karavali

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ರಥೋತ್ಸವ ವೈಭವ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ. 07. ಇತಿಹಾಸ ಪ್ರಸಿದ್ಧ ನಾಗಾರಾಧನಾ ಕ್ಷೇತ್ರ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಇಂದು ಬೆಳಗ್ಗೆ ಚಂಪಾಷಷ್ಠಿ ರಥೋತ್ಸವ ವೈಭವದಿಂದ ಜರುಗಿತು. ಭಕ್ತರು ಸಡಗರ ಸಂಭ್ರಮದಿಂದ ರಥೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು. ರಥಾರೂಢನಾದ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವರು ರಥಬೀದಿಯಲ್ಲಿ ಸಂಚರಿಸಿದ್ದನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು. ಉಮಾಮಹೇಶ್ವರ ದೇವರು ಆಸೀನರಾದ ಚಿಕ್ಕ ರಥೋತ್ಸವ ನೆರವೇರಿದ ಬಳಿಕ ಚಂಪಾಷಷ್ಠಿ ಮಹಾರಥೋತ್ಸವ ನಡೆಯಿತು. ಶುಕ್ರವಾರ ರಾತ್ರಿ ಪಂಚಮಿ ರಥೋತ್ಸವ ನಡೆಯಿತು. ಕುಕ್ಕೆ ಶ್ರೀಸುಬ್ರಹ್ಮಣ್ಯ ಕ್ಷೇತ್ರದ ಚಂಪಾಷಷ್ಠಿಯಲ್ಲಿ ಭಾಗವಹಿಸಲೆಂದು ಜಿಲ್ಲೆಯ […]

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ರಥೋತ್ಸವ ವೈಭವ Read More »

ಕರಾವಳಿ

ನಿಲ್ಲಿಸಿದ್ದ ಲಾರಿಯ ಟಯರ್ ಕಳವು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 07.ರಸ್ತೆಬದಿ ನಿಲ್ಲಿಸಲಾಗಿದ್ದ ಲಾರಿಯ ಟಯರ್ ಕದ್ದುಕೊಂಡು ಹೋದ ಘಟನೆ ಸುಳ್ಯದ ಪೆರಾಜೆಯಲ್ಲಿ ಶುಕ್ರವಾರ ನಡೆದಿದೆ. ಈ ಲಾರಿಯಲ್ಲಿ ರಬ್ಬರ್ ಮರಗಳನ್ನು ಸಾಗಾಟ ಮಾಡಲಾಗುತ್ತಿತ್ತು. ನಾಲ್ಕು ದಿನಗಳ ಹಿಂದೆ ಲಾರಿಯನ್ನು ಪೆರಾಜೆಯ ರಸ್ತೆ ಬದಿಯಲ್ಲಿ ನಿಲ್ಲಿಸಿ ಮರ ಸಾಗಾಟಗಾರರು ತಮ್ಮ ಊರಾದ ಕೇರಳಕ್ಕೆ ತೆರಳಿದ್ದರು. ಆದರೆ ಇಂದು ಬಂದು ನೋಡುವಾಗ ಲಾರಿಯ ಒಂದು ಟಯರ್ ಕಳವಾಗಿರುವುದು ಬೆಳಕಿಗೆ ಬಂದಿದೆ.  

ನಿಲ್ಲಿಸಿದ್ದ ಲಾರಿಯ ಟಯರ್ ಕಳವು Read More »

ಕರಾವಳಿ

ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅವಘಡ: ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07. ಮನೆಯಲ್ಲಿ ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾಗಿ, ಬೆಂಕಿ ಅವಘಡ ಸಂಭವಿಸಿದ ಘಟನೆ ಅತ್ತಾವರ ಮೆಸ್ಕಾಂ ಬಳಿ ಮನೆಯೊಂದರಲ್ಲಿ ಶುಕ್ರವಾರ ಮಧ್ಯಾಹ್ನ ವೇಳೆ ನಡೆದಿದೆ. ಇಲ್ಲಿನ ಅನ್ಸಾರ್ ಎಂಬವರ ಮನೆಯ ಸಿಲಿಂಡರ್ ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡಿದೆ. ಮನೆಮಂದಿ ಅಡುಗೆ ಮಾಡುತ್ತಿದ್ದ ವೇಳೆ ಸಿಲಿಂಡರ್ ನ ರೆಗ್ಯುಲೇಟರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಮನೆಮಂದಿ ಮನೆಯಿಂದ ಹೊರಬಂದು ಅಪಾಯದಿಂದ ಪಾರಾಗಿದ್ದಾರೆ. ಬಳಿಕ ಪಾಂಡೇಶ್ವರ ಅಗ್ನಿಶಾಮಕ

ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅವಘಡ: ಅಪಾಯದಿಂದ ಪಾರು Read More »

ಕರಾವಳಿ

ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 07. ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಬದನಾಜೆಯಲ್ಲಿ ನಡೆದಿದೆ. ಮೃತರನ್ನು ಓಂ ಸಾಯಿ ಇಂಡಸ್ಟ್ರೀಸ್ ನ ಮಾಲಕ ಬದನಾಜೆ ನಿಡ್ಯ ನಿವಾಸಿ ದಾಮೋದರ್ ಪೂಜಾರಿ (60) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವಿಟ್ಲ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.  

ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣು..! Read More »

ಕ್ರೈಮ್ ನ್ಯೂಸ್

ಬೈಕ್ ಅಪಘಾತದಲ್ಲಿ ಗಾಯಗೊಡಿದ್ದ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಡಿ. 07. ಬೈಕ್ ನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮೂಡಬಿದ್ರೆ-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಪಡುಮಾರ್ನಾಡು ಗ್ರಾಮದ ಬನ್ನಡ್ಕ  ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಚಿನ್ನದ ಕೆಲಸಗಾರ, ತೋಡಾರು ಗ್ರಾಮದ ಸೀತಾರಾಮ ಆಚಾರ್ಯ (46) ಎಂದು ಗುರುತಿಸಲಾಗಿದೆ. ಮೂಡುಬಿದಿರೆ ಜ್ಯೋತಿನಗರದಲ್ಲಿ ಚಿನ್ನದ ವೃತ್ತಿಗೆ ಸಂಬಂಧಿಸಿದ ವಿಘ್ನೇಶ್ ಮೆಷಿನ್ ಕಟ್ಟಿಂಗ್ ಉದ್ಯಮವನ್ನು ನಡೆಸುತ್ತಿದ್ದು ಜನವರಿ ೩ರಂದು ನಡೆಯಲಿದ್ದ ಅವರ ಪುತ್ರನ ಉಪನಯನದ ಕಾಗದವನ್ನು ವಿತರಿಸಿ ವಾಪಸ್ಸು ಬರುತ್ತಿದ್ದ ವೇಳೆ ಬನ್ನಡ್ಕ ಬಳಿ ಬೈಕ್‌ನಿಂದ ಬಿದ್ದಿದ್ದರು.

ಬೈಕ್ ಅಪಘಾತದಲ್ಲಿ ಗಾಯಗೊಡಿದ್ದ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು : ಮಹಿಳೆಯರಿಗೆ ಉಚಿತ ಬಸ್ ಸಂಚಾರಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07. ಶಕ್ತಿನಗರದಲ್ಲಿ ಮಹಿಳೆಯರಿಗೆ ಸರ್ಕಾರದ ಶಕ್ತಿ ಯೋಜನೆಯಡಿಯಲ್ಲಿ ಉಚಿತ ಬಸ್ ಪ್ರಯಾಣದ ಬಸ್ ಚಾಲನೆ ಕಾರ್ಯಕ್ರಮ ನಡೆಯಿತು. ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಪಾಲ್ಗೊಂಡು ಬಸ್ ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋ, 2024ರ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ದಕ್ಷಿಣ ಕನ್ನಡ ಜಿಲ್ಲಾ ಕಾನೂನು, ಮಾನವ ಹಾಗೂ ಮಾಹಿತಿ ಹಕ್ಕು ಘಟಕದ ಅಧ್ಯಕ್ಷ ಮನೋರಾಜ್, ದಕ್ಷಿಣ

ಮಂಗಳೂರು : ಮಹಿಳೆಯರಿಗೆ ಉಚಿತ ಬಸ್ ಸಂಚಾರಕ್ಕೆ ಚಾಲನೆ Read More »

ಕರಾವಳಿ

ಮುಮ್ತಾಝ್ ಅಲಿ ಪ್ರಕರಣ: ಮೂವರು ಆರೋಪಿಗಳ ಪೊಲೀಸ್ ಕಸ್ಟಡಿ ಅರ್ಜಿ ತಿರಸ್ಕರಿಸಿದ ಕೋರ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, . 05.  ಉದ್ಯಮಿ, ಶೈಕ್ಷಣಿಕ ಮುಂದಾಳು ಬಿಎಂ ಮುಮ್ತಾಝ್ ಅಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರು ಆರೋಪಿಗಳ ಪೊಲೀಸ್ ಕಸ್ಟಡಿಯ ಅರ್ಜಿಯನ್ನು ಮಂಗಳೂರು 3ನೇ ಜೆಎಂಎಫ್ ಸಿ ನ್ಯಾಯಾಲಯ ತಿರಸ್ಕಾರ ಮಾಡಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ರಹ್ಮತ್ ಪತಿ ಶುಐಬ್, ನಂದಾವರ ನಿವಾಸಿ ಶಾಫಿ, ಕೃಷ್ಣಾಪುರ ನಿವಾಸಿ ಮುಸ್ತಫಾ ಎಂಬುವವರನ್ನು ವಿಚಾರಣೆ ನಡೆಸಲಿದ್ದು, ಪೊಲೀಸ್ ಕಸ್ಟಡಿಗೆ ನೀಡುವಂತೆ ಸುರತ್ಕಲ್ ಪೊಲೀಸರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು ಎನ್ನಲಾಗಿದೆ. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್,

ಮುಮ್ತಾಝ್ ಅಲಿ ಪ್ರಕರಣ: ಮೂವರು ಆರೋಪಿಗಳ ಪೊಲೀಸ್ ಕಸ್ಟಡಿ ಅರ್ಜಿ ತಿರಸ್ಕರಿಸಿದ ಕೋರ್ಟ್ Read More »

ಕರಾವಳಿ

ಕರ್ತವ್ಯ ಲೋಪವೆಸಗಿದ ದ.ಕ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಅಮಾನತು

(ನ್ಯೂಸ್ ಕಡಬ) newskadaba.com ಮಂಗಳೂರು, . 05.  ಕರ್ತವ್ಯ ಲೋಪವೆಸಗಿದ ದ.ಕ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಬಿ.ಟಿ. ಓಬಳೇಶಪ್ಪ ಅವರನ್ನು ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಮುಂದಿನ ಆದೇಶ ಬರುವ ತನಕ ಅಮಾನತುಗೊಳಿಸಿ ಡಿ.4ರಂದು ಆದೇಶ ಹೊರಡಿಸಲಾಗಿದೆ. ಇತ್ತೀಚೆಗೆ ಪೊಲೀಸರು ಕಾರಾಗೃಹಕ್ಕೆ ದಾಳಿ ನಡೆಸಿದ ಸಂದರ್ಭದಲ್ಲಿ ಜೈಲಿನೊಳಗೆ ನಿಷೇಧಿತ ವಸ್ತುಗಳು ಪತ್ತೆಯಾಗಿದ್ದವು. ಆ ಬಳಿಕ ಬಿ.ಟಿ. ಓಬಳೇಶಪ್ಪ ಅವರನ್ನು ಅಮಾನತುಗೊಳಿಸಲಾಗಿತ್ತು. ಇನ್ನು ಮೈಸೂರು ಕೇಂದ್ರ ಕಾರಾಗೃಹದ ಸಹಾಯಕ ಅಧಿಧೀಕ್ಷಕ ಕೆ.ಎನ್. ಮೋಹನ್ ಕುಮಾರ್ ಅವರನ್ನು ಮಂಗಳೂರು ಕಾರಾಗೃಹದ ಅಧೀಕ್ಷಕರ

ಕರ್ತವ್ಯ ಲೋಪವೆಸಗಿದ ದ.ಕ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಅಮಾನತು Read More »

ಕರಾವಳಿ

ಸುಬ್ರಹ್ಮಣ್ಯ:  ಅಂಗಡಿ ಮೇಲೆ ಅಧಿಕಾರಿಗಳ ದಾಳಿ- ತಂಬಾಕು ಉತ್ಪನ್ನಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, . 05. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಅಂಗಡಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ತಂಬಾಕು ಉತ್ಪನ್ನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳಾದ ಸಿಗರೇಟ್, ಪಾನ್ ಪರಾಗ್, ಮಧು, ಮಾರುತಿ, ಕೂಲ್ ಲಿಪ್ ಬೇರೆ ಬೇರೆ ರೀತಿಯ ತಂಬಾಕು ಉತ್ಪನ್ನಗಳನ್ನು ಹಾಗೂ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಬ್ರಹ್ಮಣ್ಯ ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ, ಆರೋಗ್ಯ

ಸುಬ್ರಹ್ಮಣ್ಯ:  ಅಂಗಡಿ ಮೇಲೆ ಅಧಿಕಾರಿಗಳ ದಾಳಿ- ತಂಬಾಕು ಉತ್ಪನ್ನಗಳು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 04. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್‌ನಲ್ಲಿ ಬಾಂಬ್ ಇಡಲಾಗಿದೆ ಎಂಬ ಇಮೇಲ್ ನವೆಂಬರ್ 30 ರಂದು ಬಂದ ನಂತರ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದೆ. ಬೆಳಗ್ಗೆ 10 ಗಂಟೆ ಸುಮಾರಿಗೆ ಅಕ್ರಮ್ ವೈಕರ್ ಹೆಸರಿನ ಇಮೇಲ್ ಐಡಿಯಿಂದ ಬೆದರಿಕೆಯನ್ನು ಕಳುಹಿಸಲಾಗಿದ್ದು, ತಕ್ಷಣದ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಿಐಎಸ್ಎಫ್ ಸಿಬ್ಬಂದಿ, ವಿಮಾನ ನಿಲ್ದಾಣದ ಸಿಬ್ಬಂದಿಯೊಂದಿಗೆ ಟರ್ಮಿನಲ್ ಮತ್ತು ವಿಮಾನ ನಿಲ್ದಾಣದ ಇತರ ಪ್ರದೇಶಗಳಲ್ಲಿ ಸಂಪೂರ್ಣ ಶೋಧ ನಡೆಸಿದರು. ಆದರೆ, ತಪಾಸಣೆ

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top