Kadaba

ದಕ್ಷಿಣ ಕನ್ನಡ | 243 ಹೊಸ ಕೋವಿಡ್‌ ಪ್ರಕರಣ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ,12: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 243 ಜನರಿಗೆ ಕೋವಿಡ್‌-19 ಸೋಂಕು ತಗುಲಿರುವುದು ಮಂಗಳವಾರ ಲಭಿಸಿರುವ ಪರೀಕ್ಷಾ ವರದಿಗಳಿಂದ ದೃಢಪಟ್ಟಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,596ಕ್ಕೆ ತಲುಪಿದೆ.   ‘ಮಂಗಳೂರು ತಾಲ್ಲೂಕಿನ 189, ಬಂಟ್ವಾಳ 30, ಬೆಳ್ತಂಗಡಿ 10, ಪುತ್ತೂರು 6 ಹಾಗೂ ಸುಳ್ಯ ತಾಲ್ಲೂಕಿನ 4 ಜನರಿಗೆ ಸೋಂಕು ತಗುಲಿರುವುದು ಮಂಗಳವಾರ ದೃಢಪಟ್ಟಿದೆ. ಹೊರ ಜಿಲ್ಲೆಗಳ ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ’ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ‘ಸೋಂಕಿತರ […]

ದಕ್ಷಿಣ ಕನ್ನಡ | 243 ಹೊಸ ಕೋವಿಡ್‌ ಪ್ರಕರಣ ಪತ್ತೆ Read More »

ಕರಾವಳಿ

ಪಟ್ಟೆ: ಸೀರೆ ಹೊಳೆಯ ಸೇತುವೆ ಬಿರುಕು➤ ವಾಹನ ಸಂಚಾರ ಬಂದ್

(ನ್ಯೂಸ್ ಕಡಬ) newskadaba.com.ಬಡಗನ್ನೂರು,ಆ.13: ಕಳೆದ ಕೆಲ ದಿನಗಳಿಂದ ಸುರಿಯುತ್ತಿದ್ದ ಮಳೆಯಿಂದಾಗಿ ಪಟ್ಟೆಯಿಂದ ಗೆಜ್ಜೆಗಿರಿ ಮೂಲಕ ಈಶ್ವರಮಂಗಲಕ್ಕೆ ಸಂಪರ್ಕ ಕಲ್ಪಿಸುವ ಜಿ.ಪಂ. ರಸ್ತೆಯ ಪಟ್ಟೆ ಎಂಬಲ್ಲಿ ಸೀರೆ ಹೊಳೆಗೆ ನಿರ್ಮಿಸಿದ ಸೇತುವೆಯ ಒಂದು ಬದಿ ಬಿರುಕು ಬಿಟ್ಟು ಕುಸಿತದ ಭೀತಿಯಲ್ಲಿದೆ. ಗೆಜ್ಜೆಗಿರಿ ಶ್ರೀಕ್ಷೇತ್ರದ ಬ್ರಹ್ಮಕಲಶೋತ್ಸವದ ಸಂದರ್ಭ ಪಟ್ಟೆಯಿಂದ ಗೆಜ್ಜೆಗಿರಿ ತನಕ ರಸ್ತೆ ವಿಸ್ತರಣೆ ಮತ್ತು ಕಾಂಕ್ರೀಟ್‌ ಕಾಮಗಾರಿ ಮಾಡಲಾಗಿತ್ತು. ಪಟ್ಟೆಯಲ್ಲಿ ಸೀರೆ ಹೊಳೆಯ ಸೇತುವೆಯ ಒಂದು ಬದಿಗೆ ಕಾಂಪೌಂಡ್‌ ಹಾಗೂ ಇನ್ನೊಂದು ಬದಿಗೆ ತಡೆಗೋಡೆ ನಿರ್ಮಿಸಲಾಗಿತ್ತು.ಆದರೆ ಇದೀಗ ತಡೆಗೋಡೆ ಕುಸಿತದ

ಪಟ್ಟೆ: ಸೀರೆ ಹೊಳೆಯ ಸೇತುವೆ ಬಿರುಕು➤ ವಾಹನ ಸಂಚಾರ ಬಂದ್ Read More »

ಕರಾವಳಿ

ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಎನ್​ಕೌಂಟರ್ ➤ ಓರ್ವ ಯೋಧ ಹುತಾತ್ಮ

(ನ್ಯೂಸ್ ಕಡಬ) newskadaba.com ಪುಲ್ವಾಮಾ, ಆ,12: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಕಮ್ರಾಜಿಪೋರಾದ ಸೇಬಿನ ತೋಟದಲ್ಲಿ ಇಂದು ಬೆಳಗ್ಗೆ ಭದ್ರತಾ ಸಿಬ್ಬಂದಿ ಹಾಗೂ ಭಯೋತ್ಪಾದಕರ ನಡುವೆ ಎನ್​​ಕೌಂಟರ್​ ನಡೆದಿದೆ.   ಈ ಘಟನೆಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮನಾಗಿದ್ದು, ಮತ್ತೊಬ್ಬ ಯೋಧ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಗಾಯಗೊಂಡ ಯೋಧನಿಗೆ ಶ್ರೀನಗರದ ಆರ್ಮಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಇನ್ನು, ಎನ್​ಕೌಂಟರ್ ವೇಳೆ ಇಬ್ಬರು ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಮ್ರಾಜಿಪೋರಾ ಪ್ರದೇಶವನ್ನು ಸುತ್ತುವರಿಯಲಾಗಿದೆ.ಪುಲ್ವಾಮಾದ ತೋಕರ್​ಪೋರಾ ಪ್ರದೇಶದಲ್ಲೂ ಸಹ ಶೋಧ

ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಎನ್​ಕೌಂಟರ್ ➤ ಓರ್ವ ಯೋಧ ಹುತಾತ್ಮ Read More »

ರಾಷ್ಟ್ರೀಯ ನ್ಯೂಸ್

ಕಡಬ : ಆ.12 ರ ಕೊರೋನಾ ಆಪ್‍ಡೇಟ್

(ನ್ಯೂಸ್ ಕಡಬ) newskadaba.com ಕಡಬ, ಆ,12:  ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಆ.೧೨ರಂದು ತಾಲೂಕು ಆರೋಗ್ಯ ಇಲಾಖೆಯ ವರದಿಯಂತೆ 22 ಮಂದಿಗೆ ಕೊರೋನಾ ದೃಢಗೊಂಡಿದೆ. ಕಡಬ ತಾಲೂಕಿನ ಕಾಣಿಯೂರು ನಿವಾಸಿ 38 ವರ್ಷದ ವ್ಯಕ್ತಿ, 45 ವರ್ಷದ ಮಹಿಳೆ, ಶಿರಾಡಿ ನಿವಾಸಿ 65 ವರ್ಷದ ವ್ಯಕ್ತಿ, ಕೊಣಾಲು ನಿವಾಸಿ 55 ವರ್ಷದ ವ್ಯಕ್ತಿಯಲ್ಲಿ ಕೊರೋನಾ ದೃಢಪಟ್ಟಿದೆ.       ಚಿಕ್ಕಮುಡ್ನೂರು ಗ್ರಾಮದ ಒಂದೇ ಮನೆಯ 2 ವರ್ಷದ ಬಾಲಕಿ, 6 ವರ್ಷದ ಬಾಲಕ, 38ವರ್ಷದ ವ್ಯಕ್ತಿ,

ಕಡಬ : ಆ.12 ರ ಕೊರೋನಾ ಆಪ್‍ಡೇಟ್ Read More »

ಕರಾವಳಿ, ಕರ್ನಾಟಕ

ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ಶಿಕ್ಷಕರಿಂದ ಪಾಠ!➤ ಮಕ್ಕಳ ಕಲಿಕಾ ಕೇಂದ್ರವಾದ ದೇವಸ್ಥಾನ, ಚರ್ಚ್, ಮಸೀದಿ, ಮಂದಿರಗಳು

(ನ್ಯೂಸ್ ಕಡಬ) newskadaba.com ಕಡಬ: ಆ.12,.ಕೊರೊನಾ ಪರಿಣಾಮ ಶಾಲೆಗಳನ್ನು ತೆರೆಯಲು ಅಸಾಧ್ಯವಾದ ಈ ಸಂದರ್ಭದಲ್ಲಿ ಕಡಬ ತಾಲೂಕಿನ ನೂಜಿಬಾಳ್ತಿಲ ಕ್ಲಸ್ಟರ್ ವ್ಯಾಪ್ತಿಯಲ್ಲಿ ಶಿಕ್ಷಕರೇ ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ಪಾಠ ಹೇಳಿ ಕೊಡುತ್ತಿದ್ದಾರೆ. ನೂಜಿಬಾಳ್ತಿಲ ಕ್ಲಸ್ಟರ್ ವ್ಯಾಪ್ತಿಯ ಶಾಲೆಯ ಮಕ್ಕಳನ್ನು ಒಟ್ಟು ಸೇರಿಸಿ, ಊರಿನ ದೇವಸ್ಥಾನ, ಚರ್ಚ್, ಮಸೀದಿ, ಮಂದಿರ, ಯುವಕ ಮಂಡಲಗಳ ಕಟ್ಟಡಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪಾಠ ಕಲಿಸಲಾಗುತ್ತಿದೆ. ಇದಕ್ಕೆ ಮಕ್ಕಳು, ಪೋಷಕರು ಸಹಕಾರ ನೀಡುತ್ತಿದ್ದು, ಉತ್ತಮ ರೀತಿಯಲ್ಲಿ ಕಲಿಕೆ ಸಾಗುತ್ತಿದೆ ಎಂದು ಅಧಿಕಾರಿಗಳು

ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ಶಿಕ್ಷಕರಿಂದ ಪಾಠ!➤ ಮಕ್ಕಳ ಕಲಿಕಾ ಕೇಂದ್ರವಾದ ದೇವಸ್ಥಾನ, ಚರ್ಚ್, ಮಸೀದಿ, ಮಂದಿರಗಳು Read More »

ಕರಾವಳಿ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ದೇಹಸ್ಥಿತಿ ಗಂಭೀರ.!!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ,12:  ಇಲ್ಲಿನ ಸೇನಾ ಆರ್ ಆಯಂಡ್ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ದೇಹಸ್ಥಿತಿ ಮತ್ತಷ್ಟು ವಿಷಮಿಸಿದ್ದು, ಅವರು ವೆಂಟಿಲೇಟರ್ ಬೆಂಬಲ ವ್ಯವಸ್ಥೆಯಲ್ಲೇ ಇದ್ದಾರೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ. ಸೋಮವಾರ ಗಂಭೀರ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯ ತಪಾಸಣೆ ನಡೆಸಿದಾಗ ಮೆದುಳಿನಲ್ಲಿ ದೊಡ್ಡ ಪ್ರಮಾಣದಲ್ಲಿ ರಕ್ತ ಹೆಪ್ಪುಗಟ್ಟಿದ್ದು, ಕಂಡುಬಂದಿದ್ದು, ತುರ್ತು ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಆಸ್ಪತ್ರೆ ಹೇಳಿದೆ.   ಅವರಿಗೆ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ದೇಹಸ್ಥಿತಿ ಗಂಭೀರ.!! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಗಾಂಜಾ ಮತ್ತಿನಲ್ಲಿ ಕಾರು ಚಲಾಯಿಸಿ ಸ್ಕೂಟರ್‌ಗೆ ಡಿಕ್ಕಿ ➤ ಸ್ಕೂಟರ್‌ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com.ಮಂಜೇಶ್ವರ,ಆ.12: ಗಾಂಜಾ ಸೇವಿಸಿ ಕಾರು ಚಲಾಯಿಸಿದ ಪರಿಣಾಮ ಸ್ಕೂಟರ್ ಗೆ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಮೃತಪಟ್ಟ ದಾರುಣ ಘಟನೆ ಮಂಗಳವಾರ ಸಂಜೆ ಉಪ್ಪಳ ಬಳಿಯ ಬೇಕೂರಿನಲ್ಲಿ ನಡೆದಿದೆ.‌ ಮೃತಪಟ್ಟವರನ್ನು ಬೇಕೂರು ಬೊಳ್ಳಾರಿನ ಕೆ.ರಾಮ ಭಟ್ (62) ಎಂದು ಗುರುತಿಸಲಾಗಿದೆ. ರಾಮ ಭಟ್ ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ಅತೀ ವೇಗದಿಂದ ಬಂದ ಕಾರು ಡಿಕ್ಕಿ ಹೊಡೆದಿದೆ, ಡಿಕ್ಕಿಯ ರಭಸಕ್ಕೆ ಸ್ಕೂಟರ್‌ ಮಾರುದ್ದ ಹೋಗಿ ಬಿದ್ದಿದೆ. ಅಪಘಾತ ನಡೆದ ತಕ್ಷಣ ಸ್ಥಳಕ್ಕೆ ಬಂದ ಸ್ಥಳೀಯರ ಪ್ರಕಾರ

ಗಾಂಜಾ ಮತ್ತಿನಲ್ಲಿ ಕಾರು ಚಲಾಯಿಸಿ ಸ್ಕೂಟರ್‌ಗೆ ಡಿಕ್ಕಿ ➤ ಸ್ಕೂಟರ್‌ ಸವಾರ ಮೃತ್ಯು Read More »

ಕರ್ನಾಟಕ

ಚಾರ್ಮಾಡಿ ಘಾಟ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅನುವು

(ನ್ಯೂಸ್ ಕಡಬ) newskadaba.com ಚಾರ್ಮಾಡಿ ಘಾಟ್, ಆ,12: ಚಿಕ್ಕಮಗಳೂರು -ಚಾರ್ಮಾಡಿ ಘಾಟ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಸದ್ಯಕ್ಕೆ ಮುಕ್ತಿಗೊಂಡಿದೆ. ಬಾರಿ ಗಾಳಿ ಮಳೆಯಿಂದ ಗುಡ್ಡ ಮಣ್ಣು ಕುಸಿದು ಚಾರ್ಮಾಡಿ ಘಾಟ್ ನಲ್ಲಿ ಲಘು ವಾಹನ ಸಂಚರಿಸಲು ನಿರ್ಬಂಧ ಹೇರಳಾಗಿತ್ತು. ಆರು ದಿನಗಳ ಈ ಸಂಚಾರ ನಿರ್ಬಂಧಕ್ಕೆ ನಾಳೆಯಿಂದ ತೆರವು ಮಾಡುವುಂತೆ ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಆದೇಶ ನೀಡಿದ್ದಾರೆ.ಬೆಳ್ಳಗೆ 7 ರಿಂದ ಸಂಜೆ 7ರ ತನಕ ಮಾತ್ರ ಸಮಚಾರಕ್ಕೆ ಅನುಮತಿ ನೀಡಲಾಗಿದೆ.    

ಚಾರ್ಮಾಡಿ ಘಾಟ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅನುವು Read More »

ಕರಾವಳಿ, ಕರ್ನಾಟಕ

ಜನಪ್ರಿಯ ನಟ ಸಂಜಯ್ ದತ್‌ಗೆ ಶ್ವಾಸಕೋಶದ ಕ್ಯಾನ್ಸರ್

(ನ್ಯೂಸ್ ಕಡಬ) newskadaba.com ಮುಂಬೈ, ಆ,12: ಹಿಂದಿ ಚಿತ್ರರಂಗದ ಜನಪ್ರಿಯ ನಟ ಸಂಜಯ್ ದತ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಯುಎಸ್ ಗೆ ತೆರಳುತ್ತಿದ್ದಾರೆ. ಕಳೆದ ಶನಿವಾರ ಉಸಿರಾಟದ ತೊಂದರೆ ಕಂಡು ಬಂದಿದ್ದರಿಂದ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಸಂಜಯ ದತ್ ಅವರಿಗೆ ಕೊರೊನಾವೈರಸ್ ಸೋಂಕು ಇರುವ ಬಗ್ಗೆ ಪರೀಕ್ಷೆ ನಡೆಸಲಾಗಿದ್ದು, ನೆಗಟಿವ್ ಎಂದು ವರದಿ ಬಂದಿತ್ತು. “ನಾನು ಹುಷಾರಾಗಿದ್ದೇನೆ, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ ನನ್ನ ಕೊವಿಡ್ 19 ಪರೀಕ್ಷೆ ವರದಿ

ಜನಪ್ರಿಯ ನಟ ಸಂಜಯ್ ದತ್‌ಗೆ ಶ್ವಾಸಕೋಶದ ಕ್ಯಾನ್ಸರ್ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಕೊರೋನಾ ಸೋಂಕು| ಪ್ರಣಬ್‌ ಮುಖರ್ಜಿ ಆರೋಗ್ಯ ಗಂಭೀರ, ವೆಂಟಿಲೇಟರ್‌ನಲ್ಲಿ ಚಿಕಿತ್ಸೆ

(ನ್ಯೂಸ್ ಕಡಬ) newskadaba.com ದೆಹಲಿ, ಆ.11:  ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.ಪ್ರಣಬ್ ಮುಖರ್ಜಿ ಅವರನ್ನು ದೆಹಲಿಯ ಸೇನಾ ರೆಫರಲ್‌ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಹಿನ್ನೆಲೆಯಲ್ಲಿ ಸೋಮವಾರ ಅವರು ಮೆದುಳಿನ ಶಸ್ತ್ರ ಚಿಕಿತ್ಸೆಗೂ ಒಳಪಡಿಸಲಾಗಿತ್ತು. ಶಸ್ತ್ರಚಿಕಿತ್ಸೆ ಯಶಸ್ವಿಯಾದರೂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹೀಗಾಗಿ ಅವರಿಗೆ ಕೃತಕ  ಉಸಿರಾಟ

ಕೊರೋನಾ ಸೋಂಕು| ಪ್ರಣಬ್‌ ಮುಖರ್ಜಿ ಆರೋಗ್ಯ ಗಂಭೀರ, ವೆಂಟಿಲೇಟರ್‌ನಲ್ಲಿ ಚಿಕಿತ್ಸೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top