ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ ➤ ಹವಾಮಾನ ಇಲಾಖೆಯಿಂದ `ಯೆಲ್ಲೊ’ ಅಲರ್ಟ್ ಘೋಷಣೆ
(ನ್ಯೂಸ್‌ಕಡಬ)newskadaba.com ಬೆಂಗಳೂರು. ಆ,22 : ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಯು ಮುನ್ಸೂಚನೆ ನೀಡಿದೆ. ಮುಂಗಾರು ಚುರುಕುಗೊಂಡಿರುವುದರಿಂದ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಯು ತಿಳಿಸಿದೆ. ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಹಾಸನ, ಕೊಡಗು, ಉಡುಪಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.










