Kadaba

ಖಾಸಗಿ ಬಸ್ ಡಿಕ್ಕಿ ► ಪಾದಚಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.23. ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ಮಾದನಾಯಕನಹಳ್ಳಿಯಲ್ಲಿ ತಡರಾತ್ರಿ ನಡೆದಿದೆ. ಮೃತ ದುರ್ದೈವಿಯನ್ನು ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ನಿವಾಸಿ ಸುನೀಲ್ ಕುಮಾರ್(40) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯ ಸಮೀಪದಲ್ಲಿ ಸುಗಮ ಟ್ರಾವೆಲ್ಸ್ ಗೆ ಸೇರಿದ ಖಾಸಗಿ ಬಸ್‍ವೊಂದು ವೇಗವಾಗಿ ಬಂದಿದ್ದು, ಕತ್ತಲೆ ಇದ್ದ ಕಾರಣ ನಡೆದುಕೊಂಡು ಹೋಗುತ್ತಿದ್ದ […]

ಖಾಸಗಿ ಬಸ್ ಡಿಕ್ಕಿ ► ಪಾದಚಾರಿ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ಕಡಬ ಸೇರಿದಂತೆ 49 ಹೊಸ ತಾಲೂಕುಗಳು ಜನವರಿ 01 ರಿಂದ ಅಸ್ತಿತ್ವಕ್ಕೆ ► ಕಂದಾಯ ಸಚಿವ ಕಾಗೋಡು ತಿಮ್ಮಪ್ಪ

(ನ್ಯೂಸ್ ಕಡಬ) newskadaba.com ಬೆಳಗಾವಿ, ನ.21. ಈಗಾಗಲೇ ಘೋಷಣೆ ಮಾಡಿರುವ 49 ಹೊಸ ತಾಲ್ಲೂಕುಗಳು ಜನವರಿ 1 ರಿಂದ ಅಸ್ತಿತ್ವಕ್ಕೆ ಬರಲಿದ್ದು, ಈ ನಿಟ್ಟಿನಲ್ಲಿ ಪ್ರಕ್ರಿಯೆ ಮುಂದುವರಿದಿದೆ’ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಕಾಂಗ್ರೆಸ್ಸಿನ ರಘುಮೂರ್ತಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಹೊಸ ತಾಲ್ಲೂಕುಗಳ ರಚನೆಗೆ ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು, ಹಣಕಾಸನ್ನು ಒದಗಿಸಲಾಗಿದೆ ಎಂದರು. ಇದರೊಂದಿಗೆ ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರ ಹೋಬಳಿಯನ್ನು ಹೊಸ ತಾಲೂಕಾಗಿ ಘೋಷಿಸಬೇಕೆಂಬ ಬೇಡಿಕೆಯನ್ನು ಪರಿಶೀಲನೆ ನಡೆಸಲಾಗುವುದು ಎಂದು

ಕಡಬ ಸೇರಿದಂತೆ 49 ಹೊಸ ತಾಲೂಕುಗಳು ಜನವರಿ 01 ರಿಂದ ಅಸ್ತಿತ್ವಕ್ಕೆ ► ಕಂದಾಯ ಸಚಿವ ಕಾಗೋಡು ತಿಮ್ಮಪ್ಪ Read More »

ಕರ್ನಾಟಕ

ಕಡಬ: ಟಾಟಾ ನ್ಯಾನೋ – ಬೈಕ್ ಢಿಕ್ಕಿ

(ನ್ಯೂಸ್ ಕಡಬ) newskadaba.com ಕಡಬ, ನ.19. ಟಾಟಾ ನ್ಯಾನೋ ಕಾರು ಹಾಗೂ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ ಸವಾರ ಗಾಯಗೊಂಡ ಘಟನೆ ಕಡಬ ಸಮೀಪದಲ್ಲಿ ನಡೆದಿದೆ. ಕುಟ್ರುಪ್ಪಾಡಿ ಗ್ರಾಮದ ವಿಮಲಗಿರಿ ಎಂಬಲ್ಲಿ ಕಾರು ಹಾಗೂ ಬೈಕ್‌ ಮಧ್ಯೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಗಾಯಗೊಂಡಿದ್ದಾರೆ‌. ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ‌. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಡಬ: ಟಾಟಾ ನ್ಯಾನೋ – ಬೈಕ್ ಢಿಕ್ಕಿ Read More »

ಕರಾವಳಿ

ಡಿಸೆಂಬರ್‌ನಲ್ಲಿ ಕಡಬದಲ್ಲಿ ನಡೆಯಲಿದೆ ಪುತ್ತೂರು ತಾಲೂಕು ಸಾಹಿತ್ಯ ಸಮ್ಮೇಳನ ► ಸಮ್ಮೇಳದ ಆಮಂತ್ರಣ ಪತ್ರಿಕೆ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.19. ದ.ಕ. ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಡಿಸೆಂಬರ್ 16 ರಂದು ಕಡಬ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿರುವ ಪುತ್ತೂರು ತಾಲೂಕು 17 ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಕಡಬ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಶನಿವಾರ ನಡೆಯಿತು. ಶ್ರೀ ದುರ್ಗಾಂಬಿಕಾ ಅಮ್ಮನವರಿಗೆ ಪೂಜೆ ಸಲ್ಲಿಸಿದ ಬಳಿಕ ಹಿರಿಯ ಸಾಹಿತಿ ಬಿ.ವಿ.ಅರ್ತಿಕಜೆ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತಮಾಡಿ, ಹಿಂದೊಮ್ಮೆ ಕಡಬದಲ್ಲಿ

ಡಿಸೆಂಬರ್‌ನಲ್ಲಿ ಕಡಬದಲ್ಲಿ ನಡೆಯಲಿದೆ ಪುತ್ತೂರು ತಾಲೂಕು ಸಾಹಿತ್ಯ ಸಮ್ಮೇಳನ ► ಸಮ್ಮೇಳದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಕರಾವಳಿ

ವೈದ್ಯರ ಮುಷ್ಕರಕ್ಕೆ ಜಿಲ್ಲೆಯಲ್ಲಿ ಮೊದಲ ಬಲಿ ► ಪುತ್ತೂರಿನ ಕಾಲೇಜು ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ನ.17. ಕರ್ನಾಟಕ ಖಾಸಗಿ ಆಸ್ಪತ್ರೆ ನಿಯಂತ್ರಣ ತಿದ್ದುಪಡಿ ವಿಧೇಯಕ (ಕೆಪಿಎಂಇ) ವಿರುದ್ಧ ಖಾಸಗಿ ವೈದ್ಯರು ನಡೆಸುತ್ತಿರುವ ಮುಷ್ಕರದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ವಿದ್ಯಾರ್ಥಿನಿಯೋರ್ವರು ಮೊದಲ‌ ಬಲಿಯಾಗಿದ್ದಾರೆ. ಮೃತರನ್ನು ಪುತ್ತೂರು ವಿವೇಕಾನಂದ ಕಾಲೇಜಿನ ದ್ವಿತೀಯ ಬಿ.ಕಾಂ. ವಿದ್ಯಾರ್ಥಿನಿ ಪೂಜಾ(19) ಎಂದು ಗುರುತಿಸಲಾಗಿದೆ. ಈಕೆ ತನ್ನ ಎರಡೂ ಕಿಡ್ನಿಗಳ ವೈಫಲ್ಯದಿಂದ ಬಳಲುತ್ತಿದ್ದು, ವಾರದಲ್ಲಿ ಎರಡು ಬಾರಿ ಡಯಾಲಿಸಿಸ್ ನಡೆಸಲಾಗುತ್ತಿತ್ತು. ಆದರೆ ವೈದ್ಯರ ಮುಷ್ಕರದಿಂದಾಗಿ ಡಯಾಲಿಸಿಸ್ ನಡೆಸಿರಲಿಲ್ಲವೆನ್ನಲಾಗಿದ್ದು, ಅನಾರೋಗ್ಯ ತೀವ್ರಗೊಂಡ ಹಿನ್ನೆಲೆಯಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ

ವೈದ್ಯರ ಮುಷ್ಕರಕ್ಕೆ ಜಿಲ್ಲೆಯಲ್ಲಿ ಮೊದಲ ಬಲಿ ► ಪುತ್ತೂರಿನ ಕಾಲೇಜು ವಿದ್ಯಾರ್ಥಿನಿ ಮೃತ್ಯು Read More »

ಕರಾವಳಿ

ಕಡಬದ ವಿವಿಧ ಸಂಘಸಂಸ್ಥೆಗಳ ಹಾಗೂ ಸಾರ್ವಜನಿಕರ ಪರವಾಗಿ ► ಸಾಹಿತಿ ಗೋಪಾಲ್ ರಾವ್‌ರಿಗೆ ಸಾರ್ವಜನಿಕ ಶ್ರದ್ಧಾಂಜಲಿ

(ನ್ಯೂಸ್ ಕಡಬ) newskadaba.com ಕಡಬ, ನ.16. ಗೋಪಾಲ ರಾವ್ ರವರು ಕಡಬ ಕಂಡ ಅತ್ಯಂತ ಶ್ರೇಷ್ಠ ಹಾಗೂ ಚಿಂತನಾ ಶೀಲ ಸಾಹಿತಿಯಾಗಿ ಕಡಬಕ್ಕೆ ನೀಡಿದ ಕೊಡುಗೆ ಅಪಾರ ಎಂದು ಕೊಕ್ಕಡ ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ವಿಶ್ವನಾಥ್ ರೈ ಪೆರ್ಲ ಹೇಳಿದರು. ಅವರು ಇತ್ತೀಚೆಗೆ ನಮ್ಮಿಂದ ಅಗಲಿದ ಕಡಬದ ಹಿರಿಯ ಸಾಹಿತಿ, ರಾಷ್ಟ್ರ ಪ್ರಶಸ್ತಿ ವಿಜೇತ ಧಾರ್ಮಿಕ ಮುಂದಾಳು, ಸಾಮಾಜಿಕ ಹಿತಚಿಂತಕ, ನಿವೃತ್ತ ಮುಖ್ಯ ಶಿಕ್ಷಕ ದಿ| ಗೋಪಾಲ್ ರಾವ್ ರವರಿಗೆ ಗುರುವಾರದಂದು ಕಡಬದ ಅನುಗ್ರಹ ಮಿನಿ

ಕಡಬದ ವಿವಿಧ ಸಂಘಸಂಸ್ಥೆಗಳ ಹಾಗೂ ಸಾರ್ವಜನಿಕರ ಪರವಾಗಿ ► ಸಾಹಿತಿ ಗೋಪಾಲ್ ರಾವ್‌ರಿಗೆ ಸಾರ್ವಜನಿಕ ಶ್ರದ್ಧಾಂಜಲಿ Read More »

ಕರಾವಳಿ

ಕೆಎಸ್ಸಾರ್ಟಿಸಿ ಬಸ್ – ಸ್ಕೂಲ್ ಬಸ್ ಢಿಕ್ಕಿ ► ಮೂವರು ವಿದ್ಯಾರ್ಥಿಗಳು ಮೃತ್ಯು

(ನ್ಯೂಸ್ ಕಡಬ) newskadaba.com ನ.16, ರಾಮನಗರ, ಚಾಲಕನ ನಿಯಂತ್ರಣ ತಪ್ಪಿದ ಸ್ಕೂಲ್ ಬಸ್ಸೊಂದು ಕೆಎಸ್‍ಆರ್ ಟಿಸಿ ಬಸ್‍ಗೆ ಡಿಕ್ಕಿ ಹೊಡೆದು ಬಳಿಕ ಮರಕ್ಕೆ ಗುದ್ದಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಕನಕಪುರ ತಾಲೂಕಿನ ದೊಡ್ಡಮರಳವಾಡಿ ಸಮೀಪದ ಅನ್ನಪೂರ್ಣೇಶ್ವರಿ ಆಶ್ರಮದ ಬಳಿ ನಡೆದಿದೆ. ಗುರುಕುಲ ಶಾಲೆಯ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮೃತ ವಿದ್ಯಾರ್ಥಿಗಳ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಕನಕಪುರ-ತೇರುಬೀದಿ ಮಾರ್ಗವಾಗಿ ಮರಳವಾಡಿ ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಗೆ ಸ್ಕೂಲ್ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಕೂಲ್ ಬಸ್ ನ ಛಾವಣಿ

ಕೆಎಸ್ಸಾರ್ಟಿಸಿ ಬಸ್ – ಸ್ಕೂಲ್ ಬಸ್ ಢಿಕ್ಕಿ ► ಮೂವರು ವಿದ್ಯಾರ್ಥಿಗಳು ಮೃತ್ಯು Read More »

ಕರಾವಳಿ

ಮೈಸೂರಲ್ಲಿ ಭೀಕರ ಅಪಘಾತ ► ಉಳ್ಳಾಲ ಮೂಲದ ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು, ನ.14. ಇಲ್ಲಿನ ಹುಣಸೂರು ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತವೊಂದರಲ್ಲಿ ಮಂಗಳೂರು ನಗರದ ಉಳ್ಳಾಲ ಮೂಲದ ಮೂವರು ಸಾವನಪ್ಪಿದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ಮೃತರನ್ನು ತೊಕ್ಕೊಟು ಸಮೀಪದ ಉಳ್ಳಾಲದ ಅಬ್ದುಲ್ ಹಮೀದ್(47), ಸಹೋದರ ಮಹಮದ್ ಇಕ್ಬಾಲ್(37) ಹಾಗೂ ಹಮೀದ್ ಪುತ್ರ ಶೇಕ್ ಹಕೀಬ್(18) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಮವಾರ ಸಂಜೆ ಪ್ರವಾಸಕ್ಕೆಂದು ತೊಕ್ಕೊಟ್ಟು ವಿನಿಂದ ಊಟಿಗೆ ಕುಟುಂಬ ಸಮೇತ ತೆರಳುತ್ತಿದ್ದರು. ಈ ವೇಳೆ ಮೈಸೂರಿನ ಬಸರಿಕಟ್ಟೆ ಬಳಿ ಟೆಂಪೋ

ಮೈಸೂರಲ್ಲಿ ಭೀಕರ ಅಪಘಾತ ► ಉಳ್ಳಾಲ ಮೂಲದ ಮೂವರು ಮೃತ್ಯು Read More »

ಕರಾವಳಿ

ಹೊಸ್ಮಠ: ಫ್ಯಾನ್ಸಿ ಮತ್ತು ಟೈಲರಿಂಗ್ ಅಂಗಡಿ ಬೆಂಕಿಗಾಹುತಿ ► ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com ಕಡಬ, ನ.14. ಇಲ್ಲಿನ ಹೊಸ್ಮಠ ಬಸ್ ನಿಲ್ದಾಣದ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಸುಗುಣಾ ದಯಾನಂದ ಎಂಬವರ ಫ್ಯಾನ್ಸಿ ಮತ್ತು ಟೈಲರಿಂಗ್ ಅಂಗಡಿಯೊಂದು ಬೆಂಕಿಗಾಹುತಿಯಾದ ಘಟನೆ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಲ್ಲಿ ಕುಟ್ರುಪ್ಪಾಡಿ ಗ್ರಾಮ ಪಂಚಾಯತಿಯ ಕೇಂದ್ರ ಗ್ರಂಥಾಲಯ ಹಾಗೂ ಫ್ಯಾನ್ಸಿ ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಅಂಗಡಿಯಲ್ಲಿದ್ದ ಟೈಲರಿಂಗ್ ಮೆಷಿನ್,   ಮದುವೆ ಸಮಾರಂಭಗಳ ಕೃತಕ ಆಭರಣಗಳು, ಅಗತ್ಯ ದಾಖಲೆ ಪತ್ರಗಳು ಸೇರಿದಂತೆ ಲಕ್ಷಾಂತರ ರೂ. ನಷ್ಟ ಅಂದಾಜಿಸಲಾಗಿದೆ. ಘಟನೆಗೆ ನಿಖರವಾದ

ಹೊಸ್ಮಠ: ಫ್ಯಾನ್ಸಿ ಮತ್ತು ಟೈಲರಿಂಗ್ ಅಂಗಡಿ ಬೆಂಕಿಗಾಹುತಿ ► ಲಕ್ಷಾಂತರ ರೂ. ನಷ್ಟ Read More »

ಕರಾವಳಿ

ಬೆಳ್ತಂಗಡಿ: ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಲಕ್ಷದೀಪೋತ್ಸವದ ಸಂಭ್ರಮ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.14. ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಐದು ದಿನಗಳ ದೀಪಗಳ ಉತ್ಸವಕ್ಕೆ ಚಾಲನೆ ದೊರತಿದ್ದು,  ಕ್ಷೇತ್ರದ ಪರಿಸರ ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ. ದೀಪೋತ್ಸವದ ವೇಳೆ ಕ್ಷೇತ್ರದ ಮುಖ್ಯ ದೇವರು ಮಂಜುನಾಥ, ಕ್ಷೇತ್ರದ ಹೊರಗೆ ಬಂದು ಭಕ್ತರಿಂದ ಪೂಜೆ ಪಡೆಯುವುದು ಇಲ್ಲಿನ ವಿಶೇಷ. ಕ್ಷೇತ್ರದ ಪರಿಸರದಲ್ಲಿ ದೇವರನ್ನು ಒಂದೊಂದು ಕಟ್ಟೆಯಲ್ಲಿಟ್ಟು ಪೂಜಿಸುತ್ತಾರೆ. ದೇವರ ಪೂಜಾ ಕಾರ್ಯಗಳು ಪ್ರತಿದಿನ ಬೆಳಗ್ಗೆ 5.30ಕ್ಕೆ ಆರಂಭವಾಗಲಿದೆ. ನವೆಂಬರ್ 16 ಮತ್ತು 17ರಂದು ನಡೆಯುವ 85ನೇ ವರ್ಷದ ಸರ್ವ ಧರ್ಮ

ಬೆಳ್ತಂಗಡಿ: ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಲಕ್ಷದೀಪೋತ್ಸವದ ಸಂಭ್ರಮ Read More »

ಕರಾವಳಿ
Scroll to Top