Kadaba News

ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾದ ಸಿಂಧೂ ಬಿ ರೂಪೇಶ್ ರವರರಿಗೆಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ವತಿಯಿಂದ ಅಭಿನಂದನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾದ ಸಿಂಧೂ ಬಿ ರೂಪೇಶ್ ರವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ವತಿಯಿಂದ  ಸಂಘದ ಅಧ್ಯಕ್ಷ ಪಿ.ಕೆ. ಕೃಷ್ಣ ಅವರ ನೇತೃತ್ವದಲ್ಲಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾದ ಸಿಂಧೂ ಬಿ ರೂಪೇಶ್ ರವರರಿಗೆಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ವತಿಯಿಂದ ಅಭಿನಂದನೆ Read More »

ಕರಾವಳಿ

ಶಿಕ್ಷಣದಿಂದ ಜೀವನ ಮೌಲ್ಯಗಳನ್ನು ಕಲಿಯುವುದು ಅಗತ್ಯ ➤ ಪ್ರೊ. ಪಿ.ವಿ.ಕೃಷ್ಣ ಭಟ್

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13.ದಕ್ಷಿಣ ಕನ್ನಡ ಜಿಲ್ಲೆಯು ಶಿಕ್ಷಣ ಕ್ಷೇತ್ರಕ್ಕೆ ನಾಡಿಗೆ ಮತ್ತು ದೇಶಕ್ಕೆ ಬಹುದೊಡ್ಡ ಕೊಡುಗೆ ನೀಡಿದೆ. ಅದರಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಬಹುಮುಖ್ಯ ಪಾತ್ರವಿದೆ ಎಂದು ಒರಿಸ್ಸಾ ಕೇಂದ್ರೀಯ ವಿಶ್ವವಿದ್ಯಾನಿಲಯ ಕುಲಾಧಿಪತಿಗಳಾದ ಪ್ರೊ. ಪಿ.ವಿ. ಕೃಷ್ಣ ಭಟ್ ಶ್ಲಾಘಿಸಿದರು. ಗುರುವಾರ ಮಂಗಳೂರು ವಿಶ್ವವಿದ್ಯಾನಿಲಯದ 40ನೇ ಯ ಸಂಸ್ಥಾಪನಾ ದಿನಾಚರಣೆಯನ್ನು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು ಈ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯು ದೇಶದ ಬ್ಯಾಂಕಿಂಗ್ ಉದ್ಯಮ, ಶಿಕ್ಷಣ ಕ್ಷೇತ್ರ, ಸಾಂಸ್ಕøತಿಕ

ಶಿಕ್ಷಣದಿಂದ ಜೀವನ ಮೌಲ್ಯಗಳನ್ನು ಕಲಿಯುವುದು ಅಗತ್ಯ ➤ ಪ್ರೊ. ಪಿ.ವಿ.ಕೃಷ್ಣ ಭಟ್ Read More »

ಕರಾವಳಿ

ಮಂಗಳೂರು ವಿಶ್ವ ವಿದ್ಯಾನಿಲಯ ➤ ಅತಿಥಿ ಉಪನ್ಯಾಸಕರ ಆಯ್ಕೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13.ಮಂಗಳೂರು ವಿಶ್ವ ವಿದ್ಯಾನಿಲಯ 2019-20ನೇ ಸಾಲಿಗೆ ಎಂ.ಎಡ್.(ರೆಗ್ಯುಲರ್) ಕೋರ್ಸಿಗೆ ಅತಿಥಿ ಉಪನ್ಯಾಸಕರ ಅವಶ್ಯಕತೆ ಇದೆ. ಅಂಗೀಕೃತ ವಿಶ್ವವಿದ್ಯಾನಿಲಯದಿಂದ ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಎಂ.ಎಡ್./ಎಂ.ಎ. ಎಜುಕೇಶನ್ ಪದವಿ ಹೊಂದಿರುವ )ಕನಿಷ್ಠ 55% ಅಂಕಗಳೊಂದಿಗೆ) ಅರ್ಹ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ವರ್ಗ, ಸೇವಾನುಭವ, ದೂರವಾಣಿ ಸಂಖ್ಯೆ ಇತ್ಯಾದಿ ಸ್ವವಿವರವುಳ್ಳ ಅರ್ಜಿ ಮತ್ತು ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ ಹಾಗೂ ಮೂಲ ದಾಖಲೆಗಳೊಂದಿಗೆ ಸೆಪ್ಟೆಂಬರ್ 19 ರಂದು ಬೆಳಿಗ್ಗೆ 11 ಗಂಟೆಗೆ ಕುಚಿಸಚಿವರ ಕಚೇರಿ,

ಮಂಗಳೂರು ವಿಶ್ವ ವಿದ್ಯಾನಿಲಯ ➤ ಅತಿಥಿ ಉಪನ್ಯಾಸಕರ ಆಯ್ಕೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಬೆಂಗರೆ : ಪರಿಸರ ಸಾರ್ವಜನಿಕ ಸಭೆ 14ರಂದು

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13.ಬಂದರು ಮತ್ತು ಮೀನುಗಾರಿಕೆ ಇಲಾಖೆ, ಉಡುಪಿ ವಿಭಾಗ ಇವರು ಸಾಗರಮಾಲ ಯೋಜನೆಯಡಿನಗರದ ಹಳೇ ಬಂದರಿನಲ್ಲಿ ಕರಾವಳಿ ಬರ್ತ್ ನಿರ್ಮಿಸಲು ಉದ್ದೇಶಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಸಪ್ಟೆಂಬರ್ 14 ರಂದು ಬೆಳಿಗ್ಗೆ 11 ಗಂಟೆಗೆ ಸರ್ಕಾರಿ ಪ್ರೌಢಶಾಲೆ ಕಸಬಾ ಬೆಂಗರೆ ವಠಾರದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪರಿಸರ ಸಾರ್ವಜನಿಕ ಆಲಿಕೆ ಸಭೆಯನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ನಡೆಸಲಾಗುತ್ತದೆ ಎಂದು ಎಂದುಮಂಡಳಿಯ ಮಂಗಳೂರು ವಿಭಾಗದ ಪರಿಸರ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಬೆಂಗರೆ : ಪರಿಸರ ಸಾರ್ವಜನಿಕ ಸಭೆ 14ರಂದು Read More »

ಕರಾವಳಿ

ಮುಜರಾಯಿ ಸಚಿವರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13.ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರ ದ.ಕ.ಜಿಲ್ಲಾ ಪ್ರವಾಸ ಇಂತಿವೆ: ಸಪ್ಟೆಂಬರ್ 13ರಂದು ಬೆಳಿಗ್ಗೆ 11.15 ಗಂಟೆಗೆ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಸಭಾಭವನ ಮಂಗಳೂರು ಇಲ್ಲಿ ದಕ್ಷಿಣಕನ್ನಡ ಜಿಲ್ಲಾ ಮಟ್ಟದ ಶ್ರೀ ನಾರಾಯಣ ಗುರು ಜಯಂತೋತ್ಸವಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12.50 ಗಂಟೆಗೆ ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.

ಮುಜರಾಯಿ ಸಚಿವರ ಪ್ರವಾಸ Read More »

ಕರಾವಳಿ

ಅಡಿಕೆ ಫಸಲು ಹರಾಜು

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13. 2019-20ನೇ ಸಾಲಿನಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ತುಂಬೆ ತೋಟಗಾರಿಕೆ ಕ್ಷೇತ್ರದ ಅಡಿಕೆ ಫಸಲನ್ನು ಇ-ಹರಾಜು ಮತ್ತು ಟೆಂಡರ್ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು. ಇ-ಹರಾಜು ಅವಧಿಯು ಸೆಪ್ಟೆಂಬರ್ 9 ರಿಂದ ಆರಂಭಗೊಂಡು ಅಕ್ಟೋಬರ್ 10 ರಂದು ಕೊನೆಗೊಳ್ಳಲಿದೆ. ಆಸಕ್ತರು ತಮ್ಮ ಬಿಡ್ಡನ್ನು ಇ-ಹರಾಜು ಅಥವಾ ಟೆಂಡರ್ ಮೂಲಕ ಸಲ್ಲಿಸಬಹುದಾಗಿದೆ. ಇ-ಹರಾಜಿನಲ್ಲಿ ಭಾಗವಹಿಸಲು ಇಚ್ಚಿಸುವವರು e.procurement.kar.in ರಲ್ಲಿ ಪಡೆಯಬಹುದಾಗಿದೆ. ಟೆಂಡರ್ ಸಂಖ್ಯೆ:KSHDA /2019-20/Auction.2287.ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ,

ಅಡಿಕೆ ಫಸಲು ಹರಾಜು Read More »

ಕರಾವಳಿ

ಸಪೋಟ ಫಸಲು ಹರಾಜು ಪ್ರಕಟಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13.ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತೋಟಗಾರಿಕೆ ಕ್ಷೇತ್ರಗಳಲ್ಲಿನ ಜುಲೈ 1 ರಿಂದ ಡಿಸೆಂಬರ್ 31 ಅವಧಿಯ ಸಪೋಟ ಫಸಲನ್ನು ಟೆಂಡರು ಮೂಲಕ ವಿಲೇ ಮಾಡಲಾಗುವುದು. ಹರಾಜು ವಿವರ ಇಂತಿವೆ : ತುಂಬೆ ತೋಟಗಾರಿಕೆ ಕ್ಷೇತ್ರ, ಬಂಟ್ವಾಳ ಸೆಪ್ಟಂಬರ್ 25 ರಂದು ಮಧ್ಯಾಹ್ನ 12 ಗಂಟೆ, ವಿಟ್ಲ ತೋಟಗಾರಿಕೆ ಕ್ಷೇತ್ರ ಬಂಟ್ವಾಳ, ಸೆಪ್ಟೆಂಬರ್ 25ರಂದು ಸಂಜೆ 4 ಗಂಟೆ, ಮದ್ದಡ್ಕ ತೋಟಗಾರಿಕೆ ಕ್ಷೇತ್ರ ಬೆಳ್ತಂಗಡಿ, ಸೆಪ್ಟೆಂಬರ್ 26 ಮಧ್ಯಾಹ್ನ 12 ಗಂಟೆಗೆ ನಡೆಯಲಿವೆ. ಆಸಕ್ತರು

ಸಪೋಟ ಫಸಲು ಹರಾಜು ಪ್ರಕಟಣೆ Read More »

ಕರಾವಳಿ

ಎನ್.ಎ.ಡಿ.ಸಿ.ಪಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೆ.11ರಂದು ಉತ್ತರ ಪ್ರದೇಶ ರಾಜ್ಯದ ಮಥುರಾದಲ್ಲಿ ರಾಷ್ಟ್ರೀಯ ಪ್ರಾಣಿ ರೋಗ ನಿಯಂತ್ರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿಲಾಯಿತು. ಈ ಉದ್ಘಾಟನಾ ಸಮಾರಂಭದ ನೇರ ಪ್ರಸಾರವನ್ನು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ದಕ್ಷಿಣ ಕನ್ನಡ ಮತ್ತು ಕೃಷಿ ವಿಜ್ಞಾನ ಕೇಂದ್ರ, ಮಂಗಳೂರು ಇವರ ಸಹಯೋಗದಲ್ಲಿ ಕೃಷಿ ವಿಜ್ಞಾನ ಕೇಂದ್ರ, ಮಂಗಳೂರು ಇಲ್ಲಿ ಏರ್ಪಡಿಸಲಾಯಿತು. ಜಿಲ್ಲೆಯ ಪ್ರಗತಿ ಪರ ರೈತರಾದ ಮರಿಯಾ ಡಿಸೋಜ ಇವರು ಹೂವಿನ ಗಿಡಕ್ಕೆ ನೀರೆರೆಯುವ ಮೂಲಕ

ಎನ್.ಎ.ಡಿ.ಸಿ.ಪಿ ಕಾರ್ಯಕ್ರಮ Read More »

ಕರಾವಳಿ

2019-20 ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟದ ಕ್ರೀಡೆಗಳೊಂದಿಗೆ ತ್ರೋಬಾಲ್ ಕ್ರೀಡೆ ಸೇರ್ಪಡೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13.2019-20 ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟದ ಅಥ್ಲೆಟಿಕ್ಸ್, ವಾಲಿಬಾಲ್, ಫುಟ್ಬಾಲ್, ಖೋಖೋ, ಕಬಡ್ಡಿ ಕ್ರೀಡೆಗಳೊಂದಿಗೆ ತ್ರೋಬಾಲ್ ಕ್ರೀಡೆಯನ್ನು ಸರ್ಕಾರದ ನಿರ್ದೇಶನದಂತೆ ಸಂಘಟಿಸಲಾಗಿದೆ. ಎಂದು ಉಪನಿರ್ದೇಶಕರು, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

2019-20 ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟದ ಕ್ರೀಡೆಗಳೊಂದಿಗೆ ತ್ರೋಬಾಲ್ ಕ್ರೀಡೆ ಸೇರ್ಪಡೆ Read More »

ಕರಾವಳಿ

ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು ➤ ವಿದ್ಯಾರ್ಥಿ ಸಂಘದ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13. ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು ಇವರ 2019-20ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಇಂದು ಸಂಜೆ 6 ಗಂಟೆಗೆ ರವೀಂದ್ರ ಕಲಾ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಮಣ್ಯ ಯಡಪಡಿತ್ತಾಯ ವಹಿಸಲಿದ್ದಾರೆ. ದ.ಕ ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು ➤ ವಿದ್ಯಾರ್ಥಿ ಸಂಘದ ಉದ್ಘಾಟನೆ Read More »

ಕರಾವಳಿ
Scroll to Top