Kadaba

ಕಾಸರಗೋಡು: ಆಯ ತಪ್ಪಿ ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com  ಕಾಸರಗೋಡು, ನ.12: ಮುಳಿಯಾರು ಎಂಬಲ್ಲಿ ಕೃಷಿಕರೋರ್ವರು ತರಕಾರಿ ಕೃಷಿಗೆ ನೀರು ಹಾಯಿಸಲು ತೆರಳಿದ್ದ ಸಂದರ್ಭದಲ್ಲಿ ಆಯ ತಪ್ಪಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.     ಮೃಪಟ್ಟ ವ್ಯಕ್ತಿಯನ್ನು ಮುಳಿಯಾರು ಬೇಪು ಅಂಬಲತಿಂಗಳ್‌ನ ಎಂ.ಕುಞಂಬು ನಾಯರ್(65) ಎಂದು ಗುರುತಿಸಲಾಗಿದೆ. ಪತ್ನಿಯ ಬೊಬ್ಬೆ ಕೇಳಿ ಪರಿಸರವಾಸಿಗಳು ಕುಞಂಬು ನಾಯರ್‌ರನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ತಲಪಿಸುವಷ್ಟರಲ್ಲಿ ಮೃತಪಟ್ಟಿದ್ದರು. ಇನ್ನು ಈ ಘಟನೆ ಕುರಿತು ಆದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.  

ಕಾಸರಗೋಡು: ಆಯ ತಪ್ಪಿ ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರ್ನಾಟಕ

ಸುಳ್ಯ: ಯುವ ನಾಯಕ ಮುದ್ದಸೀರ್ ಕುದ್ರೋಳಿ ನಿಧನಕ್ಕೆ ಸಂತಾಪ

(ನ್ಯೂಸ್ ಕಡಬ) newskadaba.com ಸುಳ್ಯ, ನ.12: ಮಂಗಳೂರಿನ ಅಸುಪಾಸಿನ ಬಡ ಹಾಗೂ ನಿರ್ಗತಿಕ ಜನರಿಗೆ ಆಶಾಕಿರಣ ವಾಗಿ ಬಡವರ ಹಸಿವು ನೀಗಿಸಲು ಸಹಾಯ ಮಾಡಬಲ್ಲ ವ್ಯಕ್ತಿತ್ವ ರಾಜಕೀಯ ಸಮಾಜಿಕ ಧಾರ್ಮಿಕ ರಂಗದಲ್ಲಿ ತನ್ನನ್ನು ತಾನೂ ಸಮಾಜ ಸೇವೆಯಲ್ಲಿ ತೊಡಗಿ ಸಮಾಜಕ್ಕೆ ಮಾದರಿಯಾದ ಯುವ ನಾಯಕ ಮುದ್ದಸೀರ್ ರವರ ನಿಧನಕ್ಕೆ ಅರಂತೋಡು ವಲಯ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ತಾಜುದ್ದೀನ್ ಅರಂತೋಡು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.       ಭಗವಂತನು ಮನೆಯವರಿಗೆ ಕುಟುಂಬದ ಬಂಧು ಮಿತ್ರ ರಿಗೆ ನೋವುವನ್ನು ಸಹಿಸುವ

ಸುಳ್ಯ: ಯುವ ನಾಯಕ ಮುದ್ದಸೀರ್ ಕುದ್ರೋಳಿ ನಿಧನಕ್ಕೆ ಸಂತಾಪ Read More »

ಕರಾವಳಿ

ಸುಳ್ಯ: ಕೋವಿಡ್ ಶಂಕಿತ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com  ಸುಳ್ಯ, ನ.12: ಸುಳ್ಯ ಖಾಸಗಿ ಆಸ್ಪತ್ರೆಯಲ್ಲಿ ಇಂದು ಉಬರಡ್ಕ ಮಿತ್ತೂರು ಗ್ರಾಮದ ಸೂಂತೋಡು ನಿವಾಸಿ ಯೋಗೀಶ್ ಗೌಡ(35) ಎಂಬವರು ಅಸೌಖ್ಯದಿಂದ ನಿಧನರಾಗಿದ್ದರು.     ಅಸೌಖ್ಯದ ಕಾರಣಕ್ಕಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆಯ ವೇಳೆ ಅವರಿಗೆ ಕೋವಿಡ್ ಪಾಸಿಟಿವ್ ಬಂದಿರುವುದು ಕಂಡು ಬಂದಿದೆ. ಇದರಿಂದಾಗಿ ಯೋಗೀಶ್ ಗೌಡ ರವರು ಕೋವಿಡ್ ಸೋಂಕಿಗೆ ಮೃತಪಟ್ಟಿರುವುದಾಗಿ ಹೇಳಲಾಗುತ್ತಿದೆ.    

ಸುಳ್ಯ: ಕೋವಿಡ್ ಶಂಕಿತ ವ್ಯಕ್ತಿ ಮೃತ್ಯು Read More »

ಕರಾವಳಿ

ಮೈಸೂರು: ಪೊಲೀಸ್ ಜೀಪ್ ಮರಕ್ಕೆ ಢಿಕ್ಕಿ ➤ ಎ.ಎಸ್‍ಐ ಹಾಗೂ ಪೊಲೀಸ್ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು, ನ.12: ಕೆ.ಆರ್ ನಗರ ತಾಲೂಕಿನ ಸಿದ್ದಮಕೊಪ್ಪಲು ಗೇಟ್ ಬಳಿ ಪೊಲೀಸ್ ಜೀಪ್ ವೊಂದು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದಪರಿಣಾಮ, ಕರ್ತವ್ಯ ನಿರತ ಪೊಲೀಸರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.   ಮೃತಪಟ್ಟಿರುವ ವ್ಯಕ್ತಿಯನ್ನು ಎಎಸ್‍ಐ ಮೂರ್ತಿ(45) ಹಾಗೂ ಮುಖ್ಯಪೇದೆ ಶಾಂತಕುಮಾರ್(40) ಎಂದು ಗುರುತಿಸಲಾಗಿದೆ. ಮಧ್ಯರಾತ್ರಿ ಪಾಳಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರು ಸಾಲಿಗ್ರಾಮದಿಂದ ಕೆ.ಆರ್. ನಗರದ ಕಡೆ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಎಸ್ಪಿ ರಿಷ್ಯಂತ್ ಕುಮಾರ್ ಸೇರಿದಂತೆ

ಮೈಸೂರು: ಪೊಲೀಸ್ ಜೀಪ್ ಮರಕ್ಕೆ ಢಿಕ್ಕಿ ➤ ಎ.ಎಸ್‍ಐ ಹಾಗೂ ಪೊಲೀಸ್ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ಕ್ಯಾಂಪಸ್ ಫ್ರಂಟ್ ಕುಂದಾಪುರ ವತಿಯಿಂದ ರಾಷ್ಟ್ರೀಯ ಶಿಕ್ಷಣ ದಿನಾಚರಣೆ ➤ ಎನ್ ಇ ಪಿ 2020 ಕುರಿತು ಶಿಕ್ಷಕರೊಂದಿಗೆ ಸಂವಾದ

(ನ್ಯೂಸ್ ಕಡಬ) newskadaba.com ಕುಂದಾಪುರ ನ. 12: ಭಾರತದ ಪ್ರಥಮ ಶಿಕ್ಷಣ ಮಂತ್ರಿ ಮೌಲಾನ ಅಬುಲ್ ಕಲಾಂ ಆಝಾದ್ ಸ್ಮರಣಾರ್ಥ ಆಚರಿಸುವ ಶಿಕ್ಷಣ ದಿನಾಚರಣೆಯ ಅಂಗವಾಗಿ ಕ್ಯಾಂಪಸ್ ಫ್ರಂಟ್ ಕುಂದಪುರ ಏರಿಯಾ ವತಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿಯ ವಿಷಯದಲ್ಲಿ ಶಿಕ್ಷಕರೊಂದಿಗೆ ಸಂವಾದ ಕಾರ್ಯಕ್ರಮವು ಕುಂದಾಪುರ ಕ್ಯಾಂಪಸ್ ಫ್ರಂಟ್ ಅಧ್ಯಕ್ಷ ಝಿಶಾನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.     ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕ್ಯಾಂಪಸ್ ಫ್ರಂಟ್ ರಾಜ್ಯಾಧ್ಯಕ್ಷರಾದ ಫಯಾಝ್ ದೊಡ್ಡಮನೆ ವಿಷಯ ಮಂಡನೆ ಮಾಡಿದರು. ವಿದ್ಯಾ ವರ್ಧಕ ಇಂಜಿನಿಯರಿಂಗ್

ಕ್ಯಾಂಪಸ್ ಫ್ರಂಟ್ ಕುಂದಾಪುರ ವತಿಯಿಂದ ರಾಷ್ಟ್ರೀಯ ಶಿಕ್ಷಣ ದಿನಾಚರಣೆ ➤ ಎನ್ ಇ ಪಿ 2020 ಕುರಿತು ಶಿಕ್ಷಕರೊಂದಿಗೆ ಸಂವಾದ Read More »

ಕರಾವಳಿ, ಕರ್ನಾಟಕ

ಮಾಣಿ: ವಿವಾಹಿತ ಮಹಿಳೆ ನಾಪತ್ತೆ

(ನ್ಯೂಸ್ ಕಡಬ) newskadaba.com ಮಾಣಿ ನ. 12: ಮಾಣಿ ಗ್ರಾಮದ ವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೂರ್ಣಿಮ(30)ರವರು ನವೆಂಬರ್ 9 ರಂದು ಸಂಜೆ ವೇಳೆಗೆ ಮನೆಯಲ್ಲಿ ಯಾರಲ್ಲಿಯೂ ಹೇಳದೇ ಮನೆಯಿಂದ ಹೋದಾಕೆ ವಾಪಾಸ್ಸು ಮನೆಗೆ ಮರಳದೆ ನಾಪತ್ತೆಯಾಗಿದ್ದಾರೆ.     ಈ ಬಗ್ಗೆ ಪತಿ ಮಾಹಿತಿ ಪಡೆದು ಮಾಣಿ ಪೇಟೆಯಲ್ಲಿ ವಿಚಾರಿಸಿದಾಗ ಆಕೆ ಬಸ್ಸಿನಲ್ಲಿ ಹಾಸನ ಕಡೆ ಹೋಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದಕ್ಕೆ ಸಂಬಂಧ ಪಟ್ಟಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ

ಮಾಣಿ: ವಿವಾಹಿತ ಮಹಿಳೆ ನಾಪತ್ತೆ Read More »

ಕರಾವಳಿ

ಕಡಬ: ನೂತನ ತಾ.ಪಂ. ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸಲು ಉಸ್ತುವಾರಿ ಸಚಿವರಿಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ನ.12: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಡಬ ತಾಲೂಕು ಪಂಚಾಯತ್ ಗೆ ಅನುದಾನ ಬಿಡುಗಡೆಗೊಳಿಸುವಂತೆ ತಾ.ಪಂ. ಅಧ್ಯಕ್ಷರ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ನ.10 ರಂದು ಕಡಬ ತಾ.ಪಂ. ಅಧ್ಯಕ್ಷರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ.     ಹೊಸದಾಗಿ ರಚನೆಗೊಂಡಿರುವ ಕಡಬ ತಾಲೂಕು ಪಂಚಾಯತ್ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಅನುದಾನದ ಕೊರತೆ ಇದ್ದು, ಕೂಡಲೇ 2 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಬೇಕೆಂದು ತಾ.ಪಂ. ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ ಅವರು ನ.10 ರಂದು ಮಂಗಳೂರಿಗೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ

ಕಡಬ: ನೂತನ ತಾ.ಪಂ. ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸಲು ಉಸ್ತುವಾರಿ ಸಚಿವರಿಗೆ ಮನವಿ Read More »

ಕರಾವಳಿ

ಉಳ್ಳಾಲ :ಅಕ್ರಮ ಜಾನುವಾರು ಸಾಗಾಟ ➤ ವಾಹನ ಚಾಲಕ ಖಾಕಿ ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ ನ. 12: ಉಳ್ಳಾಲದಲ್ಲಿ ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ವಶಕ್ಕೆ ಪಡೆದುಕೊಂಡು ಜಾನುವಾರುಗಳನ್ನು ಪೊಲೀಸರು ರಕ್ಷಿಸಿದ್ದಾರೆ. ಮಂಗಳೂರಿನಿಂದ ಕೇರಳದ ಕಡೆಗೆ ಈಚರ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಐದು ಹೋರಿ ಹಾಗೂ ಒಂದು ಹಸುವನ್ನು ವಶಕ್ಕೆ ಪಡೆದಿದ್ದಾರೆ. ದಾವಣಗೆರೆ ನೋಂದವಣಿಯ ವಾಹನವಾಗಿದ್ದು ಚಾಲಕನು ವಾಹನ ಮತ್ತು ಜಾನುವಾರುಗಳನ್ನು ಹುಬ್ಬಳ್ಳಿಯ ಕೋರ್ಟಿಂದ ಬಿಡುಗಡೆಗೊಳಿಸಿರುವುದಾಗಿ ದಾಖಲೆ ತೋರಿದ್ದಾನೆ. ಉಳ್ಳಾಲ ಪೊಲೀಸರು ವಾಹನ ಮತ್ತು ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.    

ಉಳ್ಳಾಲ :ಅಕ್ರಮ ಜಾನುವಾರು ಸಾಗಾಟ ➤ ವಾಹನ ಚಾಲಕ ಖಾಕಿ ವಶಕ್ಕೆ Read More »

ಕರಾವಳಿ

ಬಂಟ್ವಾಳ: ಗಾಂಜಾ ಮಾರಾಟಕ್ಕೆ ಯತ್ನ ➤ ನೇಪಾಳದ ಯುವಕ ಸೇರಿ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 11: ಬಂಟ್ವಾಳದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸಿದ ನೇಪಾಳ ಮೂಲದ ಯುವಕ ಸೇರಿ ಇಬ್ಬರನ್ನು ಇಂದು  ಪೋಲಿಸರು ಬಂಧಿದ್ದಾರೆ.       ಮಂಗಳೂರು ನಿವಾಸಿ ಟಿ.ಪಿ ಫಾರೂಕ್‌ (50), ಹಾಗೂ ನೇಪಾಳ ನಿವಾಸಿ ಸಾಗರ್‌ ಸಿಂಗ್‌ (22), ಬಂಧಿತ ಆರೋಪಿಗಳು. ಬಂಧಿತರಿಂದ 10,32,900 ರೂ. ಮೌಲ್ಯದ ಒಟ್ಟು 1.480 ಕಿ.ಗ್ರಾಂ ಗಾಂಜಾವನ್ನು ಮತ್ತು ಅದನ್ನು ಸಾಗಾಟ ಮಾಡಲು ಉಪಯೋಗಿಸಿದ ಮಾರುತಿ ಬ್ರೀಝಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ.ಇಬ್ಬರು ವ್ಯಕ್ತಿಗಳು ಬಿ.ಸಿ ರೋಡ್‌ನಿಂದ ಮಾಣಿ ಮಾರ್ಗದಲ್ಲಿ

ಬಂಟ್ವಾಳ: ಗಾಂಜಾ ಮಾರಾಟಕ್ಕೆ ಯತ್ನ ➤ ನೇಪಾಳದ ಯುವಕ ಸೇರಿ ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ನ. 13 ರಂದು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಉಚಿತ ವೈದ್ಯಕೀಯ ತಪಾಸಣ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ ನ. 11: ಸಮುದಾಯ ಆರೋಗ್ಯ ಕೇಂದ್ರ ಕಡಬ, ದ.ಕ.ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಕಡಬ ಹಾಗೂ ಪಟ್ಟಣ ಪಂಚಾಯತ್ ಕಡಬ ಇದರ ಸಂಯುಕ್ತ ಆಶ್ರಯದಲ್ಲಿ ಆಸಾಂಕ್ರಾಮಿಕ ರೋಗಗಳು ಮತ್ತು ಕೋವಿಡ್-19 ಉಚಿತ ತಪಾಸಣ ಶಿಬಿರವು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನ. 13 ರಂದು ಜರಗಲಿದೆ.   ಶಿಬಿರದಲ್ಲಿ ಕೋವಿಡ್-19 ಪರೀಕ್ಷೆ ಮಾತ್ರವಲ್ಲದೇ ರಕ್ತದೊತ್ತಡ ಪರೀಕ್ಷೆ  ಸಕ್ಕರೆ ಕಾಯಿಲೆ ಪರೀಕ್ಷೆ ಹಾಗೂ ರಕ್ತ ವರ್ಗೀಕರಣವನ್ನು ಉಚಿತವಾಗಿ ನಡೆಸಲಾಗುವುದು ಎಂದು ಕಡಬ ಸಮುದಾಯ ಆರೋಗ್ಯ

ನ. 13 ರಂದು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಉಚಿತ ವೈದ್ಯಕೀಯ ತಪಾಸಣ ಶಿಬಿರ Read More »

ಕರಾವಳಿ
Scroll to Top