Kadaba

ಹೊಸಮಠ: ಸಾಲ ಮನ್ನಾ ಸೌಲಭ್ಯದಿಂದ ವಂಚಿತರಾಗಿರುವ 80 ಮಂದಿ ಸಾಲಗಾರು..!!!

(ನ್ಯೂಸ್ ಕಡಬ) newskadaba.com ಕಡಬ, ಅ.30. ಸರಕಾರದ ಸಾಲಮನ್ನಾ ಯೋಜನೆಯಿಂದ ಕುಟ್ರುಪ್ಪಾಡಿ ಸಿಎ ಬ್ಯಾಂಕ್ಗೆ 3.5ಕೋಟಿ ರೂ.ಬರಲು ಬಾಕಿ, 80 ಜನ ಸದಸ್ಯರು ಸಾಲಮನ್ನಾದಿಂದ ವಂಚಿತರಾಗಿದ್ದಾರೆ. ಸಾಲಮನ್ನಾ ಘೋಷಿಸಿದ ಹಣವನ್ನು ಕೂಡಲೇ ಸಂಘಕ್ಕೆ ಜಮೆ ಮಾಡುವುದರೊಂದಿಗೆ ಸಮಯಕ್ಕೆ ಸರಿಯಾಗಿ ಸಾಲ ಮರುಪಾವತಿ ಮಾಡಿ ಸಾಲ ಮನ್ನಾ ಸೌಲಭ್ಯದಿಂದ ವಂಚಿತರಾಗಿರುವ 80 ಮಂದಿ ಸಾಲಗಾರರಿಗೂ ಸೌಲಭ್ಯ ಒದಗಿಸಬೇಕಾಗಿದೆ ಎಂದು ಹೊಸಮಠ ಪ್ರಾ.ಕೃ.ಸ.ಸಂಘದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಲಾಗಿದೆ. ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ನಿರ್ದೇಶಕ ಜಯಚಂದ್ರ ರೈ ಕುಂಟೋಡಿಯವರು ಸರಕಾರ ರೈತರ […]

ಹೊಸಮಠ: ಸಾಲ ಮನ್ನಾ ಸೌಲಭ್ಯದಿಂದ ವಂಚಿತರಾಗಿರುವ 80 ಮಂದಿ ಸಾಲಗಾರು..!!! Read More »

ಕರಾವಳಿ

ಬೆಳ್ತಂಗಡಿ: ಕಾರುಗಳ ಮಧ್ಯೆ ಢಿಕ್ಕಿ ► ಇಬ್ಬರು ಮೃತ್ಯು, ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.29. ಕಾರುಗಳೆರಡರ ನಡುವೆ ಮುಖಾಮುಖಿ ಢಿಕ್ಕಿಯುಂಟಾದ ಪರಿಣಾಮ ಇಬ್ಬರು ಮೃತಪಟ್ಟು,‌ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ಸಮೀಪದ ಗರಡಾಡಿ ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೃತಪಟ್ಟವರನ್ನು ಗುರುವಾಯನಕೆರೆ ಸಮೀಪದ ಕುವೆಟ್ಟು ನಿವಾಸಿಗಳಾದ ವಿನಾಯಕ ಹಾಗು ವಿಶ್ವಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

ಬೆಳ್ತಂಗಡಿ: ಕಾರುಗಳ ಮಧ್ಯೆ ಢಿಕ್ಕಿ ► ಇಬ್ಬರು ಮೃತ್ಯು, ನಾಲ್ವರು ಗಂಭೀರ Read More »

ಕರಾವಳಿ

ಅಮಾಯಕ ಹಿಂದೂ ಯುವಕರ ಮೇಲೆ ಪೊಲೀಸ್ ದಬ್ಬಾಳಿಕೆ ಆರೋಪ ► ಕಡಬ ಬಂದ್ ಯಶಸ್ವಿ

(ನ್ಯೂಸ್ ಕಡಬ) newskadaba.com ಕಡಬ, ಅ.28. ಅಮಾಯಕ ಹಿಂದೂ ಯುವಕರ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಹಿಂದೂಪರ ಸಂಘಟನೆಗಳು ನೀಡಿದ್ದ ಕಡಬ ಬಂದ್ ಗೆ ಪೂರ್ಣ ಬೆಂಬಲ ವ್ಯಕ್ತವಾಗಿದ್ದು, ಕಡಬ ಪರಿಸರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ವ್ಯಾಪಾರಸ್ಥರು ಬೆಂಬಲಿಸಿದ್ದಾರೆ. ಕಡಬದಲ್ಲಿ ಈ ಹಿಂದೆ ಮಕ್ಕಾ ಮಸೀದಿಯ ಅವಹೇಳನ ನಡೆಸಿರುವ ಪ್ರಕರಣದಲ್ಲಿ ಆರೋಪಿಯನ್ನು ಹಿಂದೂ ಸಂಘಟನೆಯ ಮುಖಂಡರೇ ಠಾಣೆಗೆ ಒಪ್ಪಿಸಿದ್ದರೂ ಅಮಾಯಕ ಹಿಂದೂ ಕಾರ್ಯಕರ್ತರನ್ನು ಪೊಲೀಸರು ಪ್ರಕರಣದಲ್ಲಿ ಸಿಲುಕಿಸುತ್ತಿದ್ದಾರೆ‌. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಗೆ ಸಹಕಾರ

ಅಮಾಯಕ ಹಿಂದೂ ಯುವಕರ ಮೇಲೆ ಪೊಲೀಸ್ ದಬ್ಬಾಳಿಕೆ ಆರೋಪ ► ಕಡಬ ಬಂದ್ ಯಶಸ್ವಿ Read More »

ಕರಾವಳಿ

ಟಿಪ್ಪು ಸುಲ್ತಾನ್, ಸಿದ್ದರಾಮಯ್ಯರವರ ಅವಹೇಳನ ► ಉಪ್ಪಿನಂಗಡಿ ಯುವ ಕಾಂಗ್ರೆಸ್ ನಿಂದ ದೂರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.27. ಸ್ವಾತಂತ್ರ ಸೇನಾನಿ ಟಿಪ್ಪು ಸುಲ್ತಾನ್ ಹಾಗೂ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರವನ್ನು ಅಸಹ್ಯವಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದೆ ಎಂದು ಆರೋಪಿಸಿ ಉಪ್ಪಿನಂಗಡಿ ಪರಿಸರದ ಇಬ್ಬರ ಮೇಲೆ ಯುವ ಕಾಂಗ್ರೆಸ್ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದೆ. 34ನೇ ನೆಕ್ಕಿಲಾಡಿಯಲ್ಲಿನ ಕಾರ್ ಕ್ಲಬ್ ಮಾಲಕ ಸದಾನಂದ ಹಾಗೂ ಯೊಗೀಶ್ ಪ್ರಭು ಅವರ ಮೇಲೆ ದೂರು ದಾಖಲಾಗಿದ್ದು, ಯೊಗೀಶ್ ಪ್ರಭು ಎಂಬವರು ಸ್ವಾತಂತ್ರ್ಯ ಸೇನಾನಿ ಟಿಪ್ಪು ಸುಲ್ತಾನ್ ಹಾಗೂ ಕರ್ನಾಟಕದ ಮುಖ್ಯಮಂತ್ರಿ

ಟಿಪ್ಪು ಸುಲ್ತಾನ್, ಸಿದ್ದರಾಮಯ್ಯರವರ ಅವಹೇಳನ ► ಉಪ್ಪಿನಂಗಡಿ ಯುವ ಕಾಂಗ್ರೆಸ್ ನಿಂದ ದೂರು Read More »

ಕರಾವಳಿ

ಶೀಘ್ರವೇ ಮರಳು ಸಾಗಾಟ ನಡೆಸಲು ಅನುಮತಿ ನೀಡುವಂತೆ ಆಗ್ರಹ ► ಕಡಬ ತಾಲ್ಲೂಕು ಟೆಂಪೊ ಚಾಲಕ ಮಾಲಕರ ಸಂಘದಿಂದ ತಹಶಿಲ್ದಾರರಿಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಅ.27. ಸರಕಾರವು ಟೆಂಪೋಗಳಲ್ಲಿ ಮರಳನ್ನು ಸಾಗಿಸಲು ಶೀಘ್ರದಲ್ಲೇ ಅನುಮತಿ ನೀಡಬೇಕು ಎಂದು ಕಡಬ ತಾಲ್ಲೂಕು ಟೆಂಪೋ ಚಾಲಕ ಮಾಲಕರ ಸಂಘದ ವತಿಯಿಂದ ಕಡಬ ತಹಶಿಲ್ದಾರರ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ನೀಡಲಾಯಿತು. ಕಡಬ ಪರಿಸರದಲ್ಲಿ ಸುಮಾರು 32 ಟೆಂಪೋ ವಾಹನಗಳಿದ್ದು, ಟೆಂಪೋದಲ್ಲಿ ಮರಳನ್ನು ಸಾಗಾಟ ಮಾಡುವ ಮೂಲಕ ಕುಟುಂಬವನ್ನು ನಿರ್ವಹಿಸುತ್ತಾ ಬಂದಿರುತ್ತೇವೆ. ಆದರೆ ಸರಕಾರವು ಏಕಾಏಕಿ ಮರಳು ಸಾಗಾಟ ಮಾಡಲು ಅನುಮತಿ ನಿರಾಕರಿಸಿದ್ದು, ಇದರಿಂದಾಗಿ ಮರಳು‌ಲೋಡು ಮಾಡುತ್ತಿರುವ ಸುಮಾರು 250

ಶೀಘ್ರವೇ ಮರಳು ಸಾಗಾಟ ನಡೆಸಲು ಅನುಮತಿ ನೀಡುವಂತೆ ಆಗ್ರಹ ► ಕಡಬ ತಾಲ್ಲೂಕು ಟೆಂಪೊ ಚಾಲಕ ಮಾಲಕರ ಸಂಘದಿಂದ ತಹಶಿಲ್ದಾರರಿಗೆ ಮನವಿ Read More »

ಕರಾವಳಿ

ಮಕ್ಕಾ ಮಸೀದಿ ಅವಹೇಳನ ಪ್ರಕರಣದಲ್ಲಿ ಅಮಾಯಕ ಯುವಕರ ಫಿಕ್ಸ್ ಆರೋಪ ► ಹಿಂದೂಪರ ಸಂಘಟನೆಗಳ ವತಿಯಿಂದ ಶನಿವಾರ ಕಡಬ ಬಂದ್ ಗೆ ಕರೆ

(ನ್ಯೂಸ್ ಕಡಬ) newskadaba.com ಕಡಬ, ಅ.26. ವಾಟ್ಸಾಪ್ ನಲ್ಲಿ ಮುಸ್ಲಿಮರ ಪವಿತ್ರ ಕ್ಷೇತ್ರವಾದ ಮಕ್ಕಾ ಮಸೀದಿಯ ಅವಹೇಳನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿತ ವ್ಯಕ್ತಿಯನ್ನು ಪೋಲಿಸರಿಗೆ ಒಪ್ಪಿಸಿದರೂ ಅಮಾಯಕ ಹಿಂದೂ ಕಾರ್ಯಕರ್ತರನ್ನು ಪೋಲೀಸರು ಪ್ರಕರಣದಲ್ಲಿ ಸಿಲುಕಿಸಿ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಅಕ್ಟೋಬರ್ 28 ಶನಿವಾರದಂದು ಕಡಬ ಬಂದ್ ಗೆ ಹಿಂದೂಪರ ಸಂಘಟನೆಗಳು ಕರೆನೀಡಿವೆ. ಕಡಬದಲ್ಲಿ ಗುರುವಾರ ಸಂಜೆ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ತುತರ್ು ಸಭೆ ನಡೆಸಿ ಈ ನಿಧರ್ಾರಕ್ಕೆ ಬಂದಿದ್ದಾರೆ. ಸಭೆಯಲ್ಲಿ ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ

ಮಕ್ಕಾ ಮಸೀದಿ ಅವಹೇಳನ ಪ್ರಕರಣದಲ್ಲಿ ಅಮಾಯಕ ಯುವಕರ ಫಿಕ್ಸ್ ಆರೋಪ ► ಹಿಂದೂಪರ ಸಂಘಟನೆಗಳ ವತಿಯಿಂದ ಶನಿವಾರ ಕಡಬ ಬಂದ್ ಗೆ ಕರೆ Read More »

ಕರಾವಳಿ

ಭಾನುವಾರ ಪ್ರಧಾನಿ ಧರ್ಮಸ್ಥಳಕ್ಕೆ ಭೇಟಿ ► ಭಕ್ತರಿಗೆ ದರ್ಶನ ಭಾಗ್ಯ ನಿಷೇಧ..!!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.26. ಭಾನುವಾರ(ಅ.29 ಕ್ಕೆ) ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿರುವ ಹಿನ್ನಲೆಯಲ್ಲಿ  ಅ. 28 ರ ಮಧ್ಯಾಹ್ನ 2 ರಿಂದ 29 ರ ಮಧ್ಯಾಹ್ನ 2 ರವರೆಗೆ ಭಕ್ತರ ಪ್ರವೇಶವನ್ನು ನಿಷೇಧೀಸಲಾಗಿದೆ. ಧರ್ಮಸ್ಥಳ ಸುತ್ತಮುತ್ತ ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ದಳದಿಂದ ಕಾರ್ಯಚರಣೆ ಆರಂಭವಾಗಿದೆ. SPG ತಂಡ ಭದ್ರತೆ ಪರಿಶೀಲಿಸಿದ ಎಡಿಜಿಪಿ ಮೋದಿ ಭದ್ರತೆಗೆ 2500ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಪ್ರಧಾನಿ ಭೇಟಿ ವೇಳೆ ಭದ್ರತೆ ಒದಗಿಸಲು ಹತ್ತು

ಭಾನುವಾರ ಪ್ರಧಾನಿ ಧರ್ಮಸ್ಥಳಕ್ಕೆ ಭೇಟಿ ► ಭಕ್ತರಿಗೆ ದರ್ಶನ ಭಾಗ್ಯ ನಿಷೇಧ..!!! Read More »

ಕರಾವಳಿ

ಮತ್ತೆ ಆರೋಗ್ಯದಲ್ಲಿ ಏರುಪೇರು ► ಆಸ್ಪತ್ರೆಗೆ ದಾಖಲಾದ ಪೇಜಾವರ ಶ್ರೀಗಳು

(ನ್ಯೂಸ್ ಕಡಬ) newskadaba.com ಉಡುಪಿ, ಅ.26. ಪೇಜಾವರ ಮಠಾಧೀಶರಾದ ವಿಶ್ವೇಶತೀರ್ಥ ಶ್ರೀಗಳಿಗೆ  ರಾತ್ರಿ ಹೊಟ್ಟೆನೋವು ಕಾಣಿಸಿಕೊಂಡ ಪರಿಣಾಮ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಿಂಗಳ ಹಿಂದೆ ಹರ್ನಿಯಾ ಆಪರೇಷನ್ ಗೆ ಒಳಗಾಗಿದ್ದ ಶ್ರೀಗಳು ಇದೀಗ ಮತ್ತೆ ಕೆಎಂಸಿಗೆ ದಾಖಲಾಗಿದ್ದಾರೆ. ದಾಖಲಾದ ವಿಶ್ವೇಶತೀರ್ಥರನ್ನು, ಸ್ಕ್ಯಾನಿಂಗ್ ಗೆ ಒಳಪಡಿಸಲಾಯ್ತು. ಎರಡು ದಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡುವ ಸಾಧ್ಯತೆಯಿದೆ. ಸ್ಕಾನಿಂಗ್ ಹಾಗೂ ಹೆಚ್ಚಿನ ಚಿಕಿತ್ಸೆಗೆ ಸೂಚಿಸಿರುವ ವೈದ್ಯರು ತಪಾಸಣೆ ನಡೆಸಿದ್ದಾರೆ. ರಾತ್ರಿಯ ಪೂಜೆ ಪೂರೈಸಿ, ಕೆಎಂಸಿ ಆಸ್ಪತ್ರೆಗೆ ತೆರಳಿರುವ ಸ್ವಾಮೀಜಿ ಅನುಷ್ಟಾನಗಳನ್ನೂ ಪೂರೈಸಿದ್ದಾರೆ. ಸ್ವಾಮೀಜಿ ಆರೋಗ್ಯವಾಗಿದ್ದಾರೆ,

ಮತ್ತೆ ಆರೋಗ್ಯದಲ್ಲಿ ಏರುಪೇರು ► ಆಸ್ಪತ್ರೆಗೆ ದಾಖಲಾದ ಪೇಜಾವರ ಶ್ರೀಗಳು Read More »

ಕರಾವಳಿ

ಸುಂಕದಕಟ್ಟೆ: ರಾಜ್ಯ ಹೆದ್ದಾರಿ ಬದಿಯಲ್ಲಿ ಅಪಾಯಕಾರಿ ಮರ ► ಕಣ್ಮುಚ್ಚಿ ಕುಳಿತ ಸಂಬಂಧಪಟ್ಟ ಅಧಿಕಾರಿಗಳು..!!!

(ನ್ಯೂಸ್ ಕಡಬ) newskadaba.com ಕಡಬ, ಅ.26. ಮರ್ದಾಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಸುಂಕದಕಟ್ಟೆ ಸಮೀಪ ರಸ್ತೆಯ ಬದಿಯಲ್ಲಿ ಮರವೊಂದು ರಸ್ತೆಗೆ ಬೀಳುವ ಹಂತದಲ್ಲಿದ್ದು ಇದಕ್ಕೆ  ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ. ಅರಣ್ಯ ಇಲಾಖಾ ವಸತಿಗೃಹದ ಕಚೇರಿ ಸಮೀಪವೇ ಈ ಅಪಾಯಕಾರಿ ಮರ ಸಂಪೂರ್ಣವಾಗಿ ಒಣಗಿ ರಸ್ತೆಗೆ ಬೀಳುವ ಹಂತದಲ್ಲಿದ್ದರೂ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ತೆರವುಗೊಳಿಸುವ ಮನಸ್ಸು ಮಾಡುತ್ತಿಲ್ಲ. ಈ ರಸ್ತೆಯಲ್ಲಿ ದಿನನಿತ್ಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾವಿರಾರು ಯಾತ್ರಾರ್ಥಿ ವಾಹನಗಳು ಸಂಚಾರಿಸುತ್ತಿದ್ದು ಅಲ್ಲದೆ ಪ್ರತಿನಿತ್ಯ ವಿದ್ಯಾರ್ಥಿಗಳು, ಸಾರ್ವಜನಿಕರು ರಸ್ತೆಯ

ಸುಂಕದಕಟ್ಟೆ: ರಾಜ್ಯ ಹೆದ್ದಾರಿ ಬದಿಯಲ್ಲಿ ಅಪಾಯಕಾರಿ ಮರ ► ಕಣ್ಮುಚ್ಚಿ ಕುಳಿತ ಸಂಬಂಧಪಟ್ಟ ಅಧಿಕಾರಿಗಳು..!!! Read More »

ಕರಾವಳಿ

ಇದು ಜೀವರಕ್ಷಕವೋ…? ಯಮದೂತವೋ…? ► ಅನಾಹುತವನ್ನು ಆಹ್ವಾನಿಸುತ್ತಿರುವ ಕಡಬದ 108 ಆಂಬ್ಯುಲೆನ್ಸ್

(ನ್ಯೂಸ್ ಕಡಬ) newskadaba.com ಕಡಬ, ಅ.25. ಅಪಘಾತದಂತಹ ತುರ್ತು ಸಂದರ್ಭಗಳಲ್ಲಿ ಜನರ ಜೀವರಕ್ಷಣೆಗೆಂದು ಸರಕಾರದಿಂದ ನಿಯೋಜಿತವಾಗಿರುವ 108 ಆಂಬ್ಯುಲೆನ್ಸ್ ವಾಹನವು ಇಲಾಖೆಯ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದಾಗಿ ಯಮದೂತವಾಗಿ ಪರಿಣಮಿಸುತ್ತಿದೆಯಾ…??   ಹೌದು… ಹೀಗೊಂದು ಸಂಶಯ ಸಾರ್ವಜನಿಕರನ್ನು ಕಾಡುತ್ತಿದೆ. ವಾಹನದಲ್ಲಿ ಅಗತ್ಯವಾಗಿ ಇರಬೇಕಾಗಿದ್ದ ಚಕ್ರಗಳೇ ಸರಿಯಿಲ್ಲದಿದ್ದರೆ ಹೇಗೆ….? ಕಡಬ ಪರಿಸರದಲ್ಲಿ ತುರ್ತು ಸಂದರ್ಭಕ್ಕೆಂದು ಕೊಡಮಾಡಿರುವ 108 ಆಂಬ್ಯುಲೆನ್ಸ್ ವಾಹನದ ಹಿಂಭಾಗದ ಎರಡೂ ಚಕ್ರಗಳು ಸವೆದಿದ್ದು ಈಗಲೋ ಆಗಲೋ ಒಡೆಯುವ ಸ್ಥಿತಿಯಲ್ಲಿದೆ. ಚಕ್ರಗಳು ಪೂರ್ತಿ ಸವೆದು ಒಳಗಿನ ತಂತಿಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ.

ಇದು ಜೀವರಕ್ಷಕವೋ…? ಯಮದೂತವೋ…? ► ಅನಾಹುತವನ್ನು ಆಹ್ವಾನಿಸುತ್ತಿರುವ ಕಡಬದ 108 ಆಂಬ್ಯುಲೆನ್ಸ್ Read More »

ಕರಾವಳಿ
Scroll to Top