Kadaba

ಕಾಸರಗೋಡು: ಬೈಕ್ ಮತ್ತು ಆಟೋರಿಕ್ಷಾ ನಡುವೆ ಅಪಘಾತ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು ನ. 27: ಕಳೆದ ದಿನ ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಹನಫಿ ಬಜಾರ್ ಬಳಿ  ಬೈಕ್ ಹಾಗೂ ಆಟೋರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಾಗೊಂಡ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಚೆರ್ಕಳ ಮಾಸ್ತಿಕುಂಡು ಪೊವ್ವಲ್ ನಿವಾಸಿ ಮಸೂದ್(25) ಎಂದು ಗುರುತಿಸಲಾಗಿದೆ.       ಮೃತಪಟ್ಟ ವ್ಯಕ್ತಿಯನ್ನು ಗುರುತು ಚೀಟಿ ಹಾಗೂ ಬೈಕ್ ನಂಬರ್ ಸಹಾಯದಿಂದ ಗುರುತು ಪತ್ತೆ ಹಚ್ಚಲು ಸಾಧ್ಯವಾಗಿದೆ. ಗಂಭೀರ ಗಾಯಗೊಂಡಿದ್ದ ಸಂದೀಪ್ […]

ಕಾಸರಗೋಡು: ಬೈಕ್ ಮತ್ತು ಆಟೋರಿಕ್ಷಾ ನಡುವೆ ಅಪಘಾತ ➤ ಬೈಕ್ ಸವಾರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ ;ಆರ್.ಟಿ.ಸಿ. ತಿದ್ದುಪಡಿಗೆ ಲಂಚಕ್ಕೆ ಬೇಡಿಕೆ ➤ ಉಪತಹಸೀಲ್ದಾರ್ ಎಸಿಬಿ ಬಲೆಗೆ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 27: ಆರ್.ಟಿ.ಸಿ. ತಿದ್ದುಪಡಿ ಮಾಡಲೆಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ಬಂದ ದೂರಿನನ್ವಯ ದಕ್ಷಿಣ ಕನ್ನಡದ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಅಧಿಕಾರಿಗಳು ಬಂಟ್ವಾಳ ತಾಲೂಕು ಕಚೇರಿಗೆ ದಾಳಿ ನಡೆಸಿದ ವೇಳೆ ಉಪತಹಸೀಲ್ದಾರ್ ರವಿಶಂಕರ್ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದು, ಘಟನೆ ಗುರುವಾರ ಮಧ್ಯಾಹ್ನ ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿ  ನಡೆದಿದೆ.   ದೂರುದಾರರು ತಾಯಿಯ ಹೆಸರಲ್ಲಿರುವ ಜಾಗಕ್ಕೆ ಸಂಬಂಧಿಸಿ ಆರ್.ಟಿ.ಸಿ.ಯಲ್ಲಿ ತಿದ್ದುಪಡಿ ಮಾಡಿಕೊಡಲು ಉಪತಹಸೀಲ್ದಾರ್ 1,500 ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಬಂಟ್ವಾಳ ;ಆರ್.ಟಿ.ಸಿ. ತಿದ್ದುಪಡಿಗೆ ಲಂಚಕ್ಕೆ ಬೇಡಿಕೆ ➤ ಉಪತಹಸೀಲ್ದಾರ್ ಎಸಿಬಿ ಬಲೆಗೆ Read More »

ಕರಾವಳಿ

ಮಂಗಳೂರು ವಿಮಾನ‌ ನಿಲ್ದಾಣಕ್ಕೆ ಶ್ರೀ ಮಧ್ವಶಂಕರ ನಾಮಕರಣ ಮಾಡಿ ➤ ಪುತ್ತಿಗೆ ಶ್ರೀ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು ನ. 27: ಮಂಗಳೂರು ವಿಮಾಣ ನಿಲ್ದಾಣಕ್ಕೆ ಶ್ರೀ ಮಧ್ವ ಶಂಕರರ ಹೆಸರಿಡುವಂತೆ ಉಡುಪಿಯ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀ ಒತ್ತಾಯ ಮಾಡಿದ್ದಾರೆ. ಮಂಗಳೂರು ಸಮೀಪದಲ್ಲಿ ಉಡುಪಿ ಹಾಗೂ ಶೃಂಗೇರಿ ಕ್ಷೇತ್ರ ಇದೆ. ಜಗದ್ಗುರು ಶಂಕರಾಚಾರ್ಯರು ಶೃಂಗೇರಿ ಮಠ ಸ್ಥಾಪಿಸಿದ್ದಾರೆ. ಮಧ್ವಾಚಾರ್ಯರು ಉಡುಪಿಯಲ್ಲಿ ಶ್ರೀ ಕೃಷ್ಣ ಮಠ ಸ್ಥಾಪಿಸಿದ್ದಾರೆ. ಹೀಗಾಗಿ ವಿಮಾನ ನಿಲ್ದಾಣಕ್ಕೆ ಶ್ರೀ ಮಧ್ವ ಶಂಕರ ವಿಮಾನ ನಿಲ್ದಾಣ ಹೆಸರಿಡುವುದು ಅರ್ಥಪೂರ್ಣ ಎಂದು ಶ್ರೀಗಳು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಆಯೋಧ್ಯೆಯಲ್ಲಿ ಶ್ರೀರಾಮನ

ಮಂಗಳೂರು ವಿಮಾನ‌ ನಿಲ್ದಾಣಕ್ಕೆ ಶ್ರೀ ಮಧ್ವಶಂಕರ ನಾಮಕರಣ ಮಾಡಿ ➤ ಪುತ್ತಿಗೆ ಶ್ರೀ ಆಗ್ರಹ Read More »

ಕರಾವಳಿ, ಕರ್ನಾಟಕ

ಪಂಜದ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಪಂಜ ನ. 27: ಕಳೆದ ದಿನ ಪಂಜದ ಯುವಕನೋರ್ವ ಬೆಂಗಳೂರಿನ ತನ್ನ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಪಂಜದ ಬರೆಮೇಲು ಮೋನಪ್ಪ ಗೌಡ ಮತ್ತು ಹೇಮಾವತಿ ದಂಪತಿಗಳ ಪುತ್ರ ಜತಿನ್ ಕುಮಾರ್(30)(ದೀಕ್ಷಿತ್) ಎಂದು ಗುರುತಿಸಲಾಗಿದೆ.   ಬೆಂಗಳೂರಿನಲ್ಲಿ ಹುಂಡೈ ಕಂಪೆನಿಯ ಉದ್ಯೋಗಿಯಾಗಿರುವ ಇವರು ಕಳೆದ ದಿನ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಳಿಕ ವಿಷಯ ತಿಳಿದ ಸಂಬಂಧಿಕರು ಆತನನ್ನು ಚಿಕಿತ್ಸೆಗೆ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೇ

ಪಂಜದ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು : ಕದ್ರಿಯಲ್ಲಿ ಉಗ್ರ ಸಂಘಟನೆ ಲಷ್ಕರ್‌‌ ಪರ ಗೋಡೆ ಬರಹ

(ನ್ಯೂಸ್ ಕಡಬ) newskadaba.com ಮಂಗಳೂರು ನ. 27: ಮಂಗಳೂರಿನಲ್ಲಿ ಕೆಲ ಕಿಡಿಗೇಡಿಗಳು ಉಗ್ರ ಸಂಘಟನೆಗಳ ಪರ ಗೋಡೆಗಳ ಮೇಲೆ ಬರಹಗಳನ್ನು ಬರೆದಿದ್ದಾರೆ .ಸರ್ಕ್ಯೂಟ್‌ಹೌಸ್ ರಸ್ತೆಯ ಅಪಾರ್ಟ್‌ಮೆಂಟ್ ಒಂದರ ಕಾಂಪೌಂಡ್‌ ಮೇಲೆ ಹ್ಯಾಷ್ ಟ್ಯಾಗ್ ಹಾಕಿ ಲಷ್ಕರ್ ಜಿಂದಾಬಾದ್ ಎಂದು ಬರೆಯಲಾಗಿದೆ. ಲಷ್ಕರ್ ಉಗ್ರರನ್ನು ಕರೆಸುವಂತೆ ನಮಗೆ ಒತ್ತಾಯ ಮಾಡಬೇಡಿ ಎಂದೆಲ್ಲಾ ಗೋಡೆಯಲ್ಲಿ ಬರೆಯಲಾಗಿದೆ.       ಇದು ಜನನಿಬಿಡ ರಸ್ತೆಯಾಗಿದ್ದು,  ಹತ್ತಿರದಲ್ಲೇ ಕದ್ರಿ ಪಾರ್ಕ್, ಕದ್ರಿ ಪೊಲೀಸ್ ಠಾಣೆಯಿದೆ.ಕಳೆದ ರಾತ್ರಿ ತಡರಾತ್ರಿ ಈ ವಿವಾದಾತ್ಮಕ ಬರಹ ಬರೆಯಲಾಗಿದೆ

ಮಂಗಳೂರು : ಕದ್ರಿಯಲ್ಲಿ ಉಗ್ರ ಸಂಘಟನೆ ಲಷ್ಕರ್‌‌ ಪರ ಗೋಡೆ ಬರಹ Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಸ.ಪ.ಪೂ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 26: ಸಂವಿಧಾನ ದಿನಾಚರಣೆಯನ್ನು ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪಿನಂಗಡಿಯಲ್ಲಿ ಇಂದು ಆಚರಿಸಲಾಯಿತು.       ಮಾನ್ಯ ಪಾಂಶುಪಾಲರಾದ ಶ್ರೀ ಸುಧೀರ್ ಕುಮಾರ್ ಎಂ. ಇವರು ಅಧ್ಯಕ್ಷತೆಯನ್ನು ವಹಿಸಿ ಸಂವಿಧಾನದ ಪ್ರಸ್ತಾವನೆಯ ಪ್ರಮಾಣವಚನವನ್ನು ಬೋಧಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀ ರಮೇಶ ಹೆಚ್.ಜೆ. ಕಾರ್ಯಕ್ರಮ ನಿರೂಪಿಸಿ ಸಂವಿಧಾನಕ್ಕೆ ಸಂಬಂಧಿಸಿದಂತೆ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಬೋಧಕ ಬೊಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.  

ಉಪ್ಪಿನಂಗಡಿ: ಸ.ಪ.ಪೂ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ Read More »

ಕರಾವಳಿ

ಜಿಲ್ಲಾ ಗೃಹರಕ್ಷಕ ದಳದ ಕಛೇರಿಯಲ್ಲಿ ಘಟಕಾಧಿಕಾರಿಗಳ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 26:  ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರ ನೇತೃತ್ವದಲ್ಲಿ ಘಟಕಾಧಿಕಾರಿಗಳ ಸಭೆಯನ್ನು ನ.26 ರ ಇಂದು ನಡೆಸಲಾಯಿತು. ಮುಂಬರುವ ಗ್ರಾಮ ಪಂಚಾಯತ್ ಚುನಾವಣಾ ಪೂರ್ವ ಸಿದ್ಧತೆ ಬಗ್ಗೆ ಹಾಗೂ ಗೃಹರಕ್ಷಕ ದಿನಾಚರಣೆ ಆಚರಿಸುವ ಬಗ್ಗೆ ಚರ್ಚಿಸಲಾಯಿತು.   ಬಾಕಿ ಇರುವ ಗೃಹರಕ್ಷಕರ ನವೀಕರಣ ಕಡ್ಡಾಯವಾಗಿ ಮಾಡುವಂತೆ ಸೂಚಿಸಲಾಯಿತು. ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಗೆ ವಂತಿಗೆಯನ್ನು ಕಟ್ಟಲು ಬಾಕಿ ಇರುವ ಗೃಹರಕ್ಷಕರಿಂದ ಸಂಗ್ರಹಿಸಿ ಕಛೇರಿಗೆ ಹಸ್ತಾಂತರಿಸಲು

ಜಿಲ್ಲಾ ಗೃಹರಕ್ಷಕ ದಳದ ಕಛೇರಿಯಲ್ಲಿ ಘಟಕಾಧಿಕಾರಿಗಳ ಸಭೆ Read More »

ಕರಾವಳಿ, ಕರ್ನಾಟಕ

ಶ್ರೀ ಕೃಷ್ಣಮಠದಲ್ಲಿ ಚಾತುರ್ಮಾಸ್ಯ ಸಮಾಪ್ತಿ ➤ ಶ್ರೀ ಪಾದರಿಂದ ಭಕ್ತರಿಗೆ ತಪ್ತ ಮುದ್ರಾಧಾರಣೆ

(ನ್ಯೂಸ್ ಕಡಬ) newskadaba.com ಉಡುಪಿ ನ. 26: ಶ್ರೀಕೃಷ್ಣಮಠದಲ್ಲಿ ಚಾತುರ್ಮಾಸ್ಯ ಸಮಾಪ್ತಿ ದಿನವಾದ ದೇವಪ್ರಬೋಧಿನಿ ಏಕಾದಶಿಯಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ತಪ್ತಮುದ್ರಾಧಾರಣೆ ನಡೆಯಿತು. ಪರ್ಯಾಯ ಮಠದ ಪುರೋಹಿತ ಮುದರಂಗಡಿ ಲಕ್ಷ್ಮೀಶ ಆಚಾರ್ಯರು ಸುದರ್ಶನ ಹೋಮದ ಪೂರ್ಣಾಹುತಿ ನಡೆಸಿದರು. ಪೇಜಾವರ ಶ್ರೀಪಾದರು ತಾವೇ ಮುದ್ರಾಧಾರಣೆ ಮಾಡಿಕೊಂಡು ಪರ್ಯಾಯ ಶ್ರೀಪಾದರಿಗೆ ಮುದ್ರಾಧಾರಣೆ ಮಾಡಿದರು. ನಂತರ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಭಕ್ತಾದಿಗಳಿಗೆ ತಪ್ತ ಮುದ್ರಾಧಾರಣೆ ನಡೆಸಿದರು.  

ಶ್ರೀ ಕೃಷ್ಣಮಠದಲ್ಲಿ ಚಾತುರ್ಮಾಸ್ಯ ಸಮಾಪ್ತಿ ➤ ಶ್ರೀ ಪಾದರಿಂದ ಭಕ್ತರಿಗೆ ತಪ್ತ ಮುದ್ರಾಧಾರಣೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಅಹ್ಮದ್ ಪಟೇಲ್ ನಿಧನ ➤ ಕಾಂಗ್ರೆಸ್ ನಿಂದ ಶ್ರದ್ಧಾಂಜಲಿ ಅರ್ಪಣೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 26: ಕಳೆದ ದಿನ ನಿಧನರಾದ ನಿಧನರಾದ ರಾಜ್ಯಸಭೆ ಸದಸ್ಯ, ಕಾಂಗ್ರೆಸ್ ಹಿರಿಯ ಮುಖಂಡ ಅಹ್ಮದ್ ಪಟೇಲ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.   ಮಾಜಿ ಸಚಿವ ರಮಾನಾಥ ರೈ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನ ವಿವಿಧ ಪದಾಧಿಕಾರಿಗಳು ಅಹ್ಮದ್ ಪಟೇಲ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಿದರು. ನುಡಿ ನಮನ ಸಲ್ಲಿಸಿದ ಮಾಜಿ ಸಚಿವ ರಮಾನಾಥ ರೈ, “ಗಾಂಧಿ ಕುಟುಂಬದ

ಮಂಗಳೂರು: ಅಹ್ಮದ್ ಪಟೇಲ್ ನಿಧನ ➤ ಕಾಂಗ್ರೆಸ್ ನಿಂದ ಶ್ರದ್ಧಾಂಜಲಿ ಅರ್ಪಣೆ Read More »

ಕರಾವಳಿ, ಕರ್ನಾಟಕ

ಪಂಜ: ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಪದ್ಮನಾಭ ರೈ ಆಯ್ಕೆ

(ನ್ಯೂಸ್ ಕಡಬ) newskadaba.com ಪಂಜ ನ. 26: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಪದ್ಮನಾಭ ರೈ ಅಗೋಳಿಬೈಲುಗುತ್ತು ರವರು ಇಂದು ಆಯ್ಕೆಯಾಗಿದ್ದಾರೆ.     ಇಲಾಖೆಯ ಆದೇಶದಂತೆ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಆಯ್ಕೆ ಮಡಿದ್ದಾರೆ. ದೇವಳದ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರ್ ಉಪಸ್ಥಿತರಿದ್ದರು.  

ಪಂಜ: ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಪದ್ಮನಾಭ ರೈ ಆಯ್ಕೆ Read More »

ಕರಾವಳಿ
Scroll to Top