ನಾಳೆ(ಡಿ.16) ಕಡಬದಲ್ಲಿ 17ನೇ ಕನ್ನಡ ಸಾಹಿತ್ಯ ಸಮ್ಮೇಳನ ► ಅವಿಭಜಿತ ಪುತ್ತೂರು ತಾಲೂಕಿನ ಕೊನೆಯ ಕನ್ನಡ ಸಾಹಿತ್ಯ ಸಮ್ಮೇಳನ
(ನ್ಯೂಸ್ ಕಡಬ) newskadaba.com ಕಡಬ, ಡಿ.15. ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಅವಿಭಜಿತ ಪುತ್ತೂರು ತಾಲೂಕಿನ 17 ನೇ ಹಾಗೂ ಕೊನೆಯ ಕನ್ನಡ ಸಾಹಿತ್ಯ ಸಮ್ಮೇಳನ ಕಡಬದ ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಡಿಸೆಂಬರ್ 16 ನೇ ಶನಿವಾರದಂದು ಬೆಳಿಗ್ಗಿನಿಂದ ಸಂಜೆಯ ತನಕ ನಡೆಯಲಿದೆ. ಕಡಬದಲ್ಲಿ ಇದು ತಾಲೂಕು ಮಟ್ಟದ ಎರಡನೇ ಸಾಹಿತ್ಯ ಸಮ್ಮೇಳನವಾಗಿದೆ. ಕಡಬ ಈಗಾಗಲೇ ತಾಲೂಕು ಕೇಂದ್ರವಾಗಿ ಘೋಷಣೆಯಾಗಿದ್ದು ಬರುವ ಜನವರಿ ತಿಂಗಳಿನಿಂದ ಪೂರ್ಣ ಪ್ರಮಾಣದ […]


