Kadaba

ಸಾಮಾಜಿಕ ಜಾಲತಾಣದಲ್ಲಿ ದೇಯಿಬೈದೆತಿಯ ಅವಹೇಳನ ಪ್ರಕರಣ ► ವಿಹಿಂಪ, ಬಜರಂಗದಳದಿಂದ ನಾಳೆ ಕಡಬದಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಸೆ.12. ತುಳುನಾಡಿನ ವೀರ ಪುರುಷರಾದ ಕೋಟಿ ಚೆನ್ನಯರ ತಾಯಿ ದೇಯಿಬೈದೆತಿಯ ಪುತ್ತಳಿಯ ಸಮೀಪ ಕುಳಿತು ಅಶ್ಲೀಲವಾಗಿ ಫೊಟೊ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಾಳೆ (ಸೆಪ್ಟೆಂಬರ್ 13) ಕಡಬದಲ್ಲಿ ಪ್ರತಿಭಟನೆ ನಡೆಯಲಿದೆ. ಇತ್ತೀಚೆಗೆ ಈಶ್ವರ ಮಂಗಲದ ಹನೀಫ್ ಎಂಬಾತ ದೇಯಿಬೈದಿತಿಯ ನೆನಪಿಗೋಸ್ಕರ ಸರಕಾರದಿಂದ ನಿರ್ಮಿಸಲ್ಪಟ್ಟ ದೇಯಿಬೈದಿತಿ ಔಷಧಿ ವನದಲ್ಲಿ ಬೈದೆತಿಯ ಎದೆಯ ಭಾಗವನ್ನು ಮುಟ್ಟಿ ಅಶ್ಲೀಲ ರೀತಿಯಲ್ಲಿ ಫೋಟೊ ತೆಗೆದು ಸಾಮಾಹಿಕ ಜಾಲತಾಣದಲ್ಲಿ […]

ಸಾಮಾಜಿಕ ಜಾಲತಾಣದಲ್ಲಿ ದೇಯಿಬೈದೆತಿಯ ಅವಹೇಳನ ಪ್ರಕರಣ ► ವಿಹಿಂಪ, ಬಜರಂಗದಳದಿಂದ ನಾಳೆ ಕಡಬದಲ್ಲಿ ಪ್ರತಿಭಟನೆ Read More »

ಕರಾವಳಿ

ಗೌರಿ ಲಂಕೇಶ್ ಹತ್ಯೆ ಪ್ರಕರಣ ► ಇಂದು ರಾಷ್ಟ್ರಮಟ್ಟದ ಪ್ರತಿರೋಧ ಸಮಾವೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.12. ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿ ಗೌರಿ ಲಂಕೇಶ್ ಹತ್ಯೆ ವಿರೋಧಿ ಹೋರಾಟ ವೇದಿಕೆಯ ವತಿಯಿಂದ ಮಂಗಳವಾರದಂದು ರಾಷ್ಟ್ರಮಟ್ಟದ ಪ್ರತಿರೋಧ ಸಮಾವೇಶವು ಸೆಂಟ್ರಲ್ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಈ ರಾಷ್ಟ್ರಮಟ್ಟದ ಪ್ರತಿರೋಧ ಸಮಾವೇಶದಲ್ಲಿ ಸೀತರಾಂ ಯೆಚೂರಿ, ಸಾಯಿನಾಥ್, ಮೇಧಾ ಪಾಟ್ಕರ್, ಆನಂದ್ ಪಟವರ್ಧನ್, ತೀಸ್ತಾ ಸೆಟಲ್ವಾಡ್, ಯೋಗೆಂದ್ರ ಯಾದವ್, ಜಿಗ್ನೇಶ್ ಮೇವಾನಿ, ವಿವಿಧ ಕವಿಗಳು, ಬರಹಗಾರರು, ಹೋರಾಟಗಾರರು, ಕಲಾವಿದರು, ಪತ್ರಕರ್ತರು ಮತ್ತು ಸಾಮಾನ್ಯ ಜನತೆ ಭಾಗವಹಿಸಲಿದ್ದಾರೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣ ► ಇಂದು ರಾಷ್ಟ್ರಮಟ್ಟದ ಪ್ರತಿರೋಧ ಸಮಾವೇಶ Read More »

ರಾಷ್ಟ್ರೀಯ ನ್ಯೂಸ್

ಕಲ್ಲುಗುಡ್ಡೆ: ಗ್ರಾಮಸ್ಥರ ಪ್ರತಿಭಟನೆಗೆ ಮಣಿದ ಅಬಕಾರಿ ಇಲಾಖೆ ► ಕೊನೆಗೂ ಮದ್ಯದಂಗಡಿಗೆ ಬೀಗ ಮುದ್ರೆ ಹಾಕಿದ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಕಡಬ, ಸೆ.11. ಸುಪ್ರೀಂ ಕೋರ್ಟ್ ಆದೇಶದನ್ವಯ ನೆಲ್ಯಾಡಿ ಹೆದ್ದಾರಿ ಬದಿಯಿಂದ ತೆರವಾಗಿದ್ದ ಮದ್ಯದಂಗಡಿಯನ್ನು ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆಯಲ್ಲಿ ಆರಂಭಿಸಲಾಗುತ್ತದೆ ಎಂಬ ಮಾಹಿತಿಯನ್ವಯ ಗ್ರಾಮಸ್ಥರು ಕಡಬ ತಹಶೀಲ್ದಾರ್ ಕಛೇರಿಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದ್ದು, ಅದೇ ಸಮಯದಲ್ಲಿ ಕಲ್ಲುಗುಡ್ಡೆ ಪೇಟೆಯಲ್ಲಿ ಪೊಲೀಸ್ ಬಂದೋಬಸ್ತ್‌ನಲ್ಲಿ ಮದ್ಯದಂಗಡಿಯನ್ನೂ ತೆರೆದ ಘಟನೆ ನಡೆದಿದೆ. ಕಳೆದ ಮೂರು ತಿಂಗಳಿನಿಂದ ಮದ್ಯದಂಗಡಿ ತೆರೆಯಲ್ಪಡುತ್ತದೆ ಎನ್ನುವ ಸುದ್ದಿಯಿಂದ ಎಚ್ಚೆತ್ತುಕೊಂಡ ಗ್ರಾಮಸ್ಥರು ಭಾರಿ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದರು. ಭಾನುವಾರ

ಕಲ್ಲುಗುಡ್ಡೆ: ಗ್ರಾಮಸ್ಥರ ಪ್ರತಿಭಟನೆಗೆ ಮಣಿದ ಅಬಕಾರಿ ಇಲಾಖೆ ► ಕೊನೆಗೂ ಮದ್ಯದಂಗಡಿಗೆ ಬೀಗ ಮುದ್ರೆ ಹಾಕಿದ ಅಧಿಕಾರಿಗಳು Read More »

ಕರಾವಳಿ

ಕಲ್ಲುಗುಡ್ಡೆ: ಊಟ, ತಿಂಡಿ ಬಿಟ್ಟು ಮುಂದುವರಿದ ಮದ್ಯದಂಗಡಿ ವಿರೋಧಿ ಹೋರಾಟ ► ಕಡಬ ತಹಶಿಲ್ದಾರ್ ಗೆ ದಿಗ್ಬಂಧನ ವಿಧಿಸಿದ ಪ್ರತಿಭಟನಾಕಾರರು

(ನ್ಯೂಸ್ ಕಡಬ) newskadaba.com ಕಡಬ, ಸೆ.11. ಕಲ್ಲುಗುಡ್ಡೆಯಲ್ಲಿ ಮದ್ಯದಂಗಡಿ ತೆರೆದಿರುವುದನ್ನು ವಿರೋಧಿಸಿ ಗ್ರಾಮಸ್ಥರು ಊಟ, ನೀರು ಬಿಟ್ಟು ಪ್ರತಿಭಟನೆ ಮುಂದುವರಿಸಿದ್ದಾರೆ. ಮದ್ಯದಂಗಡಿಯ ಕಟ್ಟಡವು ಸರಕಾರಿ ಜಾಗದಲ್ಲಿದೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಕಡಬ ತಹಶಿಲ್ದಾರ್ ಮತ್ತು ಕಂದಾಯ ನಿರೀಕ್ಷಕರಿಗೆ ಪ್ರತಿಭಟನಾಕಾರರು ದಿಗ್ಬಂಧನ ವಿಧಿಸಿದ್ದಾರೆ. ಅಬಕಾರಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಅಕ್ರಮ ಕಟ್ಟಡದಲ್ಲಿ ಆರಂಭವಾದ ಮದ್ಯದಂಗಡಿಯನ್ನು ಬೀಗ ಜಡಿದು ಬಂದ್ ಮಾಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಕಲ್ಲುಗುಡ್ಡೆ: ಊಟ, ತಿಂಡಿ ಬಿಟ್ಟು ಮುಂದುವರಿದ ಮದ್ಯದಂಗಡಿ ವಿರೋಧಿ ಹೋರಾಟ ► ಕಡಬ ತಹಶಿಲ್ದಾರ್ ಗೆ ದಿಗ್ಬಂಧನ ವಿಧಿಸಿದ ಪ್ರತಿಭಟನಾಕಾರರು Read More »

ಕರಾವಳಿ

ಪೊಳಲಿ: ಶ್ರಿ ರಾಜಾರಾಜೇಶ್ವರಿ ಸನ್ನಿಧಿಯಲ್ಲಿ ► ಕೆನರಾ ಇಂಜಿನೀಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಕರಸೇವೆ

(ನ್ಯೂಸ್ ಕಡಬ) newskadaba.com ಪೊಳಲಿ,ಸೆ.11, ಇಲ್ಲಿನ ಇತಿಹಾಸ ಪ್ರಸಿದ್ದ ಶ್ರಿ ರಾಜಾರಾಜೇಶ್ವರಿ ದೇವಾಲಯದ ಜೀರ್ಣೋದ್ಧಾರ ಕಾರ್ಯಗಳು ಭರದಿಂದ ಸಾಗಿದ್ದು , ಹಲವಾರು ಸಂಘ ಸಂಸ್ಥೆಗಳು ಕರಸೇವೆಯ ಮೂಲಕ ದೇವಾಲಯದ ಕಾರ್ಯಗಳಲ್ಲಿ ಹುಮ್ಮಸ್ಸಿನಿಂದ ಭಾಗವಹಿಸಿರುತ್ತಾರೆ. ಬೆಂಜನಪದವು ಕೆನರಾ ಇಂಜಿನೀಯರಿಂಗ್ ಕಾಲೇಜಿನ ಸುಮಾರು ನೂರು ಮಂದಿ ವಿದ್ಯಾರ್ಥಿಗಳು  ಪೊಳಲಿ ರಾಜಾರಾಜೇಶ್ವರಿ ದೇವಾಲಯದ ಜೀರ್ಣೋದ್ಧಾರ ಕಾರ್ಯದಲ್ಲಿ ಕೈಜೋಡಿಸಿ, ನಾವೂ ಬಿಸಿಲಲ್ಲಿ ದುಡಿಯಬಲ್ಲೆವು ಎಂದು ತೋರಿಸಿಕೊಟ್ಟಿದ್ದಾರೆ. ಲವಲವಿಕೆಯಿಂದ ಕೆಲಸಗಾರರೊಂದಿಗೆ ಕೂಡಿ ಎಲ್ಲಾ ಕೆಲಸಗಳನ್ನು ಮಾಡುತ್ತಾ ನುರಿತ ಕೆಲಸಗಾರರಿಗೂ ನಿಬ್ಬೆರಗಾಗುವಂತೆ ಮಾಡಿದ್ದಾರೆ. ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವಂತೆ ಅವರ

ಪೊಳಲಿ: ಶ್ರಿ ರಾಜಾರಾಜೇಶ್ವರಿ ಸನ್ನಿಧಿಯಲ್ಲಿ ► ಕೆನರಾ ಇಂಜಿನೀಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಕರಸೇವೆ Read More »

ಕರಾವಳಿ

ಕಲ್ಲುಗುಡ್ಡೆ: ತೀವ್ರ ವಿರೋಧದ ನಡುವೆಯೂ ಆರಂಭವಾದ ಮದ್ಯದಂಗಡಿ ► ಕಡಬ ತಹಶೀಲ್ದಾರ್ ಕಛೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಸೆ.11. ಸುಪ್ರೀಂ ಕೋರ್ಟ್ ಆದೇಶದನ್ವಯ ನೆಲ್ಯಾಡಿ ಹೆದ್ದಾರಿ ಬದಿಯಲ್ಲಿನ ಬಾರನ್ನು ಇಲ್ಲಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಎಂಬಲ್ಲಿಗೆ ಸ್ಥಳಾಂತರಿಸುವುದನ್ನು ವಿರೋಧಿಸಿ ಸ್ಥಳೀಯರು ಕಡಬ ತಹಶಿಲ್ದಾರ್ ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಘಟನೆ ಸೋಮವಾರದಂದು ನಡೆದಿದೆ. ಕಲ್ಲುಗುಡ್ಡೆಯಲ್ಲಿ ಸ್ಥಳೀಯರ ವಿರೋಧದ ನಡುವೆಯೂ ಬಾರನ್ನು ತೆರೆಯಲು ಕೆಲವರು ತೆರೆಮರೆಯಲ್ಲಿ ಕಸರತ್ತು ನಡೆಸಿ, ಊರವರು ಕಡಬದಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲೇ ಕಲ್ಲುಗುಡ್ಡೆಯಲ್ಲಿ ಸೋಮವಾರದಂದು ಬೆಳಿಗ್ಗೆ ಪೊಲೀಸ್ ರಕ್ಷಣೆಯಲ್ಲಿ ಮದ್ಯದಂಗಡಿಯನ್ನು ತೆರೆಯಲಾಯಿತು. ವಿಷಯ ತಿಳಿದ‌ ಪ್ರತಿಭಟನಾಕಾರರು ಅಬಕಾರಿ

ಕಲ್ಲುಗುಡ್ಡೆ: ತೀವ್ರ ವಿರೋಧದ ನಡುವೆಯೂ ಆರಂಭವಾದ ಮದ್ಯದಂಗಡಿ ► ಕಡಬ ತಹಶೀಲ್ದಾರ್ ಕಛೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ Read More »

ಕರಾವಳಿ

ಮೀನುಗಾರಿಕಾ ಕ್ಷೇತ್ರದಲ್ಲಿ ಹೊಸ ಕ್ರಾಂತಿ ►ಮೀನುಗಳು ಯಾವ ಜಾಗದಲ್ಲಿ ಇವೆ ಎಂಬುದನ್ನು ಇನ್ನ್ಮುಂದೆ ಮೊಬೈಲ್ ಆ್ಯಪ್ ಮೂಲಕ ತಿಳಿದುಕೊಳ್ಳಬಹುದು…!!!

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.11, ಜೀವದ ಹಂಗು ತೊರೆದು ಸಮುದ್ರದಲ್ಲಿ ಮೀನು ಹಿಡಿಯುವ ಮೀನುಗಾರಿಕೆಗಾಗಿ ಹೊಸ ಮೊಬೈಲ್ ಆ್ಯಪ್ ರೆಡಿಯಾಗಿದೆ. ಮೀನು ಯಾವ ಜಾಗದಲ್ಲೇ ಇದೆ ಎಂಬುದರ ಖಚಿತ ಮಾಹಿತಿಯನ್ನು ಈ ಮೊಬೈಲ್ ಆ್ಯಪ್ ತಿಳಿಸಿಕೊಡುತ್ತದೆ. ಚೆನ್ನೈನ ಎಂ.ಎಸ್.ಸ್ವಾಮಿನಾಥನ್ ರಿಸರ್ಚ್ ಫೌಂಡೇಷನ್ ಮೀನುಗಾರ ಸ್ನೇಹಿ ಮೊಬೈಲ್ ಅಪ್ಲಿಕೇಶನ್ ಹೊರತಂದಿದ್ದು, ಮೀನುಗಾರಿಕಾ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ನಾಂದಿ ಹಾಡಿದೆ. ಕನ್ನಡ, ಇಂಗ್ಲಿಷ್, ತಮಿಳು, ಮಲಯಾಳಂ, ತೆಲುಗು ಸೇರಿದಂತೆ ವಿವಿಧ ಭಾಷೆಗಳಲ್ಲಿ ಮೊಬೈಲ್ ಆ್ಯಪ್ ಲಭ್ಯವಿದ್ದು ಗೂಗಲ್ ಪ್ಲೇಸ್ಟೋರ್‍ನಲ್ಲಿ ಉಚಿತವಾಗಿ ಡೌನ್‍ಲೋಡ್

ಮೀನುಗಾರಿಕಾ ಕ್ಷೇತ್ರದಲ್ಲಿ ಹೊಸ ಕ್ರಾಂತಿ ►ಮೀನುಗಳು ಯಾವ ಜಾಗದಲ್ಲಿ ಇವೆ ಎಂಬುದನ್ನು ಇನ್ನ್ಮುಂದೆ ಮೊಬೈಲ್ ಆ್ಯಪ್ ಮೂಲಕ ತಿಳಿದುಕೊಳ್ಳಬಹುದು…!!! Read More »

ಕರಾವಳಿ

Breaking News ► ಕಡೇಶಿವಾಲಯ ದೇವಸ್ಥಾನದಲ್ಲಿ ಕಳ್ಳತನ

(ನ್ಯೂಸ್ ಕಡಬ) newskadaba.com ಬಂಟ್ವಾಳ,ಸೆ.11, ಇಲ್ಲಿನ ಕಡೇಶಿವಾಲಯ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ಅಪಾರ ಪ್ರಮಾಣದ ನಗನಗದು ಕಳವುಗೈದ ಘಟನೆ ಸೋಮವಾರ ಬೆಳಕಿಗೆ ಬಂದಿದೆ. ಬಂಟ್ವಾಳ ತಾಲೂಕಿನ ಕಡೇಶಿವಾಲಯ ದೇವಸ್ಥಾನದಲ್ಲಿ ಅಳವಡಿಸಲಾದ ಸಿಸಿ ಕ್ಯಾಮರವನ್ನು ದ್ವಂಸಗೊಳಿಸಿದ ಕಳ್ಳರು ಗುಡಿಯಲ್ಲಿದ್ದ ಬಂಗಾರದ ಮೂರ್ತಿ, ಬೆಳ್ಳಿಯ ಆಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ.

Breaking News ► ಕಡೇಶಿವಾಲಯ ದೇವಸ್ಥಾನದಲ್ಲಿ ಕಳ್ಳತನ Read More »

ಕರಾವಳಿ

ಏಮ್ಸ್ ಪ್ರಥಮ ದರ್ಜೆ ಕಾಲೇಜು ಕಡಬ ► ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಉದ್ಯೋಗ ಮಾಹಿತಿ, ಸೆ.11. ಕಡಬದ ಏಮ್ಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ಕೆಳಕಂಡ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 15 ರ ಒಳಗಾಗಿ ಅರ್ಜಿಯನ್ನು ಸಲ್ಲಿಸಲು ಸಂಸ್ಥೆಯ ಪ್ರಕಟಣೆ ತಿಳಿಸಿದೆ. Lecturer in commerce Post: 3 ವಿದ್ಯಾರ್ಹತೆ: MCOM/ Lecturer in kannada Post: 1 ವಿದ್ಯಾರ್ಹತೆ: MA/M.Phil/Phd Lecturer in political science Post: 2 ವಿದ್ಯಾರ್ಹತೆ: MA in political science Lecturer in

ಏಮ್ಸ್ ಪ್ರಥಮ ದರ್ಜೆ ಕಾಲೇಜು ಕಡಬ ► ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಕಲ್ಲುಗುಡ್ಡೆ: ಮದ್ಯದಂಗಡಿ ವಿರೋಧಿಸಿ ಜಮಾಯಿಸಿದ ಗ್ರಾಮಸ್ಥರು ► ನಾಳೆ‌ ಕಡಬ ತಹಶೀಲ್ದಾರ್ ಕಛೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಸೆ.10. ಸುಪ್ರೀಂ ಕೋರ್ಟ್ ಆದೇಶದನ್ವಯ ನೆಲ್ಯಾಡಿ ಹೆದ್ದಾರಿ ಬದಿಯಲ್ಲಿನ ಬಾರನ್ನು ಇಲ್ಲಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಎಂಬಲ್ಲಿಗೆ ಸ್ಥಳಾಂತರಿಸುವುದನ್ನು ವಿರೋಧಿಸಿ ಸ್ಥಳೀಯರು ಜಮಾಯಿಸಿದ್ದು, ನಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರಿಂದ ಪರಿಸ್ಥಿತಿ ಶಾಂತವಾದ ಘಟನೆ ಭಾನುವಾರ ಸಂಜೆ ಕಲ್ಲುಗುಡ್ಡೆಯಲ್ಲಿ ನಡೆದಿದೆ. ಕಲ್ಲುಗುಡ್ಡೆಯಲ್ಲಿ ಸ್ಥಳೀಯರ ವಿರೋಧದ ನಡುವೆಯೂ ಬಾರನ್ನು ತೆರೆಯಲು ಕೆಲವರು ತೆರೆಮರೆಯಲ್ಲಿ ಕಸರತ್ತು ಆರಂಭಿಸಿದ್ದು, ಅದರಂತೆ ಶನಿವಾರ ತಡರಾತ್ರಿ ಮದ್ಯವನ್ನು ದಾಸ್ತಾನು ಮಾಡಲಾಗಿದೆ‌ ಎಂದು ಸ್ಥಳೀಯರು ಆರೋಪಿಸಿ ಭಾನುವಾರ ಸಂಜೆ ವೇಳೆ

ಕಲ್ಲುಗುಡ್ಡೆ: ಮದ್ಯದಂಗಡಿ ವಿರೋಧಿಸಿ ಜಮಾಯಿಸಿದ ಗ್ರಾಮಸ್ಥರು ► ನಾಳೆ‌ ಕಡಬ ತಹಶೀಲ್ದಾರ್ ಕಛೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ Read More »

ಕರಾವಳಿ
Scroll to Top