Kadaba

ಕಡಬ: ಬೈಕ್ ಹಾಗೂ ಬಸ್ ನಡುವೆ ಅಪಘಾತ- ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಕಡಬ, ಫೆ. 19. ಬೈಕ್ ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ಸೋಮವಾರದಂದು ನಡೆದಿದೆ. ಮೃತ ಬೈಕ್ ಸವಾರನನ್ನು ಕೊಂಬಾರು ಮಣಿಭಾಂಡ ತೇರೆಬೀದಿ ನಿವಾಸಿ ನೆಟ್ಟಣದಲ್ಲಿ ಮೆಕ್ಯಾನಿಕ್ ಆಗಿದ್ದ ವಾಸುದೇವ ಗೌಡ ಎಂದು ಗುರುತಿಸಲಾಗಿದೆ. ಕೆಎಸ್ಸಾರ್ಟಿಸಿ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಎದುರುನಿಂದ ಬಂದ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ವಾಸುದೇವರನ್ನು […]

ಕಡಬ: ಬೈಕ್ ಹಾಗೂ ಬಸ್ ನಡುವೆ ಅಪಘಾತ- ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಹೊಯಿಗೆಕೆರೆಯಲ್ಲಿ ಮೊಸಳೆ ಪತ್ತೆ..!

(ನ್ಯೂಸ್ ಕಡಬ) newskadaba.com ಕಡಬ, ಫೆ. 13. ಇಲ್ಲಿನ ಸಮೀಪದ ಅಡ್ಡಗದ್ದೆ ಎಂಬಲ್ಲಿನ ಹೊಯಿಗೆಕೆರೆಯಲ್ಲಿ ಮೊಸಳೆ ಇರುವುದು ಕಂಡುಬಂದಿದೆ. ಫೆ. 12ರಂದು ಸ್ಥಳೀಯ ಯುವತಿಯೋರ್ವಳು ಕೆರೆಯ ಬದಿಯಿಂದ ನಡೆದುಕೊಂಡು ಹೋಗುತ್ತಿದ್ದ ವೇಳೆ ಮೊಸಳೆ ಕಂಡುಬಂದಿದೆ ಎನ್ನಲಾಗಿದೆ. ಬೇಸಿಗೆಯಲ್ಲಿ ಕೆರೆಯಲ್ಲಿ ನೀರು ಕಡಿಮೆಯಾಗುತ್ತಿರುವ ಸಮಯದಲ್ಲಿ ಮೊಸಳೆಗಳು ಕಾಣಸಿಗುತ್ತಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಕಡಬ: ಹೊಯಿಗೆಕೆರೆಯಲ್ಲಿ ಮೊಸಳೆ ಪತ್ತೆ..! Read More »

ಕರಾವಳಿ

ಮಲಂಕರ ಕ್ಯಾಥೊಲಿಕ್ ಅಸೋಸಿಯೇಷನ್ ವತಿಯಿಂದ ಎರಡನೇ ವರ್ಷದ ಮನೆ ನಿರ್ಮಾಣ ಕಾರ್ಯಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಫೆ. 12. ಮಲಂಕರ ಕ್ಯಾಥೊಲಿಕ್ ಅಸೋಸಿಯೇಷನ್ ಪುತ್ತೂರು ಧರ್ಮಪ್ರಾಂತ್ಯದ ನೇತೃತ್ವದಲ್ಲಿ ನಡೆಯುತ್ತಿರುವ ವಾಸಯೋಗ್ಯವಲ್ಲದ ಮನೆಗಳ ಪುನರ್ ನಿರ್ಮಾಣ ಮತ್ತು ಹಳೇ ಮನೆಗಳ ದುರಸ್ತಿ ಕಾಮಗಾರಿ ಯೋಜನೆಯ ಎರಡನೇ ವರ್ಷದ ಕಾಮಗಾರಿಯ ಶಂಕುಸ್ಥಾಪನೆಯನ್ನು ಪುತ್ತೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ವಂದನೀಯ ರೆ.ಡಾ.ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರು ನೆರವೇರಿಸಿದರು. ಮಲಂಕರ ಕ್ಯಾಥೊಲಿಕ್ ಚರ್ಚ್ ಪುತ್ತೂರು ಧರ್ಮಪ್ರಾಂತ್ಯದ ಮಲಂಕರ ಕ್ಯಾಥೊಲಿಕ್ ಅಸೋಸಿಯೇಷನ್ (ಎಂಸಿಎ) ನೇತೃತ್ವದಲ್ಲಿ ಎಂಸಿಎ ದಕ್ಷಿಣ ಕನ್ನಡ, ಬೆಂಗಳೂರು ಮತ್ತು ಶಿವಮೊಗ್ಗ ವಲಯಗಳ ಸಹಭಾಗಿತ್ವ

ಮಲಂಕರ ಕ್ಯಾಥೊಲಿಕ್ ಅಸೋಸಿಯೇಷನ್ ವತಿಯಿಂದ ಎರಡನೇ ವರ್ಷದ ಮನೆ ನಿರ್ಮಾಣ ಕಾರ್ಯಕ್ಕೆ ಚಾಲನೆ Read More »

ಕರಾವಳಿ, ಕರ್ನಾಟಕ

ಟಿವಿ ಕಾರ್ಯಕ್ರಮ ನೀಡುತ್ತಿದ್ದ ವೇಳೆ ಕುಸಿದು ಬಿದ್ದು ಕೃಷಿ ತಜ್ಞ ಮೃತ್ಯು

(ನ್ಯೂಸ್ ಕಡಬ) newskadaba.com ಕೇರಳ, ಜ 13: ದೂರದರ್ಶನದಲ್ಲಿ ಲೈವ್ ಟೆಲಿಕಾಸ್ಟ್ ಮೂಲಕ  ಕೃಷಿಯ ಬಗ್ಗೆ ಮಾಹಿತಿ ನೀಡುತ್ತಿದ್ದ ಸಂದರ್ಭ ಕೃಷಿ ತಜ್ಞರು ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ಕೃಷಿ ತಜ್ಞರನ್ನು ಕೇರಳ ಕೃಷಿ ವಿಶ್ವವಿದ್ಯಾಲಯದಲ್ಲಿ ಯೋಜನಾ ನಿರ್ದೇಶಕರಾಗಿದ್ದ ಡಾ. ಅನಿ ದಾಸ್ (59) ಎಂದು ಗುರುತಿಸಲಾಗಿದೆ. ಇವರು ಕೃಷಿಗೆ ಸಂಬಂಧಿಸಿದ ಮಾಹಿತಿ ನೀಡಲು ದೂರದರ್ಶನದಲ್ಲಿ ನಡೆಯುತ್ತಿದ್ದ ಚರ್ಚಾ ಕಾರ್ಯಕ್ರಮಗಳಲ್ಲಿ ಆಗಾಗ ಭಾಗಿಯಾಗುತ್ತಿದ್ದು ಶುಕ್ರವಾರ ಕೂಡ ಎಂದಿನಂತೆ ನಡೆದ ಕೃಷಿ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಹೃದಯ

ಟಿವಿ ಕಾರ್ಯಕ್ರಮ ನೀಡುತ್ತಿದ್ದ ವೇಳೆ ಕುಸಿದು ಬಿದ್ದು ಕೃಷಿ ತಜ್ಞ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪತ್ನಿಗೆ ಕಿರುಕುಳ, ಪತಿ ವಿರುದ್ದ ಪರ್ರಕಣ ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 13. ಪತ್ನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದಲ್ಲದೆ, ಆಕೆಗೆ ಹಲ್ಲೆ ನಡೆಸಿ 33 ಪವನ್‌ ಚಿನ್ನ ದೋಚಿದ ಪ್ರಕರಣವು ಕಳೆದ ಡಿ. 30ರಂದು ನಡೆದಿದ್ದು, ಪ್ರಸ್ತುತ ಪತ್ನಿ ನೀಡಿರುವ ದೂರಿನಂತೆ  ಪತಿ ಹಾಗೂ 6 ಮಂದಿ ಆತನ ಸಂಬಂಧಿಕರ ವಿರುದ್ಧ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಪುದು ಗ್ರಾಮ ನಿವಾಸಿ ಪೊಲೀಸರಿಗೆ ದೂರು ನೀಡಿದ್ದು, ಆಕೆಯ ಪತಿ ಉಮ್ಮರ್‌ ಫಾರೂಕ್‌, ಆತನ ಸಹೋದರರಾದ ಮುಸ್ತಾಫಾ, ರಿಯಾಜ್‌,

ಪತ್ನಿಗೆ ಕಿರುಕುಳ, ಪತಿ ವಿರುದ್ದ ಪರ್ರಕಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com. 12. ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಕೇರಳದ ಕೊಲ್ಲಂನಲ್ಲಿ ನಡೆದಿದೆ. ಆತ್ಮಹತ್ಯೆ ಮಡಿಕೊಂಡವರನ್ನು ಕೊಲ್ಲಂ ಪಟ್ಟಣಂ ಚೆಂಬಕಶ್ಸೆರಿಯ ಜವಾಹರನಗರದಲ್ಲಿನ ನಿವಾಸಿ ಜೋಸ್ ಪ್ರಮೋದ್ (41) ಎಂದು ಗುರುತಿಸಲಾಗಿದೆ. ದೇವನಾರಾಯಣನ್ (9) ಮತ್ತು ಪುತ್ರಿ ದೇವಾನಂದ (4)  ಮೃತಪಟ್ಟ ಮಕ್ಕಳು. ಪ್ರಾಥಮಿಕ ಮಾಹಿತಿ ಪ್ರಕಾರ ಪ್ರಮೋದ್ ತನ್ನ ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಕೌಟುಂಬಿಕ ಕಲಹವೇ ಕಾರಣ ಎನ್ನಲಾಗಿದೆ. ಘಟನೆ ವೇಳೆ ಮನೆಯಲ್ಲಿ ಪ್ರಮೋದ್ ಮತ್ತು ಅವರ ಮಕ್ಕಳು ಮಾತ್ರ

ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಹಿಳೆಯ ಬ್ಯಾಗ್ ನಿಂದ ನಗದು ಕಳವು-ದೂರು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 12. ಮಹಿಳೆಯೋರ್ವರ ಬ್ಯಾಗ್ ನಿಂದ ನಗದು ಕಳವು ಮಾಡಿರುವ  ಘಟನೆ ಬಿಸಿರೋಡು ಬಸ್ ನಿಲ್ದಣದಲ್ಲಿ  ನಡೆದಿದೆ.   ಪ್ರೇಮ ಎಂಬವರು  ಬೊಳಿಯಾರಿನಿಂದ ಧರ್ಮಸ್ಥಳ ಕಡೆಗೆ ಹೊರಟು, ಬಿಸಿರೋಡಿಗೆ ಬಂದಿಳಿದು ಬಳಿಕ ಮಗುವನ್ನು ಕೈಯಲ್ಲಿ ಹಿಡಿದುಕೊಂಡು ಧರ್ಮಸ್ಥಳ ಬಸ್ ಗೆ ಹತ್ತುವ ವೇಳೆ ಬ್ಯಾಗ್ ನಿಂದ ಹಣವನ್ನು ಕಳವು ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಈ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.      

ಮಹಿಳೆಯ ಬ್ಯಾಗ್ ನಿಂದ ನಗದು ಕಳವು-ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಗೆ ಬೆಂಕಿ ಹಚ್ಚಿದ ಪ್ರಕರಣ – ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 11.  ದ್ವಿಚಕ್ರ ವಾಹನವೊಂದಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಓರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ಉಪ್ಪಿನಂಗಡಿ ಗ್ರಾಮದ ನಿನ್ನಿಕಲ್ಲು ಪಾದಾಳದ ಸಂದೀಪ್ ಎಂದು ಗುರುತಿಸಲಾಗಿದೆ. ಈತ ಜ.6ರಂದು ರಾತ್ರಿ ಬರಿಮಾರು ಗ್ರಾಮದ ಲಿಖಿತ್ ಕುಮಾರ್ ಎಂಬವರ ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ್ದನು. ಅಂದು ರಾತ್ರಿ ಊಟ ಮಾಡಿ ಮನೆಯವರೆಲ್ಲಾ 10:30ರ ಸುಮಾರಿಗೆ ಮಲಗಿದ್ದರು. ಲಿಖಿತ್ ರವರ ಭಾವ ಕೀರ್ತನ್ ಎಂಬವರು ರಾತ್ರಿ ಎದ್ದು ಹೊರ ಬಂದಾಗ

ಬೈಕ್ ಗೆ ಬೆಂಕಿ ಹಚ್ಚಿದ ಪ್ರಕರಣ – ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ನಾಳೆ (ಡಿ. 31) ಎಸ್ಸೆಸ್ಸೆಫ್ ಕಡಬ ಡಿವಿಷನ್ ಮಟ್ಟದ ‘ಸಾಹಿತ್ಯೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಡಿ. 30. ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್(ರಿ)ಕಡಬ ಡಿವಿಷನ್ ಮಟ್ಟದ ಸಾಹಿತ್ಯೋತ್ಸವ ನಾಳೆ ಡಿಸೆಂಬರ್ 31 ಆದಿತ್ಯವಾರದಂದು 8 ಗಂಟೆಯಿಂದ ಕಲ್ಲಾಜೆ ರಹ್ಮಾನಿಯ ಜುಮ್ಮಾ ಮಸೀದಿ ವಠಾರದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಡಿವಿಷನ್ ವ್ಯಾಪ್ತಿಯ ಸವಣೂರು, ನೆಲ್ಯಾಡಿ ನಿಂತಿಕಲ್ಲು ಹಾಗೂ ಕಡಬ ಸೆಕ್ಟರ್ ಗಳ 30 ಯೂನಿಟ್ ಗಳಿಂದ ಆಯ್ಕೆಯಾದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದು 5 ವಿಭಾಗದಲ್ಲಿ ಆಕರ್ಷಕ 4 ವೇದಿಕೆಗಳಲ್ಲಿ ಸ್ಪರ್ಧಾ ಕಾರ್ಯಕ್ರಮಗಳು ನಡೆಯಲಿವೆ. ಪ್ರಸ್ತುತ ಕಾರ್ಯಕ್ರಮದಲ್ಲಿ

ಕಡಬ: ನಾಳೆ (ಡಿ. 31) ಎಸ್ಸೆಸ್ಸೆಫ್ ಕಡಬ ಡಿವಿಷನ್ ಮಟ್ಟದ ‘ಸಾಹಿತ್ಯೋತ್ಸವ Read More »

ಕರಾವಳಿ

ಆಲಂಕಾರು: ಎಂಡೋಸಲ್ಫಾನ್ ಸಂತ್ರಸ್ತರ ಉಚಿತ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ, ಡಿ. 20. ದ.ಕ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಪುತ್ತೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಯಿಲ ಹಾಗೂ ಆಲಂಕಾರು ಗ್ರಾಮ ಪಂಚಾಯತ್‌ನ ಸಹಯೋಗದೊಂದಿಗೆ ಎಂಡೋ ಸಲ್ಫಾನ್ ಸಂತ್ರಸ್ಥರ ಮತ್ತು ವಿಕಲಚೇತನರ ಉಚಿತ ಆರೋಗ್ಯ ತಪಾಸಣಾ ಶಿಬಿರವು ಮಂಗಳವಾರದಂದು ಆಲಂಕಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆಯ ತಜ್ಞ ವೈದ್ಯರು ಆರೋಗ್ಯ ತಪಾಸಣೆ ಮಾಡಿ ಸೂಕ್ತ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿದರು. ಆಲಂಕಾರು, ಪೆರಾಬೆ

ಆಲಂಕಾರು: ಎಂಡೋಸಲ್ಫಾನ್ ಸಂತ್ರಸ್ತರ ಉಚಿತ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ, ಕರ್ನಾಟಕ
Scroll to Top