Kadaba News

ಕೋವಿಡ್-19: ರಾಜ್ಯದಲ್ಲಿ ಇಳಿಯದ ಸಾವಿನ ಪ್ರಕರಣ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.08: ರಾಜ್ಯದಲ್ಲಿ ಹೊಸ ಸೋಂಕು ಪ್ರಕರಣಗಳು ಇಳಿಕೆಯಾದರೂ, ಸಾವಿನ ಪ್ರಮಾಣ ಮಾತ್ರ ಇಳಿಕೆಯಾಗುತ್ತಿಲ್ಲ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕೊಪ್ಪಳ ಮೂಲದ 2 ವರ್ಷದ ಮಗು ಸೇರಿ 340 ಮಂದಿ ಸಾವನ್ನಪ್ಪಿದ್ದಾರೆ. ಈ ನಡುವೆ ರಾಜ್ಯದಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗಿದ್ದು, ಸೋಮವಾರ 11,958 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 27,07,481ಕ್ಕೆ ತಲುಪಿದೆ. ರಾಜ್ಯದಲ್ಲಿ 0-9 ವರ್ಷದ 81,520 ಮಕ್ಕಳಿಕೆ ಸೋಂಕು ತಗುಲಿದ್ದು, 10-19 ವರ್ಷದ 2,03,526 ಮಕ್ಕಳಿಗೆ ಸೋಂಕು ತಗುಲಿರುವುದು […]

ಕೋವಿಡ್-19: ರಾಜ್ಯದಲ್ಲಿ ಇಳಿಯದ ಸಾವಿನ ಪ್ರಕರಣ Read More »

ಕರ್ನಾಟಕ

ಬಾಲಿವುಡ್ ನಟ ದಿಲೀಪ್ ಕುಮಾರ್​​​ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba, ಮುಂಬೈ ಜೂ.06: ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಉಸಿರಾಟದ ಸಮಸ್ಯೆಯಿಂದ ಭಾನುವಾರ ಬೆಳಗ್ಗೆ ಮುಂಬೈನ ಹಿಂದುಜಾ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.   ಈ ಕುರಿತು ದಿಲೀಪ್ ಕುಮಾರ್ ಅವರ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಿ ಅವರ ಮ್ಯಾನೇಜರ್ ಮಾಹಿತಿ ನೀಡಿದ್ದು, ನಟನ ಆರೋಗ್ಯದ ಸ್ಥಿತಿಗತಿ ಕುರಿತು ತಿಳಿಸಿದ್ದಾರೆ. ದಿಲೀಪ್ ಅವರು ನಿಯಮಿತ ವೈದ್ಯಕೀಯ ಪರೀಕ್ಷೆಗೆಂದು ಖಾರ್‍ನ ನಾನ್ ಕೋವಿಡ್ ಪಿಡಿ ಹಿಂದುಜಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವೇಳೆ ಅವರಿಗೆ

ಬಾಲಿವುಡ್ ನಟ ದಿಲೀಪ್ ಕುಮಾರ್​​​ ಆಸ್ಪತ್ರೆಗೆ ದಾಖಲು Read More »

ರಾಷ್ಟ್ರೀಯ ನ್ಯೂಸ್

ಕನ್ನಡದ ಹಿರಿಯ ನಟಿ ಸುರೇಖಾ ನಿಧನ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.06: ವರನಟ ಡಾ. ರಾಜ್‌ಕುಮಾರ್ ಜತೆ “ತ್ರಿಮೂರ್ತಿ”ಯಲ್ಲಿ ನಟಿಸಿದ್ದ ಕನ್ನಡದ ಹಿರಿಯ ನಟಿ ಸುರೇಖಾ (66) ಹೃದಯಾಘಾತದಿಂದ ನಿಧನರಾದರು.   160ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸುರೇಖಾ ಬೆಂಗಳೂರು ನಗರದಲ್ಲಿ ನಿಧನರಾದರು. ಮಣ್ಣಿನ ಮಕ್ಕಳು, ಸಂಭ್ರಮ, ಕಿಂಗ್, ಶಂಕರ್ ಸುಂದರ್, ಆಲೆಮನೆ, ಬಿಳಿಗಿರಿಯ ಬನದಲ್ಲಿ ಚಿತ್ರಗಳಲ್ಲಿ ರಾಜ್‌ಕುಮಾರ್ ಜತೆ ನಟಿಸಿದ್ದಾರೆ.ಬನಶಂಕರಿ ಚಿತಾಗಾರದಲ್ಲಿ ಇಂದು ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.  

ಕನ್ನಡದ ಹಿರಿಯ ನಟಿ ಸುರೇಖಾ ನಿಧನ Read More »

ಕರಾವಳಿ

ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ ಸುಳಿವು ನೀಡಿದ ಸಿಎಂ ಬಿಎಸ್‌ವೈ..!?

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.05: ಕೊರೋನಾ ನಿರೀಕ್ಷಿತ ಮಟ್ಟದಲ್ಲಿ ಕಡಿಮೆ ಆಗದ ಕಾರಣ ಜೂ. 3ರಂದು ಮತ್ತೆ ಒಂದು ವಾರಗಳ ಕಾಲ ಲಾಕ್‌ಡೌನ್ ವಿಸ್ತರಣೆ ಮಾಡಿ ಘೋಷಣೆ ಮಾಡಲಾಗಿತ್ತು.   ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಲಾಕ್‌ಡೌನ್ ಸಡಿಲಿಕೆ ಕುರಿತು ಸುಳಿವು ಕೊಟ್ಟಿದ್ದಾರೆ. ಸೋಮವಾರದಿಂದ ಲಾಕ್‌ಡೌನ್‌ ಸಡಿಲಿಕೆ ಮಾಡುವ ಕುರಿತು ಚಿಂತನೆ ನಡೆಸುವುದಾಗಿ ತಿಳಿಸಿದ್ದಾರೆ.ಇನ್ನು ಮೂರ್ನಾಲ್ಕು ದಿನ ರಾಜ್ಯದ ಪರಿಸ್ಥಿತಿಯನ್ನು ವಿಶ್ಲೇಷಿಸುತ್ತೇವೆ. ಯಾವ್ಯಾವ ಜಿಲ್ಲೆಗಳಲ್ಲಿ ಪರಿಸ್ಥಿತಿ ಹೇಗಿದೆ ಎಂಬುದನ್ನು ಗಮನಿಸುತ್ತೇವೆ. ನಂತರ ಕ್ರಮ ಕೈಗೊಳ್ಳುತ್ತೇವೆ ಎಂದು

ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ ಸುಳಿವು ನೀಡಿದ ಸಿಎಂ ಬಿಎಸ್‌ವೈ..!? Read More »

ಕರ್ನಾಟಕ

ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ➤ ಖ್ಯಾತ ಕಿರುತೆರೆ ನಟನ ಬಂಧನ

(ನ್ಯೂಸ್ ಕಡಬ) newskadaba,ಮುಂಬೈ ಜೂ.05: ಬಣ್ಣದ ಲೋಕದ ಕನಸು ಹೊತ್ತು ಬಂದ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪದಡಿ ಬಾಲಿವುಡ್​ ಸಿರಿಯಲ್​ ನಟ ಪರ್ಲ್‌ ವಿ ಪುರಿ ಈಗ ಪೊಲೀಸರ ಅತಿಥಿಯಾಗಿದ್ದಾರೆ.   ‘ನಾಗಿನ್ 3’, ‘ನಾಗಾರ್ಜುನ ಏಕ್ ಯೋಧ’, ‘ಬೆಪನಾಹ್ ಪ್ಯಾರ್’, ‘ಬ್ರಹ್ಮರಾಕ್ಷಸ್ 2’ ಮುಂತಾದ ಧಾರಾವಾಹಿಗಳಲ್ಲಿ ನಟಿಸಿರುವ ಪರ್ಲ್ ಪುರಿಯನ್ನು ಮುಂಬಯಿಯ ಅಂಬೋಳಿ ಪೊಲೀಸರು ನೆರವಿನೊಂದಿಗೆ ಮಿರಾ ಭಾಯಂದಾರ್ ವಾಸಾಯಿ ವಿರಾರ್ ಪೊಲೀಸರು ಬಂಧಿಸಿದ್ದಾರೆ.ನಟನ ವಿರುದ್ಧ ಎಫ್ ಐಆರ್ ದಾಖಲಾಗಿದೆ    

ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ➤ ಖ್ಯಾತ ಕಿರುತೆರೆ ನಟನ ಬಂಧನ Read More »

ಕರಾವಳಿ

ಖಾಸಗಿ ಆಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರ ಚಿಕಿತ್ಸೆಯ ದರ ಸರ್ಕಾರದಿಂದಲೇ ನಿಗದಿ ➤ ಸಚಿವ ಡಾ.ಕೆ.ಸುಧಾಕರ್

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.05: ಖಾಸಗಿ ಆಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರ ಚಿಕಿತ್ಸೆಯ ದರವನ್ನು ಸರ್ಕಾರದಿಂದಲೇ ನಿಗದಿಪಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.     ಕಪ್ಪು ಶಿಲೀಂಧ್ರದ ಔಷಧಿಯ ಕೊರತೆ ಈಗ ಇಲ್ಲ. 15 ದಿನಗಳ ಹಿಂದೆ ಇದ್ದ ಕೊರತೆ ಈಗ ಇಲ್ಲ. ಕೇಂದ್ರದಿಂದ ದೊಡ್ಡ ಪ್ರಮಾಣದಲ್ಲಿ ಔಷಧಿ ಬಂದಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಚಿಕಿತ್ಸೆಗಳನ್ನು ಉಚಿತಗೊಳಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರದ ಚಿಕಿತ್ಸೆಗೆ ನಿರ್ದಿಷ್ಟ ದರ ನಿಗದಿಪಡಿಸಬೇಕಿದೆ. ಬೇಕಾದ ಹಾಗೆ

ಖಾಸಗಿ ಆಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರ ಚಿಕಿತ್ಸೆಯ ದರ ಸರ್ಕಾರದಿಂದಲೇ ನಿಗದಿ ➤ ಸಚಿವ ಡಾ.ಕೆ.ಸುಧಾಕರ್ Read More »

ಕರ್ನಾಟಕ

ವಿಟ್ಲ: ತಂದೆ ಅಂತ್ಯಸಂಸ್ಕಾರ ಸಂದರ್ಭ ಹೃದಯಾಘಾತಕ್ಕೊಳಗಾಗಿ ಮಗ ಮೃತ್ಯು.!?

(ನ್ಯೂಸ್ ಕಡಬ) newskadaba,ವಿಟ್ಲ,ಜೂ.02: ಕೋವಿಡ್ ನಿಂದ ಮೃತಪಟ್ಟ ತಂದೆಯ ಅಂತ್ಯ ಸಂಸ್ಕಾರ ನಡೆಸುತ್ತಿರುವಾಗ ಆರೋಗ್ಯ ವ್ಯತ್ಯಯವಾಗಿ ಮಗನೂ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದಲ್ಲಿ ನಡೆದಿದೆ.ಪುಣಚ ಗ್ರಾಮದ ನಿವಾಸಿ ಪ್ರೊಪೆಸರ್ ಭುಜಂಗ ಶೆಟ್ಟಿ ಹಾಗೂ ಅವರ ಶೈಲೇಶ್ ಒಂದೇ ದಿನ ಅನಾರೋಗ್ಯ ತುತ್ತಾಗಿ ಮೃತ ಪಟ್ಟವರು.   ತಂದೆಯ ಅಂತ್ಯ ಸಂಸ್ಕಾರ ವಿಧಿ ವಿಧಾನಗಳು ಕೋವಿಡ್ ನಿಯಾಮಾವಳಿಯಂತೆ ನಡೆಯುತ್ತಿತ್ತು.ಈ ಸಂದರ್ಭ ಪುತ್ರ ಶೈಲೇಶ್ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.    

ವಿಟ್ಲ: ತಂದೆ ಅಂತ್ಯಸಂಸ್ಕಾರ ಸಂದರ್ಭ ಹೃದಯಾಘಾತಕ್ಕೊಳಗಾಗಿ ಮಗ ಮೃತ್ಯು.!? Read More »

ಕರಾವಳಿ, ಕರ್ನಾಟಕ

ಇಂದು ಏರಿಕೆಯಾಗದ ಪೆಟ್ರೋಲ್, ಡೀಸೆಲ್ ಬೆಲೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.02: ಬೆಂಗಳೂರು, ದೆಹಲಿ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿದಿನ ಏರಿಳಿತಗಳು ಉಂಟಾಗುತ್ತಲೇ ಇರುತ್ತವೆ. ಕಳೆದ 3 ತಿಂಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳವಾಗುತ್ತಿದ್ದು, ಕಳೆದೆರಡು ದಿನಗಳಿಂದ ಪೆಟ್ರೋಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಮೂರ್ನಾಲ್ಕು ದಿನಗಳಿಂದ ಮುಂಬೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಜೈಪುರದಲ್ಲೂ ಪೆಟ್ರೋಲ್ ದರ ಶತಕ ಬಾರಿಸಿದೆ.     ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್

ಇಂದು ಏರಿಕೆಯಾಗದ ಪೆಟ್ರೋಲ್, ಡೀಸೆಲ್ ಬೆಲೆ Read More »

ಕರ್ನಾಟಕ

ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣ ಇಳಿಕೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.02: ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಮರಣ ಪ್ರಮಾಣ ಮಾತ್ರ ಏರುತ್ತಲೇ ಇದೆ. 3 ಲಕ್ಷಕ್ಕಿಂತ ಕಡಿಮೆ ಸಕ್ರಿಯ ಪ್ರಕರಣವನ್ನು ರಾಜ್ಯ ಹೊಂದಿದ್ದು, ಈ ಮೂಲಕ ದೇಶದಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ. ತಮಿಳುನಾಡು ರಾಜ್ಯ ಮೊದಲ ಸ್ಥಾನದಲ್ಲಿದೆ. ಮೇ ತಿಂಗಳ ಮಧ್ಯಂತರದಲ್ಲಿ ಕರ್ನಾಟಕ ರಾಜ್ಯವು ಅತೀ ಹೆಚ್ಚು ಸಕ್ರಿಯ ಪ್ರಕರಣ ಹೊಂದಿದ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿತ್ತು.     ಕೆಲವೇ ದಿನಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ

ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣ ಇಳಿಕೆ Read More »

ಕರಾವಳಿ

ಕರ್ನಾಟಕದಲ್ಲಿ ಮತ್ತೆ ಲಾಕ್​ಡೌನ್ ಫಿಕ್ಸ್​ ಎಂದ ಸಿಎಂ..!

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.02: ಕರ್ನಾಟಕದಲ್ಲಿ ಇನ್ನೂ ಕೊರೋನಾ ಕೇಸುಗಳು ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ, ಲಾಕ್​ಡೌನ್ ಮುಂದುವರಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಅಲ್ಲದೆ, ಲಾಕ್​ಡೌನ್​ನಿಂದಾಗಿ ಅನೇಕ ಸಮುದಾಯಗಳು, ಕೂಲಿ-ಕಾರ್ಮಿಕರಿಗೆ ತೊಂದರೆ ಉಂಟಾಗಿದ್ದು, ಮುಂದಿನ 2-3 ದಿನಗಳಲ್ಲಿ ಮತ್ತೊಂದು ಪ್ಯಾಕೇಜ್ ಘೋಷಣೆ ಮಾಡುವುದಾಗಿ ಅವರು ತಿಳಿಸಿದ್ದಾರೆ.   ಕರ್ನಾಟಕದಲ್ಲಿ ಇನ್ನೂ ಕೊರೋನಾ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ, ಲಾಕ್​ಡೌನ್ ವಿಸ್ತರಣೆ ಮಾಡಿ ಬಿಗಿ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ಈ ಸಂಬಂಧ ಇಂದು ಸಂಜೆ ಸಚಿವರ ಜೊತೆ ಉನ್ನತ ಮಟ್ಟದ

ಕರ್ನಾಟಕದಲ್ಲಿ ಮತ್ತೆ ಲಾಕ್​ಡೌನ್ ಫಿಕ್ಸ್​ ಎಂದ ಸಿಎಂ..! Read More »

ಕರ್ನಾಟಕ
Scroll to Top