Kadaba News

ಅಂಚೆ ಗ್ರಾಹಕ ವೇದಿಕೆ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.12.ಮಂಗಳೂರು ವಿಭಾಗೀಯ ಮಟ್ಟದ ಅಂಚೆ ಗ್ರಾಹಕ ವೇದಿಕೆಯ ಸಭೆಯು ಜೂನ್ 8 ರಂದು ದಕ್ಷಿಣ ಕರ್ನಾಟಕ ವಲಯದ ಪೋಸ್ಟ್ ಮಾಸ್ಟರ್ ಜನರಲ್ ಶಿರ್ತಾಡಿ ರಾಜೇಂದ್ರ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಉದ್ಯಮಿಗಳು ಸೇರಿದಂತೆ ವಿವಿಧ ಕ್ಷೇತ್ರದ ಪ್ರಮುಖರು ಪ್ರತಿನಿಧಿಗಳು ಹಾಗೂ ಹಲವಾರು ಅಂಚೆ ಗ್ರಾಹಕರು ಈ ಸಭೆಯಲ್ಲಿ ಭಾಗವಹಿಸಿದ್ದರು. ಅಂಚೆ ಕಚೇರಿಗಳಲ್ಲಿ ಗುಣಮಟ್ಟದ ಸೇವೆ, ಗ್ರಾಹಕರಿಗೆ ಬೇಕಾಗಿರುವ ವಿವಿಧ ಸೌಲಭ್ಯಗಳು ಹೊಸ ಸೇವೆಗಳ ಸಾಧ್ಯತೆಯು ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಗ್ರಾಹಕರ […]

ಅಂಚೆ ಗ್ರಾಹಕ ವೇದಿಕೆ ಸಭೆ Read More »

ಕರಾವಳಿ

ಅಕ್ರಮ ಮರ ಸಾಗಟ ಮಾಡುತ್ತಿದ್ದ ವಾಹನ ಪತ್ತೆ➤ಸೊತ್ತುಗಳ ವಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.12.ಜೂನ್ 6 ರಂದು ಮಂಗಳೂರು ತಾಲೂಕು ಬಡಗುಳಿಪಾಡಿ ಗ್ರಾಮದ ಕೈಕಂಬ ಎನ್‍ಹೆಚ್-169 ರಸ್ತೆ ಬದಿಯಲ್ಲಿ ಅಕ್ರಮವಾಗಿ 407 ಟೆಂಪೋ ವಾಹನ ನೋಂದಾಣಿ ಸಂಖ್ಯೆ:ಕೆಎ-19ಎಡಿ-3699ರಲ್ಲಿ ರಹದಾರಿ ರಹಿತವಾಗಿ ದಿಮ್ಮಿ ಮತ್ತು ಎಳಗಳನ್ನು ಸಾಗಾಟದ ಮಾಡಿರುವ ಪ್ರಕರಣವನ್ನು ಪತ್ತೆ ಹಚ್ಚಿ ವಾಹನ ಹಾಗೂ ಸಾಗಾಟ ಮಾಡಿದ 12 ದಿಮ್ಮಿಗಳಿಂದ 1.523 ಘ.ಮೀ ಮೋಪುಗಳನ್ನು ಮತ್ತು 10 ಎಳಗಳನ್ನುವಶಪಡಿಸಿಕೊಳ್ಳಲಾಗಿದೆ. ಸರಕಾರ ಪರವಾಗಿ ಅಮಾನತು ಪಡಿಸಿ ವಾಹನ ಚಾಲಕ ಗಣೇಶ್, ಬಿನ್. ಜಾರಪ್ಪ ಪೂಜಾರಿ, ಮಾರೂರು ಗ್ರಾಮ,

ಅಕ್ರಮ ಮರ ಸಾಗಟ ಮಾಡುತ್ತಿದ್ದ ವಾಹನ ಪತ್ತೆ➤ಸೊತ್ತುಗಳ ವಶ Read More »

ಕರಾವಳಿ

ಬೆಂಗಳೂರು ದಕ್ಷಿಣ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ ರೋಹಿಣಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂನ್.11.ಬೆಂಗಳೂರಿನ ಕಚೇರಿಯಲ್ಲಿ ಕೆ.ಅಣ್ಣಾಮಲೈ ಅವರಿಂದ ರೋಹಿಣಿ ಕಟೋಚ್ ಸೆಪಟ್ ಅಧಿಕಾರ ಸ್ವೀಕರಿಸಿದರು. ಅಣ್ಣಾಮಲೈ ಅಧಿಕಾರ ಹಸ್ತಾಂತರಿಸಿ ಶುಭ ಕೋರಿದರು. ರೋಹಿಣಿ ಕಟೋಚ್ ಸೆಪಟ್ ಅವರು ಈ ಹಿಂದೆ ಕೂಡ ಬೆಂಗಳೂರಿನಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಇವರು ಕೋಲಾರದ ಪೊಲೀಸ್​ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.ಅಣ್ಣಾಮಲೈ ಅವರು ರಾಜೀನಾಮೆ ನೀಡಿದ ಹಿನ್ನೆಲೆ ರೋಹಿಣಿ ಕಟೋಚ್ ಸೆಪಟ್​ರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಇವರು ಕೂಡ ದಕ್ಷ ಪೊಲೀಸ್ ಅಧಿಕಾರಿ ಎಂದು ಹೆಸರು ಪಡೆದಿದ್ದಾರೆ. ಅಧಿಕಾರ ಹಸ್ತಾಂತರದ

ಬೆಂಗಳೂರು ದಕ್ಷಿಣ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ ರೋಹಿಣಿ Read More »

ರಾಷ್ಟ್ರೀಯ ನ್ಯೂಸ್

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಎಲ್ಲ ವಿಷಯಗಳಲ್ಲೂ ಸಮಾನ ಅಂಕ ಪಡೆದ ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜೂನ್.11.ವಿಶೇಷ ಪ್ರಕರಣವೊಂದರಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ವಿದ್ಯಾರ್ಥಿಯೋರ್ವ  ಎಲ್ಲ ವಿಷಯಗಳಲ್ಲಿ ಸಮಾನಾಂತರವಾಗಿ ಪಾಸ್‌ ಮಾರ್ಕ್ಸ್‌ ಅಷ್ಟನ್ನೇ ತೆಗೆದಿದ್ದಾನೆ. ಈತ ಮುಂಬೈನ ಮೀರಾ ರಸ್ತೆಯ ನಿವಾಸಿಯಾಗಿದ್ದು, ಮಹಾರಾಷ್ಟ್ರದ ಎಸ್‌ಎಸ್‌ಸಿ ಪರೀಕ್ಷಾ ಮಂಡಳಿಯಿಂದ ನಡೆಸಿದ್ದ 10 ನೇ ತರಗತಿ ಪರೀಕ್ಷೆಯಲ್ಲಿ ಪ್ರತಿ ವಿಷಯಗಳಲ್ಲೂ ಕೇವಲ 35 ಅಂಕಗಳನ್ನಷ್ಟೇ ತೆಗೆದು ಅಚ್ಚರಿಗೆ ಕಾರಣನಾಗಿದ್ದಾನೆ.ನನ್ನ ಮಗನ ಸ್ಕೋರ್‌ ನೋಡಿ ನಾವೇ ಆಶ್ಚರ್ಯಗೊಂಡೆವು. ಆತ ಶೇ. 55ರಷ್ಟನ್ನು ನಿರೀಕ್ಷೆ ಮಾಡಿದ್ದ. ವಿದ್ಯಾರ್ಥಿಗಳು ಹೆಚ್ಚಿನ ಸ್ಕೋರ್ ಪಡೆಯುವ ನಿರೀಕ್ಷೆಯಲ್ಲಿ ಪ್ರತಿ ಪ್ರಶ್ನೆಗೂ

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಎಲ್ಲ ವಿಷಯಗಳಲ್ಲೂ ಸಮಾನ ಅಂಕ ಪಡೆದ ವಿದ್ಯಾರ್ಥಿ Read More »

ರಾಷ್ಟ್ರೀಯ ನ್ಯೂಸ್

ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಮಂಜೋರು ಮಾಡಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.11.ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 2019- 20 ನೇ ಶೈಕ್ಷಣಿಕ ಒಂದನೇ ತರಗತಿಯಿಂದ ಪಿಯುಸಿ ಎರಡನೇ ವರ್ಷದವರೆಗೆ ಹಾಗೂ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿಧ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಹಾಗೂ ಪುಸ್ತಕ ಅನುದಾನವನ್ನು ಮತ್ತು ವಿಶೇಷ ನಿಧಿಯಿಂದ ಡಿಗ್ರಿ, ಡಿಪ್ಲೊಮಾ, ಜೆ ಓ ಸಿ, ಪ್ರೋಪೆಷನ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ

ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಮಂಜೋರು ಮಾಡಲು ಅರ್ಜಿ ಆಹ್ವಾನ Read More »

ಕರಾವಳಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ➤ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.11ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 2019-20 ನೇ ಸಾಲಿನ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಅನುಕೂಲವಾಗುವಂತೆ ಶಾಲೆ ಹಾಗೂ ಪಿ.ಯು.ಸಿ ವಿದ್ಯಾರ್ಥಿಗಳೂ 2018-19 ನೇ ಸಾಲಿನಲ್ಲಿ ವಿತರಣೆಯಾಗಿರುವ ವಿದ್ಯಾರ್ಥಿ ಪಾಸುಗಳನ್ನು ತೋರಿಸಿ ಜೂನ್ 30ರವರೆಗೆ ಪ್ರಯಾಣಿಸಲು ಅವಕಾಶ ನೀಡಲಾಗಿದೆ ವಿದ್ಯಾರ್ಥಿಗಳು 2018-19 ನೇ ಸಾಲಿನ ವಿದ್ಯಾರ್ಥಿ ಪಾಸಿನ ಜೊತೆಗೆ ಪ್ರಸಕ್ತ ಸಾಲಿನ ಭೋದನಾ ಶುಲ್ಕ ರಸೀದಿ ಅಥವಾ ಶಾಲಾ/ ಕಾಲೇಜಿನ ಗುರುತಿನ ಚೇಟಿಯನ್ನು ತೋರಿಸಿ ಪಾಸಿನಲ್ಲಿ ನಮೂದಿಸಿರುವ ಮಾರ್ಗದಲ್ಲಿ ಉಚಿತವಾಗಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ➤ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ Read More »

ಕರಾವಳಿ

ಮಾತೃಶ್ರೀ ಯೋಜನೆ➤ಅಂಗನವಾಡಿ ಕೇಂದ್ರಗಳಲ್ಲಿ ಹೆಸರು ನೋಂದಣಿ ಅಭಿಯಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.11. ಜೂನ್ 12 ರಂದು ಮುಖ್ಯಮಂತ್ರಿಗಳ ಮಾತೃಶ್ರೀ ಯೋಜನೆಗೆ ಫಲಾನುಭವಿಗಳನ್ನು ನೋಂದಾಯಿಸಲು ಜಿಲ್ಲೆಯ ಎಲ್ಲಾ 2104 ಅಂಗನವಾಡಿ ಕೇಂದ್ರಗಳಲ್ಲಿ ನೋಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಆದ್ಯತಾ ಕುಟುಂಬದಲ್ಲಿರುವ ಗರ್ಭಿಣಿಯರು ತಮಗೆ ಹತ್ತಿರವಿರುವ ಅಂಗನವಾಡಿ ಕೇಂದ್ರಕ್ಕೆ ಹೋಗಿ ಮಾತೃಶ್ರೀ ಯೋಜನೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು. ಅರ್ಹ ಗರ್ಭಿಣಿಯರಿಗೆ ಹೆರಿಗೆ ಪೂರ್ವ ರೂ. 3,000/- ಹಾಗೂ ಹೆರಿಗೆ ನಂತರ ರೂ. 3,000/- ಒಟ್ಟು ರೂ. 6,000/- ಗಳನ್ನು ತಮ್ಮ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ

ಮಾತೃಶ್ರೀ ಯೋಜನೆ➤ಅಂಗನವಾಡಿ ಕೇಂದ್ರಗಳಲ್ಲಿ ಹೆಸರು ನೋಂದಣಿ ಅಭಿಯಾನ Read More »

ಕರಾವಳಿ

ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಒಂದು ಸುವರ್ಣಅವಕಾಶ ➤ಉಜಿರೆಯ ರುಡ್ಸೆಟ್ ಸಂಸ್ಥೆಯಲ್ಲಿ ಉಚಿತ ತರಬೇತಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.11.ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಹಾಗೂ ಉದ್ಯೋಗವನ್ನು ಅರಸುತ್ತಿರುವವರಿಗೆ ಆಶಾಕಿರಣವಾಗಿರುವ ಮತ್ತು ಕೇಂದ್ರ ಸರಕಾರದಿಂದ ಸ್ವ ಉದ್ಯೋಗಕ್ಕಾಗಿ ಅನುಕರಣೀಯ ಮಾದರಿ ಎಂದು ಗುರಿತಿಸಲ್ಪಟ್ಟು ದೇಶದ ಪ್ರತಿ ಜಿಲ್ಲೆಯಲ್ಲೂ ಬೇರೆ ಬೇರೆ ಬ್ಯಾಂಕುಗಳಿಂದ ರುಡ್‍ಸೆಟ್ ಮಾದರಿ ಸಂಸ್ಥೆಗಳನ್ನು ಸ್ಥಾಪಿಸಿ ಇಂದು ಅನೇಕ ಯುವ ಜನರಿಗೆ ಸ್ವ ಉದ್ಯೋಗವನ್ನು ಕಲ್ಪಿಸಿರುವ ಉಜಿರೆಯ ರುಡ್‍ಸೆಟ್ ಸಂಸ್ಥೆಯಲ್ಲಿ ಮುಂದಿನ ತಿಂಗಳುಗಳಲ್ಲಿ ತರಬೇತಿಗಳು ನಡೆಯಲಿದೆ. ಈ ತರಬೇತಿಗಳ ವಿವರಗಳು: ಕಂಪ್ಯೂಟರ್ ಡಿ.ಟಿ.ಪಿ 45 ದಿನಗಳು ಜೂನ್ 27ರಿಂದ ಆಗಸ್ಟ್ 10

ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಒಂದು ಸುವರ್ಣಅವಕಾಶ ➤ಉಜಿರೆಯ ರುಡ್ಸೆಟ್ ಸಂಸ್ಥೆಯಲ್ಲಿ ಉಚಿತ ತರಬೇತಿಗಳು Read More »

ಕರಾವಳಿ

ದ.ಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ➤ಸಮಾಜ ಸೇವಾ ಕಾರ್ಯಕರ್ತೆಯ 2 ಹುದ್ದೆಗೆಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.11.ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಒಂದೇ ಸೂರಿನಡಿ ಸಮಗ್ರ ಸೌಲಭ್ಯ ನೀಡುವರೇ ಜಿಲ್ಲಾ ಲೇಡಿಗೋಷನ್ ಆಸ್ಪತ್ರೆಯ ಗೆಳತಿ ವಿಶೇಷ ಚಿಕಿತ್ಸಾ ಘಟಕದಲ್ಲಿ ತೆರವಾಗಿರುವ ಸಮಾಜ ಸೇವಾ ಕಾರ್ಯಕರ್ತೆಯ 2 ಹುದ್ದೆಗೆ ಅರ್ಜಿಆಹ್ವಾನಿಸಲಾಗಿದೆ. ಬಿ.ಎಸ್.ಡಬ್ಲ್ಯೂ/ಬಿ.ಎ (ಸೈಕಾಲಜಿ) ಹಾಗೂ 1 ವರ್ಷದ ಕಂಪ್ಯೂಟರ್ ಅನುಭವವುಳ್ಳ 22 ರಿಂದ 35 ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾಸಿಕ ಗೌರವಧನ ರೂ.10,000/-ಆಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 17 .ಹೆಚ್ಚಿನ ವಿವರಗಳಿಗೆ ಉಪ

ದ.ಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ➤ಸಮಾಜ ಸೇವಾ ಕಾರ್ಯಕರ್ತೆಯ 2 ಹುದ್ದೆಗೆಅರ್ಜಿ ಆಹ್ವಾನ Read More »

ಕರಾವಳಿ

ರೇಷನ್ ಕಾರ್ಡ್ ವಿತರಣೆಗೆ ಸಮಯ ಮಿತಿಯೊಳಗೆ ಕ್ರಮಕೈಗೊಳ್ಳಿ➤ಯು ಟಿ ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.11ಒಂದು ತಿಂಗಳೊಳಗಾಗಿ ಜಿಲ್ಲೆಯಲ್ಲಿ ರೇಷನ್ ಕಾರ್ಡ್ ಕೋರಿ ಬಾಕಿ ಇರುವ ಅರ್ಜಿಗಳನ್ನು ಇತ್ಯರ್ಥಪಡಿಸುವುದರ ಜೊತೆಗೆ ಹೊಸದಾಗಿ ಅರ್ಜಿ ಹಾಕುವವರಿಗೆ 15 ದಿವಸಗಳೊಳಗಾಗಿ ರೇಷನ್ ಕಾರ್ಡ್ ಕೊಡಲು ಅಗತ್ಯ ಕ್ರಮಕೈಗೊಳ್ಳಿ ಎಂದು ನಗರಾಭಿವೃದ್ಧಿ ಸಚಿವರೂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು ಟಿ ಖಾದರ್ ಹೇಳಿದರು. ಅವರಿಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ, ಜಿಲ್ಲೆಯಲ್ಲಿ 5,186 ಅರ್ಜಿಗಳು ಬಾಕಿ ಇದ್ದು, ಇವರಿಗೆ ರೇಷನ್ ಕಾರ್ಡ್

ರೇಷನ್ ಕಾರ್ಡ್ ವಿತರಣೆಗೆ ಸಮಯ ಮಿತಿಯೊಳಗೆ ಕ್ರಮಕೈಗೊಳ್ಳಿ➤ಯು ಟಿ ಖಾದರ್ Read More »

ಕರಾವಳಿ
Scroll to Top