Kadaba News

ಸಾಮೂಹಿಕ ಅತ್ಯಾಚಾರಕ್ಕೀಡಾಗಿದ್ದ ಯುವತಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮೃತ್ಯು..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 29 :ಎರಡು ವಾರಗಳ ಹಿಂದೆ ಉತ್ತರ ಪ್ರದೇಶದ ಹಾಥ್ರಸ್ ಜಿಲ್ಲೆಯಲ್ಲಿ ನಾಲ್ವರು ದುಷ್ಕರ್ಮಿಗಳಿಂದ ಗ್ಯಾಂಗ್ ರೇಪ್ ಆಗಿದ್ದ 19 ವರ್ಷದ ದಲಿತ ಯುವತಿ ಇಂದು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಹಲವು ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ್ದ ಈ ಯುವತಿ ಇಂದು ಬೆಳಗ್ಗೆ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಳು. ದೇಹದ ಹಲವು ಕಡೆಗಳಲ್ಲಿ ಗಾಯ, ನಾಲಗೆ ಕತ್ತರಿಸಿ ಹೋಗಿತ್ತು. ಪ್ರಸ್ತುತ ಎಲ್ಲಾ ನಾಲ್ವರು ಆರೋಪಿಗಳು ಜೈಲಿನಲ್ಲಿದ್ದಾರೆ. ದೆಹಲಿಯಿಂದ 200 ಕಿಲೋ […]

ಸಾಮೂಹಿಕ ಅತ್ಯಾಚಾರಕ್ಕೀಡಾಗಿದ್ದ ಯುವತಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮೃತ್ಯು..!!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೈಸೂರು : ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ನೇಮಕ

(ನ್ಯೂಸ್ ಕಡಬ) newskadaba.com ಮೈಸೂರು, ಸೆ.29 :ಇತ್ತೀಚಿಗಷ್ಟೇ ಮೈಸೂರು ಜಿಲ್ಲಾಧಿಕಾರಿಯಾಗಿ ಬಂದಿದ್ದ ಬಿ ಶರತ್ ಅವರನ್ನು ರಾಜ್ಯ ಸರ್ಕಾರ ಸೋಮವಾರ ದಿಢೀರ್ ಎತ್ತಂಗಡಿ ಮಾಡಿದ್ದು, ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅವರನ್ನು ನೇಮಕ ಮಾಡಿದೆ.     ರಾಜ್ಯ ಸರ್ಕಾರ ಧಾರ್ಮಿಕ ಮತ್ತು ದತ್ತಿ ಇಲಾಖೆ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಆಗಸ್ಟ್ 29 ರಂದು ಕಲಬುರಗಿಯಿಂದ ಮೈಸೂರು ಜಿಲ್ಲಾಧಿಕಾರಿಯಾಗಿ ಬಿ ಶರತ್ ಅವರನ್ನು ವರ್ಗಾವಣೆ ಮಾಡಲಾಗಿತ್ತು.

ಮೈಸೂರು : ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ನೇಮಕ Read More »

ಕರ್ನಾಟಕ

ಡ್ರಗ್ಸ್ ನಂಟಿನ ಆರೋಪ ➤ ನಶೆ ನಟಿಮಣಿಯರಿಗೆ ಜೈಲೇ ಗತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 29 :ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ನಂಟಿನ ಆರೋಪ ಪ್ರಕರಣಕ್ಕೆ ಸಂಬಂಧಿಸಿ, ಎನ್‍ ಡಿಪಿಎಸ್ ವಿಶೇಷ ನ್ಯಾಯಾಲಯವು ನಟಿಯರಾದ ರಾಗಿಣಿ ಮತ್ತು ಸಂಜನಾರ ಜಾಮೀನು ಅರ್ಜಿ ವಜಾಗೊಳಿಸಿದೆ. ಹೀಗಾಗಿ ನಟಿಯರಿಬ್ಬರಿಗೂ ಮತ್ತಷ್ಟು ದಿನ ಜೈಲೇ ಗತಿಯಾಗಿದೆ. ಎನ್ ಡಿಪಿಎಸ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಿ.ಎಂ ಸೀನಪ್ಪ ಅವರು ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ನೀಡಿದ್ದಾರೆ.ಈ ಹಿನ್ನೆಲೆಯಲ್ಲಿ ರಾಗಿಣಿ ಮತ್ತು ಸಂಜನಾ ಹೈಕೋರ್ಟ್ ಮೊರೆಹೋಗುವ ನಿರೀಕ್ಷೆಯಿದೆ. ಮುಂದಿನ ಎರಡು ದಿನಗಳಲ್ಲಿ ನಟಿಯರ

ಡ್ರಗ್ಸ್ ನಂಟಿನ ಆರೋಪ ➤ ನಶೆ ನಟಿಮಣಿಯರಿಗೆ ಜೈಲೇ ಗತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಳಂಜ : “ಬಲೆ ತುಳು ಲಿಪಿ ಕಲ್ಪುಗ” ಎಂಬ ಕಾರ್ಯಾಗಾರ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಳಂಜ , ಸೆ. 28:  ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಜೈ ತುಳುನಾಡು ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿ ಹಾಗೂ ಕಲಾವಿಕಾಸ ಕಳಂಜ ಇದರ ಸಂಯುಕ್ತ ಆಶ್ರಯದಲ್ಲಿ ವಿಷ್ಣುನಗರ ಕಳಂಜದಲ್ಲಿ “ಬಲೆ ತುಳು ಲಿಪಿ ಕಲ್ಪುಗ” ಎಂಬ ಕಾರ್ಯಾಗಾರವನ್ನ ಉದ್ಘಾಟನೆಗೊಂಡಿತು.     ಕಾರ್ಯಕ್ರಮವನ್ನು ಅರ್ಚಕರಾದ ನರಸಿಂಹ ಭಟ್ ಬಾಳಿಲ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ತುಳು ಲಿಪಿ ಶಿಕ್ಷಕರಾದ ಜಗದೀಶ ಗೌಡ ಕಲ್ಕಳ ಮತ್ತು ನಿಶ್ಚಿತ್ ರಾಮಕುಂಜ ಕಳಂಜ ಶ್ರೀ

ಕಳಂಜ : “ಬಲೆ ತುಳು ಲಿಪಿ ಕಲ್ಪುಗ” ಎಂಬ ಕಾರ್ಯಾಗಾರ ಉದ್ಘಾಟನೆ Read More »

ಕರಾವಳಿ, ಕರ್ನಾಟಕ

ಶಾಸಕ ಎಚ್ .ಕೆ ಪಾಟೀಲ್ ಅವರಿಗೆ ಕೋರೋನಾ ದೃಢ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 28:  ಕಾಂಗ್ರೆಸ್ ನ ಹಿರಿಯ ಮುಖಂಡರು ಹಾಗೂ ಗದಗ ಶಾಸಕ ಎಚ್‌.ಕೆ.ಪಾಟೀಲ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ.   ಅವರು ಬೆಂಗಳೂರ ಮನೆಯಲ್ಲಿಯೇ ಚಿಕಿತ್ಸೆಯೊಂದಿಗೆ ಕ್ವಾರಂಟಿನ್ ಆಗಿದ್ದಾರೆ. ಇತ್ತೀಚಿಗೆ ಮಹಾರಾಷ್ಟ್ರ ರಾಜ್ಯದ ಕಾಂಗ್ರೆಸ್ ಪಕ್ಷದ ಉಸ್ತುವಾರಿಯಾಗಿ ಪಾಟೀಲ ಅಧಿಕಾರ ವಹಿಸಿಕೊಂಡಿದ್ದರು. ಕಳೆದ ಮೂರು ದಿನಗಳ ಹಿಂದೆ ಮಹಾರಾಷ್ಟ್ರ ಪ್ರವಾಸ ಕೈಗೊಂಡಿದ್ದರು ಮಹಾರಾಷ್ಟ್ರದ ಪ್ರವಾಸ ನಂಟುನಿಂದ ಪಾಸಿಟಿವ್ ದೃಢ ಪಟ್ಟಿರುವ ಶಂಕೆ ವ್ಯಕ್ತವಾಗಿದೆ. 10 ದಿನಗಳ ಕಾಲ ಮನೆಯಲ್ಲಿ ಕ್ವಾರಂಟಿನ್ ಆಗಿರುತ್ತೆನೆ

ಶಾಸಕ ಎಚ್ .ಕೆ ಪಾಟೀಲ್ ಅವರಿಗೆ ಕೋರೋನಾ ದೃಢ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ದೆವ್ವ ಬಿಡಿಸುತ್ತೇನೆಂದು ಮಗುವನ್ನೇ ಕೊಂದ ಮಾಂತ್ರಿಕ..!!

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಸೆ. 28: ಮಗುವಿಗೆ ದೆವ್ವ, ಭೂತ ಮೆಟ್ಟಿಕೊಂಡಿದೆ, ಬಿಡಿಸುತ್ತೇನೆ ಎಂದು ಮಂತ್ರವಾದಿಯೊಬ್ಬ 2 ವರ್ಷದ ಕಂದಮ್ಮಳನ್ನೇ ಬಲಿ ಪಡೆದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮೃತ ಮಗು ಪೂರ್ಣಿಕಾ ಎಂದು ಗುರುತಿಸಲಾಗಿದೆ. ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ಅಜ್ಕಿಕ್ಯಾತನಹಳ್ಳಿ ನಿವಾಸಿಗಳಾದ ಪ್ರವೀಣ್ ಹಾಗೂ ಬೇಬಿ ದಂಪತಿಯ ಪುತ್ರಿ. 2 ವರ್ಷದ ಪೂರ್ಣಿಕಾ ಆಗಾಗ ಬೆಚ್ಚಿ ಬೀಳುತ್ತಿದ್ದಳಂತೆ. ಹಾಗಾಗಿ ಆಕೆಯನ್ನು ಸ್ಥಳೀಯ ಮಂತ್ರವಾದಿ ರಾಕೇಶ್ ಎಂಬಾತನ ಬಳಿ ಕರೆದುಕೊಂಡು ಹೋಗಿದ್ದಾರೆ. ಮಂತ್ರವಾದಿ ರಾಕೇಶ್, ಮಗುಗೆ ದೆವ್ವ

ದೆವ್ವ ಬಿಡಿಸುತ್ತೇನೆಂದು ಮಗುವನ್ನೇ ಕೊಂದ ಮಾಂತ್ರಿಕ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭೂ ಸುಧಾರಣೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ ➤ ಸುಳ್ಯದಲ್ಲಿ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 28:  ಇಂದು ಭೂ ಸುಧಾರಣೆ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತ ಪಡಿಸಿ ರಾಜ್ಯದ ಹಲವೆಡೆ ರೈತಾಪಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ.       ಅದರಂತೆ ಕಾರ್ಮಿಕ ಸಂಘದಿಂದ ಪ್ರತಿಭಟನೆ ಇಂದು ಸುಳ್ಯದಲ್ಲಿ ಬೃಹತ್ ಮಟ್ಟದಲ್ಲಿ ನಡೆಯುತ್ತಿದೆ.  ಸುಳ್ಯ ಜ್ಯೋತಿ ಸರ್ಕಲ್ ಬಳಿ ಸೇರಿದ ವಿವಿಧ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮತ್ತು ರೈತರು ಮೆರವಣಿಗೆ ನಡೆಸುತ್ತಿದ್ದಾರೆ.    

ಭೂ ಸುಧಾರಣೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ ➤ ಸುಳ್ಯದಲ್ಲಿ ಬೃಹತ್ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಕನ್ನಡದ ಖ್ಯಾತ ವಿಮರ್ಶಕ ಜಿ.ಎಸ್.ಆಮೂರ ವಿಧಿವಶ

(ನ್ಯೂಸ್ ಕಡಬ) newskadaba.com ಧಾರವಾಡ, ಸೆ. 28:  ಹಿರಿಯ ಸಾಹಿತಿ, ವಿಮರ್ಶಕ ಡಾಕ್ಟರ್ ಜಿ.ಎಸ್.ಆಮೂರ ಅವರು ಸೋಮವಾರ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದಾಗಿ ಬಳಲುತ್ತಿದ್ದ ಅವರು ಬೆಳಗ್ಗೆ 5ಗಂಟೆಗೆ ನಸುಕಿನಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಜಿ.ಎಸ್. ಆಮೂರ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಸೇರಿ, ಅನೇಕ ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.ಡಾ: ಜಿ.ಎಸ್.ಅಮೂರ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ‘ಅಧ್ಯಾಪಕರಾಗಿ ವೃತ್ತಿಜೀವನ ಪ್ರಾರಂಭಿಸಿದ ಅಮೂರ ಅವರು , ಆಗಲೇ ‘ಕಾಮಿಡಿಯ

ಕನ್ನಡದ ಖ್ಯಾತ ವಿಮರ್ಶಕ ಜಿ.ಎಸ್.ಆಮೂರ ವಿಧಿವಶ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕಾರ್ಕಳ : ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ.!!

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 28:  ಕಾರ್ಕಳ ತಾಲ್ಲೂಕಿನ ಚಿಕ್ಕಲಬೆಟ್ಟು ಗ್ರಾಮದಲ್ಲಿ ಭಾನುವಾರ ಉದ್ಯಮಿ ಸುನೀಲ್‌ ಶೆಟ್ಟಿ (45) ಎಂಬುವರು ನಾಡ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುಣೆಯಲ್ಲಿ ಹೋಟೆಲ್‌ ಉದ್ಯಮ ನಡೆಸುತ್ತಿದ್ದ ಸುನೀಲ್ ಶೆಟ್ಟಿ ಲಾಕ್‌ಡೌನ್ ಬಳಿಕ ವ್ಯವಹಾರದಲ್ಲಿ ತೀವ್ರ ನಷ್ಟ ಅನುಭವಿಸಿದ್ದರು. ಸಾಲದ ಹೊರೆ ಕೂಡ ಹೆಚ್ಚಾಗಿತ್ತು. ಆರ್ಥಿಕ ಸಂಕಷ್ಟದಿಂದ ಮನನೊಂದು ಮನೆಯ ಸಮೀಪದ ಗದ್ದೆಯಲ್ಲಿ ಗುಂಡು ಹಾರಿಸಿಕೊಂಡಿದ್ದಾರೆ . ಸೋಮವಾರ ಪುಣೆಗೆ ತೆರಳುವುದಾಗಿ ಮನೆಯವರಿಗೆ ತಿಳಿಸಿದ್ದ ಸುನೀಲ್ ಶೆಟ್ಟಿ ಅಷ್ಟರಲ್ಲಿ

ಕಾರ್ಕಳ : ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ.!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 28:  ಕರ್ನಾಟಕ ಬಂದ್ ಗೆ ದಕ್ಷಿಣ ಕನ್ನಡದಲ್ಲಿ ನೀರಸ ಪ್ರತಿಕ್ರಿಯೆ ದೊರೆತಿದ್ದು, ಎಂದಿನಂತೆ ಖಾಸಗಿ ಬಸ್‌ಗಳು ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳು, ಆಟೋಗಳು ರಸ್ತೆಗಿಳಿದಿವೆ. ಬಂದರು ಪ್ರದೇಶದಲ್ಲಿ ವ್ಯಾಪಾರ-ವಹಿವಾಟುಗಳು ಆರಂಭವಾಗಿವೆ.   ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ನಗರದಾದ್ಯಂತ 300 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.ಬಲವಂತವಾಗಿ ಬಂದ್ ನಡೆಸಲು ಮುಂದಾದವರಿಗೆ ಮತ್ತು ಕೋವಿಡ್ 19 ನಿಯಮಾವಳಿ ಉಲ್ಲಂಘಿಸಿದವರಿಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ Read More »

ಕರಾವಳಿ, ಕರ್ನಾಟಕ
Scroll to Top