Kadaba News

ಉಡುಪಿ ಕೋರ್ಟ್ ನ ನ್ಯಾಯಾಧೀಶರಿಗೆ ಕೋವಿಡ್ ಸೋಂಕು ದೃಢ ➤ ಕೋರ್ಟ್ ಎರಡು ದಿನ ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಉಡುಪಿ, ಜು.21: ಇಲ್ಲಿನ ನ್ಯಾಯಾಲಯದ ನ್ಯಾಯಾಧೀಶರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಈ ಹಿನ್ನಲೆಯಲ್ಲಿ ಉಡುಪಿ ನ್ಯಾಯಾಲಯ ಸಂಕೀರ್ಣವನ್ನು ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ. ನ್ಯಾಯಾಧೀಶರಿಗೆ ಕೋವಿಡ್ -19 ಸೋಂಕು ದೃಢವಾದ ಹಿನ್ನಲೆಯಲ್ಲಿ ಕೋರ್ಟ್ ಆವರಣವನ್ನು ಎರಡು ದಿನ ಸೀಲ್ ಡೌನ್ ಮಾಡಿ ಸ್ಯಾನಿಟೈಸ್ ಮಾಡಲಾಗುವುದು. ಜು. 21 ಮತ್ತು 22ರಂದು ಕೋರ್ಟ್ ಸೀಲ್ ಡೌನ್ ಆಗಿರಲಿದೆ ಎಂದು ವರದಿಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆಯಲ್ಲಿ ಮತ್ತೆ […]

ಉಡುಪಿ ಕೋರ್ಟ್ ನ ನ್ಯಾಯಾಧೀಶರಿಗೆ ಕೋವಿಡ್ ಸೋಂಕು ದೃಢ ➤ ಕೋರ್ಟ್ ಎರಡು ದಿನ ಸೀಲ್ ಡೌನ್ Read More »

ಕರಾವಳಿ, ಕರ್ನಾಟಕ

ಕೇರಳದ ಯುವಕ ಮಣಿಪಾಲ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿಗೆ ಬಲಿ

(ನ್ಯೂಸ್ ಕಡಬ) newskadaba.com ಉಡುಪಿ, ಜು.21: ಅನಾರೋಗ್ಯದಿಂದ ಕಳೆದ ಕೆಲ ದಿನಗಳಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇರಳ ಯುವಕನೋರ್ವ ಮೃತಪಟ್ಟಿದ್ದು, ಆತನಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಕೇರಳದ ಕಣ್ಣೂರು ಜಿಲ್ಲೆಯ 35 ವರ್ಷದ ಯುವಕ ಕಿಡ್ನಿ ಸಮಸ್ಯೆಯಿಂದ ಕಳೆದ 15 ದಿನಗಳ ಹಿಂದ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದ.   ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ರಾತ್ರಿ ಯುವಕ ಮೃತಪಟ್ಟಿದ್ದಾನೆ. ಆತನ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆತನಿಗೆ ಕೋವಿಡ್ -19 ಸೋಂಕು ತಾಗಿರುವುದು ದೃಢವಾಗಿದೆ

ಕೇರಳದ ಯುವಕ ಮಣಿಪಾಲ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿಗೆ ಬಲಿ Read More »

ಕರಾವಳಿ, ಕರ್ನಾಟಕ

ಅಯೋಧ್ಯಾ ರಾಮ ಮಂದಿರ ನಿರ್ಮಾಣಕ್ಕೆ ಕ್ಷಣ ಗಣನೆ ಪ್ರಾರಂಭ ➤ ಉಡುಪಿ ಕ್ಷೇತ್ರದಿಂದ ಮಣ್ಣು ಸಂಗ್ರಹ

(ನ್ಯೂಸ್ ಕಡಬ) newskadaba.com ಉಡುಪಿ :ಜು.21., ಅಯೋಧ್ಯಾ ರಾಮ ಮಂದಿರ ನಿರ್ಮಾಣಕ್ಕೆ ದಿನ ಗಣನೆ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ದೇಶದ ವಿವಿಧ ಪುಣ್ಯ ಕ್ಷೇತ್ರಗಳಿಂದ ಮಣ್ಣು ಹಾಗೂ ನೀರು ಸಂಗ್ರಹದ ಕಾರ್ಯವನ್ನು ವಿಶ್ವ ಹಿಂದೂ ಪರಿಷತ್ ಮಾಡುತ್ತಿದೆ. ಕೃಷ್ಣ ನಗರಿ ಉಡುಪಿಯಲ್ಲೂ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಉಡುಪಿಯ ಪವಿತ್ರ ಮಣ್ಣಿಗೆ ಪರ್ಯಾಯ ಅದಮಾರು ಶ್ರೀ ಗಳಾದ ಈಶಪ್ರೀಯತೀರ್ಥ ಸ್ವಾಮೀಜಿ ಪ್ರಾರ್ಥನೆ ಸಲ್ಲಿಸಿ ಪೂಜೆ ನೆರವೇರಿಸಿ, ಕೃಷ್ಣನ ಗಂಧ ಪ್ರಸಾದ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿ ಪವಿತ್ರ ಮಣ್ಣುನ್ನು ವಿಹಿಂಪ

ಅಯೋಧ್ಯಾ ರಾಮ ಮಂದಿರ ನಿರ್ಮಾಣಕ್ಕೆ ಕ್ಷಣ ಗಣನೆ ಪ್ರಾರಂಭ ➤ ಉಡುಪಿ ಕ್ಷೇತ್ರದಿಂದ ಮಣ್ಣು ಸಂಗ್ರಹ Read More »

ಕರಾವಳಿ

ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಮದ್ರಸ ಅಧ್ಯಾಪಕನ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ , ಜು.21: ತನ್ನ ಹದಿನಾರು ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಗೂನಡ್ಕ ಮೂಲದ ಮದ್ರಸ ಅಧ್ಯಾಪಕನೋರ್ವನನ್ನು ಕೇರಳದ ನೀಲೇಶ್ವರ ಪೊಲೀಸರು ಬಂಧಿಸಿದ್ದಾರೆ. ಗೂನಡ್ಕ ಮೂಲದವನಾದ ಈತ ಇಲ್ಲಿಯೂ ಒಂದು ವಿವಾಹವಾಗಿದ್ದು, ಕಾಞಂಗಾಡ್ ನಲ್ಲಿ ಮತ್ತೊಂದು ವಿವಾಹವಾಗಿದ್ದ. ಈತನ ಮೇಲೆ ಈ ಹಿಂದೆಯೂ ಪೋಕ್ಸೋ ಕೇಸು ಸಹಿತ ನಾಲ್ಕು ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿತ್ತು. ಈತನ 16 ವರ್ಷದ ಮಗಳು ತನ್ನ ಮಾವನ ಸಹಕಾರದೊಂದಿಗೆ ನೀಲೇಶ್ವರ ಪೊಲೀಸರಿಗೆ ದೂರು ನೀಡಿದ್ದು, ಕಳೆದ ಕೆಲವು ವರ್ಷಗಳಿಂದ

ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಮದ್ರಸ ಅಧ್ಯಾಪಕನ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ :ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ➤ ಗೂಸ ತಿಂದ ಮುಖಂಡ

(ನ್ಯೂಸ್ ಕಡಬ) newskadaba.com ಸುಳ್ಯ, ಜು.21:  ವಿವಾಹಿತ ಮಹಿಳೆಯೊಂದಿಗೆ ಚೆಲ್ಲಾಟವಾಡುತ್ತಿದ್ದ ಸಮಯದಲ್ಲಿ ಪಕ್ಷದ ಮುಖಂಡನೋರ್ವ ಧರ್ಮದೇಟು ತಿಂದ ಘಟನೆ ಪೆರುವಾಜೆ ಗ್ರಾಮದ ಕುಂಡಡ್ಕದಿಂದ ವರದಿಯಾಗಿದೆ. ಸುಳ್ಯ ಶಾಸಕರ ಮಾಜಿ ಆಪ್ತ ಕಾರ್ಯದರ್ಶಿ ಎನ್ನಲಾದ ಹಾಗೂ ಪಕ್ಷವೊಂದರಲ್ಲಿ ಸಕ್ರಿಯವಾಗಿರುವ ವ್ಯಕ್ತಿಯೋರ್ವ ವಿವಾಹಿತ ಮಹಿಳೆಯೊಬ್ಬರ ಜತೆ ಇರುವುದನ್ನು ಕಂಡು ಆ ಮಹಿಳೆಯ ಪತಿಯ ಸಹೋದರ ಕೈಯಲ್ಲಿದ್ದ ದೊಣ್ಣೆಯಿಂದ ಅವರಿಗೆ ಬಾರಿಸಿದರೆಂದು ಗಾಯಗೊಂಡ ಆತ ಅಲ್ಲಿಂದ ಓಡಿ ತಪ್ಪಿಸಿಕೊಂಡರೆಂದು ಹೇಳಲಾಗಿದೆ.ಅನೈತಿಕ ಸಂಬಂಧದ ವಿರುದ್ಧ ಈ ಹಿಂದೆಯೂ ಹಲವು ಬಾರಿ ಇವರಿಗೆ ಎಚ್ಚರಿಕೆ

ಸುಳ್ಯ :ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ➤ ಗೂಸ ತಿಂದ ಮುಖಂಡ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗರ್ಭಿಣಿಯರ ಚಿಕಿತ್ಸೆ ನೀಡದಿದ್ದರೆ ಕಠಿಣ ಕ್ರಮ ➤ ದ.ಕ ಉಸ್ತುವರಿ ಸಚಿವರಿಂದ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು , ಜು.21:  ಖಾಸಗಿ ಆಸ್ಪತ್ರೆಗಳಲ್ಲಿ ಯಾವುದೇ ಸಂದರ್ಭದಲ್ಲಿ ಕೋವಿಡ್ ಸೋಂಕಿತರೆಂಬ ಕಾರಣಕ್ಕೆ ಗರ್ಭಿಣಿಯರಿಗೆ ಚಿಕಿತ್ಸೆ ನೀಡದೆ ಬೇರೆಡೆಗೆ ಕಳುಹಿಸುವಂತಿಲ್ಲ. ಹೆರಿಗೆ ವಿಚಾರದಲ್ಲಿ ಖಾಸಗೀ ಆಸ್ಪತ್ರೆಗಳು ಸತಾಯಿಸದೆ ಹೆರಿಗೆ ಮಾಡಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಗರ್ಭಿಣಿಯರಿಗೆ ಖಾಸಗೀ ಆಸ್ಪತ್ರೆಗಳು ಚಿಕಿತ್ಸೆ ನೀಡಲು ಸತಾಯಿಸಿದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ವ್ಯವಸ್ಥಿತವಾಗಿ ಹೆರಿಗೆ ಮಾಡಿಸಲು ಆಯಾ ಆಸ್ಪತ್ರೆಗಳು ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕು.

ಗರ್ಭಿಣಿಯರ ಚಿಕಿತ್ಸೆ ನೀಡದಿದ್ದರೆ ಕಠಿಣ ಕ್ರಮ ➤ ದ.ಕ ಉಸ್ತುವರಿ ಸಚಿವರಿಂದ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ

ಲಾಕ್ ಡೌನ್ ವಿಸ್ತರಣೆಯಿಲ್ಲ, ನೈಟ್ ಕರ್ಫ್ಯೂ ಮುಂದುವರಿಕೆ ➤ ವೈದ್ಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.21:  ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಲಾಕ್‌ಡೌನ್‌ ವಿಸ್ತರಿಸದಿರಲು ಸಿಎಂ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಆದರೆ, ರಾಜ್ಯಾದ್ಯಂತ ನೈಟ್‌ ಕರ್ಫ್ಯೂ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಕೋವಿಡ್‌ ನಿಯಂತ್ರಣದ ಉಸ್ತುವಾರಿ ಸಚಿವರೊಂದಿಗೆ ಸಿಎಂ ಅವರು ಸೋಮವಾರ ಮ್ಯಾರಾಥಾನ್ ಸಭೆ ನಡೆಸಿದರು. ಪ್ರತಿ ವಲಯದ ಪರಿಸ್ಥಿತಿ,ಆಸ್ಪತ್ರೆ, ಕೋವಿಡ್‌ ಕೇರ್‌ ಸೆಂಟರ್‌ಗಳ ನಿರ್ವಹಣೆಗೆ ಖುದ್ದಾಗಿ ಮುತುವರ್ಜಿ ವಹಿಸಲಾಗಿದೆ ಎಂದು ಸಚಿವರುಗಳೂ ಮಾಹಿತಿ ನೀಡಿದರು. ಆಗ ಲಾಕ್‌ಡೌನ್‌ ವಿಸ್ತರಣೆ ಮಾಡದಿರುವ ನಿರ್ಧಾರ ತೆಗೆದುಕೊಳ್ಳಲಾಯಿತು.     ಲಾಕ್‌ಡೌನ್‌ ವಿಸ್ತರಣೆ

ಲಾಕ್ ಡೌನ್ ವಿಸ್ತರಣೆಯಿಲ್ಲ, ನೈಟ್ ಕರ್ಫ್ಯೂ ಮುಂದುವರಿಕೆ ➤ ವೈದ್ಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಸುಳ್ಯ : ಲಾಕ್ ಡೌನ್ ಮಧ್ಯೆಯೂ ಹೆಚ್ಚಿದ ಜನಸಂದಣಿ

(ನ್ಯೂಸ್ ಕಡಬ) newskadaba.com ಸುಳ್ಯ ,ಜು.20: ಜಿಲ್ಲೆಯಲ್ಲಿ ಲಾಕ್ ಡೌನ್ ಮಧ್ಯೆಯೂ ಸೋಮವಾರ ಸುಳ್ಯ ನಗರದಲ್ಲಿ ಹೆಚ್ಚಿನ ಜನಸಂದಣಿ ಕಂಡು ಬಂದಿತ್ತು. ಬೆಳಗ್ಗೆ 8 ಗಂಟೆಯಿಂದ 11 ಗಂಟೆಯ ತನಕ ಅಗತ್ಯ ವಸ್ತುಗಳ ಅಂಗಡಿಗಳು ತೆರೆದಿದ್ದರೂ ಲಾಕ್ ಡೌನ್ ಘೋಷಣೆಯ ಆರಂಭದ ದಿನಗಳಲ್ಲಿ ಜನಸಂದಣಿ ತೀರಾ ವಿರಳವಾಗಿತ್ತು. ಆದರೆ ಸೋಮವಾರ ಬೆಳಗ್ಗಿನಿಂದ 11 ಗಂಟೆಯ ತನಕ ಪೇಟೆಯಲ್ಲಿ ಜನ ಸಂದಣಿ ಅಧಿಕವಾಗಿತ್ತು.   ದಿನಸಿ, ತರಕಾರಿ ಅಂಗಡಿಗಳ ಮುಂದೆ ಮತ್ತು ಮೆಡಿಕಲ್ ಶಾಪ್ ಎದುರಿನಲ್ಲಿ ಜನ ದಟ್ಟಣೆ

ಸುಳ್ಯ : ಲಾಕ್ ಡೌನ್ ಮಧ್ಯೆಯೂ ಹೆಚ್ಚಿದ ಜನಸಂದಣಿ Read More »

ಕರಾವಳಿ, ಕರ್ನಾಟಕ

ಮುಂದಿನ ಮೂರು ದಿನವೂ ಕರ್ನಾಟಕ ರಾಜ್ಯಾದ್ಯಂತ ಮಳೆ ➤ ಹವಾಮಾನ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.20:  ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರಿಯಲಿದೆ. ಇವತ್ತೂ ಸೇರಿ ಇನ್ನೂ 4 ದಿನ ಮಳೆಯ ನರ್ತನ ಮುಂದುವರಿಯಲಿದೆ. ಜುಲೈ 23ರವರೆಗೂ ಐಎಂಡಿಬಿಯ ಹವಾಮಾನ ಮುನ್ಸೂಚನೆಯ ಪ್ರಕಾರ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಹಲವು ದಿನಗಳಿಂದಲೂ ರಾಜ್ಯಾದ್ಯಂತ ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿದೆ. ಇಲ್ಲಿ ಮುಂದಿನ ಮೂರು ದಿನಗಳೂ ಭರ್ಜರಿ ಮಳೆ ಮುಂದುವರಿಯಲಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಕೋಲಾರ ಜಿಲ್ಲೆಗಳಲ್ಲಿ ಇವತ್ತು ದೊಡ್ಡ ಪ್ರಮಾಣದಲ್ಲಿ

ಮುಂದಿನ ಮೂರು ದಿನವೂ ಕರ್ನಾಟಕ ರಾಜ್ಯಾದ್ಯಂತ ಮಳೆ ➤ ಹವಾಮಾನ ಮುನ್ಸೂಚನೆ Read More »

ಕರಾವಳಿ, ಕರ್ನಾಟಕ

ಇಂದಿನಿಂದ ದೂರದರ್ಶನ ಚಂದನ ವಾಹಿನಿಯಲ್ಲಿ ಇ-ಕ್ಲಾಸ್ ಕಲಿಕಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.20:  ಕೋವಿಡ್ ಸಂದರ್ಭದಲ್ಲಿ ಮಕ್ಕಳ ನಿರಂತರ ಕಲಿಕೆಗೆ ಯಾವುದೇ ಅಡಚಣೆಯುಂಟಾಗದಂತೆ ಕಲಿಕೆಯನ್ನು ಮುಂದುವರೆಸಲು, ಮಕ್ಕಳು ಮನೆಯಲ್ಲಿಯೇ ಇದ್ದರೂ ಕಲಿಕೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಲು ಇಂದಿನಿಂದ ಅಂದರೆ ಸೋಮವಾರದಿಂದ ದೂರದರ್ಶನದ ಚಂದನ ವಾಹಿನಿಯಲ್ಲಿ ಇ ಕ್ಲಾಸ್ ಕಲಿಕಾ ಕಾರ್ಯಕ್ರಮ ಆರಂಭಗೊಳ್ಳಲಿದೆ. ಇಂದಿನಿಂದ 20 ದಿನಗಳ ಅವಧಿಗೆ 8 ರಿಂದ 10ನೇ ತರಗತಿಯ ಮಕ್ಕಳಿಗೆ ಪ್ರಥಮ ಭಾಷೆ ಕನ್ನಡ, ಇಂಗ್ಲೀಷ್, ಸಂಸ್ಕೃತ, ಉರ್ದು, ದ್ವಿತೀಯ ಭಾಷೆ ಇಂಗ್ಲೀಷ್, ತೃತೀಯ ಭಾಷೆ ಹಿಂದಿ, ಕನ್ನಡ ಮಾಧ್ಯಮದಲ್ಲಿ ಗಣಿತ, ವಿಜ್ಞಾನ

ಇಂದಿನಿಂದ ದೂರದರ್ಶನ ಚಂದನ ವಾಹಿನಿಯಲ್ಲಿ ಇ-ಕ್ಲಾಸ್ ಕಲಿಕಾ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ
Scroll to Top