ಉಡುಪಿ ಕೃಷ್ಣಮಠದಲ್ಲಿ ಕಾಣೆಯಾಗಿದ್ದ ‘ಕನ್ನಡ ಬೋರ್ಡ್’ ಪ್ರತ್ಯಕ್ಷ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03: ಉಡುಪಿ ಶ್ರೀಕೃಷ್ಣ ಮಠದ ಮಹಾದ್ವಾರದ ಮೇಲಿದ್ದ ಕನ್ನಡ ಬದಲಿಗೆ ತುಳು ಹಾಗೂ ಸಂಸ್ಕೃತ ಬೋರ್ಡ್ ಅಳವಡಿಸಿದ್ದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ಕೃಷ್ಣಮಠದ ಆಡಳಿತ ಮಂಡಳಿ ಮಹಾದ್ವಾರಕ್ಕೆ ಕನ್ನಡದ ನಾಮಫಲಕವನ್ನು ಅಳವಡಿಸಿದೆ. ಕೊರೊನಾ ಲಾಕ್‌ಡೌನ್ ವೇಳೆ ಸಂಪೂರ್ಣವಾಗಿ ಮಠವನ್ನು ಪುನಶ್ಚೇತನ ಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಹಳೆಯ ಬೋರ್ಡ್ ತೆಗೆದು, ಹೊಸ ಬೋರ್ಡ್ ಅಳವಡಿಸಲಾಗಿತ್ತು. ಆದರೆ ಹೊಸ ಬೋರ್ಡ್ ನಲ್ಲಿ ಕನ್ನಡ ಮಾಯವಾಗಿ ತುಳು ಮತ್ತು ಸಂಸ್ಕೃತ ಪ್ರತ್ಯಕ್ಷವಾಗಿತ್ತು. […]
ಉಡುಪಿ ಕೃಷ್ಣಮಠದಲ್ಲಿ ಕಾಣೆಯಾಗಿದ್ದ ‘ಕನ್ನಡ ಬೋರ್ಡ್’ ಪ್ರತ್ಯಕ್ಷ Read More »
ಕರಾವಳಿ









