ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ➤ ಸ್ವಚ್ಛ ಸರ್ವೇಕ್ಷಣ – ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸಮೀಕ್ಷೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.28.ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಗ್ರಾಮ ನೈರ್ಮಲ್ಯವನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಮಂತ್ರಾಲಯವು “ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2019” ರ ಕಾರ್ಯಕ್ರಮಕ್ಕೆ ಆಗಸ್ಟ್ 14 ರಂದು ಚಾಲನೆ ನೀಡಿದೆ. ಸರ್ಕಾರದಿಂದ ನಿಯೋಜಿತ `ಇಪಿಸೋಸ್ ರಿಸರ್ಚ್ ಪ್ರೈವೇಟ್ ಲಿಮಿಟೆಡ್’ ತಂಡವು ಗ್ರಾಮಗಳಿಗೆ ಭೇಟಿ ನೀಡಿ ನಿಗದಿಗೊಳಿಸಿದ ಮಾನದಂಡಗಳ ಅನ್ವಯ ಪರಿಶೀಲಿಸಿ, ನೈರ್ಮಲ್ಯದ ಬಗ್ಗೆ ಮೌಲ್ಯಮಾಪನ ಮಾಡಿ ಜಿಲ್ಲೆಗಳಿಗೆ ಶ್ರೇಣಿಯನ್ನು ನೀಡಲಿದ್ದಾರೆ. ಉತ್ತಮ ಶ್ರೇಣಿ ಪಡೆದ ರಾಜ್ಯ […]




