ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇರಿಸಿದ್ದ ಪ್ರಕರಣ ➤ ಬಾಂಬರ್ ಆದಿತ್ಯ ರಾವ್ ಗೆ ಇಂದು ಮಂಪರು ಪರೀಕ್ಷೆ
(ನ್ಯೂಸ್ ಕಡಬ) newskadaba.com ಮಂಗಳೂರು. ಸೆ.03: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಇರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಆದಿತ್ಯ ರಾವ್ ಮಂಪರು ಪರೀಕ್ಷೆ ಇಂದು ನಡೆಯಲಿದೆ. ಬೆಂಗಳೂರಿನಲ್ಲಿ ಆದಿತ್ಯ ರಾವ್ ಮಂಪರು ಪರೀಕ್ಷೆ ನಡೆಯಲಿರುವುದರಿಂದ ಬುಧವಾರ ಆತನನ್ನು ಮಂಗಳೂರಿನಿಂದ ಕರೆದುಕೊಂಡು ಹೋಗಲಾಗಿದೆ. ಬೆಂಗಳೂರಿನ ಮಡಿವಾಳದ ಫೋರೆನ್ಸಿಕ್ ಸೈನ್ಸ್ ಪ್ರಯೋಗಾಲಯದಲ್ಲಿ ಆತನ ಮಂಪರು ಪರೀಕ್ಷೆ ನಡೆಯಲಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿ ಈತ ಆತಂಕ ಸೃಷ್ಟಿಸಿದ್ದ. ಬಳಿಕ ಪತ್ತೆಯಾದ ಬಾಂಬ್ಅನ್ನು ಬಾಂಬ್ ನಿಷ್ಕ್ರಿಯ ದಳ ಖಾಲಿ […]










