ಬಸ್ ಹಾಗೂ ಕಾರು ಪರಸ್ಪರ ಡಿಕ್ಕಿ
(ನ್ಯೂಸ್ ಕಡಬ) newskadaba.com ಕಿನ್ನಿಗೋಳಿ, ಆಗಸ್ಟ್.23.ಇಂದು ಬೆಳಿಗ್ಗೆ ಮೂಡಬಿದ್ರೆಯಿಂದ ಮೂಲ್ಕಿಗೆ ಹೋಗುತ್ತಿದ್ದ ಕಾರು ಹಾಗೂ ಮುಲ್ಕಿಯಿಂದ ಕಿನ್ನಿಗೋಳಿ ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ ನಡುವೆ ಅಪಘಾತ ನಡೆದಿದೆ. ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಎಸ್ ಕೋಡಿ ಕೆರೆಯ ಬಳಿ ಖಾಸಗಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ.ಈ ಗಾಯಾಳುಗಳನ್ನು ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ ಹಾಗೂ ಕಾರು ಪರಸ್ಪರ ಡಿಕ್ಕಿ Read More »
ಕರಾವಳಿ




