Kadaba

ನೆಲ್ಯಾಡಿ: ಟಾಟಾ ಏಸ್ ಹಾಗೂ ಸಿಲಿಂಡರ್ ಸಾಗಾಟದ ಲಾರಿ ನಡುವೆ ಅಪಘಾತ ➤ ಓರ್ವ ಗಂಭೀರ.!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ. 11. ಅಂಚೆ ಇಲಾಖೆಯ ಪಾರ್ಸೆಲ್ ಸಾಗಾಟದ ಟಾಟಾ ಏಸ್ ಹಾಗೂ ಸಿಲಿಂಡರ್ ಸಾಗಾಟದ ಲಾರಿ ನಡುಬೆ ಢಿಕ್ಕಿ ಸಂಭವಿಸಿದ ಪರಿಣಾಮ ಟಾಟಾ ಏಸ್ ಚಾಲಕ ಗಂಭೀರ ಗಾಯಗಿಂಡ ಘಟನೆ ಮಂಗಳೂರು- ಬೆಂಗಳೂರು ರಾ.ಹೆ ಗೋಳಿತೊಟ್ಟು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಪುತ್ತೂರು ನೆಹರೂನಗರ ನಿವಾಸಿ ರವಿ ಎಂದು ಗುರುತಿಸಲಾಗಿದೆ. ಇವರು ಸುಬ್ರಹ್ಮಣ್ಯದಿಂದ ನೆಟ್ಟಣ, ಕಡಬ, ಅಲಂಕಾರು, ನೆಲ್ಯಾಡಿಯಿಂದ ಅಂಚೆ ಇಲಾಖೆಯ ಬ್ಯಾಗ್ ಕಲೆಕ್ಟ್ ಮಾಡಿಕೊಂಡು ಪುತ್ತೂರಿಗೆ ತೆರಳುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ […]

ನೆಲ್ಯಾಡಿ: ಟಾಟಾ ಏಸ್ ಹಾಗೂ ಸಿಲಿಂಡರ್ ಸಾಗಾಟದ ಲಾರಿ ನಡುವೆ ಅಪಘಾತ ➤ ಓರ್ವ ಗಂಭೀರ.! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಯುವಜನ ಒಕ್ಕೂಟ ನಿರ್ದೇಶಕರಾಗಿ ದೇವಿಪ್ರಸಾದ್ ರೈ ಗೆಜ್ಜೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜ. 11. ಕಡಬ ತಾಲೂಕು ಯುವಜನ ಒಕ್ಕೂಟ ಇದರ ನಿರ್ದೇಶಕರಾಗಿ ದೇವಿಪ್ರಸಾದ್ ರೈ ಗೆಜ್ಜೆ ಇವರು ಆಯ್ಕೆಯಾಗಿದ್ದಾರೆ. ಇವರು ಕೇನ್ಯ ಗೆಜ್ಜೆಮನೆ ನಿವಾಸಿಯಾಗಿದ್ದು, ಹಲವಾರ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಡಿದ್ದಲ್ಲದೇ ರಾಷ್ಟ್ರ ಮಟ್ಟದ ಕ್ರೀಡಾಪಟು ಆಗಿದ್ದಾರೆ.  

ಕಡಬ: ಯುವಜನ ಒಕ್ಕೂಟ ನಿರ್ದೇಶಕರಾಗಿ ದೇವಿಪ್ರಸಾದ್ ರೈ ಗೆಜ್ಜೆ ಆಯ್ಕೆ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ರೈಲಿನಡಿಗೆ ತಲೆಯಿಟ್ಟು ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 11. ಚಲಿಸುವ ರೈಲಿನಡಿಗೆ ತಲೆಯಿಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಸಿರೋಡ್ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಘಟನಾ ಸ್ಥಳಕ್ಕೆ ರೈಲ್ವೇ ಇಲಾಖಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ.  

ಬಂಟ್ವಾಳ: ರೈಲಿನಡಿಗೆ ತಲೆಯಿಟ್ಟು ವ್ಯಕ್ತಿ ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಬಾವಿಗೆ ಬಿದ್ದ ಚಿರತೆ ➤ ಕೋಳಿಯನ್ನು ಹಿಡಿಯಲು ಬಂದ ವೇಳೆ ಘಟನೆ

(ನ್ಯೂಸ್ ಕಡಬ) newskadaba.com ಕಡಬ, ನ.07. ಕೋಳಿ ಹಿಡಿಯಲೆಂದು ಬಂದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದ ಕಮರ್ಕಜೆ ಎಂಬಲ್ಲಿ ಭಾನುವಾರದಂದು ಸಂಭವಿಸಿದೆ. ಚಿರತೆಯು ಕಮರ್ಕಜೆ ನಿವಾಸಿ ರಾಮಯ್ಯ ಗೌಡ ಎಂಬವರ ಮನೆಯ ಸಮೀಪದ ಬಾವಿಗೆ ಬಿದ್ದಿದ್ದು, ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಚಿರತೆಯ ರಕ್ಷಣಾ ಕಾರ್ಯ ಇನ್ನಷ್ಟೇ ಆರಂಭಗೊಳ್ಳಬೇಕಿದೆ.      

ಕಡಬ: ಬಾವಿಗೆ ಬಿದ್ದ ಚಿರತೆ ➤ ಕೋಳಿಯನ್ನು ಹಿಡಿಯಲು ಬಂದ ವೇಳೆ ಘಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ‘ಝೂಬಿ ಗೋಲ್ಡ್’ ವಿಸ್ತೃತ ಚಿನ್ನಾಭರಣ ಮಳಿಗೆ ಶುಭಾರಂಭ ➤ ಶುಭಾರಂಭದ ಪ್ರಯುಕ್ತ ವಿಶೇಷ ಆಫರ್, ಲಕ್ಕೀ ಕೂಪನ್ ಡ್ರಾ

(ನ್ಯೂಸ್ ಕಡಬ) newskadaba.com ಕಡಬ, ಅ.14. ಕಳೆದ ಐದು ವರ್ಷಗಳಿಂದ ಇಲ್ಲಿನ ಮುಖ್ಯ ರಸ್ತೆಯ ಬಾಬು ಟವರ್ ನಲ್ಲಿ ಕಾರ್ಯಾಚರಿಸುತ್ತಿದ್ದ ಚಿನ್ನಾಭರಣ ಮಳಿಗೆ ‘ಝೂಬಿ ಗೋಲ್ಡ್’ ವಿಸ್ತೃತಗೊಂಡು ಗುರುವಾರದಂದು ಶುಭಾರಂಭಗೊಂಡಿತು. ನೂತನ ಮಳಿಗೆಯನ್ನು ಅಸ್ಸಯ್ಯಿದ್ ಮುಹ್ಸಿನ್ ಸಯ್ಯದ್ ಅಲವಿ ಕೋಯ ಅಲ್ ಬುಖಾರಿ ತಂಙಳ್ ಕಲ್ಲೇರಿಯವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿ, ಕಡಬ ಸೈಂಟ್ ಜೋಕಿಮ್ಸ್ ಚರ್ಚ್‌ನ ಧರ್ಮಗುರು ರೆ.ಫಾ.ಅರುಣ್ ವಿಲ್ಸನ್ ಲೋಬೋ, ಅಸ್ಸಯ್ಯಿದ್ ಶಾಹುಲ್‌ ಹಮೀದ್

ಕಡಬ: ‘ಝೂಬಿ ಗೋಲ್ಡ್’ ವಿಸ್ತೃತ ಚಿನ್ನಾಭರಣ ಮಳಿಗೆ ಶುಭಾರಂಭ ➤ ಶುಭಾರಂಭದ ಪ್ರಯುಕ್ತ ವಿಶೇಷ ಆಫರ್, ಲಕ್ಕೀ ಕೂಪನ್ ಡ್ರಾ Read More »

ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯ ಈ ಬಾರಿಯೂ ಟಾಪ್ ➤ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಇಬ್ಬರಿಗೆ 625 ರಲ್ಲಿ 625 ಅಂಕ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.09. ಈ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ಇಬ್ಬರು ವಿದ್ಯಾರ್ಥಿನಿಯರು 625 ರಲ್ಲಿ 625 ಅಂಕ ಪಡೆಯುವ ಮೂಲಕ ರಾಜ್ಯದಲ್ಲಿ ಟಾಪರ್ ಎನಿಸಿಕೊಂಡಿದ್ದಾರೆ. ಸುಳ್ಯ ತಾಲೂಕಿನ ಗುತ್ತಿಗಾರು ನಿವಾಸಿ ದುರ್ಗೇಶ್ ಮತ್ತು ವೇದಾವತಿ ದಂಪತಿಗಳ ಪುತ್ರಿ ಅನನ್ಯ ಹಾಗೂ ಸುಬ್ರಹ್ಮಣ್ಯದ ವೆಲೇರಿಯನ್ ಡಿಸೋಜಾ ಮತ್ತು ತೆರೆಸಾ ಡಿಸೋಜಾ ದಂಪತಿಗಳ ಪುತ್ರಿ ವೆನೆಸಾ ಶರಿನಾ ಡಿಸೋಜಾ 625 ಅಂಕ ಪಡೆದ ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿಗಳಾಗಿದ್ದಾರೆ. ಕಳೆದ ವರ್ಷ

ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯ ಈ ಬಾರಿಯೂ ಟಾಪ್ ➤ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಇಬ್ಬರಿಗೆ 625 ರಲ್ಲಿ 625 ಅಂಕ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆನ್‌ಲೈನ್ ತರಗತಿಯ ಅವಾಂತರ ➤ ಕಾಲೇಜಿಗೆಂದು ತೆರಳಿದ ಅಪ್ರಾಪ್ತ ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಆ.06. ಮೊಬೈಲ್ ಮೂಲಕ ಹುಟ್ಟಿಕೊಂಡ ಪ್ರೀತಿಯಿಂದ ಅಪ್ರಾಪ್ತ ಯುವತಿಯು ಸ್ಥಳೀಯ ಯುವಕನ ಜೊತೆ ನಾಪತ್ತೆಯಾಗಿರುವ ಘಟನೆ ಕಡಬ ಸಮೀಪದ ಕಳಾರದಿಂದ ವರದಿಯಾಗಿದೆ. ಕಳಾರ ನಿವಾಸಿ ಹದಿನೇಳು ವರ್ಷದ ಯುವತಿಯು ಗುರುವಾರದಂದು ಕಾಲೇಜಿಗೆಂದು ಮನೆಯಿಂದ ತೆರಳಿದ್ದು, ಸಂಜೆಯವರೆಗೂ ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಸಂಬಂಧಿಕರ ಮನೆಯಲ್ಲೆಲ್ಲಾ ಹುಡಿಕಾಡಿದ ಆಕೆಯ ಮನೆಯವರು ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಇಂದು ಕಡಬ ಠಾಣೆಗೆ ದೂರು ನೀಡಿದ್ದಾರೆ. ಇದೇ ವೇಳೆ ಸ್ಥಳೀಯ ನಿವಾಸಿ 24 ವರ್ಷದ ಹನೀಫ್ ಎಂಬಾತ

ಆನ್‌ಲೈನ್ ತರಗತಿಯ ಅವಾಂತರ ➤ ಕಾಲೇಜಿಗೆಂದು ತೆರಳಿದ ಅಪ್ರಾಪ್ತ ಯುವತಿ ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೀವು ಎಸ್ಸೆಸ್ಸೆಲ್ಸಿ ಪಾಸ್ ಆಗಿದ್ದೀರಾ..? ➤ ಹಾಗಾದರೆ ಪೊಲೀಸ್ ಇಲಾಖೆಯ ಈ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.02. ನೀವು ಎಸ್ಸೆಸ್ಸೆಲ್ಸಿ ಪಾಸ್ ಆಗಿದ್ದರೆ ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ರಾಜ್ಯ ಮೀಸಲು ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ ಅನುಯಾಯಿ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಬಗ್ಗೆ ಅಧಿಸೂಚನೆ ಬಿಡುಗಡೆ ಮಾಡಿರುವ ಪೊಲೀಸ್ ಇಲಾಖೆಯು, ಎಸ್ಸೆಸ್ಸೆಲ್ಸಿ ಪಾಸ್ ಆಗಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್‌ ಅರ್ಜಿ ಸಲ್ಲಿಸಲು ಜುಲೈ 30 ರಿಂದ ಆರಂಭಗೊಂಡು ಆಗಸ್ಟ್ 30 ಕೊನೆಯ

ನೀವು ಎಸ್ಸೆಸ್ಸೆಲ್ಸಿ ಪಾಸ್ ಆಗಿದ್ದೀರಾ..? ➤ ಹಾಗಾದರೆ ಪೊಲೀಸ್ ಇಲಾಖೆಯ ಈ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಕರ್ನಾಟಕ, ಲೈಫ್‍ಸ್ಟೈಲ್

ಕುಕ್ಕೇ ಸುಬ್ರಹ್ಮಣ್ಯ: ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ಕರುವನ್ನು ಸೀಳಿ ಕೊಂದ ಚಿರತೆ ➤ ಸ್ಥಳೀಯರಲ್ಲಿ ಆತಂಕ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.01. ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ದನದ ಕರುವಿನ ಮೇಲೆ ದಾಳಿ ಮಾಡಿದ ಚಿರತೆಯೊಂದು ಕರುವನ್ನು ತಿಂದ ಘಟನೆ ಭಾನುವಾರ ಬೆಳಿಗ್ಗೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ. ಸುಬ್ರಹ್ಮಣ್ಯ ಸಮೀಪದ ಕಲ್ಮಕಾರು ಗ್ರಾಮದ ಮಾಡಬಾಕಿಲು ನಿವಾಸಿ ಲಾವಣ್ಯ ಮಹೇಶ್ ಎಂಬವರ ಹಟ್ಟಿಯಲ್ಲಿ ದನ ಕರುಗಳನ್ನು ಕಟ್ಟಿ ಹಾಕಲಾಗಿತ್ತು ಎನ್ನಲಾಗಿದೆ. ಭಾನುವಾರ ಬೆಳಿಗ್ಗೆ ಹಟ್ಟಿಗೆ ತೆರಳಿದಾಗ ಕರುವನ್ನು ಸೀಳಿ ಅರ್ಧ ತಿಂದಿರುವುದು ಗಮನಕ್ಕೆ ಬಂದಿದೆ. ಈ ಭಾಗದಲ್ಲಿ ಚಿರತೆ ಇರುವ ಬಗ್ಗೆ ಮಾಹಿತಿ ಹರಿದಾಡುತ್ತಿದ್ದು, ಚಿರತೆಯೇ ಕರುವನ್ನು

ಕುಕ್ಕೇ ಸುಬ್ರಹ್ಮಣ್ಯ: ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ಕರುವನ್ನು ಸೀಳಿ ಕೊಂದ ಚಿರತೆ ➤ ಸ್ಥಳೀಯರಲ್ಲಿ ಆತಂಕ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಾಣಂತಿ ➤ ತೀವ್ರ ರಕ್ತಸ್ರಾವದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜು.15. ವಿಪರೀತ ರಕ್ತಸ್ರಾವದಿಂದಾಗಿ ಕಡಬದ ಬಾಣಂತಿ ಮಹಿಳೆಯೋರ್ವರು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ. ಮೃತ ಮಹಿಳೆಯನ್ನು ಕಡಬ ತಾಲೂಕು ಕೊಂಬಾರು ಗ್ರಾಮದ ಇಡ್ಯಡ್ಕ ಕಟ್ಟೆ ನಿವಾಸಿ ಚೇತನ್ ಎಂಬವರ ಪತ್ನಿ ವಿದ್ಯಾ(30) ಎಂದು ಗುರುತಿಸಲಾಗಿದೆ. ಮೃತರನ್ನು ಹೆರಿಗೆಗಾಗಿ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬುಧವಾರ ಬೆಳಗಿನ ಜಾವ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ ಎನ್ನಲಾಗಿದೆ. ಬಳಿಕ ತೀವ್ರ ರಕ್ತಸ್ರಾವದಿಂದಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ‌.      

ಕಡಬ: ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಾಣಂತಿ ➤ ತೀವ್ರ ರಕ್ತಸ್ರಾವದಿಂದ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top