Kadaba

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿಕೆಶಿ ಭೇಟಿ

(ನ್ಯೂಸ್ ಕಡಬ) newskadaba,ಉಚ್ಚಿಲ ಜು.06: ಸುಮಾರು 32 ಕೋಟಿ ವೆಚ್ಚದಲ್ಲಿ ಸಮಗ್ರವಾಗಿ ಪುನರ್ ನಿರ್ಮಾಣಗೊಳ್ಳುತ್ತಿರುವ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಬಾಲಾಲಯದಲ್ಲಿಯ ಶ್ರೀ ಮಹಾಲಕ್ಷಿಗೆ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ರಾಘವೇಂದ್ರ ಉಪಾಧ್ಯಾಯ ಮತ್ತು ವಿಷ್ಣುಮೂರ್ತಿ ಉಪಾಧ್ಯಾಯ ರವರು ಪೂಜೆ ಸಲ್ಲಿಸಿ ಡಿಕೆ ಶಿವಕುಮಾರ್ ರವರಿಗೆ ಪ್ರಸಾದ ವಿತರಿಸಿದರು.ದೇವಳದ ಆಡಳಿತ ಮಂಡಳಿಯ ವತಿಯಿಂದ ಡಿಕೆ ಶಿವಕುಮಾರ್‌ರವರನ್ನು […]

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿಕೆಶಿ ಭೇಟಿ Read More »

ಕರಾವಳಿ

ಉಪ್ಪಿನಂಗಡಿ: ನೇತ್ರಾವತಿ ನದಿಗೆ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

(ನ್ಯೂಸ್ ಕಡಬ) newskadaba,ಉಪ್ಪಿನಂಗಡಿ ಜು.06: ಉಪ್ಪಿನಂಗಡಿ ಸಮೀಪದ ಇಳಂತಿಲ ನೇತ್ರಾವತಿ ನದಿಯಲ್ಲಿ ಸ್ನಾನ ಮಾಡಲು ನೀರಿಗೆ ಇಳಿದ ಇಬ್ಬರು ಸಾವನ್ನಪ್ಪಿದ ಘಟನೆ ಸೋಮವಾರ (ಜುಲೈ 5)ರಂದು ಸಂಜೆ ನಡೆದಿದೆ. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸುಗ್ಗನಹಳ್ಳಿಯ ನಿಂಗರಾಜು (15) ಮತ್ತು ಸತೀಶ್ (13) ಮೃತ ದುರ್ದೈವಿಗಳು ಎಂಬ ಮಾಹಿತಿ ಲಭಿಸಿದೆ. ಈ ಸಂಬಂಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಉಪ್ಪಿನಂಗಡಿ: ನೇತ್ರಾವತಿ ನದಿಗೆ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು Read More »

ಕರಾವಳಿ, ಕರ್ನಾಟಕ

ಬ್ರಹ್ಮಾವರ: ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಛಾಯಾಗ್ರಾಹಕ ಅಶೋಕ್ ಶೆಟ್ಟಿ ಇನ್ನಿಲ್ಲ

(ನ್ಯೂಸ್ ಕಡಬ) newskadaba,ಮಂಗಳೂರು ಜು.06: ಮದುವೆ ಕಾರ್ಯಕ್ರಮವೊಂದಕ್ಕೆ ತೆರಳಿ ವಾಪಸ್ ಬರುತ್ತಿದ್ದ ವೇಳೆ ಕಂಟೈನರ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕುಂದಾಪುರದ ಹಿರಿಯ ಛಾಯಾಗ್ರಾಹಕ ಹೇರೂರು ಅಶೋಕ್ ಶೆಟ್ಟಿ (56) ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ ಸಾವನ್ನಪ್ಪಿದ್ದಾರೆ. ಪುತ್ರ ಪನ್ನಗ (24) ಹಾಗೂ ಸ್ನೇಹಿತ ಕುಮಾರ್ ಜೊತೆ ಬೆಂಗಳೂರಿಗೆ ಮದುವೆ ಕಾರ್ಯಕ್ರಮವೊಂದರ ಚಿತ್ರೀಕರಣಕ್ಕಾಗಿ ಕಾರಿನಲ್ಲಿ ತೆರಳಿ ಹಿಂದಿರುಗುತ್ತಿದ್ದ ವೇಳೆ ತುಮಕೂರು ಸಮೀಪ ಕಾರು ಅಪಘಾತ ಸಂಭವಿಸಿದ್ದು, ಅಶೋಕ್ ಶೆಟ್ಟಿ ಹಾಗೂ ಪುತ್ರ

ಬ್ರಹ್ಮಾವರ: ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಛಾಯಾಗ್ರಾಹಕ ಅಶೋಕ್ ಶೆಟ್ಟಿ ಇನ್ನಿಲ್ಲ Read More »

ಕರಾವಳಿ, ಕರ್ನಾಟಕ

ಮಂಗಳೂರು ವಿಮಾನ ನಿಲ್ದಾಣದ ನಿಷೇಧಿತ ಪ್ರದೇಶದಲ್ಲಿ ಎಂಟ್ರಿಕೊಟ್ಟ ವ್ಯಕ್ತಿ ಅರೆಸ್ಟ್.!

(ನ್ಯೂಸ್ ಕಡಬ) newskadaba,ಮಂಗಳೂರು ಜು.06: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿಷೇಧಿತ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶ ಮಾಡಿರುವ ಆರೋಪದ ಮೇಲೆ ಸಿಐಎಸ್ಎಫ್ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಸಿಐಎಸ್ಎಫ್ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಹಳೆಯ ವಿಮಾನ ನಿಲ್ದಾಣದ ಎಟಿಎಸ್ ವಿಭಾಗದಲ್ಲಿ ಸ್ಥಳೀಯ ಖಾಸಗಿ ಕಾಮಗಾರಿ ನಡೆಯುತ್ತಿದ್ದಲ್ಲಿ ಸ್ಥಳದಲ್ಲಿ ಅಪರಿಚಿತನೋರ್ವನು ಅನುಮಾನಾಸ್ಪದವಾಗಿ ತಿರುಗುತ್ತಿದ್ದ. ಈ ಸಂದರ್ಭ ಆತನನ್ನು ವಿಚಾರಿಸಿದಾಗ ತನ್ನ ಹೆಸರು ರಾಕೇಶ್ ಪಶ್ಚಿಮ ಬಂಗಾಳ ರಾಜ್ಯದ ಮುರ್ಸಿದಾಬಾದ್ ನವನು ಎಂದು

ಮಂಗಳೂರು ವಿಮಾನ ನಿಲ್ದಾಣದ ನಿಷೇಧಿತ ಪ್ರದೇಶದಲ್ಲಿ ಎಂಟ್ರಿಕೊಟ್ಟ ವ್ಯಕ್ತಿ ಅರೆಸ್ಟ್.! Read More »

ಕರಾವಳಿ, ಕರ್ನಾಟಕ

ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತು ಶಿಶು ಕೊಲೆ..?!

(ನ್ಯೂಸ್ ಕಡಬ) newskadaba,ಚಿಕ್ಕಬಳ್ಳಾಪುರ ಜು.03:ಜಿಲ್ಲೆಯ ಚಿಂತಾಮಣಿ ತಾಲೂಕು ಆಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಶಿಶು ಕೊಲೆ ಮಾಡಿರುವ ಅಮಾನವೀಯ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿರುವ ಶೌಚಾಲಯದ ಕಿಟಕಿಗೆ ಮಗು ತೂರಿಸಿ ಕುತ್ತಿಗೆಗೆ ದಾರದಿಂದ ನೇಣು ಬಿಗಿದು ಕೊಲೆ ಮಾಡಲಾಗಿದೆ. ಇನ್ನೂ ಕೊಲೆಯಾದ ಮಗು ಹೆಣ್ಣಾಗಿದ್ದು, ಹೆಣ್ಣು ಮಗು ಅಂತಲೇ ಕೊಲೆ ಮಾಡಿದರಾ ಅನ್ನೋ ಅನುಮಾನ ದಟ್ಟವಾಗಿದೆ. ಅಂದಹಾಗೆ ಇಂದು ಬೆಳಗ್ಗೆ 8 ಗಂಟೆ 45 ನಿಮಿಷ ಸುಮಾರಿಗೆ ಆಸ್ಪತ್ರೆಗೆ ಬಂದ ಇಬ್ಬರು ಅಪರಿಚಿತ ಮಹಿಳೆಯರು ಹಾಗೂ ಓರ್ವ ಪುರುಷ ಶೌಚಾಲಯದೊಳಗೆ

ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತು ಶಿಶು ಕೊಲೆ..?! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ಒಂದು ವೈಶಾಚಿಕ ಕೃತ್ಯ ➤ ಗುಂಡು ಹೊಡೆದು ಬೀದಿನಾಯಿ ಹತ್ಯೆ

(ನ್ಯೂಸ್ ಕಡಬ) newskadaba,ಮಂಗಳೂರು ಜು.02: ಬೀದಿನಾಯಿಯೊಂದನ್ನು ಅಮಾನವೀಯವಾಗಿ ಗುಂಡು ಹೊಡೆದು ಹತ್ಯೆ ಮಾಡಿರುವ ಹೇಯ ಕೃತ್ಯವೊಂದು ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಇತ್ತೀಚೆಗೆ ನಾಯಿಯನ್ನು ಬೈಕ್ ಗೆ ಕಟ್ಟಿ ಅಮಾನವೀಯವಾಗಿ ಎಳೆದೊಯ್ದ ಎರಡು ಪ್ರಕರಣಗಳು ಮಂಗಳೂರಿಗೆ ಕಪ್ಪು ಚುಕ್ಕೆಯಾಗಿ ಪರಿಣಮಿಸಿತ್ತು. ಅದರ ಬೆನ್ನಲ್ಲೇ ನಡೆದ ಈ ಕೃತ್ಯದಿಂದ ಎಲ್ಲರೂ ತಲೆತಗ್ಗಿಸುವಂತಾಗಿದೆ. ಮಂಗಳೂರು ನಗರದ ಶಿವಭಾಗ್‍ನ‌ ಬಳಿಯಿರುವ ಆಭರಣ ಜ್ಯುವೆಲ್ಲರ್ಸ್ ಮಳಿಗೆಯ ಹಿಂಭಾಗದ ರಸ್ತೆಯಲ್ಲಿ ಗುಂಡು ಹೊಡೆಸಿಕೊಂಡು ಬೀದಿ ನಾಯಿಯೊಂದನ್ನು ಸತ್ತು ಬಿದ್ದಿತ್ತು. ತಕ್ಷಣ ಸ್ಥಳಕ್ಕೆ ಭೇಟಿ ನೀಡಿರುವ ಅನಿಮಲ್

ಮಂಗಳೂರಿನಲ್ಲಿ ಒಂದು ವೈಶಾಚಿಕ ಕೃತ್ಯ ➤ ಗುಂಡು ಹೊಡೆದು ಬೀದಿನಾಯಿ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ತುಳುಭಾಷೆಯ ಪ್ರಪ್ರಥಮ ಆನ್ಲೈನ್ ಡಿಕ್ಷನರಿ ‘ಕೊಪ್ಪರಿಗೆ’ ಇಂದು ಅನಾವರಣ

(ನ್ಯೂಸ್ ಕಡಬ) newskadaba,ಮಂಗಳೂರು ಜು.02: ತುಳುಭಾಷೆಯ ಪ್ರಪ್ರಥಮ ಆನ್ಲೈನ್ ಡಿಕ್ಷನರಿ ಇಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಇಂದು ಅನಾವರಣಗೊಂಡಿತು. ರಾಜ್ಯ ಬಿಜೆಪಿ ವಕ್ತಾರ ಕ್ಯಾ.ಗಣೇಶ್ ಕಾರ್ಣಿಕ್ ಡಿಕ್ಷನರಿ ಅನಾವರಣಗೊಳಿಸಿ ಮಾತನಾಡಿ, ಕೊಪ್ಪರಿಗೆ ಡಿಕ್ಷನರಿಯಲ್ಲಿ ತುಳು ಭಾಷೆಯ 1200 ಪದಗಳಿಗಸ ಉಚ್ಚಾರ, ಅರ್ಥ ಸಹಿತ ವಿವರಿಸಿ ತಿಳಿದಲಾಗಿದೆ‌. ಅಲ್ಲದೆ ಇಂದಿನ ತಂತ್ರಜ್ಞಾನಕ್ಕೆ ಹೊಂದಾಣಿಕೆಯಾಗುವಂತೆ ಈ ಡಿಕ್ಷನರಿ ಆನ್ಲೈನ್ ಮೂಲಕ ಲಭ್ಯವಾಗುತ್ತಿರುವುದು ನಿಜವಾಗಿಯೂ ಸಂತೋಷದ ವಿಚಾರ ಎಂದು ತಿಳಿಸಿದರು.ಈ ಸಂದರ್ಭ ಜೈ ತುಳುನಾಡು ಸಂಘಟನೆಯ ಅಧ್ಯಕ್ಷ ಸುದರ್ಶನ್

ತುಳುಭಾಷೆಯ ಪ್ರಪ್ರಥಮ ಆನ್ಲೈನ್ ಡಿಕ್ಷನರಿ ‘ಕೊಪ್ಪರಿಗೆ’ ಇಂದು ಅನಾವರಣ Read More »

ಕರಾವಳಿ, ಕರ್ನಾಟಕ

ದುಬೈನಿಂದ ಬಂದ ಮಹಿಳೆಯಿಂದ 56 ಕೋಟಿ ಮೌಲ್ಯದ ಹೆರಾಯಿನ್ ವಶ

(ನ್ಯೂಸ್ ಕಡಬ) newskadaba,ಬೆಂಗಳೂರು ಜು.02: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅತಿದೊಡ್ಡ ಮಾದಕ ಜಾಲ ಪತ್ತೆ ಮಾಡಿದ್ದಾರೆ. ದುಬೈನಿಂದ ಎಮಿರೇಟ್ಸ್ ವಿಮಾನದಲ್ಲಿ ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ 35 ವರ್ಷದ ಮಹಿಳೆಯನ್ನು ತಪಾಸಣೆ ನಡೆಸಿದ್ದಾರೆ. ಈ ವೇಳೆ ಸೂಟ್ ಕೇಸ್ ತಳ ಭಾಗದಲ್ಲಿ ಮರೆಮಾಚಿ 8 ಕೆ.ಜಿ. ತೂಕದ 56 ಕೋಟಿ ರೂ. ಮೌಲ್ಯದ ಹೆರಾಯಿನ್ ಕಳ್ಳ ಸಾಗಣೆ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.ಮಹಿಳೆಯನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು, ವಿಚಾರಣೆ ನಡೆಸಿದ್ದಾರೆ.

ದುಬೈನಿಂದ ಬಂದ ಮಹಿಳೆಯಿಂದ 56 ಕೋಟಿ ಮೌಲ್ಯದ ಹೆರಾಯಿನ್ ವಶ Read More »

ಕರಾವಳಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿಟ್ಟು ಅಕ್ರಮ ಚಿನ್ನ ಸಾಗಾಟ..!!

(ನ್ಯೂಸ್ ಕಡಬ) newskadaba,ಮಂಗಳೂರು ಜು.02: ನಗರದ ಬಜ್ಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ ವಶಕ್ಕೆ ಪಡೆದಿದ್ದಾರೆ. ಕಾಸರಗೋಡಿನ ಪ್ರಯಾಣಿಕರೊಬ್ಬರು ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಮೂಲಕ ಮಂಗಳೂರು ವಿಮಾನ‌ ನಿಲ್ದಾಣಕ್ಕೆ ಬಂದಿಳಿದಿದ್ದರು. ತಪಾಸಣೆ ವೇಳೆ ಈತ 430 ಗ್ರಾಂ ತೂಕದ ಚಿನ್ನವನ್ನು ಪೌಡರ್ ಅನ್ನು ಗುದನಾಳದಲ್ಲಿಟ್ಟು ಸಾಗಿಸುತ್ತಿರುವುದು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಬಂಧಿತ ಪ್ರಯಾಣಿಕನಿಂದ ಒಟ್ಟು 20.89 ಲಕ್ಷ ರೂ ಮೌಲ್ಯದ ಅಕ್ರಮ ಚಿನ್ನವನ್ನು ವಶಕ್ಕೆ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿಟ್ಟು ಅಕ್ರಮ ಚಿನ್ನ ಸಾಗಾಟ..!! Read More »

ಕರಾವಳಿ

ಪ್ರಸಿದ್ಧ ವಿಜ್ಞಾನ ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ನಿಧನ

(ನ್ಯೂಸ್ ಕಡಬ) newskadaba,ಬೆಂಗಳೂರು ಜು.02:ಡಿಆರ್ ಡಿಒ ಮಾಜಿ ವಿಜ್ಞಾನಿ, ಹೆಚ್ಎಎಲ್ ಸಂಸ್ಥೆಯ ಹಿರಿಯ ನಿವೃತ್ತ ಇಂಜಿನಿಯರ್, ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ಜುಲೈ 2 ರಂದು ಮಧ್ಯಾಹ್ನ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ವಾರದ ಹಿಂದೆ ತೀವ್ರ ಹೃದಯಾಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರ ಆರೊಗ್ಯ ಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದ ವೈದ್ಯರು “ಸುಧೀಂದ್ರ ಹಾಲ್ದೊಡ್ಡೇರಿ ಅವರ ಆರೋಗ್ಯ ಸುಧಾರಣೆ ಪರಿಸ್ಥಿತಿ ಕಷ್ಟವಿದೆ” ಎಂಬ ಮಾಹಿತಿ ನೀಡಿದ್ದರು. ಸುಧೀಂದ್ರ ಹಾಲ್ದೊಡ್ಡೇರಿ ಅವರ ಮೆದುಳಿಗೆ ಆಮ್ಲಜನಕ ಪೂರೈಕೆಯಾಗುವುದು ಸ್ಥಗಿತಗೊಂಡಿದ್ದರಿಂದ ಅವರ ಮೆದುಳು

ಪ್ರಸಿದ್ಧ ವಿಜ್ಞಾನ ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ನಿಧನ Read More »

ಕರ್ನಾಟಕ
Scroll to Top