karavali

ದ.ಕ.ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ 105 ಪದಕ ಗೆದ್ದ ಹೈಫ್ಲೈಯರ್ಸ್ ಕ್ಲಬ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 24. ಕರ್ನಾಟಕ ರಾಜ್ಯ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಮಂಗಳೂರಿನ ಅಶೋಕನಗರದ ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿಯಲ್ಲಿ ಆಯೋಜಿಸಿದ ದ.ಕ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮಂಗಳೂರಿನ ಹೈ-ಫ್ಲೈಯರ್ ಸ್ಕೇಟಿಂಗ್ ಕ್ಲಬ್‌ನ ಸ್ಕೇಟರ್ ತಂಡವಾಗಿ ಪ್ರತಿನಿಧಿಸಿ 105 ಪದಕಗಳನ್ನು ಜಯಗಳಿಸಿದ್ದಾರೆ. ರಾಜ್ಯ ಮಟ್ಟಕ್ಕೆ ಕ್ಲಬ್ ನ 32 ಸ್ಕೇಟರ್ ಗಳು ಆಯ್ಕೆಯಾಗಿದ್ದಾರೆ. ಇವರು ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿಯಲ್ಲಿ ಮೋಹನ ದಾಸ್ ಕೆ., ಜಯರಾಜ್ ಮತ್ತು ರಮಾನಂದ ಅವರಿಂದ ತರಬೇತಿ ಪಡೆಯುತ್ತಿದ್ದಾರೆ. […]

ದ.ಕ.ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ 105 ಪದಕ ಗೆದ್ದ ಹೈಫ್ಲೈಯರ್ಸ್ ಕ್ಲಬ್ Read More »

ಕರಾವಳಿ, ಕ್ರೀಡಾ ನ್ಯೂಸ್

ಪುತ್ತೂರು ವಿಭಾಗದ KSRTC ಬಸ್‌ಗಳಲ್ಲಿ ಕ್ಯಾಶ್‌ಲೆಸ್ ವ್ಯವಸ್ಥೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.23. ಕೆಎಸ್‌ಆರ್‌ಟಿಸಿ ವಿಭಾಗದ ನಿರ್ವಾಹಕರಿಗೆ ಈಗಾಗಲೇ 570 ಅಂಡ್ರಾಯಿಡ್ ಮಿಷನ್ ಗಳನ್ನು ವಿತರಣೆ ಮಾಡಲಾಗಿದೆ. ಇನ್ನು ಮುಂದೆ ಪುತ್ತೂರು ವಿಭಾಗದ ಜಿಲ್ಲೆಯ 5 ತಾಲೂಕು ಹಾಗೂ ಕೊಡಗು ಜಿಲ್ಲೆಯ ಸರ್ಕಾರಿ ಬಸ್ಸು ನಿರ್ವಾಹಕರು ಯುಪಿಐ ಮೂಲಕ ಕ್ಯಾಶ್‌ಲೆಸ್ ವ್ಯವಸ್ಥೆಗೆ ತಮ್ಮನ್ನು ತಾವು ತೆರೆದುಕೊಳ್ಳಲಿದ್ದಾರೆ. ಪುತ್ತೂರು ವಿಭಾಗದಲ್ಲಿ 5 ತಾಲೂಕುಗಳಲ್ಲಿ ಒಟ್ಟು ನಾಲ್ಕು ಡಿಪೋ ಹಾಗೂ ಮಡಿಕೇರಿಯ ಒಂದು ಡಿಪೋದಲ್ಲಿ ಈ ಮೆಷಿನ್ ವಿತರಣೆಯಾಗಿದೆ. ಸುಮಾರು 715 ಮಂದಿ ನಿರ್ವಾಹಕರು ಇರುವ ಈ

ಪುತ್ತೂರು ವಿಭಾಗದ KSRTC ಬಸ್‌ಗಳಲ್ಲಿ ಕ್ಯಾಶ್‌ಲೆಸ್ ವ್ಯವಸ್ಥೆ Read More »

ಕರಾವಳಿ
Death, deadbody, Waterfall

ಬೀಚ್ ನಲ್ಲಿ ಆಟವಾಡುತ್ತಿದ್ದ ಯುವಕ ಸಮುದ್ರಪಾಲು..!

(ನ್ಯೂಸ್ ಕಡಬ) newskadaba.com ಅ.23. ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಸುರತ್ಕಲ್  ಮುಕ್ಕ ರೆಡ್‌ ರಾಕ್ ಕಡಲ ಕಿನಾರೆಯಲ್ಲಿ ನಡೆದಿದೆ. ನೀರುಪಾಲಾದ ಯುವಕನನ್ನು ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಪ್ರಜ್ವಲ್ ಸುಮಾರು 8 ಮಂದಿ ಸ್ನೇಹಿತರ ಜೊತೆ ನಿನ್ನೆ ಸಂಜೆ ಮುಕ್ಕ ರೆಡ್ ರಾಕ್ ಬಳಿಯ ಸಮುದ್ರ ಕಿನಾರೆಯಲ್ಲಿ ಆಟವಾಡುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭ ಸಮುದ್ರದ ಅಲೆಗೆ ಸಿಲುಕಿ ಪ್ರಜ್ವಲ್ ಸಮುದ್ರ ಪಾಲಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು

ಬೀಚ್ ನಲ್ಲಿ ಆಟವಾಡುತ್ತಿದ್ದ ಯುವಕ ಸಮುದ್ರಪಾಲು..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಗಾಂಜಾ ಮಾರಾಟ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ.23. ಗಾಂಜಾ ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಉಳ್ಳಾಲ ಓಲಪೇಟೆಯ ಟಿ.ಸಿ.ರಸ್ತೆ ನಿವಾಸಿ ಸಲೀಂ ಅಲಿಯಾಸ್ ಮಹಮ್ಮದ್ ಸಲೀಂ (38) ಎಂದು ಗುರುತಿಸಲಾಗಿದೆ. ಆರೋಪಿಯು 2019ರಲ್ಲಿ ಗಾಂಜಾ ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ನಾಲ್ಕು ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ. ಸಲೀಂ ಬಂಧನದಿಂದ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ.

ಗಾಂಜಾ ಮಾರಾಟ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಹೆಲ್ಮೆಟ್‌ ಕಳವು: ಸಿಸಿ ಕೆಮರಾದಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.23. ನಗರದ ಹಲವೆಡೆ ಹೆಲ್ಮೆಟ್‌ ಕಳವು ಮಾಡಲಾಗುತ್ತಿದ್ದು, ಓರ್ವ ಹೆಲ್ಮೆಟ್‌ ಕಳ್ಳನ ಕೈ ಚಳಕದ ದೃಶ್ಯ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ನಗರದ ವಾಣಿಜ್ಯ ಕಟ್ಟಡವೊಂದರ ಸಮೀಪ ನಿಲ್ಲಿಸಿದ್ದ ಬೈಕ್‌ನಲ್ಲಿದ್ದ ಹೊಸ ಹೆಲ್ಮೆಟನ್ನು ಕಳ್ಳ ಕಳವು ಮಾಡಿದ್ದು, ಆತನ ಬಳಿ ಇದ್ದ ಹಳೆಯ ಹೆಲ್ಮೆಟನ್ನು ಬೈಕ್‌ನ ಮೇಲಿಟ್ಟು ಹೋಗಿದ್ದಾನೆ. ಬಳಿಕ ತಾನು ಬಂದಿದ್ದ ಸ್ಕೂಟರ್‌ನಲ್ಲಿ ಮರಳಿದ್ದಾನೆ. ಈತ ಇದೇ ರೀತಿ ಹಲವೆಡೆ ಹೆಲ್ಮೆಟ್‌ ಕದ್ದಿರುವ ಶಂಕೆ ವ್ಯಕ್ತವಾಗಿದೆ.  

ಹೆಲ್ಮೆಟ್‌ ಕಳವು: ಸಿಸಿ ಕೆಮರಾದಲ್ಲಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅ. 31 ರಂದು ದೀಪಾವಳಿಯ ಪ್ರಯುಕ್ತ ಸದಾ ಸಿದ್ದಿ ಬಳಗದ ಆಶಯದಲ್ಲಿ ಸಾಂಸ್ಕೃತಿಕ ಸಂಜೆ

(ನ್ಯೂಸ್ ಕಡಬ) newskadaba.com ಕಡಬ, ಅ.23. ದೀಪಾವಳಿ ಹಬ್ಬದ ಪ್ರಯುಕ್ತ ಸದಾ ಸಿದ್ದಿ ಮಿತ್ರ ಬಳಗದ ಅಶಯದಲ್ಲಿ ಅ. 31 ರಂದು ಸಂಜೆ 9 ಕ್ಕೆ ಕಡಬ ತಾಲೂಕಿನ ಬಳ್ಪ ಗ್ರಾಮದ ಬೀದಿಗುಡ್ಡೆ ವಥಾರದಲ್ಲಿ  21ನೇ ಸದಾ ಸಿದ್ದಿ ಸಾಂಸ್ಕೃತಿಕ ಸಂಜೆ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಸ್ಥಳೀಯ ಶಾಲಾ ಮಕ್ಕಳಿಂದ ವೈವಿಧ್ಯಮಯ ನೃತ್ಯಗಳು ನಡೆಯಲಿದೆ. ರಾತ್ರಿ 9ಕ್ಕೆ ‘ಕುಸಾಲ್ದ ಗುರಿಕಾರೆ ‘ ದಿನೇಶ್‌ ಕೊಡಪದವು ಸಾರಥ್ಯದಲ್ಲಿ ಜಿಲ್ಲೆಯ ಪ್ರಸಿದ್ಧ ಹ್ಯಾಸಕಲಾವಿದರ ಸಮಾಗಮದೊಂದಿಗೆ ‘ಯಕ್ಷ ತೆಲಿಕೆ’ ಮನರಂಜಿಸಲಿದೆ.  

ಅ. 31 ರಂದು ದೀಪಾವಳಿಯ ಪ್ರಯುಕ್ತ ಸದಾ ಸಿದ್ದಿ ಬಳಗದ ಆಶಯದಲ್ಲಿ ಸಾಂಸ್ಕೃತಿಕ ಸಂಜೆ Read More »

ಕರಾವಳಿ

ಮಾಣಿ ಬಾಲವಿಕಾಸ ಶಾಲೆಯ ಮುಖ್ಯ ಶಿಕ್ಷಕಿ ಸುಪ್ರಿಯಾವರಿಗೆ ರಾಜ್ಯ ಮಟ್ಟದ ‘ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಅ. 22. ಅನುದಾನರಹಿತ ಖಾಸಗಿ ಶಾಲೆಗಳ ಸಂಘ (RUPSA) ನೀಡುವ ರಾಜ್ಯ ಮಟ್ಟದ ‘ವಿದ್ಯಾರತ್ನ’ ಪ್ರಶಸ್ತಿಗೆ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಸುಪ್ರಿಯಾ ಡಿ. ಭಾಜನರಾಗಿದ್ದಾರೆ. ಅಕ್ಟೋಬರ್ 21ರಂದು ಬೆಂಗಳೂರಿನ ಜುಬಿಲಿ ಇಂಟರ್ ನ್ಯಾಶನಲ್ ಸ್ಕೂಲ್ ನಲ್ಲಿ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪರ ಉಪಸ್ಥಿತಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸುಪ್ರಿಯಾ ಪ್ರಶಸ್ತಿ ಸ್ವೀಕರಿಸಿದರು. ಇವರು ಮಂಗಳೂರಿನ ಜೆಪ್ಪು ನಿವಾಸಿ, ಮೆಸ್ಕಾಂ

ಮಾಣಿ ಬಾಲವಿಕಾಸ ಶಾಲೆಯ ಮುಖ್ಯ ಶಿಕ್ಷಕಿ ಸುಪ್ರಿಯಾವರಿಗೆ ರಾಜ್ಯ ಮಟ್ಟದ ‘ವಿದ್ಯಾರತ್ನ ಪ್ರಶಸ್ತಿ’ ಪ್ರದಾನ Read More »

ಕರಾವಳಿ

ರಾಜ್ಯ ಹೆದ್ದಾರಿ ರಸ್ತೆಯುದ್ದಕ್ಕೂ ಹೊಂಡಗುಂಡಿ- ಸಾರ್ವಜನಿಕರ ಆಕ್ರೋಶ

(ನ್ಯೂಸ್ ಕಡಬ) newskadaba.com  ಉಡುಪಿ, ಅ. 22. ಇಲ್ಲಿನ ಕಟಪಾಡಿ ಶಿರ್ವ ರಾಜ್ಯ ಹೆದ್ದಾರಿ ರಸ್ತೆಯುದ್ದಕ್ಕೂ ಹೊಂಡಗುಂಡಿಯಾಗಿದ್ದು, ರಸ್ತೆಯಲ್ಲಿ ಪ್ರತಿನಿತ್ಯ ವಾಹನ ಸವಾರರು ಪರದಾಡುವಂತಾಗಿದೆ. ಕಟಪಾಡಿ ಕುರ್ಕಾಲು ಶಂಕರಪುರದಿಂದ ಶಿರ್ವ ಸಂಪರ್ಕ ರಸ್ತೆ ಸುಮಾರು ತಿಂಗಳುಗಳಿಂದ ಈ ರಸ್ತೆ ಹದಗೆಟ್ಟಿದ್ದು ವಾಹನ ಸವಾರರಿಗೆ ದಿನನಿತ್ಯ ಕಿರಿಕಿರಿ ಉಂಟಾಗುತ್ತಿದೆ. ಈ ಬಗ್ಗೆ ಮನವಿ ಮಾಡಿದರೂ ಏನೂ ಪ್ರಯೋಜನ ಆಗಿಲ್ಲ. ದಪ್ಪ ಚರ್ಮದ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ. ಜೊತೆಗೆ ಹೊಂಡ ಮುಚ್ಚುವ ಕಾರ್ಯಕ್ಕೂ ಮುಂದಾಗುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಬಾಳೆ

ರಾಜ್ಯ ಹೆದ್ದಾರಿ ರಸ್ತೆಯುದ್ದಕ್ಕೂ ಹೊಂಡಗುಂಡಿ- ಸಾರ್ವಜನಿಕರ ಆಕ್ರೋಶ Read More »

ಕರಾವಳಿ

ಮಲ್ಪೆಯಲ್ಲಿ ಬರೋಬ್ಬರಿ 250 ಕೆಜಿ ತೊರಕೆ ಮೀನು ಬಲೆಗೆ..!

(ನ್ಯೂಸ್ ಕಡಬ) newskadaba.com ಅ. 22. ಅದೃಷ್ಟ ಯಾರಿಗೆ ಯಾವಾಗ ಬರುತ್ತದೆ ಎಂದು ಹೇಳುವುದು ಅಸಾಧ್ಯ ಅದರಲ್ಲೂ ಮೀನುಗಾರರಿಗೆ ಅದೃಷ್ಟ ಅನ್ನೋದು ಬಹಳ ಮುಖ್ಯವಾಗುತ್ತದೆ. ಆಳ ಸಮುದ್ರದಲ್ಲಿ ಮೀನುಗಾರಿಕೆಗೆಂದು ತಿಂಗಳುಗಟ್ಟಲೆ ಹೋಗಿ ಖಾಲಿ ಕೈಯಲ್ಲೂ ವಾಪಾಸ್ ಬರೋದಿದೆ. ಆದರೆ ಮಲ್ಪೆ ಮೀನುಗಾರರು ಭರ್ಜರಿ ತೊರಕೆ ಮೀನೊಂದನ್ನು ಭೇಟೆಯಾಡಿದ್ದಾರೆ. ಸ್ಟಿಂಗ್ ರೇ ಎಂದು ಕರೆಯಲ್ಪಡುವ ಬೃಹತ್ ತೂಕದ ತೊರಕೆ ಮೀನು ಬಲೆಗೆ ಬಿದ್ದು ಮೀನುಗಾರರ ಅದೃಷ್ಟ ಖುಲಾಯಿಸಿದೆ. ಸುಮಾರು 250 ಕೆ.ಜಿ ತೂಗುವ ತೊರಕೆ ಮೀನು ಬಲೆಗೆ ಬಿದ್ದಿದ್ದು,

ಮಲ್ಪೆಯಲ್ಲಿ ಬರೋಬ್ಬರಿ 250 ಕೆಜಿ ತೊರಕೆ ಮೀನು ಬಲೆಗೆ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವಂಚನೆ ಪ್ರಕರಣ: ಆರೋಪಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

(ನ್ಯೂಸ್ ಕಡಬ) newskadaba.com  ಉಡುಪಿ, ಅ. 22.  ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ದುಬೈನ ಹೊಟೇಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ 2.5 ಕೋಟಿ ರೂ. ಅಧಿಕ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಳೆದ ವಾರ ಬಾರ್ಕೂರು ಮೂಲದ ನಾಗೇಶ್ ಪೂಜಾರಿ(31)ಯನ್ನು ಬಂಧಿಸಲಾಗಿತ್ತು. ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬ್ರಹ್ಮಾವರ ಜೆ.ಎಂ.ಎಫ್.ಸಿ. ನ್ಯಾಯಾಲಯ ತಿರಸ್ಕರಿಸಿದೆ. ಆರೋಪಿಗೆ ಬ್ರಹ್ಮಾವರ ಜೆ.ಎಂ.ಎಫ್.ಸಿ. ನ್ಯಾಯಾಲಯ ನೀಡಿದ ಜಾಮೀನು ಆದೇಶವನ್ನು ರಾಜ್ಯ ಉಚ್ಚ ನ್ಯಾಯಾಲಯ ರದ್ದುಗೊಳಿಸಿದ

ವಂಚನೆ ಪ್ರಕರಣ: ಆರೋಪಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top