ಕೊಲೆ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದಾಗ ಫೈರಿಂಗ್ ನಡೆಸಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಗೋಪಿ, ಗಂಗಾ, ಅನಂತ, ಬಸವ ಎಂದು ಗುರುತಿಸಲಾಗಿದೆ.     ವಿನೀತ್ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆನೇಕಲ್ ಠಾಣೆ ಪೊಲೀಸರು ಅವಡ ದೇವನಹಳ್ಳಿಯಲ್ಲಿ ದಾಳಿ ನಡೆಸಿದ್ದ ವೇಳೆ ಆರೋಪಿಗಳಿಗೆ ಶರಣಾಗುವಂತೆ ಸೂಚಿಸಿದ್ದಾರೆ. ಆದರೆ ಇಬ್ಬರು ಆರೋಪಿಗಳು ಪೊಲೀಸರ ಮೇಲೆಯೇ ಹಲ್ಲೆ

ಪೊಲೀಸರಿಂದ ಕೊಲೆ ಆರೋಪಿಗಳ ಮೇಲೆ ಫೈರಿಂಗ್➤ ನಾಲ್ವರು ಪೊಲೀಸರ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಆಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com  ಕಲ್ಲುಗುಂಡಿ,ನ. 02. ವೃದ್ಧರೋರ್ವರು ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳೆದ ದಿನ ನಡೆದಿದೆ. ಮೃತರನ್ನು ಕಲ್ಲುಗುಂಡಿ ಮೇಲಿನ ಮನೆ ಪೇಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಮಹಮ್ಮದ್ (80) ಎಂದು ಗುರುತಿಸಲಾಗಿದೆ.     ಡಿ.31 ರಂದು ರಾತ್ರಿ ಅಸ್ವಸ್ಥರಾದಾಗ ಅವರ ಪುತ್ರಿ ಜೈನಾಬಿ ಅವರು ಸ್ಥಳೀಯರ ಸಹಕಾರದಿಂದ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದು, ಪರೀಕ್ಷೆ ನಡೆಸಿದಾಗ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.  ಆದರೆ ಕಳೆದ ದಿನ ಅವರ ಪುತ್ರಿ ರಾಬಿಯಾ ಅವರು ತಂದೆಯ

ಸುಳ್ಯ: ಆಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆಗೆ ಶರಣು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top